Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಭಜರಂಗದಳ ಕಾರ್ಯಕರ್ತ ಮುಸ್ಲಿಂ ಮಹಿಳೆಯನ್ನು ಮದುವೆಯಾದ. ದಕ್ಷಿಣ ಕನ್ನಡದ ಸುರತ್ಕಲ್ ಪ್ರದೇಶದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಭಂಡಾರಿ ಅವರು ಆಯೇಷಾ ಎಂಬ ಯುವತಿಯನ್ನು ವಿವಾಹವಾದರು. ನವೆಂಬರ್ 30 ರಂದು ಪ್ರಶಾಂತ್ ಆಯೇಷಾಳನ್ನು ಮದುವೆಯಾಗುವ ಆಸಕ್ತಿಯನ್ನು ವ್ಯಕ್ತಪಡಿಸಿ ಹುಡುಗಿಯ ಮನೆಯವರನ್ನು ಸಂಪರ್ಕಿಸಿದ್ದ. ನಂತರ ಅವರು ರಹಸ್ಯವಾಗಿ ವಿವಾಹವಾದರು. ಆದರೆ ಮಗಳು ಕಾಣೆಯಾಗಿದ್ದಾಳೆ ಎಂದು ಆಯೇಷಾ ಕುಟುಂಬಸ್ಥರು ದೂರು ದಾಖಲಿಸಿದ್ದರು. ಇದಾದ ನಂತರ ಡಿಸೆಂಬರ್ 8 ರಂದು ಇಬ್ಬರೂ ಮದುವೆಯಾಗಿದ್ದರು. ಇದೇ ವೇಳೆ ಬಜರಂಗದಳದ ಕಾರ್ಯಕರ್ತರು ತಮ್ಮ ಮದುವೆಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ ಎಂದು ಕನ್ನಡ ಮಾಧ್ಯಮಗಳಲ್ಲಿ ವರದಿಯಾಗಿದೆ. ಲೌಜಿಹಾದ್ ವಿಚಾರವಾಗಿ ಬಜರಂಗದಳದ ಕಾರ್ಯಕ್ರಮಗಳಲ್ಲಿ ಪ್ರಶಾಂತ್ ಮುಂಚೂಣಿಯಲ್ಲಿದ್ದರು. ಪ್ರಶಾಂತ್ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದೆ. ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರು ಮದುವೆ ದಿರಿಸಿನಲ್ಲಿರುವ ಜೋಡಿಗಳ ಫೋಟೋಗಳನ್ನು ಹರಿಬಿಟ್ಟು ದೊಡ್ಡ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
2 ಲಕ್ಷ ಮೌಲ್ಯದ ನೋಟುಗಳನ್ನು ಇಲಿಗಳು ತಿಂದು ಹಾಕಿವೆ. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಪರಿಗಿಯ ಶಿವಲೀಲಾ ಎಂಬ ಮಹಿಳೆ ತಾನು ಕಷ್ಟಪಟ್ಟು ದುಡಿದ 2 ಲಕ್ಷ ರೂ. ಮೌಲ್ಯದ ನೋಟುಗಳನ್ನು ಪಡಿತರ ಅಕ್ಕಿಯ ಚೀಲದಲ್ಲಿ 8 ತಿಂಗಳ ಹಿಂದೆ ಬಚ್ಚಿಟ್ಟಿದ್ದರು. ಈ ಕ್ರಮದಲ್ಲಿ ಇಲಿಗಳು ಅಕ್ಕಿಯ ಜೊತೆಗೆ ನೋಟುಗಳನ್ನೂ ಕೂಡ ತಿಂದು ಹಾಕಿವೆ. ಇದರಿಂದ ಅರೆಬರೆ ತಿಂದ ನೋಟುಗಳೊಂದಿಗೆ ಬ್ಯಾಂಕ್ ಗಳಿಗೆ ಹೋದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಮಹಿಳೆ ಗೋಳಾಡಿದ್ದಾರೆ. ಆಕೆಯ ಪತಿ ನರಸಿಲ್ಲು ಕೊರೋನಾ ಸಮಯದಲ್ಲಿ ನಿಧನರಾಗಿದ್ದಾರೆ.
ಸುಪ್ರೀಂಕೋರ್ಟ್ & ಹೈಕೋರ್ಟ್‌ನ ನ್ಯಾಯಮೂರ್ತಿಗಳ ವಲಯದಲ್ಲಿ ‘ಅಜಾತಶತ್ರು’ ಎಂದೇ ಹೆಸರಾಗಿದ್ದ ನ್ಯಾಯಮೂರ್ತಿ ನಾಗನಾಥ ಕಂಟೆಪ್ಪ ಪಾಟೀಲ್(70) ಅವರು ಸೋಮವಾರ ಹೈದರಾಬಾದಿನಲ್ಲಿ ನಿಧನರಾದರು. ಅವರು ಮೂಲತಃ ಬೀದರ್ ಜಿಲ್ಲೆಯ ಭಾಲ್ಕಿಯ ನಿಡೆಬಾನ್ ಗ್ರಾಮದವರಾಗಿದ್ದಾರೆ. ಕಲಬುರಗಿ & ಧಾರವಾಡದ ಹೈಕೋರ್ಟ್ ಪೀಠಗಳ ಕಟ್ಟಡ & ಕಾರ್ಯಾರಂಭಕ್ಕೆ ಇವರ ಕೊಡುಗೆ ಅನನ್ಯವಾಗಿದೆ. ಇಂದು(ಡಿ. ೧೨) ಸಂಜೆ ಬೆಂಗಳೂರಿನ ಹೆಬ್ಬಾಳದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಅಮಿತಾ ಜಿಂದಾಲ್ ಎಂಬ ಮಹಿಳೆಗೆ ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣ, ರಾಜ್ಯದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ಭೂ ಬಿಡಲಾಗಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಕೂಲಂಕುಷವಾಗಿ ವಿಚಾರಣೆ ನಡೆಸಿದ್ದು, ಇದರಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ, ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಸೇರಿಸದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ನಾಯಕರ ವಿರುದ್ದ ಅಸಮಾಧಾನಿತ ಹಾಗೂ ಉಚ್ಛಾಟಿತ ನಾಯಕರು ಸೆಡ್ಡು ಹೊಡೆದಿದ್ದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿಕೆ ನಾಣು ಅವರನ್ನ ನೇಮಕ ಮಾಡಿದ್ದಾರೆ. ನೆನ್ನೆ ನಡೆದ ಸಭೆಯಲ್ಲಿಉಚ್ಛಾಟಿತ ನಾಯಕ ಸಿಕೆ ನಾಣು ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ. ಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿ.ಎಂ. ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿ.ಕೆ. ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಇಬ್ರಾಹಿಂ, ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿ.ಕೆ. ನಾಣು ಅವರನ್ನು ನೇಮಕ ಮಾಡಲಾಗಿದೆ. ಇದು ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್ ಭೇಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು. ಮಕ್ಕಳ ಹಿತ, ಎರಡು ಸೀಟ್ ಗಾಗಿ ಸಿದ್ಧಾಂತ ಬಲಿ ಕೊಟ್ಟಿದ್ದೀರಿ. ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕವನ್ನು ನಾಣುಗೆ ನೀಡಲಾಗಿದೆ. ನಾವು ಮೂರು ಅವಕಾಶ…
ತುಮಕೂರು: ವಕೀಲರ ರಕ್ಷಣಾ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಪಟಾಕಿ ಸಿಡಿಸಿ ಸಂಘದ ಸದಸ್ಯರುಗಳಿಗೆ ಸಿಹಿ ನೀಡುವುದರ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಆಡಳಿತ ವಕೀಲರ ಸಂಘದ ಪದಾಧಿಕಾರಿಗಳು ಆಡಳಿತ ಮಂಡಳಿ ಸದಸ್ಯರು ಹಾಗು ವಕೀಲರೆಲ್ಲರೂ ಪಾಲ್ಗೊಂಡಿದ್ದರು.
U.K. ನಲ್ಲಿರುವ ಆರೋಗ್ಯ ತಜ್ಞರು ಮಾನವನ ನಿದ್ರೆಗೆ ಅಡ್ಡಿಪಡಿಸುವ ಮತ್ತೊಂದು ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರಿಸಿದ್ದಾರೆ. ಯುಕೆಯಲ್ಲಿ ಅನೇಕ ಜನರು ಈಗ ವೂಪಿಂಗ್ ಕೆಮ್ಮಿನಿಂದ ಬಳಲುತ್ತಿದ್ದಾರೆ, ಇದು 100 ದಿನಗಳವರೆಗೆ ಇರುತ್ತದೆ. ಬ್ಯಾಕ್ಟೀರಿಯಾದ ಸೋಂಕಿನಿಂದ ಈ ರೋಗದಲ್ಲಿ 250% ಹೆಚ್ಚಳವಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ನೆಗಡಿಯಾಗಿ ಶುರುವಾಗುವುದು ನಿಧಾನವಾಗಿ ಮೂರು ತಿಂಗಳ ತಡೆರಹಿತ ಕೆಮ್ಮಿನವರೆಗೆ ಬೆಳೆಯಬಹುದು. ಈ ವರ್ಷದ ಜುಲೈ ಮತ್ತು ನವೆಂಬರ್ ನಡುವೆ 716 ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ರೋಗ ಹರಡಿದ್ದಕ್ಕಿಂತ ಮೂರು ಪಟ್ಟು ಹೆಚ್ಚು. ಬೊರ್ಡಿಟೆಲ್ಲಾ ಪೆರ್ಟುಸಿಸ್ ಬ್ಯಾಕ್ಟೀರಿಯಾ ನಾಯಿಕೆಮ್ಮಿನ ಹಿಂದೆ ವಿಲನ್ ಆಗಿದೆ. ವೂಪಿಂಗ್ ಕೆಮ್ಮು, ಒಮ್ಮೆ ಮಕ್ಕಳ ಜೀವಕ್ಕೆ ದೊಡ್ಡ ಅಪಾಯವಾಗಿತ್ತು. 1950 ರ ದಶಕದಲ್ಲಿ ಲಸಿಕೆಯನ್ನು ಪರಿಚಯಿಸುವುದರೊಂದಿಗೆ ಸ್ವಲ್ಪಮಟ್ಟಿಗೆ ನಿರಾಕರಿಸಿತು. ವೂಪಿಂಗ್ ಕೆಮ್ಮು ಶಿಶುಗಳಿಗೆ ಮಾತ್ರವಲ್ಲದೆ ವಯಸ್ಕರ ಮೇಲೂ ಪರಿಣಾಮ ಬೀರುತ್ತದೆ. ವೂಪಿಂಗ್ ಕೆಮ್ಮು ಅಂಡವಾಯುಗಳು, ಕಿವಿ ಸೋಂಕುಗಳು ಮತ್ತು ಸ್ವಯಂಪ್ರೇರಿತ ಮೂತ್ರ ವಿಸರ್ಜನೆಗೆ ಕಾರಣವಾಗಬಹುದು. ನ್ಯಾಷನಲ್ ಇನ್…
ಶೇಕ್ ಅಬ್ದುಲ್ಲಾ ಖುಷಿಪಡಿಸಲು ನೆಹರೂ ಅವರು ಆರ್ಟಿಕಲ್ 370 ಜಾರಿಗೆ ತಂದಿದ್ದರು. ಆದರೆ ಮೋದಿ ಅವರು ಧೈರ್ಯದಿಂದ ಆರ್ಟಿಕಲ್ 370 ರದ್ದು ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಏಜೆಂಟ್ ನಂತೆ ವರ್ತಿಸುತ್ತಿದ್ದ ಲೋಕಸಭೆ ಸದಸ್ಯನೊಬ್ಬ 370 ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಿದ್ದ. ಇಂದು ಸುಪ್ರೀಂಕೋರ್ಟ್ ಮೋದಿ ಸರ್ಕಾರ ರದ್ದು ಮಾಡಿದ್ದನ್ನ ಮಾನ್ಯ ಮಾಡಿದೆ. ಶ್ಯಾಮ್ ಪ್ರಸಾದ್ ಮುಖರ್ಜಿ ಕನಸು-ನನಸು ಮಾಡಿದ್ದಕ್ಕೆ ಮೋದಿಯವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ಜನ ಸಂಘ, ಹುಟ್ಟಿದ್ದು ಆರ್ಟಿಕಲ್ 370 ತೆಗೆದು ಹಾಕಬೇಕೆಂದು. ಯಾಕೆಂದರೆ ಒಂದು ದೇಶದಲ್ಲಿ ಎರಡು ಧ್ವಜ ಎರಡು ಸಂವಿಧಾನ ಇರಬಾರದು ಎಂದು ಹೇಳಿದರು.
ಮುಸ್ಲಿಂ ಸ್ಪೀಕರ್ ಕುರಿತಾದ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ಹಿಂದೂಗಳು ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನೆ ಮಾಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನ 4ನೇ ತಾರೀಖು ಶುರುವಾಗಿದೆ. ಮೊದಲ ವಾರ ಏನೂ ಮಾತಾಡಿಲ್ಲ. 2ನೇ ವಾರ ಇದ್ದಕ್ಕಿದ್ದಂತೆ ಈ ವಿಷಯ ತೆಗೆದುಕೊಂಡಿದ್ದಾರೆ. ಇದರ ಅಗತ್ಯವಾದರೂ ಏನಿತ್ತು? ನಾನೇನು ತಪ್ಪು ಮಾತಾಡಿದ್ದೇನೆ? ಹೈದರಾಬಾದ್ ಸಭೆಯಲ್ಲಿ ಮಾತಾಡಿದ್ದೇನೆ. ಸಭೆಯಲ್ಲಿ ಯಾರೋ ಒಬ್ಬ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸಮಾನ ಅವಕಾಶ ಕೊಡಲ್ಲ ಎಂದು ಕೇಳಿದ್ರು. ಆಗ ನಿನ್ನ ಭಾವನೆ ತಪ್ಪಿದೆ ಎಂದು ತಿಳಿವಳಿಕೆ ಹೇಳಿದೆ ಎಂದರು. ಕರ್ನಾಟಕದಲ್ಲಿ 17 ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ, ಅದರಲ್ಲಿ 9 ಜನ ಗೆದಿದ್ದಾರೆ. 9 ರಲ್ಲಿ 5 ಜನರಿಗೆ ಅಧಿಕಾರಿ ಕೊಟ್ಟಿದ್ದಾರೆ. ನನ್ನ, ರಹೀಮ್ ಖಾನ್‌ನ ಮಂತ್ರಿ ಮಾಡಿದ್ದಾರೆ. ಸಲೀಂ ಅಹ್ಮದ್ ಅವರನ್ನ ಚಿಫ್ ವಿಪ್ ಮಾಡಿದ್ದಾರೆ. ನಜೀರ್ ಅಹ್ಮದ್ ಅವರನ್ನ ಸಿಎಂ ರಾಜಕೀಯ…
ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸಂತ್ರಸ್ತ ಮಹಿಳೆ ಬೆಳಗಾವಿ ಭೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಗೆ ಧೈರ್ಯ ತುಂಬಿದರು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಡೀ ಮಾನವ ಕುಲ ತಲೆತಗ್ಗಿಸುವ ಘಟನೆ ಇದು. ನನ್ನ ತಾಲೂಕಿನಲ್ಲಿ ಇಂತಹ ಘಟನೆ ನಡೆದಿರುವುದು ನಿಜಕ್ಕೂ ಖೇದಕರ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.