Subscribe to Updates
Get the latest creative news from FooBar about art, design and business.
- ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
- ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
- ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
- ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
- ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
- ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
- ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
Author: admin
ಬೆಂಗಳೂರು: ಮದ್ಯ ಸೇವನೆಗೆ ಸಾಲ ಕೊಡಲಿಲ್ಲ ಎಂದು ಕಿರಿಕ್ ತೆಗೆದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಯಡಿಯೂರು ಬಳಿಯ ಎಂಬಿಆರ್ ಬಾರ್ ನಲ್ಲಿ ಆ. 28ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ವಾಗತ್ ಗೌಡ ಹಲ್ಲೆಗೊಳಗಾದ ಬಾರ್ ಕ್ಯಾಶಿಯರ್, ಪುನೀತ್ ಹಾಗೂ ಆತನ ಸಹಚರರು ಕೃತ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬನಶಂಕರಿ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.28ರ ರಾತ್ರಿ ಎಂದಿನಂತೆ ಬಾರ್ ಕ್ಲೋಸ್ ಮಾಡುವಾಗ ಬೈಕಿನಲ್ಲಿ ಮೂವರು ಆರೋಪಿಗಳು ಬಂದಿದ್ದಾರೆ. ಕ್ಲೋಸ್ ಮಾಡುತ್ತಿದ್ದ ಬಾರ್ ನ್ನು ತೆಗೆದು ಮದ್ಯ ನೀಡುವಂತೆ ಕೇಳಿದ್ದಾರೆ. ಇದಕ್ಕೆ ನಿರಾಕರಿಸಿದ ಸ್ವಾಗತ್ ಗೌಡ ಮೇಲೆ ಹರಿಹಾಯ್ದಿದ್ದಾರೆ. ಗಾಂಜಾ ನಶೆಯಲ್ಲಿದ್ದ ಆರೋಪಿಗಳು ತಮ್ಮ ಬಳಿಯಿದ್ದ ಚಾಕುವಿನಿಂದ ಕ್ಯಾಶಿಯರ್ ಹೊಟ್ಟೆಗೆ ಇರಿದಿದ್ದಾರೆ. ಇದರಿಂದ ರಕ್ತಸ್ರಾವವಾಗಿ ಸ್ವಾಗತ್ ಕುಸಿದು ಬಿದ್ದಿದ್ದಾರೆ. ಆತನನ್ನು ಕಂಡು ಆರೋಪಿಗಳು ಪರಾರಿ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು: ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದ್ದಾರೆ. ರಾಜ್ಯದ ಉತ್ತರ ಒಳನಾಡಿನಲ್ಲೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಶೇಕಡಾ 22ರಷ್ಟು ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆಯಿದೆ ಎಂದರು.
ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮಳೆ ಬೀಳುವ ಮುನ್ಸೂಚನೆ ಇರುವ ಕಾರಣ ಪಾಲಿಕೆಯ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರು ಮಳೆ ಅವಘಡಗಳನ್ನು ಎದುರಿಸಲು ಸಜ್ಜಾಗಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯ ಅಭಿಯಂತರರು ಭೇಟಿ ನೀಡಿ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು. ಅತಿವೃಷ್ಟಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಶ್ರೀ ಹರಿಕೋಟಾ: ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ ಎಲ್-1 ಗೆ ಕ್ಷಣಗಣನೆ ಆರಂಭವಾಗಿದೆ. ಈ ಮಿಷನ್ ನಾಳೆ ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ. ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ಆದಿತ್ಯ L1 ಅನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ. ಆದಿತ್ಯ ಎಲ್ 1 ಉಪಗ್ರಹವನ್ನು ಹೊತ್ತ ಪಿಎಸ್ಎಲ್ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಿದ ಬಳಿಕ ರಾಕೆಟ್ ಉಪಗ್ರಹವನ್ನು ಕೆಳ ಮಟ್ಟದ ಭೂ ಕಕ್ಷೆಗೆ ತಲುಪಿಸಲಿದೆ. ನಂತರ ಉಪಗ್ರಹದಲ್ಲಿ ಇರುವ ಪ್ರೊಪಲ್ಶನ್ ಗಳು ಎಂಜಿನ್ ರೀತಿ ಕಾರ್ಯ ನಿರ್ವಹಿಸಿ ಉಪಗ್ರಹವನ್ನು ನಿಧಾನವಾಗಿ ಭೂಮಿಯ ಗುರುತ್ವಾಕರ್ಷಣ ವಲಯದಿಂದ ಆಚೆಗೆ ಸಾಗಿಸಲಿದೆ. ಎಲ್ 1 ಕಕ್ಷೆಯ ಬಳಿ ಉಪಗ್ರಹ ತಲುಪಿದ ನಂತರ ಅದನ್ನು ಕ್ರೂಸ್ ಹಂತಕ್ಕೆ ತಲುಪಿಸಿ…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಕ್ಯಾಬಿನೆಟ್ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಭಾರತ ಸರ್ಕಾರದ ನಿಯಮಗಳು, 1961 ರ ಎರಡನೇ ಶೆಡ್ಯೂಲ್ನ ‘ಸಂಸ್ಕೃತಿ ಸಚಿವಾಲಯ ಶೀರ್ಷಿಕೆಯಡಿಯ ನಮೂದು 9 ರಲ್ಲಿ, ‘ನೆಹರೂ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ’ ಎಂಬ ಪದಕ್ಕೆ ಬದಲಾಗಿ ‘ಪ್ರಧಾನಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ’ ಎಂಬ ಪದವನ್ನು ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎನ್ ಎಂಎಂಎಲ್ ನ ಉಪಾಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಜೂನ್ 17 ರಂದು ನಡೆದ ವಿಶೇಷ ಸಭೆಯಲ್ಲಿ ಸಂಸ್ಥೆಯ ಹೆಸರನ್ನು ಬದಲಾಯಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.
ಮುಂಬೈ: INDIA ಮೈತ್ರಿಕೂಟಗಳು ದ್ವೇಷದ ರಾಜಕೀಯವನ್ನು ಎದುರಿಸಲು ಸನ್ನದ್ಧವಾಗಿರಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ಮುಂಬೈಯಲ್ಲಿಂದು ಪ್ರತಿಪಕ್ಷಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳ ಮೈತ್ರಿಕೂಟದ ಬಲವು ಸರ್ಕಾರವನ್ನು ನಿರುತ್ಸಾಹಗೊಳಿಸುತ್ತಿದೆ. ಕೇಂದ್ರ ಸರ್ಕಾರದ ಅಡಿ ಬರುವ ಸಂಸ್ಥೆಗಳ ಹೆಚ್ಚು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯಿರುವುದರಿಂದ ಮೈತ್ರಿ ಕೂಟಗಳು ದ್ವೇಷದ ರಾಜಕೀಯವನ್ನು ಎದುರಿಸಲು ಸನ್ನದ್ಧವಾಗಿರಬೇಕು ಎಂದು ಅವರು ಹೇಳಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಬಿಜೆಪಿ ಮತ್ತು ಆರ್ಎಸ್ಎಸ್ ಹರಡಿದ ಕೋಮುವಾದದ ವಿಷವು ಈಗ ಅಮಾಯಕ ರೈಲು ಪ್ರಯಾಣಿಕರ ಮೇಲೆ ಮತ್ತು ಶಾಲಾ ಮಕ್ಕಳ ಮೇಲಿನ ದ್ವೇಷದ ಅಪರಾಧಗಳಲ್ಲಿ ಕಂಡುಬರುತ್ತಿವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈಲ್ವೇ ಪೊಲೀಸ್ ಪೇದೆಯೊಬ್ಬರು ರೈಲಿನಲ್ಲಿದ್ದ ಜನರನ್ನು ಮಾರಣಾಂತಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆಗಳು ಮತ್ತು ಮುಜಫರ್ನಗರದ ಶಾಲೆಯ ಶಿಕ್ಷಕರೊಬ್ಬರು ತಮ್ಮ ಮನೆಕೆಲಸವನ್ನು ಪೂರ್ಣಗೊಳಿಸದಿದ್ದಕ್ಕಾಗಿ ಮುಸ್ಲಿಂ ಸಹಪಾಠಿಯನ್ನು ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದು ಇಂಥಹ ಘಟನೆಗಳು ಕೋಮುವಾದ ವಿಷಬೀಜ ಬಿತ್ತುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಮೈಸೂರು: ಮೈಸೂರು ದಸರಾ ಮಹೋತ್ಸವ 2023, ಅಕ್ಟೋಬರ್ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಉದ್ಘಾಟಿಸಲಿದ್ದಾರೆ. ಈ ಬಾರಿಯ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಬಾರಿಯೂ ಕೂಡ 14 ಆನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಫೈನಲ್ ಮಾಡಿದ್ದಾರೆ. ಮೊದಲ ಹಂತದಲ್ಲಿ ಇಂದು 9 ಆನೆಗಳನ್ನು ಹಾಗೂ ಎರಡನೇ ಹಂತದಲ್ಲಿ ಉಳಿದ 5 ಆನೆಗಳನ್ನು ಅರಮನೆಗೆ ಆಗಮಿಸಲಾಗುತ್ತದೆ. ಅಭಿಮನ್ಯ, ವಿಜಯ, ವರಲಕ್ಷ್ಮಿ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮಿ, ಹಿರಣ್ಯ ಸೇರಿ ಒಟ್ಟು 14 ಆನೆಗಳನ್ನು ಫೈನಲ್ ಮಾಡಲಾಗಿದೆ.
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯಲ್ಲಿ ಶಿಕ್ಷಕರ ಕೊರತೆಯಿಂದ ಬಡ ರೈತರ ಮಕ್ಕಳ ಶಿಕ್ಷಣಕ್ಕೆ ತೊಂದರೆ ಉಂಟಾಗಿದೆ. 99 ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಈ ಹಿನ್ನಲೆ ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರವಾಗುತ್ತಿರುವ ಘಟನೆ ನಡೆದಿದೆ. ಸದ್ಯ ಅತಿಥಿ ಶಿಕ್ಷಕರೇ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಆಸರೆಯಾಗಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ತಾಲೂಕುಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿದ್ದ ಸರ್ಕಾರಿ ಶಾಲೆ, ಇದೀಗ ಇದ್ದು, ಇಲ್ಲದಂತಾಗಿದೆ ಎನ್ನುವುದು ಈ ಭಾಗದ ಜನರ ಆರೋಪವಾಗಿದೆ. ಜಿಲ್ಲೆಯ ಚಿಕ್ಕೋಡಿ-8, ರಾಯಬಾಗ – 22, ಮೂಡಲಗಿ-13, ಗೋಕಾಕ್-1, ಅಥಣಿ – 30, ನಿಪ್ಪಾಣಿ–15, ಹುಕ್ಕೇರಿ, ಕಾಗವಾಡ ತಾಲೂಕಿನ ತಲಾ ಐದು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಒಬ್ಬೊಬ್ಬರೇ ಅತಿಥಿ ಶಿಕ್ಷಕರು ಇಡೀ ಶಾಲೆಯ ಮಕ್ಕಳಿಗೆ ಪಾಠ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಹುಬ್ಬಳ್ಳಿ: ಬಿ.ಎಲ್.ಸಂತೋಷ್ ವಿರುದ್ಧ ಬಿಜೆಪಿಯೊಳಗೆ ಅಸಮಾಧಾನ ಸೃಷ್ಟಿ ಆಗಿರುವ ಬೆನ್ನಲ್ಲೇ, ಇತ್ತೀಚೆಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಬಿ.ಎಲ್.ಸಂತೋಷ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆ ತಿರುಗೇಟು ನೀಡಿರುವ ಅವರು, ಬಿ.ಎಲ್ ಸಂತೋಷವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ. ಶಾಸಕರನ್ನು, ಮಾಜಿ ಶಾಸಕರನ್ನು ಉಳಸಿಕೊಳ್ಳಲಿ. ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ ಎಂದಿದ್ದಾರೆ. ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡುವುದು. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ ಎಂದು ಕೆಲ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್ ಸಂತೋಷ್ ಹೇಳಿಕೆಗೆ ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದರು.
ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಭಿನ್ನಮತ ಸೃಷ್ಟಿಯಾಗಿರುವ ನಡುವೆಯೇ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಬಿ.ಎಲ್.ಸಂತೋಷ್ ಅವರ ಕಾಲೆಳೆದಿದೆ. ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನ ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಬಿ.ಎಲ್.ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಕಿವಿಮಾತು ಹೇಳಿದೆ.