Author: admin

ವಿಧಾನಸಭೆಯ ವಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಆರ್. ಅಶೋಕ್ ಅವರ ನಾಮಫಲಕವನ್ನು ಕಿತ್ತು ಹಾಕಬೇಕು ಎಂದು ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಇಂದು ಸದನದಲ್ಲಿ ಆ‌ರ್. ಅಶೋಕ್ ವಿರುದ್ಧ ಮೊಗಸಾಲೆಯಲ್ಲಿ ಮಾತನಾಡುತ್ತಾ ಕುಳಿತಿದ್ದ ಅವರು, ಮೊದಲು ಆರ್. ಅಶೋಕ್ ನಾಮಫಲಕ ಕಿತ್ತು ಹಾಕಬೇಕು ಎಂದು ಕಿಡಿಕಾರಿದ ಪ್ರಸಂಗ ನಡೆಸಿದೆ. ಪ್ರತಿಪಕ್ಷ ನಾಯಕ್ ಆರ್. ಅಶೋಕ್ ಮತ್ತು ಶಾಸಕ ಎಸ್. ಆ‌ರ್. ವಿಶ್ವನಾಥ್ ಮಧ್ಯೆ ಅಸಮಾಧಾನ ಮುಂದುವರೆದಿದ್ದು, ಆರ್. ಅಶೋಕ್ ಕೊಠಡಿಗೆ ಹೋಗಲು ವಿಶ್ವನಾಥ್‌ ಮತ್ತೆ ನಿರಾಕರಿಸಿದ್ದಾರೆ. ಸದನದಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಆರ್ ಅಶೋಕ್ ಕಚೇರಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್‌ ನಡೆಯುತ್ತಿದ್ದ ಸಂದರ್ಭ ಶಾಸಕ ಮುನಿರತ್ನ ವಿಶ್ವನಾಥ್ ಅವರನ್ನು ಅಶೋಕ್ ಕೊಠಡಿಗೆ ಕರೆದೊಯ್ಯಲು ಕೈ ಹಿಡಿದುಕೊಂಡರು. ಈ ವೇಳೆ ವಿಶ್ವನಾಥ್ ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ನಾನು ಆ ಕೊಠಡಿಗೆ ಬರೋದಿಲ್ಲ ಎಂದರು

Read More

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಮಾಜಿ ಸಚಿವ ವಿ.ಸೋಮಣ್ಣ ಬ್ಯಾಟ್ ಬೀಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಮಾಜಿ ಸಚಿವ, ಯತ್ನಾಳ್‌ ಒಬ್ಬರು ಸುಸಂಸ್ಕೃತ ರಾಜಕಾರಣಿ, ನನ್ನ ನೋವು ನನಗೆ ಗೊತ್ತು, ಅವರ ನೋವು ಅವರಿಗೆ ಗೊತ್ತು ಹಾಗಾಗಿ ಅವರು ಮಾತನಾಡಿರಬಹುದು ಎಂದು ಹೇಳಿದ್ದಾರೆ. ಸ್ವಪಕ್ಷದ ಮೇಲೆಯೇ ಬೇಸರಗೊಂಡ ಮಾಜಿ ಸಚಿವ ವಿ.ಸೋಮಣ್ಣ ಅವರ ಸಂಧಾನ ಪ್ರಯತ್ನ ಆರಂಭಿಸಿರುವ ದೆಹಲಿಯ ಬಿಜೆಪಿ ವರಿಷ್ಠರು ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಆದರೆ, ಮಾತುಕತೆ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೂ ಉಪಸ್ಥಿತರಿರಬೇಕು. ವರಿಷ್ಠರ ಸಮ್ಮುಖದಲ್ಲಿ ಮುಖಾಮುಖಿ ಮಾತುಕತೆ ಆಗಲಿ ಎಂಬ ಪಟ್ಟು ಮುಂದಿಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Read More

ಚಳಿಗಾಲದಲ್ಲಿ ಪ್ರತೀ ದಿನ ಒಂದು ಚಮಚ ಜೇನುತುಪ್ಪದ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಜೇನುತುಪ್ಪದಲ್ಲಿ ದೇಹದಲ್ಲಿನ ರೋಗಗಳನ್ನು ಗುಣಪಡಿಸುವ ಹಲವಾರು ಔಷಧಿಗಳಿವೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಜೇನುತುಪ್ಪ ತುಂಬಾನೇ ಒಳ್ಳೆಯದು. ಹೊಟ್ಟೆಯ ಸಮಸ್ಯೆಯ ನಿವಾರಣೆ ಆಗುತ್ತದೆ. ಒತ್ತಡ ಮತ್ತು ಆತಂಕವನ್ನು ನಿವಾರಣೆಯಾಗುತ್ತದೆ. ರಕ್ತಹೀನತೆ ಸಮಸ್ಯೆ ನಿವಾರಣೆ. ಕಲೆಮುಕ್ತ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ. ಕೂದಲು ಸಮಸ್ಯೆಗಳಿಂದ ಪರಿಹಾರ ಪಡೆಯಲು ಅಲೋವೆರಾ ಬಳಸಿ ಆರೋಗ್ಯ, ಚರ್ಮ & ಕೂದಲಿನ ಆರೈಕೆಯಲ್ಲಿ ಅಲೋವೆರಾ ಅತ್ಯುತ್ತಮ ಔಷಧ. ಕೂದಲು ಉದುರುವಿಕೆ, ತೆಳುವಾಗುವುದು ಅಥವಾ ಶುಷ್ಕವಾಗಿ ಕಾಣುವ ಸಮಸ್ಯೆಗಳಿಗೆ ಅಲೋವೆರಾ ಪರಿಹಾರ ನೀಡುತ್ತದೆ. ಆಮ್ಲಾ ಮತ್ತು ಅಲೋವೆರಾ ಮಿಶ್ರಣವು ಕೂದಲನ್ನು ದಪ್ಪವಾಗಿಸುತ್ತದೆ.3 ಚಮಚ ಅಲೋವೆರಾ ಜೆಲ್‌, ಅರ್ಧ ಚಮಚ ಜೇನುತುಪ್ಪ ಮತ್ತು 2 ಚಮಚ ತೆಂಗಿನ ಎಣ್ಣೆ ಮಿಶ್ರಣ ಮಾಡಿ ನಿಮ್ಮ ಕೂದಲಿಗೆ ಹಚ್ಚಿ. ಅಲೋವೆರಾವನ್ನು ನಿಮ್ಮ ಕೂದಲಿಗೆ ನೇರವಾಗಿ ಅನ್ವಯಿಸುವುದರಿಂದ ಕೂದಲಿನ ಬುಡದಲ್ಲಿ ತೇವಾಂಶ ಉಳಿಯುತ್ತದೆ, ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

Read More

ಈಗಿನ್ನೂ ಡಿಸೆಂಬ‌ರ್ ತಿಂಗಳು ಆಗಲೆ ಮಲೆನಾಡಿನಲ್ಲೇ ಶೇ. 65ರಿಂದ 70ರಷ್ಟು ಮಳೆ ಕೊರತೆ ಆಗಿದೆ. ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಎಷ್ಟೇ ಕೇಳಿದರೂ ಘೋಷಣೆ ಆಗಿಲ್ಲ. ಬೇಸಿಗೆಯಲ್ಲಿ ದೇವರೇ ಕಾಪಾಡಬೇಕು. ಮನುಷ್ಯರ ಸಮಸ್ಯೆಯನ್ನೇ ಕೇಳುವವರಿಲ್ಲ. ಇನ್ನು ಮೂಕ ಪ್ರಾಣಿಗಳ ಗೋಳು ಕೇಳುವವರು ಯಾರು? ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮೂಕ ಪ್ರಾಣಿಗಳು ಎಂದು ಸಿಟಿ ರವಿ ಹೇಳಿದ್ದಾರೆ. ರಾಜ್ಯದ 220ಕ್ಕೂ ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಒಂದು ರೂ. ಪರಿಹಾರವನ್ನೂ ನೀಡದೆ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೈತರಿಗೆ 2000 ರು. ಬರ ಪರಿಹಾರ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಅದನ್ನೂ ಇನ್ನೂ ಕೊಟ್ಟಿಲ್ಲ ಎಂದರು. ಕೇವಲ ತೋರಿಕೆಗಾಗಿ ತಾವು ರೈತರ ಪರ ಎಂದು ಬಾಯಿಮಾತಿನ ಉಪಚಾರ ಮಾಡಲಾಗುತ್ತಿದೆ ಎಂದು ಸಿ.ಟಿ. ರವಿ ಟೀಕಿಸಿದರು.

Read More

ಬೆಂಗಳೂರು: ನಗರದಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಐವರನ್ನು ಕೊತ್ತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮುಜಮಿಲ್, ಅಬ್ದುಲ್ ಅಜೀಜ್, ಮಹಮ್ಮದ್ ಅಪ್ಟಲ್, ಅಬ್ದುಲ್ ಸಮೀರ್, ಮುತಾಸಿದ್ದಿಕ್ ಬಂಧಿತ ಆರೋಪಿಗಳು. ಬಂಧಿತರಿಂದ 26 ಲಕ್ಷ ಮೌಲ್ಯದ ಇ-ಸಿಗರೇಟ್ ಉತ್ಪನ್ನ, ವಿದೇಶಿ ಸಿಗರೇಟ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಅಕ್ರಮವಾಗಿ ಇ-ಸಿಗರೇಟ್ ದಾಸ್ತಾನು ಮಾಡಿ ಮಾರಾಟ ಮಾಡ್ತಿದ್ದರು. ಕೊತ್ತನೂರು ಪೊಲೀಸರು ಈ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

Read More

ವಾರದ ಹಿಂದೆ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಸರೆನ್ಸ್ ಕಲಾಪದ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಘಟನೆ ಮರುಕಳಿಸಿದೆ. ಹೈಕೋರ್ಟ್ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಸ್‌ಎಟಿ) ವಿಡಿಯೋ ಕಾನ್ಸರೆನ್ಸ್ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಘಟನೆ ಬಗ್ಗೆ ಬೆಂಗಳೂರಿನ ಸೆಂಟ್ರಲ್ ಸೆನ್ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಲಾಗಿದೆ.

Read More

ಬೆಂಗಳೂರು: ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಹೆಚ್‌ಎಂ ಟ್ರೇಡರ್ಸ್ ಅಂಗಡಿ ಮೇಲೆ ಸಿಸಿಬಿ ದಾಳಿ ಮಾಡಿದ ಘಟನೆ ವಿಲ್ಸನ್ ಗಾರ್ಡನ್ ಸಮೀಪದ ಸೋಮೇಶ್ವರನಗರದಲ್ಲಿ ನಡೆದಿದೆ. ಪ್ರತಿಷ್ಠಿತ ಬ್ರಾಂಡ್ ‌ನ ಆಹಾರ ಪದಾರ್ಥಗಳು ಎಕ್ಸ್ ಪೆರಿ ಆಗಿದ್ದರೂ ಮಾರಾಟ ಮಾಡಲಾಗುತ್ತಿತ್ತು. ಬಿಸ್ಕತ್, ಮಿಕ್ಸ್ ಚರ್ ಹಾಗೂ ಸ್ವೀಟ್ಸ್ ಸೇರಿದಂತೆ ಗೃಹ ಬಳಕೆ ವಸ್ತುಗಳನ್ನು ಮಾಲೀಕರು ಸೇಲ್ ಮಾಡುತ್ತಿದ್ದ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಏಕಾಏಕಿ ದಾಳಿ ಮಾಡಿದ್ದಾರೆ.

Read More

ಬೆಂಗಳೂರು: ನಗರದ ವೈದ್ಯರು ಮಾಡಿದ ವಿಶಿಷ್ಟ ಸರ್ಜರಿಯೊಂದು ವೈದ್ಯಲೋಕದಲ್ಲಿ ಅಚ್ಚರಿ ಮೂಡಿಸಿದೆ. 18 ವರ್ಷಗಳ ಹಿಂದೆ ಯುದ್ಧದ ಸಮಯದಲ್ಲಿ ಯೆಮೆನ್ ಮೂಲದ ವ್ಯಕ್ತಿಯೊಬ್ಬನ ತಲೆಗೆ ಹೊಕ್ಕಿದ್ದ ಬುಲೆಟ್ ಅನ್ನು ಇದೀಗ ಬೆಂಗಳೂರಿನ ಆರ್. ವಿ. ಆಸ್ಟರ್ ಆಸ್ಪತ್ರೆಯ ವೈದ್ಯರು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬುಲೆಟ್ ಸ್ಕಲ್ ಬೋನ್ ಒಳಗೆ ನುಸುಳಿ ಕಿವಿಗೆ ಹೊಕ್ಕಿತ್ತು. ವೈದ್ಯರು ಸವಾಲು ಸ್ವೀಕರಿಸಿ ಶಸ್ತ್ರಚಿಕಿತ್ಸೆ ನಡೆಸಿ 3 ಸೆಂಟಿಮೀಟರ್ ಉದ್ದದ ಬುಲೆಟ್ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

Read More

12 ವರ್ಷಗಳ ಹಿಂದೆ, ತನ್ನ 18 ನೇ ವಯಸ್ಸಿನಲ್ಲಿ, ಅಮಿತ್ ಚೌಧರಿ ಎಂಬ ವ್ಯಕ್ತಿ ತಾನು ಮಾಡದ ಅಪರಾಧದಲ್ಲಿ ಸಿಕ್ಕಿಹಾಕಿಕೊಂಡು ಜೈಲು ಸೇರಿದ್ದರು. ಉತ್ತರ ಪ್ರದೇಶದ ಮೀರತ್‌ ನಲ್ಲಿ ಇಬ್ಬರು ಕಾನ್ಸ್‌ ಟೇಬಲ್ ‌ಗಳ ಹತ್ಯೆಯ ಆರೋಪ ಇವರ ಮೇಲಿತ್ತು. ಈ ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಅಮಿತ್ ಚೌಧರಿ ಹೆಸರು ಕೂಡ ಸೇರಿತ್ತು. 2013ರಲ್ಲಿ ಜಾಮೀನು ಪಡೆದು ಹೊರಬಂದ ಇವರು ತಮ್ಮ ಪ್ರಕರಣವನ್ನು ನ್ಯಾಯಾಲಯದಲ್ಲಿ ವಾದ ಮಾಡಲು ಕಾನೂನು ಅಧ್ಯಯನ ಮಾಡಿದರು. ಕೊನೆಗೂ ತಾನು ನಿರಪರಾಧಿ ಎಂಬುದನ್ನು ಸಾಬೀತು ಪಡಿಸಿದರು.

Read More

ಇಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದೆಡೆ ಒಣಹವೆಯೇ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ, ಇದೆ. ಚಳಿಗಾಲ ಆರಂಭವಾಗುತ್ತಿದ್ದು ರಾಜ್ಯಾದ್ಯಂತ ಚಳಿ ಜೋರಾಗುತ್ತಿದೆ. ವಿಜಯಪುರ ಹಾಗೂ ಬೀದರ್‌ನಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ, ಆಗಾಗ ಮೋಡ ಕವಿದ ವಾತಾವರಣ ಉಂಟಾಗಲಿದೆ. ಉಳಿದಂತೆ ಇಲ್ಲಿ ಒಂದೆರಡು ಕಡೆ ಮಳೆಯಾಗುವ ಮುನ್ಸೂಚನೆ ಇದೆ.

Read More