Subscribe to Updates
Get the latest creative news from FooBar about art, design and business.
- ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
Author: admin
ತಿಪಟೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಪಟೂರು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಗರದ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ತಾಲೂಕುಗಳ ‘ವಿಪತ್ತು ನಿರ್ವಹಣಾ ಪ್ರಾಧಿಕಾರ’ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಿಗಳ ಹಾವಳಿ ಮತ್ತು ಸ್ವಚ್ಛತೆ: ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ನಾಯಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಸ ವಿಲೇವಾರಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಅಂತಾ ಸೂಚನೆ ನೀಡಿದರು. ದಂಡ ಪ್ರಯೋಗ: ರಸ್ತೆ ಬದಿಗಳಲ್ಲಿ ಕಸ ಹಾಕುವವರಿಗೆ ಮೊದಲು ತಿಳಿವಳಿಕೆ ನೀಡಬೇಕು. ನಿಯಮ ಉಲ್ಲಂಘನೆ ಮುಂದುವರಿಸಿದರೆ ದಂಡ ವಿಧಿಸಿ, ನಂತರವೂ ಕೇಳದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಗುಣಮಟ್ಟ: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು…
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಘೋಷಿಸಿದ್ದಾರೆ. “ನಾನು ಯಾವತ್ತೂ ಅಧಿಕಾರವನ್ನು ಹುಡುಕಿಕೊಂಡು ಹೋದವನಲ್ಲ. ಸಚಿವನಾಗಿದ್ದಾಗಲೇ ನನಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿ ಪದವಿ ಬಿಡಲು ಸಿದ್ಧ ಎಂದು ಹೇಳಿದ್ದೆ. ಈಗ ನನ್ನ ಬಳಿ ಬಿಡಲು ಯಾವುದೇ ಅಧಿಕಾರವಿಲ್ಲ. ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುತ್ತೇನೆ” ಎಂದು ತಿಳಿಸಿದರು. ಈಗಾಗಲೇ ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿರುವುದಾಗಿ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆಯಾದಲ್ಲಿ ಸಚಿವರಾಗುವ ಆಸೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಸಚಿವನಾದರೂ ಅಥವಾ ಇಲ್ಲದಿದ್ದರೂ ನಾನು ಸದಾ ಜನರ ಜೊತೆಗೇ ಇರುತ್ತೇನೆ. ನನ್ನ ಕಾರ್ಯವೈಖರಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ” ಎಂದರು.…
ಕೊರಟಗೆರೆ: ತಾಲ್ಲೂಕಿನ ಬಜ್ಜನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪೋಷಕರು ಮತ್ತು ಎಸ್ ಡಿ ಎಂ ಸಿ ಸದಸ್ಯರ ಸಹಕಾರದಿಂದ ಶಾಲಾ ಎಲ್ಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ ಮಾಡಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ತಿಮ್ಮರಾಜು ಮಾತನಾಡಿ, ಸರ್ಕಾರದಿಂದ ಮಕ್ಕಳಿಗೆ ಶಿಕ್ಷಣದ ಎಲ್ಲಾ ಸವಲತ್ತುಗಳು ಲಭ್ಯವಾಗುತ್ತಿದ್ದು, ಗ್ರಾಮೀಣ ಮಟ್ಟದ ಮಕ್ಕಳು ಓದುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಚೆನ್ನಾಗಿ ಓದಿ ಉನ್ನತ ಮಟ್ಟದ ಅಧಿಕಾರ ಪಡೆದುಕೊಂಡು ಶಾಲೆಗೆ , ಗ್ರಾಮಕ್ಕೆ ತಂದೆ ತಾಯಿಗಳಿಗೆ ಗೌರವ ತರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಸನ್ನ ಕುಮಾರ್, ಸಹ ಶಿಕ್ಷಕರಾದ ವೇಣು ಗೋಪಾಲ್, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ವೇತ, ಸದಸ್ಯರಾದ ಶ್ರೀನಿವಾಸ್ , ಚಂದ್ರಶೇಖರ್, ಕೆ.ತಿಮ್ಮರಾಜು ಹಾಗೂ ಪೋಷಕರು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ಸಂಭ್ರಮದಿಂದ ಮರಳುತ್ತಿದ್ದ ಭಕ್ತರ ತಂಡವೊಂದು ಭೀಕರ ರಸ್ತೆ ಅಪಘಾತಕ್ಕೆ ಈಡಾಗಿದ್ದು, ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಕೋರಾ ಸಮೀಪ ನಡೆದಿದೆ. ಅಪಘಾತ ನಡೆದದ್ದು ಹೇಗೆ? ಶಬರಿಮಲೆಯಿಂದ ಕೊಪ್ಪಳ ಜಿಲ್ಲೆಯ ಯಲಬುರ್ಗಾಕ್ಕೆ ಹಿಂತಿರುಗುತ್ತಿದ್ದ ಭಕ್ತರಿದ್ದ ಕ್ರೂಸರ್ ವಾಹನವು, ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನದ ಮುಂಭಾಗ ಸಂಪೂರ್ಣ ಅಪ್ಪಚ್ಚಿಯಾಗಿದೆ. ಭೀಕರ ಅಪಘಾತದಲ್ಲಿ ಸಾಕ್ಷಿ (7 ವರ್ಷ), ವೆಂಕಟೇಶಪ್ಪ (30 ವರ್ಷ), ಮಾರತಪ್ಪ (35 ವರ್ಷ), ಗವಿಸಿದ್ದಪ್ಪ (40 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ದುರಂತದಲ್ಲಿ ಇತರ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆಯ ಕಣ್ಣೀರು: ಅಪಘಾತದಲ್ಲಿ ಗಾಯಗೊಂಡಿರುವ ಮೃತ ಬಾಲಕಿ ಸಾಕ್ಷಿಯ ತಂದೆ ಉಲಗಪ್ಪ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ…
ತುಮಕೂರು: ತುಮಕೂರು ನಗರದಲ್ಲಿ 2026 ಜನವರಿ 16 ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ 2025–26 ನಡೆಯಲಿದೆ. ತುಮಕೂರು ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟ ತುಮಕೂರು ಇತಿಹಾಸದಲ್ಲೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಯುವ ಜನರಿಗೆ ಇದು ಸ್ಪೂರ್ತಿಯಾಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಅಧಿಕೃತ ಪತ್ರ ಬರೆದಿರುವ ಅವರು, ಈ ಕ್ರೀಡಾಕೂಟದಲ್ಲಿ ವಿವಿಧ 27 ಕ್ರೀಡೆಗಳು ನಡೆಯುತ್ತಿದ್ದು, ರಾಷ್ಟ್ರೀಯ, ಅಂತರರಾಷ್ಟ್ರೀಯ ಕ್ರೀಡಾಪಟುಗಳು ಸೇರಿದಂತೆ ಸುಮಾರು 9,000 ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಒಲಿಂಪಿಕ್ ಸಂಸ್ಥೆ ಪ್ರತಿ ವರ್ಷ ಒಂದೊಂದು ಜಿಲ್ಲೆಯಲ್ಲಿ ಕರ್ನಾಟಕ ಕ್ರೀಡಾಕೂಟವನ್ನು ಆಯೋಜಿಸುತ್ತಾ ಬಂದಿದ್ದು, ಪ್ರಸಕ್ತ ಸಾಲಿನ ಕ್ರೀಡಾಕೂಟದ ಆತಿಥ್ಯ ವಹಿಸುವ ಅವಕಾಶವನ್ನು ತುಮಕೂರು ಜಿಲ್ಲೆಗೆ ನೀಡಿರುವುದು ನಮ್ಮೆಲ್ಲ ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ ಹಾಗೂ ನಾಗರಿಕರಿಗೆ ಹೆಮ್ಮೆಯ ವಿಷಯವಾಗಿದೆ…
ತುಮಕೂರು: ಚಲಿಸುತ್ತಿದ್ದ ರೈಲಿನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಸತ್ಯ ಸಿ.ಎ., ಅಲಿಯಾಸ್ ಮೊಟ್ಟೆ (28) ಎಂಬಾತನಿಗೆ ಪೋಕ್ಸೋ 1 ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ. ಅಪರಾಧಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ನಿವಾಸಿ. ಬಾಲಕಿ ರೈಲಿನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದು, ಇದೇ ರೈಲಿನಲ್ಲಿ ಅಪರಾಧಿ ಸತ್ಯ ಕೂಡಾ ಪ್ರಯಾಣಿಸುತ್ತಿದ್ದ. ರೈಲಿನಲ್ಲಿಯೇ ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದ ಮೇಲೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಮೈಸೂರು ವೃತ್ತದ ರೈಲ್ವೆ ಇನ್ಸ್‌ಪೆಕ್ಟರ್ ಎಲ್. ಶ್ರೀನಿವಾಸ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪೋಕ್ಸೋ 1 ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಎಸ್.ಹೆಳವರ ಅವರು ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ 53 ಸಾವಿರ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ. ಸರ್ಕಾರದ…
ಚಿಕ್ಕಮಗಳೂರು: ಹಣದ ಆಸೆಗಾಗಿ ಸ್ವಂತ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಅಮಾನವೀಯ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆ ಸೇರಿದಂತೆ ಒಟ್ಟು 12 ಮಂದಿ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ: ಅಜ್ಜಂಪುರ ತಾಲೂಕಿನ ನಾಗವಂಗಲ ಗ್ರಾಮದ ನಿವಾಸಿಯಾಗಿರುವ ಆರೋಪಿ ತಂದೆ ತನ್ನ 16 ವರ್ಷದ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪಿಯಾಗಿದ್ದಾನೆ. ಆರು ವರ್ಷಗಳ ಹಿಂದೆ ಆತನ ಪತ್ನಿ ಮೃತಪಟ್ಟ ನಂತರ ಸಂತ್ರಸ್ತ ಬಾಲಕಿ ಅಜ್ಜ–ಅಜ್ಜಿಯ ಮನೆಯಲ್ಲಿ ವಾಸವಿದ್ದಳು. ಆದರೆ ಇತ್ತೀಚೆಗೆ ತಂದೆ ಗಿರೀಶ್ ಹಾಗೂ ಅಜ್ಜಿ ನಾಗರತ್ನ ಸೇರಿ ಬ್ರೋಕರ್ ನಾರಾಯಣಸ್ವಾಮಿ ಎಂಬಾತನ ಮೂಲಕ ಬಾಲಕಿಯನ್ನು ಮಂಗಳೂರಿನ ಭರತ್ ಶೆಟ್ಟಿ ಎಂಬಾತನ ಮನೆಗೆ ಕರೆದೊಯ್ದಿದ್ದರು. ಮಂಗಳೂರಿನಲ್ಲಿ ಬಾಲಕಿಯ ಮೇಲೆ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು. ಬಾಲಕಿ ಪ್ರತಿರೋಧ ತೋರಿದಾಗ, “ನಿನ್ನ ತಂದೆಗೆ ಹಣ ನೀಡಿದ್ದೇವೆ” ಎಂದು ಆರೋಪಿಗಳು ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ಮಾಹಿತಿ…
ತುಮಕೂರು: ಜಿಲ್ಲೆಯ 17 ವರ್ಷದ ಯುವ ಪ್ರತಿಭೆ ಟಿ.ಎಸ್.ಪ್ರತೀಕ್ ಎಜೆಂಟಿಕ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (Agentic AI) ಕ್ಷೇತ್ರದಲ್ಲಿ ಸಾಧನೆ ಮಾಡಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಗಳಿಸುವ ಮೂಲಕ ಜಿಲ್ಲೆಯ ಹೆಸರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರೆದಿದ್ದಾರೆ. ತುಮಕೂರಿನ ನಿವಾಸಿಯಾದ ಈ ವಿದ್ಯಾರ್ಥಿ, ಇತ್ತೀಚೆಗೆ ನಡೆದ Agentic AI Hackathon ನಲ್ಲಿ ಭಾಗವಹಿಸಿ, ಸಂಪೂರ್ಣವಾಗಿ ಕಂಪ್ಯೂಟರ್ ಮೂಲಕ ಸ್ವತಂತ್ರವಾಗಿ AI ಏಜೆಂಟ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ್ದಾರೆ. ಈ ವಿಶಿಷ್ಟ ತಂತ್ರಜ್ಞಾನಾಧಾರಿತ ಯೋಜನೆಗೆ ಜಾಗತಿಕ ಮಟ್ಟದಲ್ಲಿ ಗುರುತಿಸಿ, ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾನ್ಯತೆ ಲಭಿಸಿದೆ. AI ಏಜೆಂಟ್ ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದು, ನೈಜ ಜೀವನದಲ್ಲಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದೆ. ಇಷ್ಟು ಕಿರಿಯ ವಯಸ್ಸಿನಲ್ಲಿ ಇಂತಹ ಉನ್ನತ ಮಟ್ಟದ ತಾಂತ್ರಿಕ ಸಾಧನೆ ಮಾಡಿರುವುದು ತಜ್ಞರ ಮೆಚ್ಚುಗೆಗೆ ಪಾತ್ರವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತಿಪಟೂರು: ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದ ಭಕ್ತರು ಸತತ 9ನೇ ವರ್ಷವೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಅವರ ಈ ಭಕ್ತಿ ಮಾರ್ಗಕ್ಕೆ ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ಹಾರ್ದಿಕ ಶುಭ ಹಾರೈಸಿದರು. ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಯೋಜನಾಧಿಕಾರಿಗಳು, “ಹಿಂದಿನ ಕಾಲದಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನಕ್ಕೆ ತೆರಳುವುದೆಂದರೆ ಅದೊಂದು ಪವಿತ್ರ ಕಾರ್ಯವಾಗಿತ್ತು. ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿತ್ತು. ಆದರೆ ಇಂದಿನ ವೇಗದ ಬದುಕಿನಲ್ಲಿ ಭಕ್ತಿ ಮತ್ತು ಸಂಪ್ರದಾಯಗಳು ಮಾಸುತ್ತಿವೆ. ಇಂತಹ ಸಮಯದಲ್ಲಿ ಇತಿಹಾಸವನ್ನು ಮರುಕಳಿಸುವಂತೆ ಮತ್ತಿಹಳ್ಳಿ ಗ್ರಾಮಸ್ಥರು ಸುಮಾರು 165 ಕಿಲೋ ಮೀಟರ್ ದೂರವನ್ನು ಕೇವಲ ಮೂರು-ನಾಲ್ಕು ದಿನಗಳಲ್ಲಿ ಕ್ರಮಿಸಿ ಭಗವಂತನ ಆಶೀರ್ವಾದ ಪಡೆಯಲು ಹೊರಟಿರುವುದು ಶ್ಲಾಘನೀಯ,” ಎಂದರು. ಪಾದಯಾತ್ರಿಗಳು ಸರಿಸುಮಾರು 165 ಕಿ.ಮೀ ಕಾಲ್ನಡಿಗೆಯ ಪ್ರಯಾಣ ಮಾಡಲಿದ್ದಾರೆ. ಈ ಪಾದಯಾತ್ರೆ ತಾಲ್ಲೂಕು ಮತ್ತು ರಾಜ್ಯದ ಜನತೆಗೆ ಮಾದರಿಯಾಗಿದೆ ಎಂದು ಉದಯ್ ಕೆ. ಹರ್ಷ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಮತ್ತಿಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ಹರೀಶ್ ಕುಮಾರ್ ಸೇರಿದಂತೆ ಗ್ರಾಮದ…
ಸರಗೂರು: ದಿನನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತ(ಹಲ್ಲು)ವನ್ನು ಸ್ವಚ್ಛಗೊಳಿಸಬೇಕು, ದಿನಕ್ಕೆರಡು ಬಾರಿ ದಂತವನ್ನು ಸ್ವಚ್ಛಗೊಳಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ ತಿಳಿಸಿದರು. ತಾಲ್ಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಡಗಲಪುರ ಸಹಯೋಗದೊಂದಿಗೆ ,ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಹಾಗೂ ಬಾಯಿ ಆರೋಗ್ಯ ಕಾರ್ಯ ಕ್ರಮವನ್ನು ಗುರುವಾರ ದಂದು ಆಯೋಜಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಶಿಬಿರ ವನ್ನು ನಿಮಗಾಗಿ ಆಯೋಜನೆ ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ವಿಶ್ವಬಾಯಿ ಆರೋಗ್ಯ ದಿನಾಚರಣೆಯ ಸಂದರ್ಭದಲ್ಲಿ ಒಂದು ಘೋಷವಾಕ್ಯ ಬಿಡುಗಡೆ ಮಾಡುತ್ತದೆ. (ಸಂತೋಷದ ಬಾಯಿ, ಸಂತೋಷದ ದೇಹ) ಇದರ ಅರ್ಥ ಏನೆಂದರೆಬಾಯಿ ಆರೋಗ್ಯದಿಂದ ಇದ್ದರೆ ಸಂತೋಷ ವಾಗಿರುತ್ತದೆ ,ಬಾಯಿ ಸಂತೋಷ ವಾಗಿದ್ದರೆ, ದೇಹವು ಸಹ ಸಂತೋಷವಾಗಿರುತ್ತದೆ ,ಆದುದರಿಂದ ನಾವೆಲ್ಲರೂ ಬಾಯಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಬಾಯಿ ಆರೋಗ್ಯ…