Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ವಿಶೇಷ ಔಷಧೀಯ ಗುಣಗಳನ್ನು ಹೊಂದಿರುವ ಈ ಗಿಡವನ್ನು “ದೊಡ್ಡಪತ್ರೆ” ,”ಸಾಂಬ್ರಾಣಿ ಸೊಪ್ಪು” ಅಥವಾ “ಸಂಬಾರ ಸೊಪ್ಪು” ಹೀಗೆ ಹಲವಾರು ಹೆಸರುಗಳಿಂದ ಕರೆಯಲಾಗುತ್ತದೆ. ಮಲೆನಾಡಿನಲ್ಲಿ ಹೆಚ್ಚಾಗಿ ಇದರ ಉಪಯೋಗ ಕಂಡುಬರುತ್ತದೆಯಾದರೂ ಇದರ ಔಷಧೀಯ ಗುಣಗಳಿಂದಾಗಿ ಎಲ್ಲೆಡೆ ಪರಿಚಿತ. ಹಚ್ಚ ಹಸಿರಿನಿಂದ ಕೂಡಿದ, ದಪ್ಪವಾದ ಎಲೆಗಳನ್ನು ಹೊಂದಿರುವ ಇದು ಘಾಡವಾದ ವಾಸನೆನ್ನು ಹೊಂದಿದೆ. ಎಲೆಗಳು ದಪ್ಪವಾಗಿದ್ದು, ನೀರಿನ ಅಂಶ ಹೆಚ್ಚಿರುತ್ತದೆ. ಎಲೆಗಳನ್ನು ಕೊಯ್ದು ಸ್ವಲ್ಪ ಬೆಂಕಿಯಲ್ಲಿ ಬಾಡಿಸಿ ಹಿಂಡಿದರೆ ನೀರು ಸಿಗುತ್ತದೆ. ಇದನ್ನು ಸಾಮಾನ್ಯವಾಗಿ ಹಲವಾರು ಅಡುಗೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದಲ್ಲದೇ ಅನೇಕ ಆರೋಗ್ಯ ಉಪಯೋಗವನ್ನು ಇದು ಹೊಂದಿದೆ. ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ದೊಡ್ಡಪತ್ರೆ ಎಲೆಗಳ ರಸ ಮತ್ತು ಅಷ್ಟೇ ಪ್ರಮಾಣದ ಎಳ್ಳೆಣ್ಣೆಯನ್ನು ನಿತ್ಯ ತಲೆಗೆ ಹಚ್ಚಿಕೊಳ್ಳುವುದರಿಂದ ಕಣ್ಣುರಿ ಕಡಿಮೆಯಾಗುತ್ತದೆ. ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನಿನೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ. ಪದೇಪದೆ ಮಕ್ಕಳಲ್ಲಿ ಕಾಡುವ ಕಫ ಕೆಮ್ಮು…
ಬೆಂಗಳೂರು: ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ನರ್ಸ’ನ್ನು ಪೊಲೀಸರು ಬಂಧಿಸಿದ್ದು, ಶುಶ್ರೂಷಕಿ ಉಷಾರಾಣಿ (35) ಬಂಧಿತ ಆರೋಪಿ. ಮೈಸೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಷಾರಾಣಿ, ಜಾಲದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಹಾಗೂ ಚೆನ್ನೈನ ವೈದ್ಯರೊಬ್ಬರ ತಂಡದಲ್ಲಿದ್ದರು ಎನ್ನಲಾಗಿದೆ. ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರತೆಗೆದಿದ್ದೇನೆಂದು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಮಗುವನ್ನು ಹತ್ಯೆ ಮಾಡಿ ಮೆಡಿಕಲ್ ವೇಸ್ಟ್ ಗೆ ಹಾಕುತ್ತಾ ಇದ್ದರು ಎಂದು ಹೇಳಿದ್ದಾರೆ. ಈ ನಡುವ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಈ ವೇಳೆ ಎರಡು ಪ್ರಕರಣ ಸಂಬಂಧ ಇದೂವರೆಗೆ ನಡೆದಿರುವ ತನಿಖೆ ಬಗ್ಗೆ ಮಾಹಿತಿ ಪಡೆದ ಸಿಐಡಿ ತಂಡವು, ಬಳಿಕ ಎಲ್ಲಾ ದಾಖಲೆಗಳನ್ನು ತನಿಖಾಧಿಕಾರಿಗಳಿಂದ ಸ್ವೀಕರಿಸಿ ತೆರಳಿತು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು,ಇತ್ತ ಸುವರ್ಣಸೌಧದ ಹೊರಗೆ, ಪ್ರತಿಭಟನಾ ಸ್ಥಳ ಸೇರಿದಂತೆ ಎಲ್ಲೆಡೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಇನ್ನು ಅಧಿವೇಶನಕ್ಕೆ ಸೂಕ್ತ ಸಮಯಕ್ಕೆ ಆಗಮಿಸುವ ಶಾಸಕರುಗಳಿಗೆ ಕಾಫಿ ಕಪ್ ಗಿಫ್ಟ್ ಕೊಡಲಾಗುತ್ತಿದೆ. ಈ ಬಗ್ಗೆ ಸ್ವೀಕರ್ ಯುಟಿ ಖಾದರ್ ಮಾಹಿತಿ ನೀಡಿದ್ದಾರೆ. ಕಳೆದ ಅಧಿವೇಶದನಲ್ಲಿ ಮೊದಲ ಬೇಗ ಬಂದವರ ಹೆಸರನ್ನ ಕೂಗಿ ಹೇಳುತ್ತೇವೆ ಎಂದು ಹೇಳಿದ್ವಿ. ಅಂತಿಮವಾಗಿ ಯಾರು ಎಷ್ಟು ದಿನ ಬಂದಿದ್ದಾರೆ ಅವರಿಗೆ ಗಿಫ್ಟ್ ಕೊಡುವುದಾಗಿ ಹೇಳಿದ್ವಿ. ಕಳೆದ ಅಧಿವೇಶನದಲ್ಲಿ ಕೆಲವರು ಒಂದು ದಿನ, ಮತ್ತೆ ಕೆಲವರು ಐದು ದಿನ, ಹಲವರು ಹತ್ತು ದಿನವೂ ಬಂದಿದ್ದಾರೆ. ಇದಕ್ಕೆ ಅನುಗುಣವಾಗಿ ಇವರಿಗೆ ಪ್ರೋತ್ಸಾಹ ನೀಡಲು, ಗುರುತಿಸಿಕೊಳ್ಳಲು ಪ್ರಶಸ್ತಿ ನೀಡುತ್ತಿದ್ದೇವೆ. ತಡವಾಗಿ ಬರುವವರಿಗೆ ಶಿಕ್ಷೆ ವಿಧಿಸುವುದಕ್ಕಿಂತ ಈ ರೀತಿ ಉಡುಗೊರೆ ಕೊಟ್ಟು ಬೇಗ ಬರುವಂತೆ ಪ್ರೇರಣ ಮಾಡುತ್ತೇವೆ ಎಂದರು.
ಬೆಂಗಳೂರು: ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿರುವ ದೇಶದ ನಗರಗಳ ಪೈಕಿ ಬೆಂಗಳೂರು ಹಾಗೂ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 2022ರ ಜನವರಿಯಿಂದ ಡಿಸೆಂಬರ್ ವರೆಗಿನ ಅಪರಾಧಗಳ ಅಂಕಿ-ಅಂಶವನ್ನು ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ (ಎನ್ ಸಿಆರ್‌ಬಿ) ಬಿಡುಗಡೆ ಮಾಡಿದೆ. ಅಂತರ್ಜಾಲ ಬಳಕೆ ಪ್ರಮಾಣ ಹೆಚ್ಚಾಗಿದೆ. ಆನ್ ಲೈನ್ ಮೂಲಕ ನಗದು ವರ್ಗಾವಣೆ ಸುಲಭವಾಗಿದೆ. ಇದೇ ಕಾರಣಕ್ಕೆ ವಂಚಕರು, ಆನ್ ಲೈನ್ ವ್ಯವಸ್ಥೆ ಬಳಸಿಕೊಂಡು ಜನರಿಂದ ಹಣ ದೋಚುತ್ತಿದ್ದಾರೆ.
ಅಡುಗೆ ಮನೆ ಪದಾರ್ಥ ಮಂತ್ಯೆಯಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳು: ಆರೋಗ್ಯದಲ್ಲಿ ಸುಧಾರಣೆ ತರಲು ಅಡುಗೆ ಮನೆಯ ಪದಾರ್ಥಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಅಂತಹ ಒಂದು ಪದಾರ್ಥಗಳಲ್ಲಿ ಮೆಂತ್ಯ ಸಹ ಒಂದು. ಮೆಂತ್ಯ ಸೇವನೆಯಿಂದ ಹಸಿವನ್ನು ನಿಯಂತ್ರಿಸುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ, ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಉತ್ತಮ ಜೀರ್ಣಕ್ರಿಯೆಗೆ ಸಹಕಾರಿ, ಉರಿಯೂತ ನಿವಾರಕ ಗುಣಗಳು, ಪೋಷಕಾಂಶಗಳಿಂದ ಸಮೃದ್ಧವಾಗಿದೆ, ಎದೆ ಹಾಲಿನ ಪೂರೈಕೆಯನ್ನು ಹೆಚ್ಚಿಸುತ್ತದೆ, ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ, ಕೂದಲಿನ ಬೆಳವಣಿಗೆಗೆ ಒಳ್ಳೆಯದು. ಕುಂಬಳಕಾಯಿ ಬೀಜದಲ್ಲಿದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು: ಕುಂಬಳಕಾಯಿ ಬೀಜ ಸೇವಿಸುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಕುಂಬಳಕಾಯಿ ಬೀಜದಲ್ಲಿ ಮೆಗ್ನಿಶಿಯಂ ಹೆಚ್ಚಿರುವುದರಿಂದ ತಮ್ಮ ದೇಹದ ಮೂಳೆಗಳನ್ನು ಆರೋಗ್ಯಯುತವಾಗಿ ಕಾಪಾಡಿಕೊಳ್ಳಲು ನೆರವಾಗುತ್ತದೆ. ಇದರಲ್ಲಿ ಸತುವಿನಂತ ಗುಣ ಲಕ್ಷಣಗಳಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಕುಂಬಳಕಾಯಿ ಬೀಜ ಸೇವನೆಯಿಂದ ಉತ್ತಮ ನಿದ್ರೆ ಮಾಡಲು ಸಹಕಾರಿಯಾಗಿದೆ. ಇದು ಜೀರ್ಣಕ್ರಿಯೆಗೂ ಉತ್ತಮವಾಗಿದೆ.
ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು. ಬಹಳಷ್ಟು ಅನುಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ.…
ಬೆಂಗಳೂರು: ನೋಂದಣಿ ಸಂಖ್ಯೆ ಫಲಕ ಮರೆಮಾಚಿದ್ದ ಶಾಲೆಯೊಂದರ ಬಸ್ ಚಾಲಕನನ್ನು ವೈಟ್‌ಫೀಲ್ಡ್ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ. ವೈಟ್‌ಫೀಲ್ಡ್ ಮುಖ್ಯರಸ್ತೆಯಲ್ಲಿ ಶಾಲಾ ಬಸ್ ಹೊರಟಿತ್ತು. ಅದರ ನೋಂದಣಿ ಸಂಖ್ಯೆ ಫಲಕವನ್ನು ಚಾಲಕ ಮರೆ ಮಾಚಿದ್ದ. ಅದನ್ನು ಗಮನಿಸಿದ್ದ ಸ್ಥಳೀಯರೊಬ್ಬರು, ಫೋಟೊ ತೆಗೆದು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರು: ಸೂಕ್ತ ನಿರ್ವಹಣೆ ಮಾಡದ ಹಿನ್ನೆಲೆ ಬೆಂಗಳೂರಿನ ಐತಿಹಾಸಿಕ ದೇಗುಲ ಬಸವನಗುಡಿಯಲ್ಲಿರುವ ದೊಡ್ಡ ಗಣೇಶ ದೇವಸ್ಥಾನದ ವಿಮಾನಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಕುರಿತಾಗಿ ಪತ್ರ ಬರೆದರೂ ಪುರಾತತ್ವ ಇಲಾಖೆ ಇನ್ನೂ ಕ್ರಮಕೈಗೊಂಡಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಆರೋಪಿಸಿದೆ. ಅಲ್ಲದೇ, ಮಳೆ ಏನಾದರೂ ಬಂದರೆ ಬಿಟ್ಟಿರುವ ಬಿರುಕು ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಬೇಗ ಗೋಪುರ ಸರಿಪಡಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.
ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಚಾಕುವಿನಿಂದ ಇರಿತಕ್ಕೊಳಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೃಥ್ವಿ ಸಿಂಗ್ ಅವರನ್ನು ನಿನ್ನೆ ವಿಜಯೇಂದ್ರ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಚನ್ನರಾಜ್ ಹಟ್ಟಿಹೊಳಿ ಅವರ ಗನ್ ಮ್ಯಾನ್ ಹಾಗೂ ಅವರ ಬಲಗೈ ಬಂಟ ಇಬ್ಬರೂ ಪೃಥ್ವಿ ಸಿಂಗ್ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಹಟ್ಟಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಹೀಗಾಗಿಯೇ ಹಗಲು ಹೊತ್ತಿನಲ್ಲಿ ಈ ರೀತಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದರು. ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವುದು ದುರಾದೃಷ್ಟಕರ ಸಂಗತಿ. ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆಗೆ…
ಭವಾನಿ ರೇವಣ್ಣ ಆಡಿದ ಮಾತುಗಳಿಂದ ಯಾರಿಗಾದರೂ ನೋವಾಗಿದ್ದರೆ ರಾಜ್ಯದ ಜನರಿಗೆ ಪತ್ನಿಯ ಪರವಾಗಿ ನಾನೇ ಕ್ಷಮೆ ಕೇಳುತ್ತೇನೆ ಎಂದು ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಹೆಚ್‌ಡಿ ರೇವಣ್ಣ, ಬೈಕ್ ಚಾಲಕನಿಗೆ ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು? ಭವಾನಿಯವರು ಏನೂ ಅಹಂಕಾರದ ಮಾತಾಡಿಲ್ಲ. ಭವಾನಿಯವರು ಯಾರದ್ದೋ ಸ್ನೇಹಿತರ ಕಾರಿನಲ್ಲಿ ಹೋಗಿದ್ದರು. ಅವರು ಅಪಘಾತ ಸಂಭವಿಸಿದಾಗ ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮ ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಿಲ್ಲ ಎಂದು ಹೇಳಿದರು. ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದರ ವೀಡಿಯೋವನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್‌ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಅದರಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಬೇಕಿದ್ದರೆ ಭವಾನಿ ಹತ್ತಿರನೂ ಕ್ಷಮೆ ಕೇಳಿಸೋಣ ಬಿಡಿ ಎಂದು ಹೇಳಿಕೆ ನೀಡಿದರು.