Author: admin

ಮಲಯಾಳಂ ಸಿನಿಮಾ-ಧಾರಾವಾಹಿ ತಾರೆ ಅಪರ್ಣಾ ನಾಯರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಟಿ ಕರಮಾನ ತಾಲಿಯಾದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಪಿಆರ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿನ್ನೆ ಸಂಜೆ 7.30ರ ಸುಮಾರಿಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಕ್ಕೂ ಮುನ್ನ ಮೃತಪಟ್ಟಿದ್ದರು. ಘಟನೆ ವೇಳೆ ಮನೆಯಲ್ಲಿ ತಾಯಿ ಮತ್ತು ಸಹೋದರಿ ಇದ್ದರು ಎಂದು ವರದಿಯಾಗಿದೆ. ಕರಮಾನ ಪೊಲೀಸರು ಸಾವಿನ ತನಿಖೆ ಆರಂಭಿಸಿದ್ದಾರೆ. ಮೇಘತೀರ್ಥಂ, ಮುದ್ದುಗೌ, ಅಚಾಯನ್ಸ್, ಖಾರ್ತ ಸಮಕ್ಷಮ ಬಾಲನ ವಕೀಲ, ಕಲ್ಕಿ ಮುಂತಾದ ಚಿತ್ರಗಳಲ್ಲಿ ಹಾಗೂ ಚಂದನಮಜ, ಆತ್ಮಸಖಿ, ಮೈಥಿಲಿ ರೀ ವಾಂ, ದೇವಸ್ಪರ್ಶಂ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗಂಡ: ಸಂಜಿತ್, ಮಕ್ಕಳು: ತ್ರಯ, ಕೃತಿಕಾ. ಇವರನ್ನು ಅಗಲಿದ್ದಾರೆ.

Read More

ಆಪರೇಷನ್ ಹಸ್ತದ ಸದ್ದಿಗೆ ಬಿಜೆಪಿ ಹೈಕಮಾಂಡ್ ಬೆಚ್ಚಿಬಿದ್ದಿದೆ. ಆಪರೇಷನ್ ಕಾಂಗ್ರೆಸ್ ತಡೆಯೋಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಖುದ್ದು ಅಖಾಡಕ್ಕೆ ಇಳಿದಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಎಂಟ್ರಿ ಕೊಟ್ಟ ಬಿಎಲ್ ಸಂತೋಷ್, ಶಾಸಕರು, ಮಾಜಿ ಶಾಸಕರು, ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಪರೇಷನ್ ಹಸ್ತದ ಗುಲ್ಲು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಅಲರ್ಟ್ ಆಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್ ಸಂತೋಷ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಆಪರೇಷನ್‌ಗೆ ಪ್ರತಿತಂತ್ರ ರೂಪಿಸಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ರಣತಂತ್ರ ಹೆಣೆಯೋ ಪ್ಲಾನ್ ಮಾಡಿದ್ದಾರೆ. ಬಿಜೆಪಿ ಪ್ರಮುಖ ನಾಯಕರು ಗೈರು ಆಗಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿ, ಎಸ್. ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಆರ್. ಅಶೋಕ್, ವಿ. ಸೋಮಣ್ಣ ಸೇರಿ ಪ್ರಮುಖರು ಗೈರು ಆಗಿದ್ದಾರೆ. ಈ ಪೈಕಿ ಮಾಜಿ…

Read More

ಬೆಂಗಳೂರು: ಆರೋಪ ಪಟ್ಟಿಯಿಂದ ಹೆಸರು ಕೈಬಿಡುವುದಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆ ಹೆಡ್‌ ಕಾನ್‌ ಸ್ಟೆಬಲ್ ಎಂ. ಲೋಕೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟ ಸಂಬಂಧ ಕಾಮಾಕ್ಷಿಪಾಳ್ಯದ ನಿವಾಸಿ ರೂಪಾ ಅವರು ಲೋಕಾಯುಕ್ತ ನಗರ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Read More

ಬೆಂಗಳೂರು: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ರೌಡಿಶೀಟರ್ ಸೇರಿದಂತೆ ಐವರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುಟ್ಟೆಪಾಳ್ಯದ ನಿವಾಸಿಗಳಾದ ಅರವಿಂದ್, ರಾಜ, ಶ್ರೀನಿವಾಸ್, ಗಣೇಶ್ ಸೇರಿ ಒಬ್ಬ ಬಾಲಕನನ್ನು ಬಂಧಿಸಲಾಗಿದೆ. ಬಾಲಕನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು. ಭಾನುವಾರ ರಾತ್ರಿ ಹೊಂಬೇಗೌಡ ನಗರದ ಬಾರ್ ಸಮೀಪ ಗಣೇಶ್ ಎಂಬುವವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.

Read More

ರಾಜ್ಯದಲ್ಲಿ ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಕಚೇರಿಯಲ್ಲಿ ಷಡ್ಯಂತ್ರ ನಡೀತಿದೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮವರೇ ನನ್ನ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆ. ನಮ್ಮ ಪಕ್ಷದ ಕೆಲ ಮುಖಂಡರಿಗೆ ನನ್ನನ್ನು ಸಹಿಸಿಕೊಳ್ಳಲು ಆಗ್ತಿಲ್ಲ ಅಂತಾ ಮಾಜಿ ಸಚಿವ ರೇಣುಕಾಚಾರ್ಯ ದೂರಿದ್ದಾರೆ. ‘ನಮ್ಮ ಪಕ್ಷದವರಿಗೆ ಇನ್ನೂ ಬುದ್ಧಿ ಬಂದಿಲ್ಲ. ರಿಮೋಟ್ ಕಂಟ್ರೋಲ್ ಮೂಲಕ ರಾಜ್ಯ ಘಟಕವನ್ನು ನಿಯಂತ್ರಿಸಲಾಗುತ್ತಿದೆ’ ಎಂದು ಬಿಜೆಪಿ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಟೀಕಿಸಿದರು. ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರನ್ನು ಭೇಟಿ ಮಾಡಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನನಗೆ ನೋಟಿಸ್ ನೀಡಿರುವ ಕಾರಣ ಬಿಜೆಪಿ ಸಭೆಗೆ ಹೋಗಿಲ್ಲ. ನೋಟಿಸ್ ವಾಪಸ್ ಪಡೆದರೆ ಹೋಗಲು ಸಾಧ್ಯ ಎಂದಿದ್ದಾರೆ.

Read More

ಹಲವು ಬೇಡಿಕೆ ಈಡೇರಿಸುವಂತೆ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯಗೊಂಡಿದ್ದು, ಪ್ರತಿಭಟನೆಯ ಮುಂದುವರಿದ ಭಾಗವಾಗಿ ‘ಬೆಂಗಳೂರು ಬಂದ್‌’ಗೆ ನಿರ್ಧರಿಸಿವೆ. ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಸೆಪ್ಟೆಂಬರ್ 11ರಂದು ಬೆಂಗಳೂರು ಬಂದ್‌ ಗೆ ನಿರ್ಧರಿಸಿವೆ. 32 ಒಕ್ಕೂಟದ ಪ್ರತಿನಿಧಿಗಳು ಸಭೆ ಸೇರಿ ಬಂದ್‌ ನ ದಿನಾಂಕವನ್ನು ನಿರ್ಧರಿಸಿದ್ದಾರೆ. ಅಂದು ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸಂಚಾರ ಸಂಪೂರ್ಣ ಬಂದ್ ಇರಲಿದೆ.

Read More

ಬೆಂಗಳೂರು: ಹತ್ತು ವರ್ಷಗಳಿಂದ ಸುಲಿಗೆ, ಕೊಲೆ ಪ್ರಯತ್ನ ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದ ರೌಡಿಶೀಟರ್ ಇರ್ಫಾನ್ ಅಲಿಯಾಸ್ ರಹೀಮುಲ್ಲಾನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತ ರೌಡಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ. ಕಳೆದ 10 ವರ್ಷಗಳಲ್ಲಿ ಭಾಗಿಯಾಗಿರುವ ಎಲ್ಲ ಅಪರಾಧ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಬಂಧಿಸಲು ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು ಪ್ರಸ್ತಾವ ಸಲ್ಲಿಸಿದ್ದರು.

Read More

ಜನಾಂಗೀಯ ಸಂಘರ್ಷ ತಾರಕಕ್ಕೇರಿರುವ ಮಣಿಪುರದಲ್ಲಿ ಮತ್ತೆ ಘರ್ಷಣೆ. ಚುರಾಚಂದ್‌ ಪುರ ಮತ್ತು ಬಿಷ್ಣುಪುರ ಜಿಲ್ಲೆಗಳ ಗಡಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗಸ್ಟ್ 29ರಂದು ಈ ಭಾಗದಲ್ಲಿ ಗುಂಡಿನ ದಾಳಿ ಆರಂಭವಾಗಿದೆ. ಎರಡು ಬಣಗಳ ನಡುವೆ ಬುಧವಾರ ಆರಂಭವಾದ ಗುಂಡಿನ ಚಕಮಕಿ ಗುರುವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ಐವರು ಗಾಯಗೊಂಡಿದ್ದು, ಮೂವರನ್ನು ಚುರಚಂದಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಕುಕಿ-ಸೋಮಿ ಸಮುದಾಯದ ಇಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ, ಆಗಸ್ಟ್ 29 ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಈ ಪ್ರದೇಶದಲ್ಲಿ ಸತ್ತವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಇದೇ ವೇಳೆ ಚುರಚಂದಪುರದಲ್ಲಿ ಕುಕಿ ವಿಭಾಗ ಅನಿರ್ದಿಷ್ಟಾವಧಿ ಬಂದ್‌ಗೆ ಕರೆ ನೀಡಿದೆ. ಕುಕಿ ಬಹುಸಂಖ್ಯಾತ ಪ್ರದೇಶಗಳಲ್ಲಿ ದಾಳಿಗಳು ಹೆಚ್ಚಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Read More

ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಸುಬ್ರಮಣಿಯನ್ (63) ಎಂಬುವರು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಜೂನ್ 10ರಂದು ಅಪಘಾತ ನಡೆದಿತ್ತು. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಬ್ರಮಣಿಯನ್ ಅವರಿಗೆ ತಲೆ, ಬಲಗೈ ಹಾಗೂ ಬಲ ಕಾಲಿಗೆ ತೀವ್ರ ಪೆಟ್ಟು ಬಿದ್ದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

Read More