Author: admin

ಚಿಕ್ಕೋಡಿ: ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆಪರೇಷನ್  ಹಸ್ತದ ಮೂಲ ಉದ್ದೇಶ ಏಕೆ ಶುರುವಾಯ್ತು ಕೇಳಿ ಎಂದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ 25 ರಿಂದ 30 ಹಿರಿಯ ಶಾಸಕರು ಮುಂದಿನ ನಿರ್ಣಯಕ್ಕೆ ಸೇರುವವರಿದ್ದರು. ಅದನ್ನ ಮರೆಮಾಚಲು ಈಗ ಮಹಾ ನಾಯಕ ಮಾಡಿದ ಕುತಂತ್ರವಾಗಿದೆ. ಇದು ಆಪರೇಷನ್ ಹಸ್ತ ಅಲ್ಲ, ನನಗೆ ಎಲ್ಲ ಗೊತ್ತಿದೆ. ಅವರ ಪಕ್ಷದಲ್ಲಿ 25 ರಿಂದ 30 ಶಾಸಕರು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ  ಸೇರುವವರಿದ್ದರು. ಆಪರೇಷನ್ ಹಸ್ತ ಅಂತಾ ಪೋಸ್ ಕೊಡುವ ನಾಯಕ ತನ್ನ ಪಕ್ಷಕ್ಕೆ ಅವಮಾನ ಆಗುತ್ತೆ ಅಂತಾ ನಾಟಕವಾಡುತ್ತಿದ್ದಾರೆ. ಸಿಎಂಗೆ ಪತ್ರ ಬರೆದು ಬಳಿಕ ಎಲ್ಲರೂ ಸೇರುವವರಿದ್ದರು. ಅವರು ಹೆದರಲಿ, ಅವರು ಬಿಜೆಪಿಗೆ ಬರುತ್ತಿದ್ದಾರೆ ಎಂದು ಈಗ ನಾಟಕ ಮಾಡುತ್ತಿದ್ದಾರೆ. ಆಪರೇಷನ್ ಹಸ್ತ ಮಾಡೋರು ಮೂರ್ಖರು, ಹೋಗೋರು ಮೂರ್ಖರು ಎಂದರು.

Read More

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.6 ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

Read More

ಹಾಡ ಹಗಲೇ ಹುಲಿ ದಾಳಿಗೆ 7 ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್‌.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ನಡೆದಿದೆ. ಕಲ್ಲಹಟ್ಟಿ ಗ್ರಾಮದ ಚರಣ್ (7) ಮೃತ ಬಾಲಕ. ಜಮೀನಿನಲ್ಲಿ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ಹುಲಿ ದಾಳಿ ನಡೆಸಿದೆ. ‌ ಚರಣ್ ಪೋಷಕರೊಂದಿಗೆ ತೆರಳಿ  ಜಮೀನಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ. ಕೆಲಸದ ನಡುವೆ ನೋಡಿದಾಗ ಕ್ಷಣದಲ್ಲಿ ಬಾಲಕ ಚರಣ್ ಕಣ್ಮರೆಯಾಗಿದ್ದು ಅಲ್ಲಿದ್ದ ಪೋಷಕರು ಪುತ್ರನಿಗಾಗಿ ಹುಡುಕಾಡಿದ್ದಾರೆ. ಪೋಷಕರು ಜಾಡು ಹಿಡಿದು ಹುಡುಕಿದಾಗ ಕೊಂಚ ದೂರದಲ್ಲಿ ಬಾಲಕನನ್ನು ಹುಲಿ ತಿಂದು ಹಾಕಿದ್ದು ಕಂಡು ಬಂದಿದೆ.  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬಾರದಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ ನೀಡಲಾಗುವುದು ಎಂದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು. 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ದತೆ ನಡೆಸಲಾಗುತ್ತಿದೆ ಎಂದರು. ಅಕ್ಕಿ ಖರೀದಿ ವಿಚಾರವಾಗಿ ಮಾತನಾಡಿದ ಅವರು ಒಂದು ವಾರದಲ್ಲಿ ಅಕ್ಕಿ ಖರೀದಿ ಪೈನಲ್ ಆಗಲಿದೆ. ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್ಗಢ ಸರ್ಕಾರ ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೋಡುವ ಕೆಲಸ ಮಾಡುತ್ತೇವೆ ಎಂದರು.

Read More

ಮಧುಗಿರಿ:  ಕೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮದ ಪ್ಲೆಕ್ಸ್ ಕಟ್ಟುತ್ತಿದ್ದ ಕಾರ್ಮಿಕರಿಗೆ ವಿದ್ಯುತ್ ತಗಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಡಿಡಿಪಿಐ ಕಚೇರಿ ಬಳಿ ಕಂಬಕ್ಕೆ ಫ್ಲೆಕ್ಸ್ ಕಟ್ಟುತಿದ್ದ ಕಾರ್ಮಿಕರಾದ ಶಂಕ್ರಪ್ಪ ಮತ್ತು ಹಿಮಾಚಲ ಇಬ್ಬರಿಗೂ ವಿದ್ಯುತ್ ತಗಲಿ ಗಾಯಗೊಂಡಿದ್ದು, ಕೂಡಲೇ ಮದುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಗಂಭೀರವಾಗಿ ಗಾಯಗೊಂಡ ಶಂಕ್ರಪ್ಪಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ,  ಕಾರ್ಮಿಕ ಹಿಮಾಚಲ ಮಧುಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಜಿಲ್ಲಾಧಿಕಾರಿ ಶ್ರೀನಿವಾಸ್, ಸಿಇಒ ಜಿ.ಪ್ರಭು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವರದಿ: ಅಬಿದ್ ಮಧುಗಿರಿ

Read More

ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ (General,, IT)., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., {ಎಂ.ಬಿ.ಎ., ಎಂ.ಸಿ.ಎ(AICTE Approved)}., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕೆಎಸ್‌ ಒಯು ಯುಜಿಸಿಯಿಂದ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC/Minority  ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿ.ಎ-ರೂ.7,700/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-11,500/-., ಬಿ.ಕಾಂ.-ರೂ.8,200/-., ಬಿ.ಸಿ.ಎ/ಬಿ.ಎಸ್ಸಿ-ರೂ.22,500/-., ಬಿ.ಎಸ್.ಡಬ್ಲ್ಯೂ-ರೂ.12,000/-., ಎಂ.ಎ-ರೂ.9,800/-., ಎಂ.ಎಸ್ಸಿ/ಎಂ.ಬಿ.ಎ/ಎಂ.ಸಿ.ಎ-ರೂ.28,000/-.,…

Read More

ಪೆರ್ನಾಜೆ: ರಾಗದೆಲೆಗೆ ಬಾವ ಬೇಸುಗೆ ಎಂಬಂತೆ ಸಂಗೀತ ಸಂಭ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಇದರ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನದ ಸಿಂಹಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಇತ್ತೀಚೆಗೆ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನ ಮೂಲಕ ವಿದ್ವಾನ್ ರಾಜೇಶ್ ಕ್ಯಾಲಿಕೆಟ್ ಇವರು ನೆರವೇರಿಸಿ ನಿರಂತರ ಸಾಂಸ್ಕೃತಿಕ ಸವಿಯನ್ನು ಉಣಬಡಿಸಿ ಸಾಂಸ್ಕೃತಿಕ ಸುಗಂಧವನ್ನು ಎಲ್ಲೆಡೆ ಪ್ರಸರಿಸುತ್ತಿದ್ದಾರೆ ಎಂದು ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಕುಂಜಾರ್ ಇವರಿಗೆ ಸ್ವರಸಿಂಚನ ಸವಿತಾ ಕೋಡಂದೂರ್ ಮತ್ತು ರಘುರಾಮ ಶಾಸ್ತ್ರಿ ಕೋಡಂದೂರ್, ಸಿಂಚನ ಲಕ್ಷ್ಮಿ ಕೋಡಂದೂರ್ ರವರು ಪೇಟ ತೋಡಿಸಿ ಶಾಲು ಹಾರ ಸ್ಮರಣಿಕೆ ಸನ್ಮಾನ ಪತ್ರಗಳನ್ನು ಸ್ವರ ಸಿಂಚನ ಪುರಸ್ಕಾರ ನೀಡಿ ಗೌರವಿಸಿದರು. ಇವರ ಸನ್ಮಾನ ಪತ್ರವನ್ನು ಕು.ಆದರ್ಷಿಣಿ ಯವರು ವಾಚಿಸಿದರು ನಿವೃತ್ತ ಮುಖ್ಯೋಪಾಧ್ಯಾಯರು ವಿಠಲ ಪದವಿಪೂರ್ವ ಕಾಲೇಜ್ ಬಾಲಿಕಾ ಪ್ರೌಢಶಾಲೆಯ ಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದು ಸಾಧನೆ ಮತ್ತು ತಾಳ್ಮೆ…

Read More

ಬೆಂಗಳೂರು: ಪುಟ್ಟ ಬಾಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಕ್ರಂ ಲ್ಯಾಂಡರ್‌ ನ ಮಾದರಿಯನ್ನು ರಚಿಸಿ, ಎಲ್ಲರ ಪರವಾಗಿ ಇಸ್ರೋ ಅಧ್ಯಕ್ಷರಿಗೆ ನೀಡಿದ್ದಾನೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಎಸ್. ಸೋಮನಾಥ್ ಅವರಿಗೆ ಪುಟ್ಟ ಪೋರನೋರ್ವ ವಿಕ್ರಂ ಲ್ಯಾಂಡರ್ (Vikram Lander) ಮಾದರಿಯನ್ನು ಗಿಫ್ಟ್ ಕೊಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾನೆ‌ ಇಸ್ರೋ ವಿಜ್ಞಾನಿ ಪಿವಿ ವೆಂಕಟಕೃಷ್ಣನ್ ಅವರು ಟ್ವಿಟ್ಟರ್‌ನಲ್ಲಿ ಈ ಸುಂದರ ಕ್ಷಣದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಬಾಲಕ ಎಸ್ ಸೋಮನಾಥ್ ಅವರಿಗೆ ಗಿಫ್ಟ್ ನೀಡುತ್ತಿರುವ ಚಿತ್ರವನ್ನು ಸಹಾ ಹಂಚಿಕೊಂಡಿದ್ದಾರೆ. ಈ ಕ್ಯೂಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಮನಗೆದ್ದಿದೆ.

Read More

ಸಂಸದ ಪ್ರತಾಪ್ ಸಿಂಹ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಸದಾ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ಇಂತಹ ದಯನೀಯ ಸ್ಥಿತಿ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೆಲ್ಲವೂ ಉಲ್ಟಾ ಆಗುತ್ತದೆ ಎಂದು ಮೈಸೂರಿನಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. ಈ ಬಾರಿಯೂ ಪ್ರತಾಪಸಿಂಹ ಗೆಲ್ತಾರೆ, ಮೋದಿ ಪ್ರಧಾನಿಯಾಗ್ತಾರೆ. ಸಿಎಂ ಸಿದ್ದರಾಮಯ್ಯ ಸದಾ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read More

ರಾಮನಗರ: ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ನಡೆದಿದೆ. ಮಾಧುರಿ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ನಿದ್ರೆ ಮಾತ್ರೆ ಸೇವಿಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಸಾವಿಗೂ ಮುನ್ನ ಮಹಿಳೆ ವಿಡಿಯೋ ಮಾಡಿದ್ದು, ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾಳೆ. ಹಣಕಾಸಿನ ವಿಚಾರವಾಗಿ ಮಾಧುರಿ ಚನ್ನಪಟ್ಟಣ ಗ್ರಾಮಾಂತರ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಿರಲಿಲ್ಲ ಎನ್ನಲಾಗಿದೆ. ಪೊಲೀಸ್ ಠಾಣೆಯಲ್ಲಿ ತನಗೆ ಪೊಲೀಸರು ಅವಮಾನ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

Read More