Author: admin

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು, ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ಮಂಗಳವಾರ ಕುಣಿಗಲ್ ಗೆ ತಲುಪಿತು. ಬೆಳ್ತಂಗಡಿಯಿಂದ ಈ ಪಾದಯಾತ್ರೆಯು ಬೆಂಗಳೂರಿನವರೆಗೆ 14 ದಿನಗಳ ಕಾಲ ನಡೆಯಲಿದೆ. ಪಾದಯಾತ್ರೆಯ 11ನೇ ದಿನವಾದ ಇಂದು ಯಡಿಯೂರುನಿಂದ 12.30ಕ್ಕೆ ಹೊರಟು 250 ಕಿ.ಮೀ. ಕ್ರಮಿಸಿ ಕುಣಿಗಲ್ ಗೆ ತಲುಪಿತು. ಪಾದಯಾತ್ರೆಯ ಉದ್ದಕ್ಕೂ ಜನರು ತಮ್ಮ ಬೆಂಬಲ ವ್ಯಕ್ತಪಡಿಸಿದರು ಹಾಗೂ ಹಲವಾರು ಜನರು ದೇಣಿಗೆ ನೀಡಿ ಈ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಕುಣಿಗಲ್ ನ ಹುಚ್ಚ್ ಮಾಸ್ತಿ ಗೌಡ ಸರ್ಕಲ್ ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಕೆ ಆರ್ ಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಮಾತನಾಡಿ, ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮರುತನಿಗೆ ಆಗಬೇಕು, ಸೌಜನ್ಯ ಮಹಿಳಾ ಸುರಕ್ಷಾ ಆಯೋಗ ಸ್ಥಾಪನೆ ಆಗಬೇಕು, ಕರ್ತವ್ಯಲೋಪವಿಸಗಿದ ತನಿಖಾಧಿಕಾರಿಯ ವಿರುದ್ಧ ತನಿಖೆಯಾಗಬೇಕು ಎಂದು…

Read More

ಬೆಂಗಳೂರು: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು. ಇವರು ಸಮಾಜದ, ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳು ಎಂದು ನುಡಿದರು. ಡಿಗ್ರಿ ಪಡೆದು, ಡಾಕ್ಟರೇಟ್ ಪಡೆದರೂ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಯದಿದ್ದರೆ, ತಲೆಯೊಳಗೆ ಮೌಡ್ಯ ತುಂಬಿಕೊಂಡಿದ್ದರೆ ಅವರನ್ನು ಸುಶಿಕ್ಷಿತರು ಎಂದು ಕರೆಯಲು ಸಾಧ್ಯವಿಲ್ಲ. ಡಿಗ್ರಿ ಪಡೆದವರೇ ಹೆಚ್ಚೆಚ್ವು ಜಾತಿವಾದಿಗಳಾದರೆ ಈ ಚಂದಕ್ಕೆ ಶಿಕ್ಷಣ ಏಕೆ ಪಡೆಯಬೇಕು ಎಂದು ಪ್ರಶ್ನಿಸಿದರು. ಶೂದ್ರರು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಹೊರಗೆ ಇಡಲಾಗಿತ್ತು. ನಮ್ಮ ಸಂವಿಧಾನ…

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹಾಲಿನ ಡೈರಿಯಲ್ಲಿ ಪಶು ಆಹಾರ ಉತ್ಪನ್ನವನ್ನು ನೀಡಲು ವಿಳಂಬ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿ ಶೆಟ್ಟಿಕೆರೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವಕುಮಾರ್ ಮೇಲೆ ಹಲ್ಲೆ ನಡೆಸಲಾಗಿದ್ದು. ಕ್ಷುಲ್ಲಕ ವಿಚಾರಕ್ಕೆ ಕರ್ತವ್ಯನಿರತ ಶಿವಕುಮಾರ್ ಮೇಲೆ ಏಕಾಏಕಿ ಹಲ್ಲೆ ಮಾಡಲಾಗಿದ್ದು ಕೇಳಿದ ತಕ್ಷಣ ಬೂಸಾ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾಗರಾಜು, ಯೋಗಾನಂದ್, ಅನಿಲ್ ಎಂಬುವರಿಂದ ಶಿವಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ ಅಲ್ಲದೆ ಬೂಸಾ ಗೋದಾಮಿಗೆ ನುಗ್ಗಿ ದಾಂದಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದ ಮೂವರ ವಿರುದ್ದ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದ ಕ್ಯಾಂಟೀನ್ ಎದುರು ನಡೆದಿದೆ. ಕ್ಯಾಂಟಿನ್ ಮುಂಭಾಗದಲ್ಲಿ ವಾಹನ ನಿಲುಗಡೆ ಮಾಡಿದ್ದ ಯುವಕರನ್ನ ಪ್ರಶ್ನಿಸಿದ್ದಕ್ಕೆ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ನಾಗರಾಜ್ ಮತ್ತು ಮಂಜು ಎಂಬುವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಮಾಡಿದ ಯುವಕರ ವಿರುದ್ಧ ಪಾವಗಡ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ

Read More

ತುಮಕೂರು: ಜಮೀನು ಪೋಡಿ ಮಾಡಿಕೊಡಲು 15000 ರೂ. ಲಂಚ ಪಡೆಯುವ ವೇಳೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾರೆ. ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಇಇ ಕಾಶಿ ವಿಶ್ವನಾಥ ಎಂಬುವರು, ಲಕ್ಷ್ಮಿ ನಾರಾಯಣ್ ಎಂಬುವರ ಬಳಿ ಲಂಚ ಪಡೆಯುತ್ತಿದ್ದ ರು. ಲಕ್ಷ್ಮೀ ನಾರಾಯಣ್ ಅವರ 1 ಎಕರೆ 7 ಗುಂಟೆ ಜಮೀನ ಪೈಕಿ 4 ಗುಂಟೆ ಒಳ ಚರಂಡಿ ಮಂಡಳಿ ಗೆ ಸೇರಿತ್ತು. ಜಮೀನು ಪೋಡಿ ಮಾಡಲು ಇಲಾಖೆಯಿಂದ ಪತ್ರ ನೀಡಬೇಕಿತ್ತು. ಪತ್ರ ನೀಡಲು ಕಾಶಿ ವಿಶ್ವನಾಥ್ 15 ಸಾವಿರ ರೂ ಲಂಚಕ್ಕೆ ಬೇಡಿಕೆ. ಖಚಿತ ಮಾಹಿತಿ ಮೇರೆಗೆ ಕಚೇರಿಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ಪಿ ವಲ್ಲಿ ಬಾಷಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಡಿವೈಎಸ್ಪಿ ಗಳಾದ ಮಂಜುನಾಥ್, ಹರೀಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

Read More

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಚುನಾವಣಾ ಸಮಿತಿಯನ್ನು ರಚಿಸಿತು. ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಸಮಿತಿಯನ್ನು ರಚಿಸಿದ್ದಾರೆ. 16 ಸದಸ್ಯರ ಸಮಿತಿಯನ್ನು ರಚಿಸಲಾಯಿತು. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಧೀರ್ ರಂಜನ್ ಚೌಧರಿ, ಕೆಸಿ ವೇಣುಗೋಪಾಲ್ ಮತ್ತು ಕೆಜೆ ಜಾರ್ಜ್ ಅವರನ್ನೊಳಗೊಂಡ ಸಮಿತಿ ಇದನ್ನು ರಚಿಸಿದೆ.

ಆನ್‌ ಲೈನ್ ಪಾವತಿ ವೇದಿಕೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ ಫೇಸ್ (UPI) ಒಂದು ತಿಂಗಳಲ್ಲಿ 10 ಬಿಲಿಯನ್ ವಹಿವಾಟುಗಳನ್ನು ನಿರ್ವಹಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. UPI ವಹಿವಾಟುಗಳ ಒಟ್ಟು ಸಂಖ್ಯೆಯು ಆಗಸ್ಟ್‌ ನಲ್ಲಿ ಸಾರ್ವಕಾಲಿಕ ಗರಿಷ್ಠ 10.58 ಶತಕೋಟಿಯನ್ನು ತಲುಪಿದೆ. ನೈಜ-ಸಮಯದ ಪಾವತಿ ವ್ಯವಸ್ಥೆಯನ್ನು ನಿಯಂತ್ರಿಸುವ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಪ್ರಕಾರ ಆಗಸ್ಟ್‌ ನಲ್ಲಿ ಯುಪಿಐ ವಹಿವಾಟುಗಳು ಶೇಕಡಾ 67 ರಷ್ಟು ಏರಿಕೆಯಾಗಿ 10.58 ಬಿಲಿಯನ್‌ ಗೆ ತಲುಪಿದೆ. ಡಿಜಿಟಲ್ ಇಂಡಿಯಾ ಹೊಸ ದಾಖಲೆಯನ್ನು ತಲುಪಿದೆ. UPI ಪಾವತಿ ವಹಿವಾಟುಗಳು Aug-23 ರಂದು 10 ಶತಕೋಟಿ ದಾಟಿದೆ. ಕೇಂದ್ರ ಟೆಲಿಕಾಂ ಸಚಿವೆ ಅಶ್ವಿನಿ ವೈಷ್ಣವ್ ಈ ಸಾಧನೆ ಕುರಿತು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಜುಲೈನಲ್ಲಿ ಸ್ಥಾಪಿಸಲಾಗಿದ್ದ 15.34 ಲಕ್ಷ ಕೋಟಿ ರೂ.ಗಳ ಹಿಂದಿನ ದಾಖಲೆಯನ್ನು ಹಿಂದಿಕ್ಕಿದೆ. UPI ವ್ಯವಸ್ಥೆಯು ಇತ್ತೀಚೆಗೆ ಬದಲಾವಣೆಗಳಿಗೆ ಒಳಗಾಗಿದೆ. ಇದು UPI ಲೈಟ್ ಅನ್ನು ಪರಿಚಯಿಸಿತು, UPI ಯ ಆಫ್‌ಲೈನ್ ಮೋಡ್…

Read More

ಚೀಟಿ ವ್ಯವಹಾರ ನಡೆಸಿ ಕೋಟ್ಯಾಂತರ ರೂಪಾಯಿಯನ್ನು ತೆಗೆದುಕೊಂಡು ಇಡೀ ಕುಟುಂಬವೇ ಪರಾರಿ ಆಗಿರುವ ಘಟನೆ ಚಿಕ್ಕಬಾಣವರದ ಕೆರೆಗುಡ್ಡದಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ವಿಶ್ವನಾಥ್ ಹಾಗೂ ಈತನ ಸಹೋದರ ಮಂಜುನಾಥ್ ಸೇರಿ ಪತ್ನಿ ವನಿತಾ, ಮುನಿಸ್ವಾಮಿ, ಲಕ್ಷ್ಮಿ ನಾರಾಯಣ್ ಸೇರಿ ಒಂದೇ ಕುಟುಂಬದ 8 ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ವೈದ್ಯರು ಮತ್ತು ವಕೀಲರನ್ನು ಟಾರ್ಗೆಟ್ ಮಾಡಿದ್ದ ಕುಟುಂಬ ಸ್ವಂತ ಐಶಾರಾಮಿ ಮನೆ, ವಾಣಿಜ್ಯ ಮಳಿಗೆಯನ್ನು ತೋರಿಸಿ ಚೀಟಿ ಹಾಕಿಸಿಕೊಂಡು ಬರೋಬ್ಬರಿ 6 ಕೋಟಿಗೂ ಹೆಚ್ಚಿನ ಹಣ ವಂಚನೆ ಮಾಡಿದ್ದಾರೆ. ಸುಮಾರು 10 ವರ್ಷಗಳಿಂದ ಲೈಸನ್ಸ್‌ ಪಡೆದು ಕಮಿಷನ್‌ ಆಧಾರದ ಮೇಲೆ ಚೀಟಿ ನಡೆಸುತ್ತಿರುವುದಾಗಿ ವಿಶ್ವನಾಥ್ ಎಲ್ಲರನ್ನೂ ನಂಬಿಸಿದ್ದನು. ಇದೀಗ ಚೀಟಿ ಹಾಕಿದ ಜನರು ವಿಶ್ವನಾಥ್ ಮನೆ ಬಳಿ ಬಂದು ಗೋಳಾಟ ನಡೆಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More