Subscribe to Updates
Get the latest creative news from FooBar about art, design and business.
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
- ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
Author: admin
ಹಾಸನ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್, ನ್ಯಾಯಾಲಯವಷ್ಟೇ ಪ್ರಕರಣದ ಮರು ತನಿಖೆಗೆ ಆದೇಶಿಸಬಹುದು ಎಂದಿದ್ದಾರೆ. ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವರು, ಸಿಬಿಐ ತನಿಖೆಯ ಬಳಿಕವೂ ಇನ್ನೂ ಬಾಕಿ ಏನು ಉಳಿಯಲು ಸಾಧ್ಯ? ಈ ಹಂತದಲ್ಲಿ ರಾಜ್ಯ ಸರ್ಕಾರದ ನಿಲುವಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮರು ತನಿಖೆಗೆ ಆಗ್ರಹಿಸುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. 2012ರಲ್ಲಿ ಧರ್ಮಸ್ಥಳದ ಹೊರವಲಯದಲ್ಲಿ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ 17 ವರ್ಷದ ಯುವತಿ ಸೌಜನ್ಯಾಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಲಾಗಿತ್ತು. ಅಂದಿನ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.
ಚಂದಿರನ ಅಂಗಳದ ಸಂಚರಿಸುತ್ತಿರುವ ಚಂದ್ರಯಾನ-3 ಯೋಜನೆಯ ಪ್ರಗ್ಯಾನ್ ರೋವರ್ ಗೆ ನಾಲ್ಕು ಮೀಟರ್ ವ್ಯಾಸದ ದೊಡ್ಡ ಕುಳಿಯೊಂದು ಎದುರಾಗಿದೆ ಎಂದು ಇಸ್ರೋ ಸೋಮವಾರ ತಿಳಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಇಸ್ರೋ, “ಚಂದ್ರಯಾನ-3 ಮಿಷನ್: ಆಗಸ್ಟ್ 27, 2023 ರಂದು ರೋವರ್ ಗೆ ತನ್ನ ಸ್ಥಳದಿಂದ 3 ಮೀಟರ್ ದೂರದಲ್ಲಿ 4 ಮೀಟರ್ ವ್ಯಾಸದ ಕುಳಿ ಇರುವುದನ್ನು ಗುರುತಿಸಿದೆ. ಹೀಗಾಗಿ, ರೋವರ್ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ. ಇದೀಗ ರೋವರ್ ಸುರಕ್ಷಿತವಾಗಿ ಹೊಸ ಹಾದಿಯಲ್ಲಿ ಸಾಗುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಇಂದು ಮಧ್ಯಾಹ್ನ ಇಸ್ರೋ ನಿಯಂತ್ರಣ ಕೊಠಡಿಗೆ ಪ್ರಗ್ಯಾನ್ ರೋವರ್ ತನಗೆ ಗುಂಡಿಯೊಂದು ಎದುರಾಗಿರುವ ಕುರಿತು ಮಾಹಿತಿ ನೀಡಿತ್ತು. ಆ ನಂತರ ಸಕ್ರಿಯರಾದ ತಜ್ಞರ ತಂಡ ರೋವರ್ ಗೆ ಹೊಸ ಮಾರ್ಗವನ್ನು ಸೂಚಿಸಿದೆ. ನಂತರ ರೋವರ್ ನ ಬದಲಾದ ಮಾರ್ಗದ ಫೋಟೋ ಸಮೇತ ಇಸ್ರೋ ಸಾರ್ವಜನಿಕರಿಗೆ ಮಾಹಿತಿ ನೀಡಿದೆ.
ಶ್ರೀಲಂಕಾ ಪ್ರಜೆಗಳ ಅಕ್ರಮ ಪ್ರವೇಶ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಪ್ರಮುಖ ಆರೋಪಿ ಜಲಾಲ್ ನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಓಮನ್ ದೇಶಕ್ಕೆ ಹೋಗಿರುವ ಜಲಾನ್, 1.50 ಲಕ್ಷ ನೀಡಿ ಪಾಸ್ ಪೋರ್ಟ್ ಪಡೆದುಕೊಂಡಿದ್ದನೆಂಬ ಸಂಗತಿ ಪತ್ತೆ ಮಾಡಿದ್ದಾರೆ. ಶ್ರೀಲಂಕಾದ ಜಲಾಲ್ ಅಲಿಯಾಸ್ ಸಿದ್ದಿಕಿ, ಡ್ರಗ್ಸ್ ಪೆಡ್ಲರ್. ಜೊತೆಗೆ, ಅಪರಾಧ ಹಿನ್ನೆಲೆಯುಳ್ಳವ. ಜೈಲಿನಿಂದ ಪರಾರಿಯಾಗಿದ್ದ ಈತ, ನಕಲಿ ದಾಖಲೆ ನೀಡಿ ಪಾಸ್ ಪೋರ್ಟ್ ಪಡೆದು ಓಮನ್ ದೇಶಕ್ಕೆ ಹೋಗಿದ್ದಾನೆ.
ಆನ್ ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಡೆಸುತ್ತಿದ್ದ ವಿವಿಧ ಕಂಪನಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ವ್ಯಕ್ತಿಗಳಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿದ್ದ 5. 87 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಆನ್ ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಸೇರಿದಂತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಡಿಜಿಜಿಐ ಕಚೇರಿಗೆ ಬಂದ ದೂರಿನನ್ವಯ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು: ಗಣೇಶ ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗಲಾಟೆ ನಡೆದಿದೆ. ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಗಲಾಟೆ ನಡೆದಿದ್ದು, ಅಜಿತ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದ್ದು, ಆರೋಪಿ ಸುಮನ್ ಚಾಕುವಿನಿಂದ ಅಜಿತ್ ಎದೆ, ಕುತ್ತಿಗೆ, ಬೆನ್ನಿಗೆ ಇರಿದಿದ್ದಾನೆ. ಹಲ್ಲೆಗೊಳಗಾದ ಅಜಿತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸುಮನ್ ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಲೋಕಸಭಾ ಚುನಾವಣೆಗೆ ನನ್ನದು ಯಾವ ಬೇಡಿಕೆ ಇಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷ ಸೂಚಿಸಿದರೆ ನಾನು ಅಭ್ಯರ್ಥಿಯಾಗುತ್ತೇನೆ. ಪಕ್ಷದ ಮಾತನ್ನು ನಾನು ಕೇಳಲೇಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲಬೇಕು. ವಿಧಾನಸಭಾ ಚುನಾವಣೆಯಲ್ಲಿ ನಮ್ಮನ್ನ ಗೆಲ್ಲಿಸಿದ್ದಾರೆ. ಬಿಜೆಪಿ ದುರಾಡಳಿತ ನೋಡಿ ಬೇಸತ್ತು ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಗ್ಯಾರೆಂಟಿ ಯೋಜನೆಗಳನ್ನ ಜಾರಿಗೊಳಿಸುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲೋಕೆ ತಂತ್ರಗಾರಿಕೆ ಮಾಡಬೇಕು ಎಂದರು. ಪ್ರತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿವೆ. ಅಧಿಕೃತವಾಗಿ ಅಥವಾ ಪರೋಕ್ಷವಾಗಿ ಮೈತ್ರಿ ಮಾಡಿಕೊಂಡಿರುತ್ತಾರೆ. 2018 ಹಾಗೂ 2023ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರು. ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಎದುರಿಸುತ್ತೇವೆ ಎಂದು ಹೇಳಿದರು.
ಬೆಂಗಳೂರು: ಪೇಂಟ್ ಕೆಲಸಕ್ಕೆ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನುಬಸವನಗುಡಿಯ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲಕ ಉಮೇಶ್ ಪ್ರಸಾದ್ ಬಂಧಿತರು. ಪೇಂಟ್ ಮಾಡಲು ಮನೆಗೆ ಬಂದಿದ್ದ ವೇಳೆ ಮನೆ ಮಾಲೀಕರ ಕಣ್ಣು ತಪ್ಪಿಸಿ ಕಬೋರ್ಡ್ ನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಉಮೇಶ್ ಜಾಧವ್. ಆನಂತರ ದೂರಿನ ಆಧಾರದ ಮೇಲೆ ಉಮೇಶ್ ಕದ್ದಿರುವುದು ಬೆಳಕಿಗೆ ಬಂದಿದ್ದು, ಬಂಧಿತನಿಂದ 6 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಹುಬ್ಬಳ್ಳಿ: ಮೊದಲು ಕಾಲರಾ, ಟಿಬಿ ಹೀಗೆ ಸಾಂಕ್ರಾಮಿಕ ರೋಗಗಳಿಂದ ಜನ ಸಾವನ್ನಪ್ಪುತ್ತಿದ್ದರು. ಆದರೆ ಈಗ ಆ ಸಾಂಕ್ರಾಮಿಕ ರೋಗಗಳಿಂದ ಜನರಿಗೆ ಸಮಸ್ಯೆಯಾಗಿದೆ. ಇದನ್ನು ನಿಯಂತ್ರಿಸಲು ಇಲಾಖೆಯಿಂದ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕೆಲ್ಲ ಕಾರಣ ನಮ್ಮ ಜೀವನ ಶೈಲಿ, ಜೆನೆಟಿಕ್ ಸಮಸ್ಯೆ ಕಾರಣ. ನಮ್ಮ ಇಲಾಖೆಯೇ ಅವರ ಹತ್ರ ಹೋಗುವ ಯೋಜನೆ ರೂಪಿಸಿದ್ದೇವೆ. ಮೊಬೈಲ್ ಯುನಿಟ್ ಮಾಡುವ ಯೋಚನೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರು: ಕೇಂದ್ರ ವಾಣಿಜ್ಯ ಪ್ರದೇಶದಲ್ಲಿರುವ (ಸಿಬಿಡಿ) ಹಲವು ಪಬ್ ಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ಶನಿವಾರ ಮಧ್ಯ ರಾತ್ರಿ ದಾಳಿ ಮಾಡಿದ್ದು, ನಿಯಮ ಉಲ್ಲಂಘನೆ ಆರೋಪದಡಿ 20 ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘ಚರ್ಚ್‌ಸ್ಟ್ರೀಟ್, ಎಂ. ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಸುತ್ತಮುತ್ತಲಿನ ಹಲವು ಪಬ್ ಗಳಿಂದ ನಿಯಮ ಉಲ್ಲಂಘನೆ ಆಗುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ವಿಶೇಷ ತಂಡಗಳನ್ನು ರಚಿಸಿ, ಎಲ್ಲ ಪಬ್‌ಗಳ ಮೇಲೆ ದಾಳಿ ಮಾಡಿ ಪರಿಶೀಲಿಸಲಾಯಿತು’ ಎಂದು ಪೊಲೀಸರು ಹೇಳಿದರು.
ದಾವಣಗೆರೆ: ನಗರದ ಉಪಕಾರಾಗೃಹ ಗೋಡೆ ಮೇಲಿಂದ ಜಿಗಿದು ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾಗಿದ್ದಾನೆ. ಪರಾರಿ ಆಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಸಂತ್ (23) ಪರಾರಿಯಾದ ಆರೋಪಿ. ಕಾಲಿಗೆ ಪೆಟ್ಟಾದರು ಎಲ್ಲಿಯೂ ಕೂರದೆ, ಕುಂಟುತ್ತಲೇ ಓಡಿ ಹೋಗಿ ಆಟೋ ಹತ್ತಿ ಎಸ್ಕೇಪ್ ಆಗಿದ್ದಾನೆ. ನಗರದ ಹೊರವಲಯದ ಕರೂರು ನಿವಾಸಿಯಾಗಿದ್ದಾನೆ. ಈತ ಆಟೋ ಚಾಲಕನಾಗಿದ್ದು, ಈತನ ವಿರುದ್ಧ ಎರಡು ದಿನಗಳ ಹಿಂದೆ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.