Author: admin

ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ನವಾಝ್ (40) ಮತ್ತು ಅಜರುದ್ದೀನ್ ಅಲಿಯಾಸ್ ಅಜರ್ (38) ಬಂಧಿತ ಆರೋಪಿಗಳು.  ಬಂಧಿತರಿಂದ ಆರು ಲಕ್ಷ ಮೌಲ್ಯದ 120 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕದ ಯಂತ್ರ ಮತ್ತು ದ್ವಿಚಕ್ರ ವಾಹನವನ್ನು ಪೊಲೀಸ್ ತಂಡ ವಶಪಡಿಸಿಕೊಂಡಿದೆ ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

Read More

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್‌ ಸಾಹು ಮನೆಯಲ್ಲಿ ನೂರಾರು ಕೋಟಿ ರೂ.ಗೂ ಹೆಚ್ಚು ಅಕ್ರಮ ನಗದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಬಿಜೆಪಿಯ ಎನ್. ರವಿಕುಮಾರ್ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಯಾಕೆ ಸುಮ್ಮನಿದ್ದಾರೆ? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರು ಯಾಕಿನ್ನೂ ಪತ್ರಿಕಾಗೋಷ್ಠಿ ನಡೆಸಿಲ್ಲ ಎಂದು ಪ್ರಶ್ನಿಸಿದರು. ನೈತಿಕತೆ ಇದ್ದರೆ, ಸಂವಿಧಾನದ ಬಗ್ಗೆ ಗೌರವವಿದ್ದರೆ ಕೂಡಲೇ ಮೂವರು ಸುದ್ದಿಗೋಷ್ಠಿ ಕರೆದು ತಮ್ಮ ನಿಲುವು ತಿಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ರಾಹುಲ್ ಗಾಂಧಿಯವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Read More

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15ವರೆಗೆ) ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Read More

ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣದಲ್ಲಿ ರಾಜಸ್ಥಾನ ಪೊಲೀಸರು ಶನಿವಾರ ಮೊದಲ ಬಂಧನ ಮಾಡಿದ್ದಾರೆ. ಆರೋಪಿಯನ್ನು 23 ವರ್ಷದ ವಿದ್ಯಾರ್ಥಿ ರಣವೀರ್ ಎಂದು ಗುರುತಿಸಲಾಗಿದೆ. ಪೊಲೀಸ್ ತನಿಖೆಯ ಪ್ರಕಾರ, ರಣವೀರ್ ಶೂಟರ್ ‌ಗಳಾದ ನಿತಿನ್ ಮತ್ತು ರೋಹಿತ್‌ ಗಾಗಿ ಜೈಪುರದಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದರು. ಶೂಟರ್ ನಿತಿನ್ ಫೌಜಿ ಮತ್ತು ರಣವೀರ್ ಬಾಲ್ಯದ ಸ್ನೇಹಿತರು. ರಣವೀರ್ ನಿತಿನ್ ಫೌಜಿಗೆ ಹೋಟೆಲ್ ಮತ್ತು ಜೈಪುರದಲ್ಲಿರುವ ಆತನ ಪರಿಚಯಸ್ಥರ ಫ್ಲಾಟ್‌ ನಲ್ಲಿ ತಂಗಲು ವ್ಯವಸ್ಥೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ, ಅವರು ಫೌಜಿ ಮತ್ತು ರೋಹಿತ್ ರಾಥೋಡ್ ಅವರನ್ನು ಮೋಟಾರ್ ಸೈಕಲ್‌ ನಲ್ಲಿ ಅಜ್ಮೀರ್ ರಸ್ತೆಯಿಂದ ಕರೆದೊಯ್ದರು ಮತ್ತು ಬಗ್ರು ಟೋಲ್ ಪ್ಲಾಜಾದ ಮುಂದೆ ನಾಗೌರ್ ಡಿಪೋದಿಂದ ರಾಜಸ್ಥಾನ ರೋಡ್‌ ವೇಸ್ ಬಸ್‌ ನಲ್ಲಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Read More

ಕಾರ್ನ್ ಆರೋಗ್ಯಕರ ಧಾನ್ಯವಾಗಿದೆ. ಇದು ಫೈಬರ್, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಕಣ್ಣುಗಳು ಮತ್ತು ಜೀರ್ಣಾಂಗಗಳ ಆರೋಗ್ಯಕ್ಕೂ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಕಾರ್ನ್ ವಿಶ್ವದ ಅತ್ಯಂತ ಜನಪ್ರಿಯ ಧಾನ್ಯಗಳಲ್ಲಿ ಒಂದಾಗಿದೆ. ಇದನ್ನು ಪ್ರಪಂಚದಾದ್ಯಂತ ಅನೇಕ ಪ್ರಭೇದಗಳಲ್ಲಿ ಬೆಳೆಯಲಾಗುತ್ತದೆ. ಈ ಧಾನ್ಯವು ರುಚಿಯಲ್ಲಿ ಅತ್ಯುತ್ತಮವಾಗಿದೆ ಮತ್ತು ಗುಣಗಳಿಂದ ಸಮೃದ್ಧವಾಗಿದೆ ಮತ್ತು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಜೋಳದ ಪ್ರಯೋಜನಗಳ ಬಗ್ಗೆ ನಿಮಗೆ ಇನ್ನೂ ತಿಳಿದಿಲ್ಲದಿದ್ದರೆ, ಜೋಳದ ಕೆಲವು ಪ್ರಯೋಜನಗಳ ಬಗ್ಗೆ ತಿಳಿಯಲು ಮುಂದೆ ಓದಿ. ಜೀರ್ಣಕ್ರಿಯೆಗೆ ಉತ್ತಮ: ಕಾರ್ನ್ ಫೈಬರ್ ‌ನ ಉತ್ತಮ ಮೂಲವಾಗಿದೆ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಫೈಬರ್ ಸಹಾಯದಿಂದ, ನೀವು ಮಲವನ್ನು ರವಾನಿಸಲು ಸುಲಭವಾಗುತ್ತದೆ. ಇದಲ್ಲದೆ, ಇದು ಮಲಬದ್ಧತೆ ಮುಂತಾದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಲು ಸಹಾಯ ಮಾಡುತ್ತದೆ. ಹೃದಯಕ್ಕೆ ಒಳ್ಳೆಯದು: ಕಾರ್ನ್ ಆಂಟಿಆಕ್ಸಿಡೆಂಟ್‌ ಗಳ ಉತ್ತಮ ಮೂಲವಾಗಿದೆ. ಇದು ನಿಮ್ಮ ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಹೃದಯವನ್ನು ಹಾನಿಯಾಗದಂತೆ ರಕ್ಷಿಸುತ್ತದೆ.…

Read More

ರಾಯ್‌ ಪುರ: ಛತ್ತೀಸ್‌ ಗಢದ ಬುಡಕಟ್ಟು ಬಸ್ತಾರ್ ಪ್ರದೇಶದ ಕೊಂಡಗಾಂವ್ ಜಿಲ್ಲೆಯ ಕೆರ್ವಾಹಿ ಸೆಕೆಂಡರಿ ಶಾಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಸುಮಾರು 25 ವಿದ್ಯಾರ್ಥಿಗಳ ಕೈಗೆ ಶಿಕ್ಷಕರು ಬಿಸಿ ಎಣ್ಣೆ ಸುರಿದು ಅಮಾನವೀಯತೆ ಮೆರೆದ ಘಟನೆ ನಡೆದಿದೆ.  ನಿಗದಿತ ಪ್ರದೇಶದ ಹೊರಗಿನ ಶೌಚಾಲಯವನ್ನು ವಿದ್ಯಾರ್ಥಿಗಳು ಬಳಸುತ್ತಿದ್ದರು ಎಂಬ ಸಣ್ಣ ಅಪರಾಧಕ್ಕೆ ಶಿಕ್ಷೆಯಾಗಿ ವಿದ್ಯಾರ್ಥಿಗಳು ಪರಸ್ಪರರ ಕೈಗಳಿಗೆ ಬಿಸಿ ಎಣ್ಣೆಯನ್ನು ಸುರಿಯುವಂತೆ ಒತ್ತಾಯಿಸಲಾಯಿತು. ಇದರಿಂದ ಮುಖ್ಯೋಪಾಧ್ಯಾಯಿನಿ ಹಾಗೂ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಶಾಲಾ ಅಧಿಕಾರಿಗಳ ಸಮ್ಮುಖದಲ್ಲಿ ಈ ಘಟನೆ ನಡೆದಿದ್ದು, ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಬಳಿಕ ಶಿಕ್ಷಣ ಇಲಾಖೆ ಮಧ್ಯಪ್ರವೇಶಿಸಿದೆ.  ಇನ್ನೂ ಘಟನೆಗೆ ಸಂಬಂಧಿಸಿದಂತೆ ಮೂವರು ಶಿಕ್ಷಕರನ್ನು ಅಮಾತುಗೊಳಿಸಲಾಗಿದೆ. ವಿಡಿಯೋ ವೈರಲ್ ಆದ ನಂತರ ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಂಡಿದೆ. ಘಟನೆ ಕುರಿತು ಕೂಲಂಕುಷವಾಗಿ ತನಿಖೆ ನಡೆಸಲು ಜಿಲ್ಲಾ ಶಿಕ್ಷಣ ಇಲಾಖೆಯಿಂದ ತನಿಖಾ ತಂಡ ರಚಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಅಧಿಕಾರಿ ತಾಹೀರ್ ಖಾನ್ ತಿಳಿಸಿದ್ದಾರೆ. ಈ…

Read More

ಧಾರವಾಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿಸೆಂಬರ್ 16 ರಂದು ಸಂಜೆ ಧಾರವಾಡಕ್ಕೆ ಆಗಮಿಸಲಿದ್ದು, ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ತಿಳಿಸಿದರು. ಧಾರವಾಡದ ನೂತನ ಅತಿಥಿ ಗೃಹದಲ್ಲಿ ಈ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು, ದಿನಾಂಕ: 16 ರಂದು ಸಂಜೆ ಕೆಸಿಡಿ ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಳ್ಳಲಿರುವ ಬೃಹತ್ ಕಾರ್ಯಕ್ರಮದಲ್ಲಿ ಸಿಎಸ್ ‍ಆರ್ ಅನುದಾನದಲ್ಲಿ ಅಂಗವಿಕಲರಿಗೆ 500 ಕ್ಕೂ ಹೆಚ್ಚು ತ್ರಿಚಕ್ರ ವಾಹನ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಮಾಡುವರು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಸಹ ಜರುಗಲಿವೆಯೆಂದು ಸಚಿವರು ತಿಳಿಸಿದರು. ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಅವರು ತಿಳಿಸಿದರು. ಮುಖ್ಯ ವೇದಿಕೆ, ಆಸನದ ವ್ಯವಸ್ಥೆ, ಅತಿಥಿಗಳ ಕಾರ್ಯಕ್ರಮ, ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಕುರಿತಂತೆ ಕಾರ್ಯಕ್ರಮ ರೂಪುರೇಷೆಗಳ ಬಗ್ಗೆ ಇನ್ನೊಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದೆಂದರು.

Read More

SC-ST ಸಮುದಾಯಕ್ಕೆ ಮೀಸಲಿದ್ದ SCSP-TSP ಹಣವನ್ನು ಗ್ಯಾರಂಟಿ ಯೋಜನಗೆ ಬಳಸಿಕೊಂಡ ವಿಚಾರವಾಗಿ ವಿಧಾನ ಪರಿಷತ್‌ನಲ್ಲಿ ದೊಡ್ಡ ಗಲಾಟೆ ನಡೆದಿದೆ. ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಸಾಕ್ಷಿ ಆಗಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ಪ್ರಶ್ನೆ ಕೇಳಿದ್ರು. ಸರ್ಕಾರ ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ ಮಾಡಿದೆ. ನಮ್ಮ ಹಣ ಬಳಕೆ ಮಾಡಿದ್ದು ತಪ್ಪು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ 7D ತೆಗೆಯೋದಾಗಿ ಹೇಳಿದ್ರು. ಆದರೆ 7D ರದ್ದು ಮಾಡಿಲ್ಲ. 11,500 ಕೋಟಿ ರೂ. SCSP-TSP ಹಣವನ್ನು ಗ್ಯಾರಂಟಿಗೆ ಕೊಡಲಾಗಿದೆ. ದಲಿತರ ಹಣ ಯಾಕೆ ಎಲ್ಲರಿಗೂ ಕೊಡ್ತಿದ್ದೀರಾ? ಶಕ್ತಿ ಯೋಜನೆಯಲ್ಲಿ ಹೇಗೆ ದಲಿತರಿಗೆ ಹಣ ಬಿಡುಗಡೆ ಆಗುತ್ತೆ? ಜಾತಿ ನೋಡಿ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಕೊಡ್ತೀರಾ.  SCSP-TSP ಹಣ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳಬಾರದು ಅಂತ ಆಗ್ರಹಿಸಿದರು. ಇದಕ್ಕೆ ಸಚಿವ ಮಹದೇವಪ್ಪ ಉತ್ತರ ನೀಡಿ, 2013-14 ರಲ್ಲಿ SCSP-TSP ಹಣ ಬಳಕೆ ಮಾಡಿಕೊಳ್ಳಬಾರದು ಅನ್ನೋ ನಿಯಮ…

Read More

ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್‌ ಹಗರಣ ನಡೀತಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸರ್ಕಾರದ ವಿರುದ್ಧ ಮತ್ತೆ ಕಮಿಷನ್‌ ಬಾಂಬ್‌ ಸಿಡಿಸಿದ್ದಾರೆ. ವಿಧಾನಸಭೆ ಕಲಾಪ  ಶೂನ್ಯ ವೇಳೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್‌, ಟೆಂಡರ್/ಕಾಮಗಾರಿ ಬಾಕಿ ಬಿಲ್ ‌ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮಿಷನ್ ಆರೋಪದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಸರ್ಕಾರ ಕಾಮಗಾರಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರರಿಗೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಿಲ್ಲ, ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಅನ್ಯ ರಾಜ್ಯಗಳ ಗುತ್ತಿಗೆದಾರರಿಗೆ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡಿದೆ. ಈ ಮೂಲಕ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್‌ ಹಗರಣ ನಡೀತಿದೆ. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದೊಡ್ಡ ಹಗರಣ ನಡೆದಿದೆ, ಸರ್ಕಾರ ಇದಕ್ಕೆ ಸ್ಪಷ್ಟನೆ ಕೊಡಬೇಕು…

Read More

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರಿಗೆ, ಜೆಡಿಎಸ್‌ನ ಉಚ್ಚಾಟಿತ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು, ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಜೆಡಿಎಸ್‌ನ ನಾಯಕರು ಮಾಡಿರುವ ಬಿಜೆಪಿ ಜೊತೆಗಿನ ಮೈತ್ರಿ ಸರಿಯಲ್ಲ. ಇದನ್ನು ನಾನು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದೇನೆ. ಈಗಲೂ ನಾನು ದೇವೇಗೌಡರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ನಿರ್ಧಾರ ಹಿಂದೆ ಸರಿಯಿರಿ. ಇದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪುತ್ರನ ನಿರ್ಧಾರಗಳಿಂದ ದೇವೇಗೌಡ ಅವರು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಶಾಸಕರು ಜಾತ್ಯತೀತ ಸಿದ್ಧಾಂತದಲ್ಲೇ ಗೆದ್ದು ಬಂದಿರುವುದು. ಈಗಾಗಲೇ ಜೆಡಿಎಸ್‌ನ ಐವರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇದು ದೇವೇಗೌಡ, ಕುಮಾರಸ್ವಾಮಿ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು. ಹೀಗಾಗಿ ಸಮಾಧಾನದಿಂದ ಅವರಿಗೆ ಸಂದೇಶ ಮುಟ್ಟಿಸುತ್ತಿದ್ದೇನೆ ಎಂದರು. ನಮ್ಮ ಮಾತನ್ನು ಕೇಳದಿದ್ದರೆ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಸಚಿವ ಸಿ. ಎಂ. ಇಬ್ರಾಹಿಂ, ಪಕ್ಷದ ವರಿಷ್ಠ ಹೆಚ್.…

Read More