Author: admin

ಹೊಸ ವರ್ಷಕ್ಕೆ ಈ ಬಾರಿ ಯಾವುದೇ ಕಂಡೀಷನ್ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಹೊಸ ವರ್ಷಕ್ಕೆ ಯಾವದೇ ಕಂಡೀಷನ್ ಇಲ್ಲ. ಕಳೆದ ಬಾರಿಯೂ ಯಾವದೇ ಕಂಡೀಷನ್‌ ಇರಲಿಲ್ಲ. 2022 ರಲ್ಲಿ ಕೋವಿಡ್ ಕಾರಣದಿಂದ ನಿರ್ಬಂಧ ಹಾಕಲಾಗಿತ್ತು. ಈ ಬಾರಿಯೂ ಎಲ್ಲಾ ನಿರ್ಬಂಧಗಳು ಸಡಿಲಿಕೆ ಮಾಡುತ್ತೇವೆ. ಸುರಕ್ಷತೆ ಬಗ್ಗೆ ಪೊಲೀಸ್ ಅಧಿಕಾರಿಗಳು ಗಮನ ಹರಿಸುತ್ತಾರೆ ಎಂದು ಹೇಳಿದ್ದಾರೆ.

Read More

ರಾಮಮಂದಿರ ತೀರ್ಥ ಕ್ಷೇತ್ರದ ಅಧಿಕೃತ ಜಾಹೀರಾತಿಗೆ ಪ್ರತಿಕ್ರಿಯೆಯಾಗಿ, ಸುಮಾರು 3,000 ಅರ್ಜಿದಾರರು ಅಯೋಧ್ಯೆಯ ರಾಮ ಮಂದಿರದ ಅರ್ಚಕರ ಹುದ್ದೆಗೆ ಉತ್ಸುಕತೆಯಿಂದ ಅರ್ಜಿ ಸಲ್ಲಿಸಿದ್ದಾರೆ. 3,000 ಹುದ್ದೆಗಳ ಪೈಕಿ ಅರ್ಹತೆಯ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಜ್ಞಾನ ಮತ್ತು ಧಾರ್ಮಿಕ ಆಚರಣೆಗಳ ತಿಳುವಳಿಕೆಯ ಮೇಲೆ ಒಳಗೊಂಡಿರುವ ಕಾರ್ಯವಿಧಾನಗಳ ವಿವರಣೆಗಳು ಮತ್ತು ಈ ಪೂಜೆಗೆ ಸಂಬಂಧಿಸಿದ ನಿರ್ದಿಷ್ಟ ‘ಮಂತ್ರಗಳು’. ಇದಲ್ಲದೆ, ಅಭ್ಯರ್ಥಿಗಳು ಭಗವಾನ್ ರಾಮನ ಆರಾಧನೆಯಲ್ಲಿ ಬಳಸುವ ‘ಮಂತ್ರಗಳಲ್ಲಿ’ ತಮ್ಮ ಪ್ರಾವೀಣ್ಯತೆಯನ್ನು ಪ್ರದರ್ಶಿಸುವ ನಿರೀಕ್ಷೆಯಿದೆ. ‘ಕರ್ಮ ಕಾಂಡ’ – ಭಗವಾನ್ ರಾಮನ ಆರಾಧನೆಗೆ ಸಂಬಂಧಿಸಿದ ನಿಗದಿತ ಆಚರಣೆಗಳು ಮತ್ತು ಸಮಾರಂಭಗಳು. ಈ ಕಠಿಣ ಪ್ರಶ್ನೆಯು ಆಯ್ದ ಪುರೋಹಿತರು ಧಾರ್ಮಿಕ ಆಚರಣೆಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವುದು ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದ ಪವಿತ್ರ ಕರ್ತವ್ಯಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು. ರಾಮ ಮಂದಿರ ಸಂದರ್ಶನ ಪ್ರಕ್ರಿಯೆಯು ತೆರೆದುಕೊಳ್ಳುತ್ತಿದ್ದಂತೆ, ಗೌರವಾನ್ವಿತ ಧಾರ್ಮಿಕ ಸಂಸ್ಥೆಯೊಳಗಿನ ಈ ಸ್ಥಾನಗಳ ಪ್ರಾಮುಖ್ಯತೆಯ ಮೇಲೆ ಸ್ಪಾಟ್ಲೈಟ್ ಉಳಿದಿದೆ.

Read More

ಬೆಂಗಳೂರು: ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಇಂಟರ್‌ ಪೋಲ್ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ. ಮಿಧುನ್ ಚಂದ್ರನ್ ಜೊತೆ ಸಂಬಂಧ ಹೊಂದಿದ್ದ 33 ವರ್ಷದ ಮಹಿಳೆ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕವಾಗಿ ಬಳಸಿಕೊಂಡ ಎಂದು ಆತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಎಫ್‌ ಐಆರ್ ಪ್ರಕಾರ, ಚಂದ್ರನ್ ತನ್ನ ತಾಯಿ ಗೀತಾಗೆ ಪರಿಚಯಿಸಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾಳೆ. ಅವರು ಆರಂಭದಲ್ಲಿ ಮದುವೆಗೆ ಒಪ್ಪಿದ್ದರು. ಸಂತ್ರಸ್ತೆ 2016ರಲ್ಲಿ ಅದೇ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಸಂತ್ರಸ್ತೆಯ ಜತೆ ಸ್ನೇಹ ಬೆಳೆಸಿದ್ದ ಎನ್ನಲಾಗಿದೆ. ಚಂದ್ರನಿಗೆ ಆರ್ಥಿಕವಾಗಿ ಸಹಾಯ ಮಾಡುವಂತೆ ಸಂತ್ರಸ್ತೆ ಮತ್ತು ಆತನ ತಾಯಿ ಆಮಿಷ ಒಡ್ಡಿದ್ದರು. ಎಫ್‌ ಐಆರ್ ‌ನ ಪ್ರಕಾರ ಚಂದ್ರನ್ ಮತ್ತು ಅವರ ತಾಯಿ ಗೀತಾ ಸಂತ್ರಸ್ತೆಯನ್ನು ಮದುವೆಯಾಗುವಂತೆ ಕೇಳಿದಾಗ ನಿಂದನೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಯು ಫೆಬ್ರವರಿ 2020 ರಲ್ಲಿ ಚಂದ್ರನ್ ಮತ್ತು ಆತನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಶಂಕಿತರ ವಿರುದ್ಧ…

Read More

ಬೆಂಗಳೂರು: ಹಳೇ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಮೊಬೈಲ್ ಟವರ್‌ ಒಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ 11 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಗ್ಗೆರೆಯಲ್ಲಿ ಹಳೆ ಕಟ್ಟಡಗಳನ್ನು ತೆರವುಗೊಳಿಸಿ ಜೆಸಿಬಿಯಲ್ಲಿ ಸೈಟ್ ಕ್ಲೀನ್ ಮಾಡಲಾಗುತ್ತಿತ್ತು. ಈ ವೇಳೆ ಜೆಸಿಬಿ ಮುಂಭಾಗ ಟವರ್‌ ಗೆ ತಗುಲಿದ್ದ ಮನೆ ಸಮೇತ ಕುಸಿದು ಬಿದ್ದಿದೆ. ಟವರ್ ಬೀಳುವ ಮುನ್ಸೂಚನೆ ಸಿಗುತ್ತಿದ್ದಂತೆ ಮನೆಯೊಳಗಿದ್ದ ಎಲ್ಲರನ್ನೂ ಹೊರಗೆ ಕರೆತರಲಾಗಿತ್ತು. ಹೀಗಾಗಿ ಅದೃಷ್ಟವಶಾತ್ 11 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಬೈಲ್ ಟವರ್ ಬಿದ್ದು ಪಕ್ಕದಲ್ಲಿದ್ದ 2 ಅಂಗಡಿಗಳಿಗೆ ಹಾನಿಯಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ನಿವೇಶನದ ಮಾಲೀಕ ಹರೀಶ್ ಎಂಬವರ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಆರೋಪದಡಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು: ಬ್ಲೂಮ್‌ಬರ್ಗ್ ಫಿಲಾಂತ್ರಪಿಸ್ ಇನೀಶಿಯೇಟಿವ್ ಹಾಗೂ ಡಬ್ಲ್ಯುಆರ್ ಐ ಇಂಡಿಯಾ ಸಹಭಾಗಿತ್ವದಲ್ಲಿ 2 ದಿನಗಳ ಕಾಲ ಬಿಬಿಎಂಪಿ ಕೇಂದ್ರ ಕಚೇರಿ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ ಪ್ರದರ್ಶನ ಕಾರ್ಯಾಗಾರ ನಡೆಯುತ್ತಿದೆ. ಈ ಕಾರ್ಯಾಗಾರಕ್ಕೆ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವನ್ನು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆಯ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.

Read More

ಬೆಂಗಳೂರು: ಹಿರಿಯ ನಟಿ ಲೀಲಾವತಿಯವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾಗ ಸೋಲದೇವನಹಳ್ಳಿಯ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದೆ. ತಾಯಿ-ಮಗನ ಬಾಂಧವ್ಯ ಅನ್ಯೋನ್ಯವಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಲೀಲಾವತಿಯವರ ಅಂತ್ಯಸಂಸ್ಕಾರಕ್ಕೆ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಅಂತಿಮ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಲೀಲಾವತಿಯವರಿಗೆ ಸರ್ಕಾರದ ಎಲ್ಲಾ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲು ನಾನು ಆದೇಶ ನೀಡಿದ್ದೇನೆ. ಅವರು ಕರ್ನಾಟಕ ಚಲನಚಿತ್ರ ಕಂಡ ಅಪರೂಪದ ನೈಜ ನಟನೆಯ ಕಲಾವಿದೆ. ರಂಗಭೂಮಿಯಿಂದ ಸಿನಿಮಾರಂಗಕ್ಕೆ ಬಂದು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯ ಮಾಡಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿಯೂ ನಟಿಸಿದ್ದಾರೆ. ಅವರು ಬಹುಭಾಷೆ ಕಲಾವಿದೆ. ಯಾವುದೇ ಪಾತ್ರವಿರಲಿ ಅದಕ್ಕೆ ಜೀವ ತುಂಬುತ್ತಿದ್ದರು.ನಾನು ಕಾಲೇಜು ವಿದ್ಯಾರ್ಥಿ ದೆಸೆಯಿಂದ ಅವರ ಚಲನಚಿತ್ರಗಳನ್ನು ನೋಡುತ್ತಿದ್ದೆ. ಅಂದು ನಮ್ಮ ಕಾಲದಲ್ಲಿ ರಾಜ್ ಕುಮಾರ್-ಲೀಲಾವತಿ ಎಂದರೆ ಬಹಳ ಜನಪ್ರಿಯ ಜೋಡಿ. ಅವರಿಬ್ಬರೂ ಅಭಿನಯಿಸಿದ್ದ ಎಲ್ಲಾ ಚಿತ್ರಗಳನ್ನು ನಾನು…

Read More

ಬಿಜೆಪಿ ಜೊತೆ ಮೈತ್ರಿ ವಿಚಾರದ ಬಗ್ಗೆ ಸಿಎಂ ಇಬ್ರಾಹಿಂ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ನನ್ನ ನಿರ್ಧಾರ ಅಲ್ಲ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಏಕ ಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಈ ಕಾರಣದಿಂದ ದೇವೇಗೌಡರನ್ನು ಉಚ್ಚಾಟನೆ ಮಾಡುವ ನಿರ್ಧಾರ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಇಬ್ರಾಹಿಂ ಪರೋಕ್ಷವಾಗಿ ಸುಳಿವು ನೀಡಿದರು. ಡಿ 11ರಂದು ಜನತಾ ದಳದ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸಭೆ ನಡೆಯಲಿದೆ. 5 ಮಂದಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಜನವರಿ ನಂತರ ಕ್ಲಿಯರ್ ಪಿಚ್ಚ‌ರ್ ಸಿಗಲಿದೆ. ಜೆಡಿಎಸ್ ಬಿಡುವ ಶಾಸಕರ ಸಂಖ್ಯೆ 12 ದಾಟಲಿದೆ. ನಾವು ಆತುರ ಮಾಡಲ್ಲ, ದೇವೇಗೌಡರ- ಕುಮಾರಸ್ವಾಮಿಯವರ ಆರೋಗ್ಯ ಮುಖ್ಯ ಅಂತ ಇಬ್ರಾಹಿಂ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್‌ ಮೇಲೆ ಸಿಟ್ಟಿಲ್ಲ. ಕಾಂಗ್ರೆಸ್ ನಾಯಕರು ಸಂಪರ್ಕದಲ್ಲೂ ಇಲ್ಲ.

Read More

ಬಲವಾದ ಮೂಳೆಗಳಿಗೆ ಈ 5 ಆರೋಗ್ಯಕರ ಜ್ಯೂಸ್ ಇಲ್ಲಿದೆ! ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ನಂತಹ ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿರುವ ಪೌಷ್ಟಿಕ ಜ್ಯೂಸ್ ಅನ್ನು ಕುಡಿಯುವುದರಿಂದ ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಕ್ಯಾಲ್ಸಿಯಂ ಪ್ರಮುಖ ವಿಟಮಿನ್ ಎಂದು ತಜ್ಞರು ಹೇಳುತ್ತಾರೆ. ಹಾಲು, ಗ್ರೀನ್ ಸ್ಕೂಥಿ, ಬೊಕೊಲಿ ಜ್ಯೂಸ್, ಕಿತ್ತಳೆ ಜ್ಯೂಸ್ ಮತ್ತು ಗ್ರೀನ್ ಟೀಯನ್ನು ನಿಯಮಿತವಾಗಿ ಸೇವಿಸಿದರೆ ಮೂಳೆಗಳು ದೃಢವಾಗಿ ಮತ್ತು ಆರೋಗ್ಯಕರವಾಗಿರುತ್ತವೆ ಎಂದು ತಜ್ಞರು ಬಹಿರಂಗಪಡಿಸಿದ್ದಾರೆ. ನೆನೆಸಿದ ನೆಲಗಡಲೆ ಕಾಯಿಯನ್ನು ತಿನ್ನುವುದರಿಂದ ಆಗುವ ಲಾಭಗಳೇನು ಗೊತ್ತಾ? ಇಲ್ಲಿದೆ ಮಾಹಿತಿ: ನೆಲಗಡಲೆ ಅನೇಕ ಪ್ರಯೋಜನಗಳನ್ನು ಹೊಂದಿದ್ದು ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ ಎಂದು ಹೇಳಲಾಗುತ್ತದೆ. ನೆನೆಸಿದ ಕಡಲೆ ತುಂಬಾ ಒಳ್ಳೆಯದಾಗಿದ್ದು, ಇದರಲ್ಲಿನ ಮೊನೊಸಾಚುರೇಟೆಡ್ ಮತ್ತು ಬಹುಅಪರ್ಯಾಪ್ತ ಕೊಬ್ಬುಗಳು ದೇಹದಲ್ಲಿನ ಕೆಟ್ಟ ಕೊಬ್ಬನ್ನು ಸುಡುವಲ್ಲಿ ಸಹಾಯ ಮಾಡುತ್ತದೆ. ದೀರ್ಘಾವಧಿಯಲ್ಲಿ ಹೃದಯಾಘಾತದ ಅಪಾಯವನ್ನು ತಡೆಯುವುದರ ಜತೆಗೆ ಚಯಾಪಚಯವನ್ನು ವೇಗಗೊಳಿಸುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು…

Read More

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ ಮೇಲೆ ರಾಡ್‌ ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿ ಅಸೈನ್ಮಂಟ್ ಕಂಪ್ಲೇಟ್ ಮಾಡಿಲ್ಲ ಎಂದು ಏಳನೇ ತರಗತಿ ವಿದ್ಯಾರ್ಥಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಕೈಗೆ ರಾಡ್‌ ನಲ್ಲಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಫರ್ದೀನ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ನಡೆದು ಮೂರು ದಿನಗಳಾದರೂ ಶಾಲೆ ಶಿಕ್ಷಕಿಯ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಹಾಗೂ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Read More

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅತಿಥಿ ಶಿಕ್ಷಕನೋರ್ವ ಪೋಲೀಸರ ಅತಿಥಿಯಾಗಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ. ಕಳೆದ 4ನೇ ತಾರೀಖಿನಂದು ವಿದ್ಯುಚ್ಛಕ್ತಿ ಬಿಲ್‌ ವಸೂಲಿಗೆ ಸಿಬ್ಬಂದಿ ತೆರಳಿದ್ದ ವೇಳೆ ಶಾಲಾ ಕೊಠಡಿಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನ್ನು ಕಂಡು ಈ ವಿಚಾರವನ್ನು ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿಗೆ ತಿಳಿಸಿದ್ದಾರೆ. ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More