Subscribe to Updates
Get the latest creative news from FooBar about art, design and business.
- ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್ ಗೌಡ ಕಿಡಿ
- ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
- ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
- ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
- ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
- ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
- ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
- ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
Author: admin
ವಡ್ಡರಹಳ್ಳಿ ಗ್ರಾಮದ ಸರಹದ್ದಿಗೆ ಸೇರಿದ 23 ಎಕರೆ 30 ಗುಂಟೆ ವಿಸ್ತೀರ್ಣದ ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾಮಗಾರಿಯು 75 ಲಕ್ಷ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವಿಶೇಷ ಅನುದಾನದಲ್ಲಿ ನಡೆಯುತ್ತಿದೆ. ಇದೀಗ ಕೆರೆ ಒತ್ತುವಾರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಬಣಗಳು ಹೊಡೆದಾಟ ನಡೆಸಿದ ಘಟನೆ ನಡೆದಿದೆ. ಕೆರೆಯ ಒತ್ತುವರಿದಾರರು ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ವಡ್ಡರಹಳ್ಳಿ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ ನಡೆಸಿದ ತಹಶೀಲ್ದಾರ್ ನಿಸರ್ಗಪ್ರಿಯ ಅವರು, ಕೆರೆಯ ಒತ್ತುವರಿದಾರರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೇ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರಲ್ಲದೇ ಕೆರೆಯ ಒತ್ತುವರಿ ತೆರವಿಗೆ ಸೂಚಿಸಿ ತೆರಳಿದ್ದರು. ಇದೇ ವೇಳೆ ಕೆರೆಯ ಅಂಗಳದ ಅಕ್ಕಪಕ್ಕದ ಜಮೀನುಗಳಲ್ಲಿ ನೆರೆದಿದ್ದ ಎರಡೂ ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ಜೆಡಿಎಸ್–ಬಿಜೆಪಿ ಕಾರ್ಯಕರ್ತರು ಆರೋಪ, ಪ್ರತ್ಯಾರೋಪ ಮಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆ ನಡೆಸಿಕೊಂಡಿದ್ದಾರೆ. ಗ್ರಾಮಸ್ಥರ…
ತುಮಕೂರು: ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಪತಿರಾಯನ ಕಿರುಕುಳಕ್ಕೆ ಬೇಸತ್ತ ಪತ್ನಿ ನ್ಯಾಯಕ್ಕಾಗಿ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಸಂತ್ರಸ್ತ ಮಹಿಳೆಯ ಹೆಸರು ಸಹನಾ. ಈಕೆಯ ಪತಿ ಸುನೀಲ್ ಕುಮಾರ್, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅರಸಿಕೆರೆ ಮೂಲದ ಸಹನಾ, ಒಂದೂವರೆ ವರ್ಷದ ಹಿಂದೆ ಸುನೀಲ್ ಕುಮಾರ್ ನನ್ನು ವರಿಸಿದ್ದಾರೆ. ಮದುವೆಯಾದ ಎರಡೇ ತಿಂಗಳಲ್ಲಿ ಸಹನಾಗೆ ಬ್ರೈನ್ ಟ್ಯೂಮರ್ ಕಾಣಿಸಿಕೊಂಡಿತು. ಈ ವೇಳೆ ಅವರ ಮನೆಯವರೇ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿಸಿದ್ದರು. ಮದುವೆಯ ಸಂದರ್ಭದಲ್ಲಿ 25 ಗ್ರಾಂ ಚಿನ್ನದ ಸರ, 12 ಗ್ರಾಂ ಉಂಗುರ ಹಾಗೂ 30 ಗ್ರಾಂ ಬಂಗಾರದ ಬಳೆಯನ್ನು ವರದಕ್ಷಿಣೆ ನೀಡಿ, ಸುಮಾರು 18 ಲಕ್ಷ ರೂಪಾಯಿ ಖರ್ಚು ಮಾಡಿ, ಅರಸೀಕೆರೆ ವೀರಶೈವ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದರೆ, ಕಳೆದ ಒಂದು ವರ್ಷದಿಂದ ಸುನೀಲ್ ನಿರಂತರವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಸಹನಾ ಆರೋಪ ಮಾಡಿದ್ದಾರೆ. ಮನೆ…
ಉಡುಪಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂಗಾಗಿದ್ದೇ ಆದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಬರುವ ಚುನಾವಣೆಯಿಂದ ಅಭಿವೃದ್ಧಿ ಕೆಲಸ ಕುಂಠಿತ ಆಗುತ್ತದೆ. ಭಾರತದಲ್ಲಿ ವರ್ಷದ ಮೂರ್ನಾಲ್ಕು ತಿಂಗಳು ಚುನಾವಣೆ ನಡೆಯುತ್ತಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತದೆ. ಟೆಂಡರ್ ಕರೆಯಲು ಆಗಲ್ಲ ಎಂದು ವಾದಿಸಿದರು. ಕೇರಳದಲ್ಲಿ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತ್ ನಗರಸಭೆ ಚುನಾವಣೆಗಳು ಒಟ್ಟಿಗೆ ನಡೆಯುತ್ತವೆ. ಇದೇ ರೀತಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೆ ನಡೆಯಬಹುದು. ಚಿಹ್ನೆಯಲ್ಲಿ ನಡೆಯುವ ಚುನಾವಣೆ ಒಟ್ಟಿಗೆ ನಡೆಸಬಹುದು. ದೇಶದಲ್ಲಿ ಸಮಯ, ಶ್ರಮ, ಹಣ ಉಳಿಸಬಹುದು ಎಂದು ಅವರು ಹೇಳಿದರು.
ಬೆಂಗಳೂರು: ನೆಕ್ಸಸ್ ಕೋರಮಂಗಲ ಪಬ್ ನಲ್ಲಿ ಓಣಂ ಆಚರಿಸುತ್ತಿದ್ದ ಕೇರಳದ ಐದು ಯುವಕರ ಮೇಲೆ ಗುಂಪೊಂದು ದಾಳಿ ನಡೆಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕೇರಳ ಯುವಕರು ಪಬ್ ನಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಪಕ್ಕದ ಟೇಬಲ್ ನಲ್ಲಿ ಕುಳಿತಿದ್ದ ಆರೋಪಿಗಳು ತೊಂದರೆ ಕೊಡಲು ಆರಂಭಿಸಿದ್ದಾರೆ. ಅವರಲ್ಲಿ ಒಬ್ಬ ಪದೇ ಪದೇ ಡ್ಯಾನ್ಸ್ ಮಾಡುತ್ತಿದ್ದವರನ್ನು ತಳ್ಳುತ್ತಿದ್ದ, ಇದರಿಂದ ಕೋಪಗೊಂಡ ಕೇರಳ ಯುವಕರ ತಂಡದಲ್ಲಿದ್ದ ಒಬ್ಬ ಆರೋಪಿಗಳಲ್ಲಿ ಒಬ್ಬನನ್ನು ನೆಲಕ್ಕೆ ತಳ್ಳಿದ್ದಾನೆ. ಹೊರಗೆ ಹೋದ ಆರೋಪಿ ಬಟ್ಟೆ ಬದಲಿಸಿ ವಾಪಸ್ ಬಂದಿದ್ದಾನೆ. ನಂತರ ಅವರು ಸಂತ್ರಸ್ತರ ಮೇಲೆ ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಇಬ್ಬರು ಸಂತ್ರಸ್ತರ ಮುಖ ಗಾಯಗೊಂಡು ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಒಬ್ಬರು ಡಿಸ್ಚಾರ್ಜ್ ಆಗಿದ್ದರೆ, ಇನ್ನೊಬ್ಬ ಯುವಕನ ಮುಖ ವಿರೂಪಗೊಂಡಿದ್ದು ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಶ್ರೀಹರಿಕೋಟ: ಪಿಎಸ್ ಎಲ್ ವಿ ರಾಕೆಟ್ ನಲ್ಲಿ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಹೊತ್ತೊಯ್ದ ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ಬೇರ್ಪಟ್ಟಿದ್ದು, 125 ದಿನಗಳ ಪ್ರಯಾಣದಲ್ಲಿ ಸೂರ್ಯನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಲಿದೆ ಎಂದು ಇಸ್ರೋ ತಿಳಿಸಿದೆ. ಬಾಹ್ಯಾಕಾಶ ನೌಕೆಯನ್ನು “ನಿಖರ ಕಕ್ಷೆ” ಯಲ್ಲಿ ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ತಿಳಿಸಿದ್ದು, ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯನ್ನು 235 ರಿಂದ 19,500 ಕಿಮೀ ಉದ್ದದ ದೀರ್ಘವೃತ್ತದ ಕಕ್ಷೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು. ಇನ್ನು ಮುಂದೆ ಆದಿತ್ಯ ಎಲ್1 125 ದಿನಗಳ ಕಾಲ ದೀರ್ಘ ಪ್ರಯಾಣವನ್ನು ನಡೆಸಲಿದೆ ಎಂದು ಎಸ್.ಸೋಮನಾಥ್ ಶ್ರೀಹರಿಕೋಟಾದ ಮಿಷನ್ ಕಂಟ್ರೋಲ್ ಸೆಂಟರ್ ನಿಂದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಯೋಜನಾ ನಿರ್ದೇಶಕ ನಿಗರ್ ಶಾಜಿ ಮತ್ತು ಮಿಷನ್ ಡೈರೆಕ್ಟರ್ ಬಿಜು ಅವರೊಂದಿಗೆ ಹೇಳಿದರು.
ಬೆಂಗಳೂರು: ತಮಿಳುನಾಡಿ ಕಾವೇರಿ ನೀರನ್ನು ಎಷ್ಟು ಬಳಸಿಕೊಂಡಿದೆ ಎಂದು ವಾದ ಮಾಡದೇ ರಾಜ್ಯ ಸರ್ಕಾರ ನಮ್ಮ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊನ್ನೆಯೇ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದೇನೆ. ಅವರು ಈಗ ಲವಲವಿಕೆಯಿಂದ ಇದ್ದಾರೆ. ಹಾಗಾಗಿ ಬೇಗ ಗುಣಮುಖ ಆಗಲಿ ಅಂತ ಆಶಿಸುತ್ತೇನೆ ಎಂದು ಹೇಳಿದರು. ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೆಪ್ಟಂಬರ್ 6 ರಂದು ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಕಾವೇರಿ ವಿಚಾರದಲ್ಲಿ ಸಿಡಬ್ಲೂಎಂಎ ಆದೇಶದಂತೆ ನೀರು ಬಿಡುತ್ತಿದ್ದಾರೆ. ನಮ್ಮವರು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿರುವ ಬಗ್ಗೆ ಸಮಗ್ರವಾಗಿ ಯಾಕೆ ವಾದ ಮಾಡುತ್ತಿಲ್ಲವೊ ಗೊತ್ತಿಲ್ಲ. ಕಾವೇರಿ…
“ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?” ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಪಕ್ಷದ ಒಳಗೆ ಶಿಸ್ತು ಇದೆ ಯಾವುದೇ ತೊಂದರೆ ಇಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ” ಎಂದು ಸ್ಪಷ್ಟನೆ ನೀಡಿದರು.
ತುರುವೇಕೆರೆ: ಹಿಂದಿನ ಸರ್ಕಾರದಲ್ಲಿ ಚುನಾವಣೆಗೆ ಮುನ್ನ ಮಂಜೂರಾಗಿದ್ದ 3,375 ಮನೆಗಳನ್ನು ಈಗಿನ ಸರ್ಕಾರ ಕುಣಿಗಲ್ ಕ್ಷೇತ್ರಕ್ಕೆ ವರ್ಗಾವಣೆಗೊಂಡಿದ್ದ ಹಿನ್ನೆಲೆಯಲ್ಲಿ ನಾವು ಹಮ್ಮಿಕೊಂಡಿದ್ದ ವಸತಿ ಸಚಿವರ ಕಚೇರಿಯ ಮುಂದೆ ಧರಣಿ ಕೈ ಬಿಡಲಾಗಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪನವರು ತಿಳಿಸಿದರು. ಸರ್ಕಾರದ ಬಸವ ಅಂಬೇಡ್ಕರ್ ಅವು ಇತರೆ ವಸತಿ ನಿಗಮಗಳಿಂದ ಮಂಜೂರಾಗಿದ್ದ ಮನೆಗಳ ಪೈಕಿ 1505 ಮನೆಗಳನ್ನು ಸರ್ಕಾರವು ವಾಪಸ್ ಮಂಜೂರು ಮಾಡಲಾಗಿದೆ ಎಂದು ವಸತಿ ಸಚಿವರು ಹೇಳಿಕೆ ನೀಡಿ ಧರಣಿ ಕೈಬಿಡುವಂತೆ ಮನವಿ ಮಾಡಿರುವುದರಿಂದ ಇದನ್ನು ಕೈ ಬಿಡಲಾಗಿದೆ. ಉಳಿದ ಮನಗಳನ್ನು ಮಂಜೂರು ಮಾಡಲು ಕಾಲಾವಕಾಶ ಕೋರಿದ್ದು, ಅದರಂತೆ ಅವರ ಮನವಿಯನ್ನು ಪುರಸ್ಕರಿಸಿದ್ದೇವೆ ಎಂದು ಅವರು ತಿಳಿಸಿದರು. ಮಾಜಿ ಶಾಸಕ ಮಸಾಲ ಜಯರಾಮ್ ತಾಕತ್ತಿದ್ದರೆ ಮನೆಗಳನ್ನು ವಾಪಸ್ ತರಲಿ ಎಂದು ಸವಾಲು ಹಾಕಿದ್ದರು. ನಾವು ನಮ್ಮ ತಾಕತ್ತನ್ನು ತೋರಿಸಿದ್ದೇವೆ. ವಸತಿ ಸಚಿವ ಜಮೀರ್ ಅಹ್ಮದ್ ರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಹೊರತುಪಡಿಸಿ ಯಾವುದೇ ಕ್ಷೇತ್ರಕ್ಕೂ ಅನುದಾನ…
ಹೆಚ್ ಡಿ ಕೋಟೆ: ಮಾಲೀಕರ ಜಮೀನಿನಲ್ಲಿ ಹತ್ತಿ ಬಿಡಿಸುವ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ ಮಹಿಳೆ ಮೇಲೆ ಕಾಡು ಹಂದಿ ದಾಳಿ ನಡೆಸಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಕೆ.ಆರ್.ಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ. ಚಿಕ್ಕಮ್ಮ (55) ಹಂದಿಯ ದಾಳಿಗೊಳಗಾದ ಮಹಿಳೆಯಾಗಿದ್ದಾರೆ. ಹಂದಿ ದಾಳಿಯ ಪರಿಣಾಮ ಮಹಿಳೆಯ ಭುಜದ ಮೂಳೆ ಮುರಿತಗೊಂಡಿದೆ. ಕೂಲಿ ಕೆಲಸ ಮಾಡಿ ಮಧ್ಯಾಹ್ನ ವಿಶ್ರಾಂತಿ ಪಡೆಯುತ್ತಿದ್ದಾಗ ಏಕಾಏಕಿ ಕಾಡು ಹಂದಿ ದಾಳಿ ನಡೆಸಿದೆ. ಈ ವೇಳೆ ಇತರ ಕಾರ್ಮಿಕರು ಕೂಡ ಸ್ಥಳದಲ್ಲಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿ: ಮಲಾರ ಮಹದೇವಸ್ವಾಮಿ
ಲಿವ್-ಇನ್-ರಿಲೇಶನ್ ಶಿಪ್ ಗಳು ಮದುವೆಯ ಸಂಸ್ಥೆಯನ್ನು ನಾಶಮಾಡುವ ತಂತ್ರವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಗಮನಿಸಿದೆ. ಋತುಮಾನಕ್ಕೆ ಅನುಗುಣವಾಗಿ ಪಾಲುದಾರರನ್ನು ಬದಲಾಯಿಸುವುದು ಆರೋಗ್ಯಕರ ಮತ್ತು ಸ್ಥಿರ ಸಮಾಜದ ಸಂಕೇತವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ತನ್ನ ಲಿವ್-ಇನ್ ಸಂಗಾತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸಿದ್ಧಾರ್ಥ್ ಅವರ ಹೇಳಿಕೆಗಳು ಬಂದವು. ಭಾರತದಂತಹ ದೇಶದಲ್ಲಿ ಮಧ್ಯಮ ವರ್ಗದ ನೈತಿಕತೆಯನ್ನು ನಿರ್ಲಕ್ಷಿಸುವಂತಿಲ್ಲ ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿವಾಹವು ವ್ಯಕ್ತಿಗೆ ಒದಗಿಸುವ ಭದ್ರತೆ, ಸಾಮಾಜಿಕ ಮನ್ನಣೆ, ಪ್ರಗತಿ ಮತ್ತು ಸ್ಥಿರತೆಯನ್ನು ಲಿವ್-ಇನ್ ಸಂಬಂಧಗಳು ಒದಗಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಭಿವೃದ್ಧಿ ಹೊಂದಿದ ದೇಶಗಳಲ್ಲಿರುವಂತೆ ನಮ್ಮ ದೇಶದಲ್ಲಿ ಮದುವೆಗಳು ಹಳೆಯದಾಗ ಮಾತ್ರ ಲಿವ್-ಇನ್ ಸಂಬಂಧಗಳು ಸಾಮಾನ್ಯವಾಗುತ್ತವೆ ಎಂದು ನ್ಯಾಯಮೂರ್ತಿ ಸಿದ್ಧಾರ್ಥ್ ಅಭಿಪ್ರಾಯಪಟ್ಟಿದ್ದಾರೆ. ಇಂತಹ ಸಂಬಂಧಗಳು ಭವಿಷ್ಯದಲ್ಲಿ ಸಮಸ್ಯೆಗಳನ್ನು ಸೃಷ್ಟಿಸಬಹುದು ಎಂದೂ ನ್ಯಾಯಾಲಯ ಎಚ್ಚರಿಸಿದೆ. ಮದುವೆಯ ಸಂಸ್ಥೆಯನ್ನು ನಾಶಪಡಿಸುವಲ್ಲಿ ಚಲನಚಿತ್ರಗಳು ಮತ್ತು ದೂರದರ್ಶನ ಧಾರಾವಾಹಿಗಳು ಪಾತ್ರವಹಿಸಿವೆ ಎಂದು ನ್ಯಾಯಾಲಯ ಹೇಳಿದೆ. ಲಿವ್-ಇನ್ ಸಂಬಂಧಗಳು…