Author: admin

ತುರುವೇಕೆರೆ: ನಮ್ಮ ಕ್ಷೇತ್ರಕ್ಕೆ ಮಂಜೂರಾಗಿದ್ದ ಸುಮಾರು 3,000 ಕ್ಕೂ ಹೆಚ್ಚು ಮನೆಗಳನ್ನು ಕುಣಿಗಲ್ ಕ್ಷೇತ್ರದ ಶಾಸಕ ರಂಗನಾಥ್ ತಮ್ಮ ಪ್ರಭಾವವನ್ನು ಬಳಸಿ ಕುಣಿಗಲ್ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ, ಎಂದು ತುರುವೇಕೆರೆ ಕ್ಷೇತ್ರದ ಶಾಸಕ ನೇರ ಆರೋಪ ಮಾಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಣಿಗಲ್ ಶಾಸಕರು ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡು ತಮ್ಮ ಕ್ಷೇತ್ರದ ಜನತೆಗೆ ದ್ರೋಹವನ್ನು ಮಾಡಿದ್ದಾರೆ ಹಾಗೂ ಅವರ ಈ ಕೀಳು ಮಟ್ಟದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಧಿಕಾರಿಗಳ ಹಾಗೂ ಸರ್ಕಾರಿ ನೌಕರರ ವರ್ಗಾವಣೆಯನ್ನು ದಂಧೆಯನ್ನಾಗಿ ಮಾಡಿಕೊಂಡಿದ್ದು ಅದರಂತೆ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜುರವರು ನಮ್ಮ ಕ್ಷೇತ್ರದ ಅಧಿಕಾರಿಗಳ ವರ್ಗಾವಣೆಯ ದಂಧೆಯಲ್ಲಿ ಮುಳುಗಿದ್ದಾರೆ. ನನ್ನ ಕ್ಷೇತ್ರದ ಸಿ.ಎಸ್.ಪುರ ಪೊಲೀಸ್ ಠಾಣೆಯ ಪಿಎಸ್ ಐ ಇಬ್ಬರನ್ನು ಅವಧಿಗೂ ಮುನ್ನವೇ ವರ್ಗಾವಣೆ ಮಾಡಿಸಿ ಹಾಗೂ ತುರುವೇಕೆರೆ ಠಾಣೆಯ ಪೇದೆಗಳನ್ನು ಸಹ ಅವಧಿಗೂ ಮುನ್ನವೇ ವರ್ಗಾವಣೆಗೊಂಡು ಏಳರಿಂದ ಎಂಟು…

Read More

ಬೆಂಗಳೂರು: ಪಾನಮತ್ತ ಚಾಲಕನೊಬ್ಬ ಲಾರಿಯನ್ನು ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತವನ್ನುಂಟು ಮಾಡಿದ್ದು, ಬೈಕ್ ಸವಾರ ನೇಮಿರಾಜ್ (35) ಮೃತಪಟ್ಟಿದ್ದಾರೆ. ಕಲ್ಯಾಣ ನಗರದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿರುವ ಅಪಘಾತದಲ್ಲಿ ಬೈಕ್, ಕಾರು ಸೇರಿ ಎಂಟು ವಾಹನಗಳು ಜಖಂಗೊಂಡಿವೆ. ಅಪಘಾತಕ್ಕೆ ಕಾರಣವಾಗಿರುವ ಲಾರಿ ಚಾಲಕ ಹಿಂದೂಪುರದ ಚಂದ್ರಶೇಖರ್‌ ನನ್ನು (37) ಬಂಧಿಸಲಾಗಿದೆ. ಲಾರಿ ಜಪ್ತಿ ಮಾಡಲಾಗಿದೆ ಎಂದು ಬಾಣಸವಾಡಿ ಸಂಚಾರ ಪೊಲೀಸರು ಹೇಳಿದರು.

Read More

ಬೆಂಗಳೂರು: ಪ್ರೀತಿಸಿದ ಯುವಕನಿಂದಲೇ ಯುವತಿ ಹತ್ಯೆಯಾದ ಘಟನೆ ಶನಿವಾರ ಸಂಜೆ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್‌ ನಲ್ಲಿ ನಡೆದಿದೆ. ಕುಕ್ಕರ್ ನಿಂದ ತಲೆಗೆ ಹೊಡೆದು ಕೇರಳ ಮೂಲದ ದೇವಾ (24) ಎಂಬಾಕೆಯನ್ನ ಆಕೆಯ ಪ್ರಿಯಕರ ವೈಷ್ಣವ್ (24) ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಬೇಗೂರು ಠಾಣಾ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಆಗ್ನೆಯ ವಿಭಾಗದ ಡಿಸಿಪಿ ಸಿ ಕೆ ಬಾಬಾ ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು

Read More

ಕೋಲಾರ: ತಂದೆಯಿಂದಲೇ ಹೆತ್ತ ಮಗಳ ಕೊಲೆಯಾಗಿರುವ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ. ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮಗಳನ್ನು ಕೊಲೆ ಮಾಡಲಾಗಿದೆ. ಯುವತಿಗೆ ಎಷ್ಟೇ ಬುದ್ದಿವಾದ ಹೇಳಿದರೂ ಕೇಳದೇ ಹೋಗಿದ್ದರಿಂದ ಆಕೆಯ ತಂದೆ ವೆಂಕಟೇಶ ಗೌಡ ಮಗಳ ಹತ್ಯೆ ನಡೆಸಿದ್ದಾನೆ. ಆಗಸ್ಟ್  25 ರಂದು ಮಗಳ ಹತ್ಯೆ ನಡೆಸಿದ ಬಳಿಕ, ಸದ್ದಿಲ್ಲದೆ ಹೆತ್ತವರು ಆಕೆಯ ಅಂತ್ಯಸಂಸ್ಕಾರ ಮುಗಿಸಿದ್ದರು. ಬಳಿಕ ಊರಿನಲ್ಲಿ ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸುದ್ದಿ ಹಬ್ಬಿದ್ದರಿಂದ ಪೊಲೀಸರು ಆಕೆಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮರ್ಯಾದಾ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಭಾನುವಾರ ಬೆಳಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಕೊಲೆಯಾದ ಯುವತಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರ ವೈದ್ಯರಿಗೆ ವಾಟ್ಸ್‌ ಆ್ಯಪ್‌ ನಲ್ಲಿ ಕರೆ ಮಾಡಿದ್ದ ಯುವತಿಯೊಬ್ಬರು 21 ಸೆಕೆಂಡ್ ಬೆತ್ತಲೆ ವೀಡಿಯೊ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋರಮಂಗಲ ನಿವಾಸಿಯಾಗಿರುವ 58 ವರ್ಷ ವಯಸ್ಸಿನ ವೈದ್ಯರೊಬ್ಬರು ಇತ್ತೀಚೆಗೆ ದೂರು ನೀಡಿದ್ದರು. ಅಪರಿಚಿತರ ವಿರುದ್ಧ ಎಫ್‌ ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ 5000 ಕೋಟಿ‌ ರೂ. ಖರ್ಚು ಮಾಡುತ್ತಾರೆ. ಬಿಜೆಪಿಯ ಎಲ್ಲ ಹಗರಣಗಳನ್ನು ತನಿಖೆ ಮಾಡುತ್ತೇವೆ. 100 ಪರ್ಸೆಂಟ್ ತನಿಖೆ ಮಾಡುತ್ತೇವೆ. ಮಾಜಿ ಪ್ರಧಾನಿ ಜವಹರಲಾಲ್ ನೆಹರು ಕಾಲದಲ್ಲಿ ಈ ದೇಶದ ಬಜೆಟ್ ಎಷ್ಟಿತ್ತು. ಇವತ್ತು ಇವರು ನೆಹರುಗೆ ಬೈತಾರೆ. ನಮ್ಮ‌ ದೇಶ ಫುಟ್ ಪಾತ್ ಮೇಲೆ ಇತ್ತು. ಚಪ್ಪಲಿ ಹಾಕಲಾಗದ ಕಾಲದಲ್ಲಿ ನೆಹರು ಇಸ್ರೋ ನಿರ್ಮಿಸಿದ್ದಾರೆ ಎಂದು ಸಂತೋಷ್ ಲಾಡ್ ಹೇಳಿದರು.

Read More

ಬೆಂಗಳೂರು: ಶಕ್ತಿಯೋಜನೆಯಿಂದಾಗಿ ರಾಜ್ಯದ ದೇಗುಲಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ಶಕ್ತಿಯೋಜನೆ ಜಾರಿಯಾದ ಬೆನ್ನಲ್ಲೇ ದೇವಸ್ಥಾನಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿರುವ ಕಾರಣ, ಮುಜರಾಯಿ ವ್ಯಾಪ್ತಿಯ ಪ್ರಮುಖ ದೇವಾಲಯಗಳಲ್ಲಿ ಜನರು ಹರಕೆ, ಪೂಜೆ ಸಲ್ಲಿಸಲು ಪರದಾಡುವಂತಾಗಿದೆ. ಈವರೆಗೆ ಖಾಲಿ ಖಾಲಿಯಾಗಿದ್ದ ದೇಗುಲಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಆರಂಭವಾಗಿದೆ. ಮಹಿಳೆಯರಿಗೆ ಫ್ರೀ ಬಸ್ ಇರುವ ಕಾರಣ ಕುಟುಂಬ ಸಮೇತವಾಗಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಇದೀಗ ದೇವಸ್ಥಾನಗಳಲ್ಲಿ ಅಗತ್ಯ ಸೌಲಭ್ಯಗಳಾದ ವಸತಿ, ಲಾಡ್ಜ್ ಗಳು ಸಿಗದೇ ಭಕ್ತರು ಪರದಾಡುತ್ತಿರುವ ಕಾರಣ  ಮುಜರಾಯಿ ಇಲಾಖೆ ಹೊಸ ಪ್ಲಾನ್ ಗೆ ಮುಂದಾಗಿದೆ. ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಆನ್ ಲೈನ್ ಯೋಜನೆ ಜಾರಿ ಮಾಡಲು ಮುಂದಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Read More

ತುಮಕೂರಿನ  ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಭೇಟಿ ಡಿಸಿಎಂ ಡಿ.ಕೆ. ಶಿವಕುಮಾರ್  ಮಾಧ್ಯಮಗಳ ಜೊತೆಗೆ ಮಾತನಾಡಿದರು. ಅಜ್ಜಯ್ಯನ ಮಠಕ್ಕೆ  ಮಠಕ್ಕೆ ಬಂದಾಗ ನನಗೆ ಯಾವಾಗಲೂ ಎನರ್ಜಿ ಜಾಸ್ತಿ ಆಗುತ್ತೆ. ನಾನು ಅತೀ ಹೆಚ್ಚು ಪ್ರೀತಿ ಮಾಡುವ ಸ್ಥಳ ಇದು.  ಶ್ರೀಗಳು ಯಾವತ್ತೂ ಆಶೀರ್ವಾದ ಮಾಡ್ತಾರೆ. ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಏನಾದ್ರೂ ಈಗ? ನಮ್ಮ ಅಜ್ಜಯ್ಯನ ಹೆಸರು ತೆಗೆದುಕೊಂಡವರು ಈಗ ಉಲ್ಟಾ ಹೊಡೆದ್ರು.  ಯಾಕೆ ಉಲ್ಟಾ ಹೊಡೆದ್ರು ಅವರು. ಅದೇ ಅಜ್ಜನ ಶಕ್ತಿ ಎಂದರು. ನಾನೇನಾದ್ರೂ ಮಾಡಿದ್ರೆ ತಾನೇ ಯೋಚನೆ ಮಾಡ್ಬೇಕು. ಅಜ್ಜಯ್ಯನ ಪ್ರಮಾಣದ ಬಗ್ಗೆ ಮಾತನಾಡಿದವರೆಲ್ಲ ಈಗ ರಿವರ್ಸ್ ಹೊಡೆದಿದ್ದಾರೆ.  ಪಾಪಾ ಕಾಂಟ್ರಾಕ್ಟರ್ ಗಳದ್ದೇನು ತಪ್ಪಿಲ್ಲ ಕೆಲ ರಾಜಕೀಯದವ್ರು ಮಾಡಿದ್ದು ಅದು.  ರಾಜಕೀಯದವರು ಮಿಸ್ ಗೈಡ್ ಮಾಡಿ ಗುತ್ತಿಗೆದಾರರ ದಿಕ್ಕು ತಪ್ಪಿಸಿದ್ರು  ಎಂದರು. ಮಾಜಿ ಸಚಿವ ರೇಣುಕಾಚಾರ್ಯ ಕಾಂಗ್ರೆಸ್ ಗೆ ಬರ್ತಾರಾ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಅವೆಲ್ಲ ಪಟ್ಟಿ ಇಲ್ಲಿ ಹೇಳೋಕಾಗಲ್ಲ ಎಂದರು.

Read More

ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಾಜ್ಯ ಸರ್ಕಾರಕ್ಕೆ ನೂರು ದಿನಗಳು ಪೂರ್ಣಗೊಂಡಿರುವ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ನಮ್ಮ ಸರ್ಕಾರ ನೂರು ದಿನಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆಲ್ಲೆಡೆ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ.  ಗೃಹಲಕ್ಷ್ಮಿ ಯೋಜನೆಯಡಿ 1.10 ಕೋಟಿ ಮನೆ ಯಜಮಾನಿಯರಿಗೆ ಆ. 30 ರಿಂದ ಪ್ರತಿ ತಿಂಗಳು 2 ಸಾವಿರ ರೂ. ಹಣ ತಲುಪಲಿದೆ.  1.36 ಲಕ್ಷ ಜನರಿಗೆ ಉಚಿತ ಅಕ್ಕಿ ತಲುಪುತ್ತಿದೆ. 1.41 ಕೋಟಿ ಗ್ರಾಹಕರಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆ. ಡಿಸೆಂಬರ್ ವೇಳೆಗೆ ನಿರುದ್ಯೋಗಿ ಯುವಕರಿಗೆ ಭತ್ಯೆ ಯೋಜನೆ ಜಾರಿ ಮಾಡುತ್ತೇವೆ. ಇದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ. ನಾವು ಕೊಟ್ಟ…

Read More

ಮದುವೆಯ ಎಲ್ಲಾ ವಿಧಿ ವಿಧಾನಗಳು ಶಾಸ್ತ್ರೋಕ್ತವಾಗಿ ನೆರವೇರಿದ್ದವು ಆದರೆ, ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದರಿಂದ ಮದುವೆ ಮುರಿದುಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ಹುಡುಗಿ ಜೊತೆ ಮದುವೆ ಸಂಬಂದ ಮುಂದುವರೆಸಲು ನಿರಾಕರಿಸಿದ ವರ ಹಾಗೂ ಕುಟುಂಬಸ್ಥರು ಪೊಲೀಸರ ಸಮ್ಮುಖದಲ್ಲಿ ರಾಜೀ ಸಂಧಾನಕ್ಕೆ ಮುಂದಾಗಿದ್ದಾರೆ. ಅಲ್ಲದೆ ಒಂದು ಲಕ್ಷ ಹಣ ವರನ ಕಡೆಯವರಿಗೆ ನೀಡಲು ಒಪ್ಪಿದ ವಧುವಿನ ತಂದೆ. ಮದುವೆಗೆ ನೀಡಿದ ಚಿನ್ನಾಭರಣ ವಾಪಸ್ ಕೊಟ್ಟಿದ್ದಾರೆ. ಇನ್ನು ಕೋಳಾಲ ಪೊಲೀಸ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರ ಸಮ್ಮುಖದಲ್ಲಿ ರಾಜೀ ಸಂಧಾನ ನಡೆದಿದೆ. ಈ ವೇಳೆ ಮದುವೆ ಖರ್ಚು ಎಂದು ವರನ ಕಡೆಯವರು ಒಂದು ಲಕ್ಷ ರೂಪಾಯಿ ಪಡೆದಿದ್ದಾರೆ. ಮದುವೆ ಮುರಿದು ಬಿದ್ದ ನಂತರ ತಮ್ಮ ತಮ್ಮ ಮನೆಗಳತ್ತ ಸಂಬಂಧಿಕರು ಹೊರಟು ಹೋಗಿದ್ದಾರೆ. ತನ್ನ ಮಾವನ ಮಗನ ಜೊತೆ ವಧು ಪ್ರೀತಿಸುತ್ತಿದ್ದಳು ಹೀಗಾಗಿ ಆಕೆ ಮದುವೆಗೆ ನಿರಾಕರಿಸಿರುವುದು ಬೆಳಕಿಗೆ ಬಂದಿದೆ. ವಧುವಿನ ಪ್ರಿಯಕರ ನಿನ್ನೆ ರಾತ್ರಿಯಿಂದಲೇ ಕಲ್ಯಾಣ ಮಂಟಪದಲ್ಲಿ ಕಾಣಿಸಿಕೊಂಡಿದ್ದನು. ಪ್ರಿಯಕರನನ್ನು ಕಂಡು ವಧು ಮದುವೆಗೆ…

Read More