Author: admin

ಮೈಸೂರು: ಈ ಬಾರಿ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಇಂದು ಘೋಷಿಸಿದರು. ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ: ದಸರಾ ಅಕ್ಟೋಬರ್ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.

Read More

ಹೆಚ್ಚಿನವರು ಉನ್ನತ ವ್ಯಾಸಂಗಕ್ಕಾಗಿ ವಿದೇಶಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅವರಲ್ಲಿ ಹೆಚ್ಚಿನವರು ಭಾರತದಿಂದ ಬಂದವರು. 2023 ರಲ್ಲಿ ಮಾತ್ರ, ಯುಕೆ ಭಾರತೀಯರಿಗೆ ಮಾತ್ರ 1,42,848 ವಿದ್ಯಾರ್ಥಿ ವೀಸಾಗಳನ್ನು ನೀಡಿದೆ. ಯುಕೆಯಲ್ಲಿರುವ ವಿದೇಶಿ ವಿದ್ಯಾರ್ಥಿಗಳಲ್ಲಿ ಮೂರನೇ ಒಂದು ಭಾಗದಷ್ಟು ಭಾರತೀಯ ವಿದ್ಯಾರ್ಥಿಗಳು ಎಂದು ವರದಿಗಳು ಸೂಚಿಸುತ್ತವೆ. ಜೂನ್ 2022 ರಲ್ಲಿ, 92,965 ವಿದ್ಯಾರ್ಥಿ ವೀಸಾಗಳನ್ನು ಅನುಮೋದಿಸಲಾಗಿದೆ. ಈ ಬಾರಿ ಮತ್ತೆ ಹೆಚ್ಚಿದೆ. ಒಂದು ವರ್ಷದಲ್ಲಿ 54 ರಷ್ಟು ಹೆಚ್ಚಳವಾಗಿದೆ. ಎರಡನೇ ಸ್ಥಾನದಲ್ಲಿ ಚೀನಾದ ವಿದ್ಯಾರ್ಥಿಗಳು ಇದ್ದಾರೆ. ಒಟ್ಟು ವಿದೇಶಿ ವಿದ್ಯಾರ್ಥಿಗಳ ಪೈಕಿ ಶೇಕಡ 50ರಷ್ಟು ಮಂದಿ ಭಾರತ ಮತ್ತು ಚೀನಾದವರು. ಅವಲಂಬಿತ ವೀಸಾಗಳ ಸಂಖ್ಯೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. 43,552 ಜನರು ಅವಲಂಬಿತ ವೀಸಾದಲ್ಲಿದ್ದಾರೆ. ನೈಜೀರಿಯಾ ಮೊದಲ ಸ್ಥಾನದಲ್ಲಿದೆ. 67,516 ಜನರಿದ್ದಾರೆ. ಜೂನ್ 2019 ರಿಂದ ಭಾರತೀಯ ವಿದ್ಯಾರ್ಥಿಗಳಿಗೆ ಅನುದಾನದಲ್ಲಿ ಏಳು ಪಟ್ಟು ಹೆಚ್ಚಳವಾಗಿದೆ. ಇದಾದ ನಂತರವೇ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಈ ವರ್ಷದ ಜೂನ್‌ವರೆಗೆ ಒಟ್ಟು 4,98,626 ಅಧ್ಯಯನ ವೀಸಾಗಳನ್ನು ನೀಡಲಾಗಿದೆ.…

Read More

ಬೆಂಗಳೂರು: ಸಂಪೂರ್ಣ ಬಹುಮತ ಪಡೆದ ಸರ್ಕಾರ ಯಾವ ರೀತಿ ಅಡಳಿತ ಆರಂಭ ಮಾಡಿ ಯಾವ ರೀತಿ ದಿಕ್ಸೂಚಿ ನೀಡಬೆಕಾಗಿತ್ತು ಅದರ ಬದಲು ದಿಕ್ಕುತಪ್ಪಿದ ಸರ್ಕಾರ ಇದಾಗಿದೆ. ಸರ್ಕಾರ ಗೊಂದಲದಲ್ಲಿ ಸಿಲುಕಿ ಮಾತಿಗೆ ತಪ್ಪಿದ ಸರ್ಕಾರ ಇದಾಗಿದೆ ಎಂದು ಮಾಜಿ ಸಿಎಂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಸರ್ಕಾರವನ್ನ ಟೀಕಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣಕಾಸಿನ ವ್ಯವಸ್ಥೆಯನ್ನು ಹಳಿ ತಪ್ಪಿಸಿದೆ. ನಾವು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು ಇವರು ಬಂದ ಮೇಲೆ 8 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸುಮಾರು 35 ಸಾವಿರ ಕೋಟಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಒಟ್ಟು 45 ಸಾವಿರ ಕೋಟಿ ತೆರಿಗೆ ಮೂಲಕ ಸಂಗ್ರಹಿಸುವ ಅವಕಾಶ ಮಾಡಿಕೊಂಡು 12 ಸಾವಿರ ಕೋಟಿ ಡೆಪಸಿಟ್ ಹೆಚ್ಚಳ ಮಾಡಿಕೊಂಡಿದ್ದಾರೆ. ನಾವು ಕೋವಿಡ್ ನಂತರ ಸರ್ ಪ್ಲಸ್ ಬಜೆಟ್ ಮಾಡಿದ್ದೇವು. ಇವರು ಕೋವಿಡ್ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಾರಿಗೆ ನೌಕರರ ಸಂಬಳ ವಿಳಂಬವಾಗುತ್ತಿದೆ. ಇವರು ಬಂದ ಮೇಲೆ ಒಂದು ಕಿ.ಮೀ. ರಸ್ತೆಯನ್ನೂ…

Read More

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರೆಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸುಳಿವು ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ನಾಲ್ಕನೇ ಭರವಸೆಯಾಗಿರುವ ಗೃಹ ಲಕ್ಷ್ಮೀ ಯೋಜನೆ ನಾಳೆ ಜಾರಿಯಾಗುತ್ತಿದೆ. ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಯಾಗಲಿದೆ ಎಂದರು. ನಾಳೆ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಮೈಸೂರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದರು.

Read More

ಮೈಸೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ದೊರೆಯಲಿದ್ದು, ಏಕ ಕಾಲದಲ್ಲಿ ರಾಜ್ಯದ ಮನೆಯೊಡತಿಯರಿಗೆ ಯೋಜನೆ ಪಾವತಿಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ನಾಳೆಯ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ವಾಹನ ಸಂಚಾರ ನಿರ್ಬಂಧಿಸಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

Read More

ಮೈಸೂರು: ಸರ್ಕಾರ 100 ದಿನ ಪೂರೈಸಿದ ವಿಚಾರವಾಗಿ ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪ್ರಧಾನಿಗಳು ಕೂಡ ಗ್ಯಾರಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಎಂದರು. ಗೃಹಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Read More

ದೆಹಲಿ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇಡಿ ಸಹಾಯಕ ನಿರ್ದೇಶಕ ಪವನ್ ಖತ್ರಿ ಮತ್ತು ಕ್ಲಾರಿಡ್ಜ್ ಹೋಟೆಲ್ ಮುಖ್ಯಸ್ಥ ದೀಪಕ್ ಸಾಂಗ್ವಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿಂದೆ ಪವನ್ ಖತ್ರಿ ಅವರು ಅಮನದೀಪ್ ಅವರಿಂದ 5 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಇಡಿ ಪತ್ತೆ ಹಚ್ಚಿತ್ತು. ಇಡಿ ಕಚೇರಿಯ ಗುಮಾಸ್ತ ಕೂಡ ಆತನೊಂದಿಗೆ ಹಣ ತೆಗೆದುಕೊಂಡು ಹೋಗಿರುವುದು ಪತ್ತೆಯಾಗಿದೆ. ಇದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಮನದೀಪ್ ಸಿಂಗ್ ದಾಲ್ ಅವರಿಗೆ ಸಂಬಂಧಿಸಿದ ಪ್ರಕರಣವಾಗಿದೆ. ಅಮನದೀಪ್ ಅವರ ತಂದೆ ಬಿರೇಂದರ್ ಪಾಲ್ ಸಿಂಗ್ ಅವರು ಚಾರ್ಟರ್ಡ್ ಅಕೌಂಟೆಂಟ್ ಪ್ರವೀಣ್ ವಾಟ್ಸ್‌  ಗೆ 5 ಕೋಟಿ ರೂಪಾಯಿ ಪಾವತಿಸಿದ್ದಾರೆ ಮತ್ತು ಈ ಹಣವನ್ನು ಪವನ್ ಖಾತ್ರಿಗೆ ಹಸ್ತಾಂತರಿಸಲಾಗಿದೆ ಎಂದು ಇಡಿ ಪತ್ತೆ ಮಾಡಿದೆ. ಇಡಿ ಪ್ರಕರಣದ ಬಳಿಕ ಇದೀಗ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

Read More

ಬೆಂಗಳೂರು: ಡೇಟಿಂಗ್ ಆಪ್ ಮೂಲಕ ಸುಲಿಗೆ ಮಾಡ್ತಿದ್ದ ಇಬ್ಬರು ಆರೋಪಿಗಳನ್ನು ಹೆಚ್ ಎಸ್ಎಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ ಹಾಗೂ ನಾಗೇಶ್ ಬಂಧಿತ ಆರೋಪಿಗಳು. ಲೊಕ್ಯಾಂಟೋ ಆಪ್ ಮೂಲಕ ಹುಡುಗಿ ಹೆಸರಿಲ್ಲಿ ಕಾಲ್ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ, ನಾಗೇಶ್ ಬಂಧಿತರು. ಆಪ್ ಮೂಲಕ ಹುಡುಗಿ ಹೆಸರಿಲ್ಲಿ ಕಾಲ್ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

Read More

ಇಂದು ಮಣಿಪುರ ವಿಧಾನಸಭೆ ಅಧಿವೇಶನ ನಡೆಯಲಿದೆ. ಕುಕಿ ಶಾಸಕರು ಅಧಿವೇಶನ ಬಹಿಷ್ಕರಿಸುವುದಾಗಿ ಘೋಷಿಸಿ ಮುಂದೆ ಬಂದರು. ವಿಧಾನಸಭೆ ಕಲಾಪವನ್ನು ಮುಂದೂಡುವಂತೆ ಶಾಸಕರು ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಏತನ್ಮಧ್ಯೆ, ಸುರಕ್ಷಿತ ಆಶ್ರಯಕ್ಕಾಗಿ ಸರ್ಕಾರಿ ನೌಕರರ ಸಾಮೂಹಿಕ ವರ್ಗಾವಣೆ ಮುಂದುವರೆದಿದೆ. ವಿಧಾನಸಭೆ ಅಧಿವೇಶನದಿಂದ ತಮಗೆ ಭದ್ರತೆಯ ಸಮಸ್ಯೆ ಉಂಟಾಗುತ್ತಿದೆ ಎಂದು ಕುಕಿ ಶಾಸಕರು ಸೂಚಿಸಿ ಪತ್ರ ನೀಡಿದ್ದಾರೆ. ಇಂಫಾಲ ಪ್ರವೇಶಿಸಿ ವಿಧಾನಸಭೆ ಅಧಿವೇಶನವನ್ನು ಮುಂದೂಡುವಂತಿಲ್ಲ ಎಂಬ 10 ಮಂದಿ ಕುಕಿ ಶಾಸಕರ ಬೇಡಿಕೆಗೆ ಸರಕಾರದಿಂದ ಯಾವುದೇ ಅನುಕೂಲಕರ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಜನಪ್ರತಿನಿಧಿಗಳಲ್ಲದೆ ಸರ್ಕಾರಿ ನೌಕರರಿಗೂ ಭದ್ರತೆಯ ಭೀತಿ ಎದುರಾಗಿದೆ. ಕಳೆದ ಒಂದು ತಿಂಗಳಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಸರ್ಕಾರಿ ನೌಕರರು ವರ್ಗಾವಣೆಯನ್ನು ಖರೀದಿಸಿದ್ದಾರೆ. ಗಲಭೆ ಪೀಡಿತ ಮಣಿಪುರದಲ್ಲಿ ಸುರಕ್ಷಿತ ತಾಣಗಳ ಹುಡುಕಾಟದಲ್ಲಿ ಸರ್ಕಾರಿ ನೌಕರರು ಸ್ಥಳಾಂತರಕ್ಕೆ ಒತ್ತಾಯಿಸುತ್ತಿದ್ದಾರೆ. ಡಿಜಿಪಿ ಪಿ. ಡೌಗಲ್ ಮೇಲಿನ ದಾಳಿಯ ನಂತರ, ತ್ರಿಪುರಾ ಕೇಡರ್ ಐಪಿಎಸ್ ಅಧಿಕಾರಿ ರಾಜೀವ್ ಸಿಂಗ್ ಅವರನ್ನು ಮಣಿಪುರ…

Read More

ಬೆಂಗಳೂರು: ಬೈಕ್‌ ಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ನಂದಿನಿ ಲೇಔಟ್ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 3 ಲಕ್ಷ ರೂ. ಮೌಲ್ಯದ 7 ಬೈಕ್‌ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹಲವು ವರ್ಷಗಳಿಂದ ಬೈಕ್‌ ಗಳನ್ನು ಕದಿಯುತ್ತಿದ್ದ. ಬೇಗೂರು, ನೆಲಮಂಗಲ, ರಾಜಗೋಪಾಲ್ ನಗರಗಳಲ್ಲಿ ಕೃತ್ಯವೆಸಗಿದ್ದ. ಅಷ್ಟೇ ಅಲ್ಲದೆ ಜೈಲಿಗೆ ಹೋಗಿ ಬಂದು ಮತ್ತೆ ಕಳ್ಳತನ ಮುಂದುವರಿಸಿದ್ದ. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More