Subscribe to Updates
Get the latest creative news from FooBar about art, design and business.
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
- ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್ ಗೌಡ ಕಿಡಿ
- ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
- ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
- ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
- ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
- ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
Author: admin
ಬೆಂಗಳೂರು: ಉದ್ಯಮಿ ಗಿರಿಜಾ ಎಂಬುವವರ ಮನೆಯಲ್ಲಿ ಇತ್ತೀಚೆಗೆ ನಡೆದಿದ್ದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪುಲಕೇಶಿನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮ್ಮ ಮೇಲೆ ಆರೋಪ ಕೇಳಿಬಂದಿದ್ದಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಾರು ಚಾಲಕ ಜಿಮೋನ್ ವರ್ಗೀಸ್ ಅವರೇ ಆರೋಪಿ ಎಂಬುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. ಠಾಣಾ ವ್ಯಾಪ್ತಿಯ ಗಿರಿಜಾ ಅವರ ಮನೆಯಲ್ಲಿ ಕೆ 2. 50 ಕೋಟಿ ಮೊತ್ತದ ಚಿನ್ನಾಭರಣ, ನಗದು ಹಾಗೂ ವಿದೇಶಿ ಕರೆನ್ಸಿಯ ಕಳವು ನಡೆದಿತ್ತು.
ತಮಿಳುನಾಡಿನ ಡಿಎಂಕೆ ಪಕ್ಷದ ಮಧುರೈ ಮಂಡಲ ಅಧ್ಯಕ್ಷ, ರೌಡಿಶೀಟರ್ ವಿ. ಕೆ. ಗುರುಸ್ವಾಮಿ ಮೇಲೆ ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗುರುಸ್ವಾಮಿ ಅವರ ಸ್ಥಿತಿ ಗಂಭೀರವಾಗಿದ್ದು, ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗುರುಸ್ವಾಮಿ ಅವರು ಕರುಣಾನಿಧಿ ಅವರ ಪುತ್ರ ಅಳಗಿರಿ ಆಪ್ತ ಎನ್ನಲಾಗಿದೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿಯ ಸುಖಸಾಗರ್ ಹೋಟೆಲ್ ನಲ್ಲಿ ಹಲ್ಲೆ ನಡೆದಿತ್ತು.
ಮೆಟ್ರೊ ನಿಲ್ದಾಣಗಳಿಂದ ಕೊನೇ ಮೈಲಿವರೆಗೆ ಮೀಟರ್ ಹಾಕಿ ಆಟೋ ಸಂಚರಿಸುವ ‘ಮೆಟ್ರೊ ಮಿತ್ರ’ವನ್ನು ಆಟೋ ರಿಕ್ಷಾ ಚಾಲಕರ ಒಕ್ಕೂಟ (ಎಆರ್‌ಡಿಯು) ಆರಂಭಿಸುತ್ತಿದೆ. ಸೆ. 6ರಂದು ಮಧ್ಯಾಹ್ನ 3ಕ್ಕೆ ಚಾಲನೆಗೊಳ್ಳಲಿದೆ. ಜಯನಗರ ಮೆಟ್ರೊ ನಿಲ್ದಾಣದಿಂದ ಆರ್. ವಿ. ರಸ್ತೆ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕವಾಗಿ ‘ಮೆಟ್ರೊ ಮಿತ್ರ’ ಇರಲಿದೆ. ಇಲ್ಲಿ ಯಶಸ್ವಿಯಾದರೆ ಎಲ್ಲ ಮೆಟ್ರೊ ನಿಲ್ದಾಣಗಳಿಗೆ ವಿಸ್ತರಿಸುವ ಗುರಿಯನ್ನು ಎಆರ್‌ಡಿಯು ಇಟ್ಟುಕೊಂಡಿದೆ.
ಪಾರ್ಟ್‌ಟೈಮ್ ಉದ್ಯೋಗಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ಖಾತೆಯಲ್ಲಿ ಬಂದಿದ್ದ ಜಾಹೀರಾತು ನಂಬಿ ಯುವತಿಯೊಬ್ಬರು 7 12 ಸಾವಿರ ಕಳೆದುಕೊಂಡಿದ್ದು, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿದ್ದ ಮೊಬೈಲ್ ಸಂಖ್ಯೆಗೆ ಯುವತಿ ಕರೆ ಮಾಡಿದಾಗ ವ್ಯಕ್ತಿಯೊಬ್ಬ ಹಿಂದಿ ಭಾಷೆಯಲ್ಲಿ ಮಾತನಾಡಿದ್ದ. ಉದ್ಯೋಗ ಬೇಕಿದ್ದರೆ ಸ್ಕ್ಯಾನರ್ ಮೂಲಕ 1 750 ಮುಂಗಡ ಹಣ, ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆ ಫೋಟೊ ನೀಡುವಂತೆ ಸೂಚಿಸಿದ್ದ. ಅದನ್ನೇ ನಂಬಿದ್ದ ಯುವತಿ ಆತ ಹೇಳಿದಂತೆ ಮಾಡಿದ್ದರು.
ತುಮಕೂರು: ದೇಶದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನಾವು ಹಾಗೂ ರಾಜ್ಯ ಸರ್ಕಾರ ವಿರೋಧಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕೊರಟಗೆರೆ ಪಟ್ಟಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅದಕ್ಕೆ ಕೇವಲ ವಿರೋಧಿಸಲು ವಿರೋಧಿಸುತ್ತಿಲ್ಲ. ಬದಲಾಗಿ ನಾವು ಇದುವರೆಗೂ ಯಾವ ಶಿಕ್ಷಣ ನೀತಿಯನ್ನು ಅನುಸರಿಸಿದ್ದೇವೆಅದು ಹತ್ತನೇ ತರಗತಿ ಮತ್ತು ಎರಡು ವರ್ಷ ಪಿಯುಸಿ ಶಿಕ್ಷಣ ನೀತಿ ಅನ್ವಯ ಶಿಕ್ಷಣ ಪಡೆದಿದ್ದೇವೆ ಆದರೆ ಅದನ್ನು ಅನುಸರಿಸಿಕೊಂಡಿರುವ ನಾವು ಸರಿ ಇಲ್ಲವೇ ಎಂದು ಪ್ರಶ್ನಿಸಿದರು. ಇಂದಿನ ವಿಜ್ಞಾನಿಗಳು ಹಾಗೂ ಸಮಾಜದಲ್ಲಿರುವವರೆಲ್ಲರೂ ಹಳೆಯ ಶಿಕ್ಷಣ ನೀತಿ ಅನ್ಯಾಯವೇ ಶಿಕ್ಷಣ ಪಡೆದಿದ್ದಾರೆ. ಆದರೆ ಇದ್ದಕ್ಕಿದ್ದಂತೆ ನೂತನ ಶಿಕ್ಷಣ ನೀತಿ ಜಾರಿಗೆ ತರುವುದರಲ್ಲಿ ಯಾವ ಅರ್ಥವಿದೆ ಎಂದು ಹೇಳಿದರು. ಪಶ್ಚಿಮಾತ್ಯ ದೇಶಗಳಲ್ಲಿ ಮಕ್ಕಳ ವಿಕಸನಕ್ಕೆ ಪೂರಕವಾಗಿ ಶಿಕ್ಷಣ ನೀತಿಯನ್ನು ಅನುಸರಿಸಲಾಗುತ್ತಿದೆ. ಅದೇ ರೀತಿ ದೇಶದಲ್ಲಿಯೂ ಈ ಹಿಂದೆ ಶಿಕ್ಷಣ ನೀತಿಯನ್ನು ಪೂರಕವಾಗಿ ಮಕ್ಕಳ ವಿಕಸನಕ್ಕೆ ಅಳವಡಿಸಿಕೊಳ್ಳಲಾಗಿತ್ತು. ಹೀಗಾಗಿ ನಮ್ಮ ರಾಜ್ಯದಲ್ಲಿ…
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟಿಸಿದರು. ಬಳಿಕ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರೌಢಶಾಲಾ ವಿಭಾಗದಿಂದ ಧಾರವಾಡದ ಸುರೇಶ್ ಮುಗಳಿ ಸೇರಿದಂತೆ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉತ್ತಮ ಶಿಕ್ಷಕರ ಪಟ್ಟಿಯಲ್ಲಿರುವ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕರಾದ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವು ಮಂದಿ ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು…
ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಅವಹೇಳನ ಮಾಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಸನಾತನ ಧರ್ಮ ಡೆಂಗಿ, ಕಾಲರಾ, ಕೋವಿಡ್ ಇದ್ದಂತೆ. ಆ ರೋಗಗಳನ್ನು ನಾಶ ಮಾಡಿದಂತೆ ಸನಾತನ ಧರ್ಮವನ್ನೂ ನಾಶ ಮಾಡಬೇಕು ಎಂಬ ಹೇಳಿಕೆ, ವಿವೇಚನೆ ಕಳೆದುಕೊಂಡ ಮತ್ತು ಅಹಂಕಾರದ ಪರಮಾವಧಿ ಎಂದು ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಉಪಾಧ್ಯಕ್ಷ ಕೆ. ಎನ್. ಛಾಯಾಪತಿ ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹಣ್ಣುಗಳಲ್ಲಿ ಬಚ್ಚಿಟ್ಟು ಜೈಲು ಕೈದಿಗಳಿಗೆ ಗಾಂಜಾ ಪೂರೈಕೆಗೆ ಯತ್ನಿಸಿದ ಆರೋಪದ ಮೇಲೆ ಮಂಗಳವಾರ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು 28 ವರ್ಷದ ತಬ್ರೇಜ್, 21 ವರ್ಷದ ವಾಸಿಂ ಮತ್ತು 20 ವರ್ಷದ ರಕೀಬ್ ಎಂದು ಗುರುತಿಸಲಾಗಿದೆ. ಆರೋಪಿಗಳು ತರಕಾರಿ ಮಾರಾಟ ಮತ್ತು ಸ್ಕ್ರ್ಯಾಪ್ ವ್ಯವಹಾರ ನಡೆಸುತ್ತಿದ್ದರು. ಆರೋಪಿಗಳು ಹಣ್ಣುಗಳಿಗೆ ರಂಧ್ರ ಮಾಡಿ ಒಳಗೆ ಗಾಂಜಾ ತುಂಬಿ ಸ್ಟಿಕ್ಕರ್ ಅಂಟಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜೈಲು ಕಟ್ಟಡದ ಹಿಂಭಾಗದಿಂದ ಜೈಲಿನ ಆವರಣಕ್ಕೆ ಗಾಂಜಾ ತುಂಬಿದ್ದ ಸೇಬು ಮತ್ತು ಮೋಸಂಬಿ ಹಣ್ಣುಗಳನ್ನು ಎಸೆಯಲು ಯತ್ನಿಸುತ್ತಿದ್ದಾಗ ಮೂವರು ಸಿಕ್ಕಿಬಿದ್ದಿದ್ದಾರೆ.
ಕೊರಟಗೆರೆ: ಗೃಹ ಸಚಿವರ ತವರಲ್ಲಿ ಇಲ್ಲ ದಲಿತರಿಗೆ ರಕ್ಷಣೆ ಇಲ್ವಾ ಎಂಬ ಅನುಮಾನ ಸೃಷ್ಟಿಯಾಗಿದ್ದು, ಶಿಕ್ಷಕ ಮತ್ತು ಆತನ ಗುಂಪು ದಲಿತ ಗ್ರಾಮ ಪಂಚಾಯಿತಿ ಸದಸ್ಯನಿಗೆ ಅಮಾನವೀಯವಾಗಿ ಥಳಿಸಿದ ಘಟನೆ ನಡೆದಿದೆ. ಜೆಟ್ಟಿ ಅಗ್ರಹಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೇಲ್ಜಾತಿಯ ಶಿಕ್ಷಕ ರಾಜಶೇಖರ್ ಮತ್ತು ಅವರ ಗುಂಪು ಸೇರಿ ದಲಿತನ ಮೇಲೆ ಹಲ್ಲೆ ನಡೆಸಿದ್ದಾರೆ. ಸಮಾಜ ಸೇವಕ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಎದೆಗೆ ಬಲವಾದ ಏಟು ಬಿದ್ದ ಕಾರಣ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ತಂಗುದಾಣ ನಿರ್ಮಾಣ ಮಾಡಲು ಮುಂದಾಗಿದನ್ನು ವಿರೋಧಿಸಿದ ಶಿಕ್ಷಕ ರಾಜಶೇಖರ್ ಹಾಗೂ ಗುಂಪು, ನಮ್ಮ ಮನೆ ಮುಂಭಾಗ ಸಾರ್ವಜನಿಕ ತಂಗುದಾನ ನಿರ್ಮಾಣ ಮಾಡಬೇಡ ಇಲ್ಲಿ ಕೆಳ ಜಾತಿ ಅವರೆಲ್ಲ ಬಂದು ಕೂರುತ್ತಾರೆ ಎಂದು ಮಂಜುನಾಥ್ ಗೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಶಿಕ್ಷಕ ರಾಜಶೇಖರ್ ಕೊರಟಗೆರೆ ತಾಲೂಕು ಕುರಂಕೋಟೆ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ…
ತುಮಕೂರು: ಕ್ಷೀರಭಾಗ್ಯ ಯೋಜನೆ ಜಾರಿಗೊಂಡು ಹತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6 ರಂದು ಮಧುಗಿರಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ “ಕ್ಷೀರಭಾಗ್ಯ” ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕ್ಷೀರಭಾಗ್ಯ ಯೋಜನೆಗೆ ದಶಮಾನೋತ್ಸವ ಸಂಭ್ರಮ. ಈ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮಕ್ಕಾಗಿ ಮಧುಗಿರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನೊಳಗೊಂಡಂತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಗಿರಿಯಲ್ಲಿ ರಾಜ್ಯಮಟ್ಟದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಅಭೂತಪೂರ್ವ ಕಾರ್ಯಕ್ರಮದ ಅಗತ್ಯತೆಗಳ ಕೆಲಸ ಭರದಿಂದ ಸಾಗಿದೆ ಎಂದರು. ಮಧುಗಿರಿ ಪಟ್ಟಣಕ್ಕೆ ಸೆ. 6ರಂದು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದ ಅವರು, ಈ ದಶಮಾನೋತ್ಸವ…