Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಜನಸಂಖ್ಯೆ ನಿಯಂತ್ರಣದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಹಿಳಾ ವಿರೋಧಿ ಹೇಳಿಕೆಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ. ಮಹಿಳೆಯರ ವಿರುದ್ಧದ ಇಂತಹ ಹೇಳಿಕೆಗಳು ರಾಷ್ಟ್ರವನ್ನು ಅವಮಾನಿಸಿದಂತೆ ಎಂದು ಮೋದಿ ಹೇಳಿದರು. ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಅವರು ಮಾತನಾಡಿದರು. ಪ್ರಧಾನಿಯವರು ನಿತೀಶ್ ಕುಮಾರ್ ಅವರನ್ನು ತೀವ್ರ ಭಾಷೆಯಲ್ಲಿ ಟೀಕಿಸಿದರು ಮತ್ತು ಈ ವಿಷಯದ ಬಗ್ಗೆ ಪ್ರತಿಪಕ್ಷಗಳ ಮೌನವನ್ನು ಪ್ರಶ್ನಿಸಿದರು. ನಿನ್ನೆ ಬಿಹಾರ ವಿಧಾನಸಭೆಯೊಳಗೆ ‘ಭಾರತ’ ಮೈತ್ರಿಕೂಟದ ಪ್ರಮುಖ ನಾಯಕರೊಬ್ಬರು ಮಹಿಳೆಯರನ್ನು ಅವಮಾನಿಸಿದ್ದಾರೆ. ಪ್ರತಿಪಕ್ಷಗಳ ಮೈತ್ರಿಕೂಟದ ಒಬ್ಬ ನಾಯಕನೂ ಇದರ ವಿರುದ್ಧ ಒಂದೇ ಒಂದು ಮಾತನ್ನೂ ಆಡಲಿಲ್ಲ. ನಿಮಗೆ ನಾಚಿಕೆಯಾಗುವುದಿಲ್ಲವೇ? ಸ್ತ್ರೀದ್ವೇಷಿಗಳು ನಿಮಗೆ ಏನಾದರೂ ಒಳ್ಳೆಯದನ್ನು ಮಾಡಬಹುದೇ? – ಮೋದಿ ಕೇಳಿದರು. ನಮ್ಮ ತಾಯಂದಿರು ಮತ್ತು ಸಹೋದರಿಯರ ಬಗ್ಗೆ ಇಂತಹ ಕೆಟ್ಟ ಮನೋಭಾವವನ್ನು ಹೊಂದಿರುವವರು ದೇಶವನ್ನು ಅವಮಾನಿಸುತ್ತಿದ್ದಾರೆ, ನೀವು ಎಷ್ಟು ಕೆಳಮಟ್ಟಕ್ಕೆ ಹೋಗುತ್ತೀರಿ ಎಂದು ಅವರು ಹೇಳಿದರು. ಬಿಹಾರದ ಫಲವತ್ತತೆ ದರವು 4.2 ರಿಂದ 2.9 ಕ್ಕೆ ಇಳಿಯಲು ಕಾರಣವನ್ನು ವಿವರಿಸುವಾಗ…
ರಾಣೆಬೆನ್ನೂರಿನ ಅಂಧರ ಜೀವ ಬೆಳಕು ಟ್ರಸ್ಟ್ ಹತ್ತಾರು ವರ್ಷಗಳಿಂದ ಅಂಧ ಮಕ್ಕಳ ಭವಿಷ್ಯ ರೂಪಿಸುತ್ತಿದೆ. ಅಂಧರ ಜೀವ ಬೆಳಕು ಅಂಧರ ಶಾಲೆಯಲ್ಲಿ ವಾರ್ಷಿಕವಾಗಿ 30 ಜನ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಪ್ರಸ್ತುತ 5 ಜನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆಗೆ ಧನ ಸಹಾಯದ ಅವಶ್ಯಕತೆ ಇದ್ದು ದಾನಿಗಳ ಸಹಾಯದ ನಿರೀಕ್ಷೆ ಯಲ್ಲಿದೆ ಅಂಧರ ಜೀವ ಬೆಳಕು ಸಂಸ್ಥೆ. ಪ್ರತಿ ವಿದ್ಯಾರ್ಥಿಗೆ ವಾರ್ಷಿಕವಾಗಿ ಇಪ್ಪತ್ತು ಸಾವಿರ ಶೈಕ್ಷಣಿಕ ವೆಚ್ಚ ಖರ್ಚಾಗುತ್ತಿದ್ದು ಸಹೃದಯಿ ದಾನಿಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಧನ ಸಹಾಯ ಮಾಡಬೇಕೆಂದು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ನಾಗನಗೌಡ ಬೆಳ್ಳೂಳ್ಳಿ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ-+91 95359 51112
ಪಶ್ಚಿಮ ಬಂಗಾಳದಲ್ಲಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಕೈಗಳನ್ನು ಬಟ್ಟೆಯಿಂದ ಕಟ್ಟಿ ನೇಣು ಬಿಗಿದುಕೊಂಡಿದ್ದರು. ಈ ಹತ್ಯೆಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸದಸ್ಯರ ಕೈವಾಡವಿದೆ ಎಂದು ಆರೋಪಿಸಿ ಬಿಜೆಪಿ ಮುಂದೆ ಬಂದಿದ್ದು, ಸಿಬಿಐ ತನಿಖೆಗೆ ಆಗ್ರಹಿಸಿದೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಮುಖಂಡ ಸುಭದೀಪ್ ಮಿಶ್ರಾ ಅಲಿಯಾಸ್ ದೀಪು ಮಿಶ್ರಾ ಮೃತದೇಹ ನಿಧಿರಾಂಪುರ ಗ್ರಾಮದಲ್ಲಿ ಪತ್ತೆಯಾಗಿದೆ. ಏಳು ದಿನಗಳ ಹಿಂದೆ ಮನೆ ಬಿಟ್ಟು ಬೇರೆಡೆ ವಾಸ ಆರಂಭಿಸಿದ್ದ. ಸುಭದೀಪ್ ಮಂಗಳವಾರ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಸುಭದೀಪ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಕೊಲೆಯ ಹಿಂದೆ ಮಹಿಳೆಯ ಕುಟುಂಬದ ಸದಸ್ಯರ ಕೈವಾಡವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದೇ ವೇಳೆ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲು ಮುಂದಾದಾಗ ಸ್ಥಳೀಯರು ಪ್ರತಿಭಟನೆ ನಡೆಸಿ ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಸುಭಾದೀಪ್ ಅವರ ಸಾವು ರಾಜಕೀಯ ಕೊಲೆ ಎಂದು…
ಹರಿಯಾಣದ ಗುರುಗ್ರಾಮ್ ನಲ್ಲಿ ದೆಹಲಿ-ಜೈಪುರ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಘಟಕಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿಡಿಯೋ ಹರಿದಾಡುತ್ತಿದೆ. ಬಸ್ಸಿನಿಂದ ಜ್ವಾಲೆಗಳು ಬರುತ್ತಿದ್ದವು. ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ. ಎಸಿಪಿ ವರುಣ್ ದಹಿಯಾ ಅವರು ಸ್ಲೀಪರ್ ಬಸ್ ನಿಂದ ಎರಡು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಹಲವಾರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.
ತುಮಕೂರು: ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ. ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತ ದುರ್ದೈವಿಗಳು. ಮೃತರು ಗಂಗಾವತಿ ಮೂಲದವರು ಅನ್ನೋ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಇನ್ನೊರ್ವನಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ, ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಯಲಿರುವ ಪ್ರತಿಭಟನೆ ನಡೆಯುತ್ತಿದೆ. ಇಲ್ಲಿಗೆ ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ಕಾರ್ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ನಡೆದಿದೆ.…
ರಿಪೇರಿ ಮಾಡುವ ವೇಳೆ ವಿಮಾನದಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ರಾಮಪ್ರಕಾಶ್ ಸಿಂಗ್(56) ಏರ್ ಇಂಡಿಯಾದಲ್ಲಿ ಹಿರಿಯ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ವಿಮಾನ ರಿಪೇರಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿಮಾನದಿಂದ ಕೆಳಗೆ ಬಿದ್ದಿದ್ದಾರೆ. ಆತನ ತಲೆಗೆ ತೀವ್ರ ಗಾಯಗಳಾಗಿವೆ. ಅಲ್ಲಿದ್ದ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ರಾಜ್ಯದ ಔರೈಯಾ ಜಿಲ್ಲೆಯ ನವೀನ್ ಬಸ್ತಿ ಪಶ್ಚಿಮ ನಿವಾಸಿ ಪ್ರಬಲ್ ಪ್ರತಾಪ್ ಸಿಂಗ್ ಅವರ ಪುತ್ರಿ ಅಂಜಲಿ(20) ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ತಕ್ಷಣವೇ ಆಕೆಯನ್ನು ಸಿಎಚ್ ಸಿಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಶವವನ್ನು ಮನೆಗೆ ಕೊಂಡೊಯ್ಯಲು ವಾಹನ ಇಲ್ಲದ ಕಾರಣ ಮೃತರ ಅಣ್ಣ ಬೈಕ್ ನಲ್ಲಿ ಶವವನ್ನು ಮನೆಗೆ ಸಾಗಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ನೈಟ್ರಸ್ ಆಕ್ಸೆಡ್ ನ ಸಣ್ಣ ಡಬ್ಬಿಗಳ ಮಾರಾಟದಲ್ಲಿ ಏರಿಕೆಯ ನಂತರ, ಯುನೈಟೆಡ್ ಕಿಂಗಡಮ್ ನಗುವ ಅನಿಲವನ್ನು ನಿಷೇಧಿಸಿದೆ. ಯುವಕರು ಮೋಜಿಗಾಗಿ ಈ ನಗುವ ಅನಿಲವನ್ನು ವೇಗವಾಗಿ ಒಳಗಡೆ ಎಳೆದುಕೊಳ್ಳುತ್ತಿದ್ದು, ಬ್ರಿಟನ್‌ನಲ್ಲಿ ಲಾಫಿಂಗ್ ಗ್ಯಾಸ್ ಹೊಂದುವುದು ಕಾನೂನುಬಾಹಿರವಾಗಿದೆ. ಬುಧವಾರದಿಂದ ಈ ಹೊಸ ಕಾನೂನನ್ನು ಜಾರಿಗೆ ತರಲಾಗಿದ್ದು, ಪುನರಾವರ್ತಿತ ಅಪರಾಧಿಗಳಿಗೆ ಎರಡು ವರ್ಷಗಳವರೆಗೆ ಮತ್ತು ಡೀಲರ್ ಗಳಿಗೆ 14 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಜೆಡಿಎಸ್ ನ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹಾಸನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ H.D.ಕುಮಾರಸ್ವಾಮಿ ಹೇಳಿದರು. ನಿನ್ನೆ ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಶಾಸಕ ಶರಣಗೌಡ ಕಂದಕೂರ್ ಭಾಗಿಯಾಗಿರಲಿಲ್ಲ. ಕಂದಕೂರ್ ನಮ್ಮ ಮನೆಯ ಮಗ, ಅವರಲ್ಲಿ ಸ್ವಲ್ಪ ಗೊಂದಲ ಇದೆ. ಅವರನ್ನು ಕರೆದು ಮಾತನಾಡ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಮ್ಮ ಶಾಸಕರ ಮೇಲೆ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್ ಆಮಿಷಕ್ಕೆ ಒಳಗಾಗಿ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ಎಂದರು.
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಬಿಡಬ್ಲ್ಯು ಎಸ್ ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು ಮಾಹಿತಿ ಪಡೆದು ಕೊಂಡರು. ಗೃಹಲಕ್ಷ್ಮಿ ಯೋಜನೆ ಕುರಿತು ಆಗಿರುವ ತಾಂತ್ರಿಕ ದೋಷಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಸಿಡಿಪಿಒಗಳಿಗೆ ಸೂಚನೆ ನೀಡಿದರು. ತಾಂತ್ರಿಕ ದೋಷ, ಸಿಬ್ಬಂದಿಗಳ ತೊಡಕಿನ ಕುರಿತು ಪರಿಶೀಲನೆ ನಡೆಸಿದರು. ಶೇಕಡ 95 ರಷ್ಟು ಯಶಸ್ವಿ: ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ…