Author: admin

“ಮುಂದಿನ‌ 5 ವರ್ಷ ನಿಖಿಲ್ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ” ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್ ಗೆ ಹೇಳಿದ್ದೇನೆ. ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ. ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ 3 ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಬಂದಿವೆ. ಈಗಾಗಲೇ ನಿಖಿಲ್ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್ ತಲೆ ಕೊಟ್ಟ. ಸೋಲು, ಗೆಲವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ. ಹೆಚ್.ಡಿ.ದೇವೇಗೌಡರು, ನಾನು ಚುನಾವಣೆಯಲ್ಲಿ ಸೋತಿಲ್ವಾ? ಎಂದರು.

Read More

ಸ್ನೇಹಿತನೊಂದಿಗೆ ತೆರಳುತ್ತಿದ್ದ ಯುವತಿಯನ್ನು ನಿಂದಿಸಿದ್ದಲ್ಲದೇ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ ಲೋಡ್ ಮಾಡಿದ್ದ ಆರೋಪದಡಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೂರ್ವ ವಿಭಾಗದ ಸೈಬರ್ ಕೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ವಿದ್ಯಾರ್ಥಿಯ ವಿರುದ್ಧ 21 ವರ್ಷದ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಮುಂದಿನ ಬಾರಿಯೂ ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಮೋದಿ ನೇತೃತ್ವದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಜನವರಿ-ಫೆಬ್ರವರಿಯಲ್ಲಿ ಎಂಪಿ ಚುನಾವಣೆ ಘೋಷಣೆ ಆಗಲಿದೆ. ಕಲ್ಲಿದ್ದಲಿಗೆ ಸಂಬಂಧಿಸಿದ ಯೋಜನೆಗೆ ಪ್ರಸ್ತಾವನೆ ಕೊಡಿ. ಒಂದು ತಿಂಗಳಲ್ಲಿ ಇಲಾಖೆಯಿಂದ ಅನುದಾನ ನೀಡುತ್ತೇವೆ ಎಂದು ಐಐಟಿ ಘಟಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

Read More

ಕೋವಿಡ್ ಅಕ್ರಮದ ತನಿಖೆಗೆ ಆಯೋಗ ರಚನೆ ಮಾಡಿದ ವಿಚಾರವಾಗಿ ಮಾತನಾಡಿದ ಮಾಜಿ ಆರೋಗ್ಯ ಸಚಿವ ಕೆ ಸುಧಾಕರ್, ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿಯಂತ್ರಿಸಲು ಸಫಲ ಆಗಿತ್ತು. ಈಗ ಅಕ್ರಮ ಆಗಿದೆ ಅಂತಾ ಆರೋಪ‌ ಮಾಡಿ ತನಿಖೆಗೆ ಮುಂದಾಗಿದ್ದಾರೆ. ಇದು ರಾಜಕೀಯ ಪ್ರೇರಿತ ಎಂದರು. ಕೋವಿಡ್ ವಿಚಾರದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ಸಿಗರು ಸಹಕಾರ ಕೊಡಲಿಲ್ಲ. ಕೊವಿಡ್ ಇದ್ದಾಗ ಕಾಂಗ್ರೆಸ್ ನವರಿಗೆ ಸಾಮಾಜಿಕ‌ ಜವಾಬ್ದಾರಿ ಇರಲಿಲ್ಲ. ಆಗ ಪಾದಯಾತ್ರೆ ಮಾಡಿದವರ ವಿರುದ್ಧ ಪ್ರಕರಣ ಹಾಕಲಾಗಿತ್ತು. ಇವರ ಸರ್ಕಾರ ಬಂದ ನಂತರ ಆ ಕೇಸ್ ಗಳನ್ನೆಲ್ಲಾ ಹಿಂಪಡೆದಿದ್ದಾರೆ. ತ‌ನಿಖೆ ನಡೆಸುವ ಉದ್ದೇಶ ಇದ್ದಿದ್ದರೆ ಲೋಕಾಯುಕ್ತಕ್ಕೆ ಕೊಡಬಹುದಿತ್ತು ಎಂದರು.

Read More

ಬೆಂಗಳೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿದ್ದಾನೆ. ಜೋಸೆಫ್ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದು, ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೇಟಿಂಗ್ ಕೆಲಸ ಮಾಡುತ್ತಿದ್ದ ಜೋಸೆಫ್, ಕುಡಿತದ ಚಟಕ್ಕೆ ದಾಸನಾಗಿದ್ದನು. ಶೇಷಾದ್ರಿಪುರಂ ಮುಖ್ಯರಸ್ತೆಯ ಸ್ಲಂ ಬೋರ್ಡ್ ಆವರಣದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.

Read More

ಅನ್ಯ ಧರ್ಮದ ಹುಡುಗನ ಜೊತೆಗೆ ಹೋಗುತ್ತಿದ್ದ ಮುಸ್ಲಿಂ ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಬಂಗಾರಪೇಟೆ ಮೂಲದ ಜಾಕೀರ್ ಅಹಮ್ಮದ್ ಬಂಧಿತ ಆರೋಪಿ. ಅನ್ಯಧರ್ಮದ ಯುವಕನ ಬೈಕ್ ನಲ್ಲಿ ಕಂಪನಿಯೊಂದಕ್ಕೆ ಸಂದರ್ಶನ ನೀಡಲು ಹೋಗುತ್ತಿದ್ದ ವೇಳೆ ಆರೋಪಿ ಜಾಕೀರ್ ಮುಸ್ಲಿಂ ಯುವತಿಯನ್ನು ತಡೆದು ಬುರ್ಖಾ ತೆಗೆಯುವಂತೆ ಒತ್ತಾಯಿಸಿದ್ದ. ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದಕ್ಕೆ ಆರೋಪಿಯನ್ನು ಬಂಧಿಸಿದ್ದಾರೆ.

Read More

ಗೃಹಲಕ್ಷ್ಮೀ ಯೋಜನೆಗೆ  ಈವರೆಗೆ 1.11 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಲು ಕೊನೆ ದಿನಾಂಕ ಇಲ್ಲ. ಜನರು ಮತ್ತೆ ಆಶೀರ್ವಾದ ನೀಡಿದರೆ ಯೋಜನೆ ನಿರಂತರವಾಗಿ ಜಾರಿಯಾಗುತ್ತೆ. ಯಾವ ಸರ್ಕಾರ ಬಂದರೂ ಇಂತಹ ಜನಪ್ರಿಯ ಯೋಜನೆ ನಿಲ್ಲಲ್ಲ. 5 ಗ್ಯಾರಂಟಿಗಳಲ್ಲೇ ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಸದ್ದು ಮಾಡ್ತಿದೆ ಎಂದರು.

Read More

ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್‌ ಗೆ ಮರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ‌. ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Read More

ಬೆಂಗಳೂರು ಶಿವಾಜಿನಗರದ ಮನೆಯೊಂದರಿಂದ ಕಾಣೆಯಾಗಿದ್ದ ಹಕ್ಕಿ ತಳಿಯ ಕುರುಡು ಶ್ವಾನವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕಾವಲ್ ಬೈರಸಂದ್ರ ಮನೆಯೊಂದರಲ್ಲಿ ಶ್ವಾನ ಇರುವುದನ್ನು ಪತ್ತೆಹಚ್ಚಿದ ಪೊಲೀಸರು, ಶ್ವಾನವನ್ನು ರಕ್ಷಿಸಿ ಮಾಲೀಕರಿಗೆ ಒಪ್ಪಿಸಿದ್ದಾರೆ. ಶಿವಾಜಿನಗರದ ರಮ್ಯಾ ಎಂಬವರ ಮನೆಯಲ್ಲಿ ಸಾಕಿದ್ದ ಹಕ್ಕಿ ತಳಿಯ ಶ್ವಾನ ಆ. 22 ರಂದು ಕಾಣೆಯಾಗಿತ್ತು. ಈ ಸಂಬಂಧ ಕಮರ್ಷಿಯಲ್ ಠಾಣೆಗೆ ರಮ್ಯಾ ದೂರು ನೀಡಿದ್ದರು.

Read More

ಬೆಂಗಳೂರು: ನಾಯಿ ಬೆನ್ನಟ್ಟಿದ್ದ ಕಾರಣಕ್ಕೆ ವೃದ್ಧರೊಬ್ಬರ ಜೊತೆ ಜಗಳ ತೆಗೆದು ಚಾಕುವಿನಿಂದ ಇರಿಯಲಾಗಿದ್ದು, ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜಾಜಿನಗರ ನಿವಾಸಿ ಬಾಲಸುಬ್ರಹ್ಮಣ್ಯ (62) ಅವರು ಚಾಕು ಇರಿತದಿಂದ ಗಾಯಗೊಂಡಿದ್ದಾರೆ. ‘ಕೃತ್ಯ ಎಸಗಿದ್ದ ಆರೋಪದಡಿ ಹುಲಿಯೂರು ದುರ್ಗದ ಎಚ್. ರಾಜುನನ್ನು (57) ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read More