Subscribe to Updates
Get the latest creative news from FooBar about art, design and business.
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
- ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
Author: admin
ಕೌಟುಂಬಿಕ ಕಲಹ ಸರಿಪಡಿಸಲು ಪೂಜೆ ಮಾಡುವ ನೆಪದಲ್ಲಿ ತಮಿಳುನಾಡಿನಿಂದ ಬಂದ ನಕಲಿ ಸ್ವಾಮೀಜಿಯೊಬ್ಬ 2. 40 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕದ್ದೊಯ್ದಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕದಿರಯ್ಯನಪಾಳ್ಯದಲ್ಲಿ ನಡೆದಿದೆ. ಮಾಂಗಲ್ಯ ಸರ ಕಳೆದುಕೊಂಡ ಸುಗುಣಾ ಎಂಬವರು ನೀಡಿರುವ ದೂರಿನನ್ವಯ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಸುಗುಣ, ತಮಿಳುನಾಡು ಮೂಲದ ರಾಜ ಎಂಬ ಸ್ವಾಮೀಜಿಯನ್ನು ಫೋನ್ ಮೂಲಕ ಸಂಪರ್ಕಿಸಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳ ಸ್ವಾಮಿ ಮನೆಗೆ ಬಂದು ಪೂಜೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದಿದ್ದ ಆರೋಪಿ, ಆಗಸ್ಟ್ 13ರಂದು ಸುಗುಣಾರ ಮನೆಗೆ ಬಂದಿದ್ದ. ಸಂಜೆ 4ರಿಂದ 4:45 ರವರೆಗೂ ಮನೆಯೊಳಗೆ ಪೂಜೆ ಮಾಡಿ ಬಳಿಕ ಪೂಜೆ ಸಲ್ಲಿಸಿದ್ದ ಸ್ಥಳದಲ್ಲಿ ಮಾಂಗಲ್ಯ ಸರವನ್ನ ಬಿಚ್ಚಿಡುವಂತೆ ಮಹಿಳೆಗೆ ಸೂಚಿಸಿದ್ದ. ಈ ಪ್ರಕರಣ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿನ್ನೆ ನಡೆದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಲ್ಲು ಅರ್ಜುನ್ ಅತ್ಯುತ್ತಮ ನಟನಾಗಿ ಆಯ್ಕೆಯಾದರು. ಪ್ರಶಸ್ತಿ ಗೆದ್ದ ನಂತರ ಅಲ್ಲು ಅರ್ಜುನ್ ಸಂತಸದಿಂದ ಹೊರಬಂದರು. ರಾಷ್ಟ್ರಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೂ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ಪುಷ್ಪ ಚಿತ್ರದಲ್ಲಿನ ಅಭಿನಯಕ್ಕಾಗಿ ಅಲ್ಲು ಅತ್ಯುತ್ತಮ ನಟ ಎಂದು ಆಯ್ಕೆಯಾದರು. “ದೇಶದಾದ್ಯಂತ ವಿವಿಧ ವಿಭಾಗಗಳು ಮತ್ತು ಭಾಷೆಗಳಲ್ಲಿ ಎಲ್ಲಾ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಅಭಿನಂದನೆಗಳು. ನಿಮ್ಮ ಸಾಧನೆಗಳು ನಿಜಕ್ಕೂ ಶ್ಲಾಘನೀಯ. ದೇಶದ ವಿವಿಧ ಮೂಲೆಗಳಿಂದ ಹರಿದು ಬರುತ್ತಿರುವ ಪ್ರೀತಿ ಮತ್ತು ಶುಭಾಶಯಗಳಿಗೆ ನನ್ನ ಕೃತಜ್ಞತೆಗಳು. ಇದೆಲ್ಲದರಿಂದ ನಾನು ಗೌರವ ಮತ್ತು ವಿನಮ್ರತೆಯನ್ನು ಅನುಭವಿಸುತ್ತೇನೆ. ಪ್ರೀತಿಗೆ ಧನ್ಯವಾದಗಳು. ಪ್ರೀತಿಯಿಂದ” ಎಂದು ಅಲ್ಲು ಅರ್ಜುನ್ ಇನ್‌ಸ್ಟಾಗ್ರಾಮ್ ನಲ್ಲಿ ಬರೆದು ಕೊಂಡಿದ್ದಾರೆ. ಚಿತ್ರದ ಎರಡನೇ ಭಾಗ ಸೆಟ್ಟೇರುತ್ತಿರುವಾಗಲೇ ಸಿಕ್ಕಿರುವ ಈ ಪ್ರಶಸ್ತಿ ನಟನಿಗೆ ದುಪ್ಪಟ್ಟು ಸಿಹಿಯಾಗಿದೆ. ಅಲ್ಲು ಅರ್ಜುನ್ ಅವರ ಸಾಧನೆಗೆ ಹಲವರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅದೇ ಸಮಯದಲ್ಲಿ ಅಲ್ಲು ಅವರನ್ನು ಅತ್ಯುತ್ತಮ…
ಬಿಲಿಯನೇರ್ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ, ಬಿಲ್ ಗೇಟ್ಸ್ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಸುಂದರವಾದ ಕ್ಷಣದ ಸ್ಮರಣೆಯನ್ನು ಹಂಚಿಕೊಂಡಿದ್ದಾರೆ. ಅವರು ವಿಂಡೋಸ್ 28 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುವ ಹಳೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಇದು ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ ವೇದಿಕೆಯಲ್ಲಿ ನೃತ್ಯ ಮಾಡುವುದು ಮತ್ತು ವಿಂಡೋಸ್ 95 ರ ಪ್ರಾರಂಭವನ್ನು ಆಚರಿಸುವುದನ್ನು ಒಳಗೊಂಡಿದೆ. ಕೆಲವು ನೆನಪುಗಳು ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ಕಳೆದ 28 ವರ್ಷಗಳಿಂದ ಇತರ ಜನರು ಅಂತರ್ಜಾಲದಲ್ಲಿ ನಿಮ್ಮನ್ನು ಹಿಂಬಾಲಿಸುತ್ತಿದ್ದಾರೆ. ಜನ್ಮದಿನದ ಶುಭಾಶಯಗಳು, ವಿಂಡೋಸ್,” ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಮಾಜಿ ಮೈಕ್ರೋಸಾಫ್ಟ್ ಸಿಇಒ ಸ್ಟೀವ್ ಬಾಲ್ಮರ್ ಸೇರಿದಂತೆ ತಮ್ಮ ಮಾಜಿ ಸಹೋದ್ಯೋಗಿಗಳೊಂದಿಗೆ ಬಿಲ್ ಗೇಟ್ಸ್ ಸಂತೋಷದಿಂದ ನೃತ್ಯ ಮಾಡುವುದನ್ನು ವೀಡಿಯೊ ತೋರಿಸುತ್ತದೆ. ವಿಂಡೋಸ್ 95 ಅನ್ನು ಆಗಸ್ಟ್ 24, 1995 ರಂದು ಪ್ರಾರಂಭಿಸಲಾಯಿತು. ಹೊಸ ಆಪರೇಟಿಂಗ್ ಸಿಸ್ಟಂನ ಬಿಡುಗಡೆ ಕಾರ್ಯಕ್ರಮವು ಟೆಕ್ ಉದ್ಯಮದ ವಿವಿಧ ಗಣ್ಯರ ಉಪಸ್ಥಿತಿಯಿಂದ ಅಲಂಕರಿಸಲ್ಪಟ್ಟಿದೆ. ಸಾಫ್ಟ್‌ವೇರ್ ಮಾರುಕಟ್ಟೆಯಲ್ಲಿ, ವಿಂಡೋಸ್ 95 ಅತ್ಯಂತ…
ಜಾರ್ಖಂಡ್ ನ ರಾಂಚಿಯಲ್ಲಿ 12ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕನಿಂದ ಕಿರುಕುಳ. ಅತ್ಯಾಚಾರದ ದೃಶ್ಯಗಳನ್ನು ಆರೋಪಿ ತನ್ನ ಫೋನ್ ನಲ್ಲಿ ರೆಕಾರ್ಡ್ ಮಾಡಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಬಾಲಕಿಗೆ ಹಲವು ಬಾರಿ ಚಿತ್ರಹಿಂಸೆ ನೀಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸಮೀದ್ ಕಶ್ಯಪ್ ಎಂಬ ಶಿಕ್ಷಕ 12ನೇ ತರಗತಿ ವಿದ್ಯಾರ್ಥಿಗೆ ಕಿರುಕುಳ ನೀಡಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬುದು ದೂರು. ಬಾಲಕಿಯ ತಾಯಿ ದೂರು ದಾಖಲಿಸಿದ್ದಾರೆ. ಶಿಕ್ಷಕ ಸಂತ್ರಸ್ತೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಘಟನೆಯ ತನಿಖೆ ಪ್ರಗತಿಯಲ್ಲಿದೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕೇಸ್ ಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರ ಮೇಲಿನ ಕಳಂಕ ದೂರವಾಗಲಿ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವಸಹಾಯ ಸಂಘದ ಸದಸ್ಯರು ಹುಳಿಯಾರು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವಸಹಾಯ ಸಂಘದ ಸದಸ್ಯರು ಪಾದಯಾತ್ರೆಯ ಮೂಲಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಮಾಜಿ ಶಾಸಕ ಕಿರಣ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಹುಳಿಯಾರು ಪಟ್ಟಣದಲ್ಲಿ ಮರೆವಣಿಗೆ ನಡೆಸಿದ ಬಳಿಕ ಪೂಜೆ ಸಲ್ಲಿಸಲಾಯಿತು.
ಗ್ಯಾರಂಟಿ ಯೋಜನೆಗಳಿಗಾಗಿ ರಸ್ತೆ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡ್ತಿದೆಯಂತೆ ಸಿದ್ದರಾಮಯ್ಯ ಸರ್ಕಾರ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೀತಿಲ್ಲ. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡ್ತಿದ್ದಾರೆ ಎಂದರು.
ಚಂದ್ರಯಾನ 3 ಬಂದಿಳಿದ, ಚಂದ್ರನ ದಕ್ಷಿಣ ಧ್ರುವದಲ್ಲಿರುವ ಸ್ಥಾನವನ್ನು ಇನ್ನು ಮುಂದೆ ಶಿವಶಕ್ತಿ ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಆಗಸ್ಟ್ 23 ಅನ್ನು ಇನ್ನು ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಕರೆಯಲಾಗುತ್ತದೆ. ಯಾರೂ ಇಲ್ಲದ ಕಡೆ ನಾವಿದ್ದೇವೆ. ವಿಜ್ಞಾನಿಗಳ ಜ್ಞಾನ ಮತ್ತು ಸಮರ್ಪಣೆಯನ್ನು ಸ್ಮರಿಸಲಾಯಿತು ಮತ್ತು ದೇಶದ ಸಾಧನೆಯನ್ನು ಇತರರು ಗುರುತಿಸಿದ್ದಾರೆ ಎಂದು ಪ್ರಧಾನಿ ಹೇಳಿದರು. ಬೆಂಗಳೂರಿಗೆ ಆಗಮಿಸಿದ ಅವರು ಚಂದ್ರಯಾನ 3ರ ಯಶಸ್ಸಿನ ಶಿಲ್ಪಿಗಳಾದ ವಿಜ್ಞಾನಿಗಳನ್ನು ಅಭಿನಂದಿಸಿದರು. ‘ನಾನು ಗ್ರೀಸ್ ಮತ್ತು ದಕ್ಷಿಣ ಆಫ್ರಿಕಾದಲ್ಲಿದ್ದೆ. ಆದರೆ ನನ್ನ ಹೃದಯ ನಿನ್ನೊಂದಿಗಿತ್ತು. ಭಾರತವು ಚಂದ್ರನನ್ನು ತಲುಪಿತು ಮತ್ತು ನಮ್ಮ ರಾಷ್ಟ್ರೀಯ ಹೆಮ್ಮೆಯು ಚಂದ್ರನ ಮೇಲೆ ಏರಿತು. ವಿಜ್ಞಾನ ಮತ್ತು ಭವಿಷ್ಯದಲ್ಲಿ ನಂಬಿಕೆಯಿರುವ ಜಗತ್ತಿನ ಪ್ರತಿಯೊಬ್ಬ ಮನುಷ್ಯನೂ ಭಾರತದ ಸಾಧನೆಯನ್ನು ಕಂಡು ಸಂತೋಷಪಡುತ್ತಾನೆ. ಇದು ಕೇವಲ ಸಾಧನೆಯಲ್ಲ, ಬಾಹ್ಯಾಕಾಶದಲ್ಲಿ ಭಾರತದ ವಿಜಯವಾಗಿದೆ. ದೇಶವೇ ಸಂಭ್ರಮಿಸಿದ ಕ್ಷಣವನ್ನು ಹೇಗೆ ಮರೆಯಲು ಸಾಧ್ಯ. ಪ್ರತಿಯೊಬ್ಬ ಭಾರತೀಯನೂ ಇದನ್ನು ತನ್ನ ಸ್ವಂತ ಸಾಧನೆ…
ವ್ಯಕ್ತಿಯೋರ್ವ ತನ್ನ ಪತ್ನಿಯನ್ನ ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರೀಯೊಂದಿಗೆ ಪರಾರಿಯಾದ ವ್ಯಕ್ತಿ. ಈ ಕುರಿತು ಪತ್ನಿ ರೇಖಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸತೀಶ್ ಸ್ವಂತ ಅಂಗಡಿ ಹಾಕಿಕೊಂಡು ಕೆಲಸ ಮಾಡುತ್ತಿದ್ದನು. ಈ ನಡುವೆ ಅದೇ ಅಂಗಡಿಯಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದು ಅದೇ ಮಹಿಳೆಯೊಂದಿಗೆ ಸತೀಶ್ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ. ಸತೀಶ್ ತನ್ನ ಜೊತೆಯಲ್ಲಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಇದರಿಂದ ಕಂಗಾಲಾದ ರೇಖಾ, ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಗಂಡ ಹಾಗೂ ಮಕ್ಕಳನ್ನು ಹುಡುಕಿಕೊಡಿ ಎಂದು ರೇಖಾ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ನಗರ ಠಾಣೆ ಪೊಲೀಸರು ಸತೀಶ್ನಿಗಾಗಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಬೀದಿ ನಾಯಿ ಹಾವಳಿಗೆ ಕೊಂಚ ಬ್ರೇಕ್ ಬಿದ್ದಿದೆ. ಬಿಬಿಎಂಪಿ ಕೈಗೊಂಡ ಬೀದಿ ನಾಯಿಗಳ ಗಣತಿ ಕಂಪ್ಲೇಟ್ ಆಗಿದೆ. ಕಳೆದ 2019ಕ್ಕೆ ಹೋಲಿಸಿದ್ರೆ ಈಗ ನಾಯಿಗಳ ಸಂಖ್ಯೆ ಶೇ. 30ಕ್ಕೆ ಇಳಿಕೆಯಾಗಿದೆ. ಬಿಬಿಎಂಪಿ ಪಶುಪಾಲನೆ ವಿಭಾಗ ಕಳೆದ ಜುಲೈನಲ್ಲಿ ಬೀದಿ ನಾಯಿಗಳ ಗಣತಿ ಆರಂಭಿಸಿತು. 2019 ರಲ್ಲಿ ನಡೆಸಿದ ಬೀದಿ ನಾಯಿ ಗಣತಿಯಲ್ಲಿ ನಗರದಲ್ಲಿ 3.09 ಲಕ್ಷ ಬೀದಿ ನಾಯಿಗಳಿದ್ದವು. ಇದೀಗ ಸುಮಾರು 2.20 ಲಕ್ಷದಷ್ಟು ಬೀದಿ ನಾಯಿಗಳು ಇವೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿ ಕಡಿತದ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಇಳಿಕೆ ಕಂಡು ಬಂದಿದೆ. ಬಿಬಿಎಂಪಿ ನಡೆಸಿದ ಸಮೀಕ್ಷೆಯ ವರದಿ ಪ್ರಕಾರ, ಬೀದಿ ನಾಯಿ ಹಾವಳಿ ಜೊತೆಗೆ ಕಡಿತ ಪ್ರಕರಣಗಳಿಗೂ ಕಡಿವಾಣ ಹಾಕಲಾಗಿದೆ. ಕಳೆದ 2019ರಲ್ಲಿ 42 ಸಾವಿರ ನಾಯಿ ಕಚ್ಚುವ ಪ್ರಕರಣ ದಾಖಲಾಗಿದ್ದವು. ಆದರೆ ಈಗ ಅದೇ ನಾಯಿ ಕಡಿತ ಪ್ರಕರಣಗಳ ಸಂಖ್ಯೆ 17 ಸಾವಿರಕ್ಕೆ ಇಳಿಕೆಯಾಗಿದೆ.
ಬೆಂಗಳೂರು: ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಆರೋಪಿಯಿಂದ 225 ಕೆ. ಜಿ ಗಾಂಜಾ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲಾರಿ ಸ್ಟ್ಯಾಂಡ್ ಬಳಿ ಬರುತ್ತಿದ್ದ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಿದಾಗ ಆಟೋದಲ್ಲಿ ಚಾಕಲೇಟ್ ಗಳು ತುಂಬಿದ್ದ ಚೀಲಗಳಿರುವುದು ಕಂಡುಬಂದಿದೆ. ‘ಶಾಲೆ-ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪನಿ ನೌಕರರು, ಕೂಲಿ ಕಾರ್ಮಿಕರು ಹಾಗೂ ಇತರರು ಚಾಕೊಲೇಟ್ ಖರೀದಿಸುತ್ತಿದ್ದರು. ಕ್ರಮೇಣ ಅವರೆಲ್ಲರೂ ಗಾಂಜಾ ವ್ಯಸನಿಗಳಾಗಿ ಬದಲಾಗುತ್ತಿದ್ದರು’ ಎಂದು ಹೇಳಿದರು. `’ಆರೋಪಿ ಶಮೀನ್ ಜೊತೆ ಮತ್ತಷ್ಟು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಅವರೆಲ್ಲ ತಲೆಮರೆಸಿಕೊಂಡಿದ್ದಾರೆ. ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.