Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ತಹಶೀಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರ ಅಧಿಕಾರಿಗಳು ದೀಪಾವಳಿ ನೆಪದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಮಹಿಳಾ ಹಾಸ್ಟೆಲ್ ಗೆ ನಿಯಮ ಬಾಹಿರವಾಗಿ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರ ಮೈ ಕೈ ಮುಟ್ಟುವುದರ ಮೂಲಕ ಅಸಹ್ಯ ಸಾಹಿತ್ಯದ ಸಿನಿಮಾ ಹಾಡುಗಳು ಅಸಭ್ಯವಾಗಿ ನೃತ್ಯ ಮಾಡಿರುವ ಬಗ್ಗೆ ಪೊಲೀಸ್ ಉಪನಿರೀಕ್ಷಕರಿಗೆ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಅವರು ದೂರು ನೀಡಿದ್ದಾರೆ. ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ., ತಹಶೀಲ್ದಾರ್ ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಜಿಲ್ಲೆಯ ಇತರ ಅಧಿಕಾರಿಗಳು ದೀಪಾವಳಿ ಹಬ್ಬದ ನೆಪದಲ್ಲಿ ರಾತ್ರಿ ವೇಳೆ ಸರ್ಕಾರದ ವ್ಯಾಪ್ತಿಗೆ ಒಳಪಡುವ ತುಮಕೂರು ನಗರದ ಗೆದ್ದಲಹಳ್ಳಿ ರಸ್ತೆಯಲ್ಲಿರುವ ಪರಿಶಿಷ್ಟ ಜಾರಿ, ಪರಿಶಿಷ್ಟ ವರ್ಗಗಳ ಅಪ್ರಾಪ್ತ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ತೆರಳಿ ಇಲ್ಲಿನ ವಿದ್ಯಾರ್ಥಿನಿಯರೊಂದಿಗೆ ಮೈಕೈ ಮುಟ್ಟಿ, ಕೈಕೈ ಹಿಡಿದು ಅಶ್ಲೀಲವಾದ ಹಾಡುಗಳಿಗೆ ಡಾನ್ಸ್ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.…
ಚಿಕ್ಕಬಳ್ಳಾಪುರ: ನೈಋತ್ಯ ರೈಲ್ವೆಯು ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಡಿಸೆಂಬರ್ 11ರಿಂದ ಎಲೆಕ್ಟ್ರಿಕ್ ರೈಲು ಆರಂಭಿಸಲು ನಿರ್ಧರಿಸಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ MEMU ರೈಲುಗಳ ಕಾರ್ಯಾಚರಣೆಯನ್ನು ವಿಸ್ತರಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ. ಯಲಹಂಕ-ಚಿಕ್ಕಬಳ್ಳಾಪುರ ಮಾರ್ಗದ ವಿದ್ಯುದ್ದೀಕರಣವು ಮಾರ್ಚ್ 2022 ರಲ್ಲಿ ಪೂರ್ಣಗೊಂಡಿದೆ. ಆದರೆ, ವಿವಿಧ ಕಾರಣಗಳಿಂದ ವಿದ್ಯುತ್ ರೈಲುಗಳ ಅಳವಡಿಕೆ ವಿಳಂಬವಾಗಿದೆ. ಪ್ರಸ್ತುತ, ನಂದಿ ನಿಲ್ದಾಣದಲ್ಲಿ ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಕೋಲಾರ-KSR ಬೆಂಗಳೂರು ನಡುವೆ ಡೇಮೊ ರೈಲು ಸಂಚರಿಸುತ್ತಿವೆ. ನೈರುತ್ಯ ರೈಲ್ವೆ ಚಿಕ್ಕಬಳ್ಳಾಪುರಕ್ಕೆ ಸೇವೆಗಳನ್ನು ವಿಸ್ತರಿಸುವುದರಿಂದ ವಿದ್ಯಾರ್ಥಿಗಳು, ರೈತರು ಮತ್ತು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ಬಯಸುವ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂಬುದನ್ನು ಗಮನಿಸಿದೆ. ಆದರೆ ಈ ರೈಲುಗಳು ಬೆಟ್ಟಹಲಸೂರು, ದೊಡ್ಡಜಾಲ, ಚನ್ನಸಂದ್ರದಂತಹ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂದಿ ನಿಲುಗಡೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಅದಾದ ನಂತರ, ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಪ್ರವಾಸಿಗರಿಗೆ ಬೆಳಗ್ಗೆಯಿಂದಲೇ…
ಬೆಳಗಾವಿ: ರೈತರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ಚಿಂತನೆ ನಡೆಸುತ್ತಿದೆ. ಕಳೆದ ಆಗಸ್ಟ್ ನಲ್ಲಿ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿತ್ತು. ಅದಾದ ಬಳಿಕ ಇದೀಗ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ ಕುರಿತು ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದ್ದಾರೆ. ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ವೆಂಕಟೇಶ್, ‘ಗೋವಿನ ಮೇವಿನ ಬೆಲೆ ಏರಿಕೆಯಾಗಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಹಾಲು ಉತ್ಪಾದಕರಿಗೆ ಸರ್ಕಾರದ ಬೆಂಬಲ ಅಗತ್ಯ ಎಂಬುದು ನಮಗೆ ತಿಳಿದಿದೆ’ ಎಂದರು. ನಂದಿನಿ ಬ್ರಾಂಡ್ ನಲ್ಲಿ ಮಾರಾಟವಾಗುವ ಕರ್ನಾಟಕ ಹಾಲು ಮಹಾಮಂಡಳ ಹಾಲಿನ ಚಿಲ್ಲರೆ ಮಾರಾಟ ಬೆಲೆ ಏರಿಕೆಗೆ ವಿರೋಧ ಪಕ್ಷಗಳು ಸೇರಿದಂತೆ ಎಲ್ಲರಿಂದ ಬೆಂಬಲ ದೊರೆತರೆ ಮಾತ್ರ ಸರ್ಕಾರವು ಮುಂದುವರಿಯುತ್ತದೆ ಎಂದು ಸಚಿವರು ಒತ್ತಿ ಹೇಳಿದರು. ರೈತರಿಗೆ ಸಹಾಯವಾಗುವುದಾದರೆ…
ಧಾರವಾಡ: ಧಾರವಾಡ ಜಿಲ್ಲೆಯ 63566 ಜನ ರೈತರಿಗೆ 50.298 ಕೋಟಿ ರೂ ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೊಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಅಳ್ನಾವರ ತಾಲ್ಲೂಕಿನ 3052 ಜನ ರೈತರಿಗೆ 1.82 ಕೋಟಿ ರೂ ಗಳ, ಅಣ್ಣಿಗೇರಿ ತಾಲ್ಲೂಕಿನ 6044 ಜನ ರೈತರಿಗೆ 6.45 ಕೋಟಿ ರೂ.ಗಳ, ಧಾರವಾಡ 9978 ಜನ ರೈತರಿಗೆ 6.575 ಕೋಟಿ ರೂ.ಗಳ, ಹುಬ್ಬಳ್ಳಿ ತಾಲ್ಲೂಕಿನ 9472 ಜನ ರೈತರಿಗೆ 9.12 ಕೋಟಿ ರೂ ಗಳ, ಹುಬ್ಬಳ್ಳಿ ನಗರ ತಾಲ್ಲೂಕಿನ 301 ಜನ ರೈತರಿಗೆ 0.365 ಕೋಟಿ ರೂ ಗಳ, ಕಲಘಟಗಿ ತಾಲ್ಲೂಕಿನ 15248 ಜನ ರೈತರಿಗೆ 9.731 ಕೋಟಿ…
ಬೆಂಗಳೂರು: ಮುಸ್ಲಿಮರಿಗೆ ಅನುದಾನ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಈ ಮೂಲಕ, ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ತಾವಾಡಿದ್ದ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಮುಸ್ಲಿಮರಿಗೆ ದೇಶದ ಸಂಪತ್ತನ್ನು ಹಂಚಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಮುಸ್ಲಿಮರು ಸೇರಿದಂತೆ ಎಲ್ಲರನ್ನೂ ರಕ್ಷಿಸುತ್ತೇವೆ ಎಂದು ಹೇಳಿದ್ದೇನೆ. ಇದು ಓಲೈಕೆಯೇ, ತುಷ್ಟೀಕರಣವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಭಾರತ ದೇಶದ ಸಂವಿಧಾನವು ಶೋಷಿತರ, ದಿನ ದಲಿತರ, ತುಳಿತಕ್ಕೆ ಒಳಗಾದವರ ಪರವಾಗಿ ಇರುವಂತಹ ಪವಿತ್ರ ಗ್ರಂಥ. ಅದನ್ನು ನೀಡಿದವರು ಅಂಬೇಡ್ಕರ್ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಹೇಳಿದರು. ಕೆ.ಆರ್. ಪುರ ಸಮೀಪದ ಹೊರಮಾವು ಜಯಂತಿನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಬ್ಲಾಕ್ ಅಧ್ಯಕ್ಷ ಸಿ. ವೆಂಕಟೇಶ್, ಮುಖಂಡರಾದ ಅಗರ ಪ್ರಕಾಶ್ ಇದ್ದರು.
ಸಿಎಂ ನೇತೃತ್ವದಲ್ಲಿ ನಿನ್ನೆ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಸಚಿವರು ಹಾಗೂ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಅಟ್ಯಾಕ್ ಮಾಡುತ್ತಿವೆ. ಕೇವಲ ಸಚಿವರು ಮಾತ್ರ ಸರ್ಕಾರವನ್ನ ಸಮರ್ಥಿಸಿಕೊಂಡರೆ ಸಾಲದು. ಶಾಸಕರು ಕೂಡ ಸಚಿವರಿಗೆ ಸಾಥ್ ನೀಡಬೇಕು. ಶಾಸಕರು ಕೂಡ ಗಟ್ಟಿಯಾಗಿ ಧ್ವನಿ ಎತ್ತಬೇಕು. ಯಾವುದೇ ಕಾರಣಕ್ಕೂ ಏನೋ ಮಾತನ್ನಾಡಲು ಹೋಗಿ ಇನ್ನೇನೋ ಗೊಂದಲ ಆಗುವಂತೆ ಮಾಡಬೇಡಿ. ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಅನುದಾನದ ಪ್ರಸ್ತಾಪವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಒಂದೆರಡು ತಿಂಗಳಲ್ಲಿ ಕೈ ಶಾಸಕರಿಗೆ ತಲಾ 25 ಕೋಟಿ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಡಿಸೆಂಬರ್ ಇಲ್ಲವೇ ಜನವರಿಯಲ್ಲಿ ಅನುದಾನ ನೀಡಲಾಗುವುದು. ಕ್ಷೇತ್ರಗಳ ಕೆಲಸ ಕಾರ್ಯಗಳಿಗೆ ಅನುದಾನ ಸಿಗಲಿದೆ. ಅನುದಾನ ಇಲ್ಲಾ ಅಂತಾ ಯಾರೂ ಅಸಮಾಧಾನ ವ್ಯಕ್ತಪಡಿಸುವುದು ಬೇಡ ಎಂದು ಸಿಎಂ ತಿಳಿಸಿದ್ದಾರೆ ಎನ್ನಲಾಗಿದೆ.
ದೇಶದಾದ್ಯಂತ ಏಕರೂಪ ಚಾಲನಾ ಪರವಾನಗಿ ವಾಹನಗಳ ನೋಂದಣಿ ಪ್ರಮಾಣಪತ್ರ ಇರಬೇಕು ಎಂಬ ಕೇಂದ್ರ ಸರ್ಕಾರದ ಆದೇಶ ಫೆಬ್ರವರಿಯಲ್ಲಿ ಜಾರಿಗೆ ಬರಲಿದೆ. ಇನ್ನು ಮುಂದೆ ಡಿಎಲ್, ಆರ್‌ಸಿಗಳಲ್ಲಿ ಕ್ಯೂಆರ್ ಕೋಡ್ ಕೂಡ ಇರಲಿದೆ. ಒಂದು ದೇಶದಲ್ಲಿ ಒಂದೇ ಮಾದರಿಯ ಸ್ಮಾರ್ಟ್ ಕಾರ್ಡ್ ಇರಬೇಕು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2019ರಲ್ಲಿ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ಛತ್ತೀಸ್ಗಡ, ಹಿಮಾಚಲ ಪ್ರದೇಶ, ತಮಿಳುನಾಡು ಸಹಿತ ಕೆಲವು ರಾಜ್ಯಗಳು ಇದನ್ನು ಜಾರಿಗೆ ತಂದಿದ್ದವು.
ಬೆಂಗಳೂರು: ವಿದೇಶದಲ್ಲಿರುವ ಬೆಂಗಳೂರು ಮೂಲದ ವ್ಯಕ್ತಿಗೆ ಸೈಟ್ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಹಣ ಕಳೆದುಕೊಂಡ ವ್ಯಕ್ತಿಯು ಭಾರತೀಯ ಟ್ವಿಟ್ ಮೂಲಕ ದೂರು ನೀಡಿದ್ದಾರೆ. ರಾಘವೇಂದ್ರ ಪ್ರಸಾದ್ ಎಂಬವರನ್ನು ಜೆಪಿ ನಗರದ ರಿಯಲ್ ಎಸ್ಟೇಟ್ ಕಂಪನಿ ಪರಿಚಯಿಸಿಕೊಂಡಿದೆ. ನಂತರ ಹೂಡಿಕೆ ಮಾಡಿಸಿಕೊಂಡು ಸೈಟ್ ಬುಕ್ ಮಾಡಿದ್ದಾರೆ. ಹಣ ಜಮೆಯಾದ ಬಳಿಕ ಬುಕ್ ಮಾಡಿದ್ದ ಸೈಟ್ ಬೇರೆಯವರಿಗೆ ಮಾರಾಟ ಮಾಡಲಾಗಿದೆ.
ಹಿಂದೂ ವಿವಾಹ ಕಾಯಿದೆಯಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಕೂಡ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ದಂಪತಿ, ವಿಚ್ಚೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಮಾಡಿರುವ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯಪೀಠ ದಂಪತಿಗೆ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರಕ್ಕೆ ತೆರಳುವಂತೆ ನಿರ್ದೇಶನ ನೀಡಿತು.