Subscribe to Updates
Get the latest creative news from FooBar about art, design and business.
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
- ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
Author: admin
ತುಮಕೂರು: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರೋ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನಲ್ಲಿ ನಡೆದಿದೆ. ಹೇಮಂತ್ ಕುಮಾರ್ (16) ಮೃತ ದುರ್ದೈವಿಯಾಗಿದ್ದಾರೆ. ಹುಳಿಯಾರು ಕರೆ ಅಂಗಳದಲ್ಲಿ ಶವ ಪತ್ತೆಯಾಗಿದ್ದು ಮೃತ ದುರ್ದೈವಿ ಹಂದನಕೆರೆ ಹೋಬಳಿಯ ಗೋಪಾಲಪುರದ ನಿವಾಸಿಯಾಗಿದ್ದಾನೆ. ಎಸ್.ಎಸ್.ಎಲ್.ಸಿ ಓದುತ್ತಿದ್ದ ಹೇಮಂತ್ ಕುಮಾರ್ , ಕ್ರೀಡಾಕೂಟದಲ್ಲಿ ಭಾಗವಹಿಸಲು ಮೂರು ದಿನದ ಹಿಂದೆ ತನ್ನ ಪೋಷಕರಿಗೆ ಹೇಳಿ ಮನೆಯಿಂದ ಹೋಗಿದ್ದನು. ವಾಪಸ್ ಮನೆಗೆ ಬರದ ಕಾರಣ ಪೋಷಕರು ಎಷ್ಟು ಹುಡಕಾಟ ನಡೆಸಿದರೂ ಪತ್ತೆಯಾಗಲಿಲ್ಲ. ಇಂದು ಹೇಮಂತ್ ಕುಮಾರ್ ಶವ ಕೆರೆಯ ಬಳಿ ಪತ್ತೆಯಾಗಿದೆ. ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಳಿಯಾರು ಪೊಲೀಸರು ತನಿಖೆ. ಮುಂದುವರಿಸಿದ್ದಾರೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಆನಗಟ್ಟಿ ಗ್ರಾಮದ 22 ವರ್ಷ ವಯಸ್ಸಿನ ಯುವತಿ ಗೌರಿ ಅವರ ಮನೆಗೆ ಜಿಲ್ಲಾ RCH ಅಧಿಕಾರಿಗಳಾದ ಡಾ. ಜಯಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸೋಮಣ್ಣ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವಳಿ ಜವಳಿ ಮಕ್ಕಳಲ್ಲಿ ಓರ್ವಳಾಗಿರುವ ಗೌರಿ ಆನಗಟ್ಟಿ ಗ್ರಾಮದ ಕಾಳಸ್ವಾಮಿ-ಮಣಿಯಮ್ಮ ದಂಪತಿಗಳ 10ನೇಯ ಮಗಳಾಗಿದ್ದಾಳೆ. ಒಡ ಹುಟ್ಟಿದ ಸಹೋದರಿ ಹಾಗೂ ಕುಟುಂಬದ ಇತರ ಸದಸ್ಯರು ಆರೋಗ್ಯದಿಂದ ಇದ್ದಾರೆ. ಆದ್ರೆ, ಗೌರಿ ಹುಟ್ಟಿ 15 ವರ್ಷಗಳ ನಂತರ ಅನಾರೋಗ್ಯಕ್ಕೆ ತುತ್ತಾಗಿದ್ದಳು. ಈಗ ಆಕೆ ಕೇವಲ 21 ಕೆ.ಜಿ. ತೂಕವಿದ್ದು, ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ನಿಮ್ಮ ಮಗಳು ಆರೋಗ್ಯದ ನಿರ್ಣಾಯಕ ಹಂತಕ್ಕೆ ತಲುಪಿರೋದ್ರಿಂದ, ಮಗಳ ಆರೋಗ್ಯ ಸುಧಾರಿಸುವವರೆಗೂ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿ ಅಂತ ಅಧಿಕಾರಿಗಳು ಗೌರಿಯ ತಂದೆ ಕಾಳಸ್ವಾಮಿ ಅವರಿಗೆ ಧೈರ್ಯ ತುಂಬಿದರು. ನಿಮ್ಮಮಗಳ ಚಿಕಿತ್ಸೆಗೆ ಸಹಾಯ ಮಾಡಲು ನಾವು ಬದ್ಧರಾಗಿರುತ್ತೇವೆ, ಯಾವುದೇ ಸಮಯದಲ್ಲಾದರೂ ನೀವು…
ಕೊರಟಗೆರೆ: ಭಕ್ತರನ್ನು ಸದಾ ತನ್ನ ಸನ್ನಿಧಿಗೆ ಪ್ರೀತಿಪಾತ್ರವಾಗಿವೇ ಕರೆಸಿಕೊಂಡು ಶ್ರದ್ಧೆ ಭಕ್ತಿಗೆ ಒಲಿಯುವ ತಾಯಿಗೆ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಶ್ರಿ ಮಹಾಲಕ್ಷ್ಮಿಯ ದರ್ಶನ ಪಡೆಯಲು ಜನಸಾಗರವೇ ಹರಿದು ಬಂದಿತು. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ವರಗಳನ್ನು ನೀಡುವ ಶ್ರೀ ಮಹಾಲಕ್ಷ್ಮಿಗೆ ಮುಂಜಾನೆಯೇ ಮಹಿಳೆಯರು ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ಆರ್ಶೀವಾದ ಪಡೆದ ನಂತರ, ಈ ಪುಣ್ಯ ಕ್ಷೇತ್ರಕ್ಕೆ ಬಂದು ತಾಯಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಶ್ರಾವಣ ಮಾಸದ ಎರಡನೇ ಶುಕ್ರವಾರ ಪೌರ್ಣಿಮೆಗೆ ಮೊದಲು ಬರುವ ಹಬ್ಬವಾದ ವರ ಮಹಾಲಕ್ಷ್ಮೀ ಹಬ್ಬ ಸಕಲ ಸಂಪತ್ತುಗಳಿಗೆ ಮೂಲವಾಗಿಯೂ ಪುತ್ರ ಪೌತ್ರ ಸುಖದಾಯಕವಾಗಿ ಇರುವ ಪವನಕರ ಹಬ್ಬ. ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ನಾನಾ ಭಾಗದಿಂದ ಭಕ್ತರು ಆಗಮಿಸುವ ಪವಿತ್ರ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಲಕ್ಷಾಂತರ ಜನ ಬಂದಿರುವ ನಿರೀಕ್ಷೆ ಇದ್ದು, ಉದ್ಘಾಟನೆಗೆ ಸಿದ್ಧವಾಗಿರುವ ನೂತನ ದಾಸೋಹ ಕೇಂದ್ರದಲ್ಲಿ ಸುಸಜ್ಜಿತವಾಗಿ ಪ್ರಸಾದವನ್ನು ವ್ಯವಸ್ಥೆ ಮಾಡಲಾಗಿತ್ತು,…
ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಉತ್ತರ ಪ್ರದೇಶದವರು. ನಿಂತಿದ್ದ ರೈಲಿಗೆ ಬೆಂಕಿ ಹತ್ತಿಕೊಂಡಿತು. ಬೆಂಕಿಯನ್ನು ಹತೋಟಿಗೆ ತರಲಾಯಿತು. ಮಧುರೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಲಕ್ನೋ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಪ್ಯಾಂಟ್ರಿಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಸಂಶೋಧನೆಗಳು ತಿಳಿಸಿವೆ.
ತಿಪಟೂರು ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ವರಮಹಾಲಕ್ಷ್ಮೀ ಹಾಗೂ ಚೌಡೇಶ್ವರಿ ದೇವಿಯ ಪೂಜಾ ಕಾರ್ಯಕ್ರಮ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಚೌಡೇಶ್ವರಿ ದೇವಿಗೆ, ವರಮಹಾಲಕ್ಷ್ಮೀ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ, ಹೋಮ, ಅಭಿಷೇಕಗಳನ್ನು ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಜಗತ್ತಿನ ಸೃಷ್ಠಿಗೆ ಮೂಲ ಜಗನ್ಮಾತೆ ದೇವಿಯೇ ಆಗಿದ್ದು ಆಕೆಯನ್ನು ಪೂಜಿಸುವ, ಆರಾಧಕರಾಗಬೇಕು. ಕಷ್ಟದ ಸಂದರ್ಭದಲ್ಲಿ ಮಾತ್ರವೇ ದೇವಿಯ ಬಳಿಯ ಬರುವ ಜೊತೆಗೆ ಸುಖ-ಸಂತಸದ ಸಂದರ್ಭದಲ್ಲಿಯೂ ದೇವಿಯ ಸೇವೆ ಮಾಡುವಂತಹ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ದಸರೀಘಟ್ಟ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳನಾಥ ಸ್ವಾಮೀಜಿ, ಆದಿಹಳ್ಳಿ ಶಾಖಾಮಠದ ಶ್ರೀ…
ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವಾದ ಆಗಸ್ಟ್ 23ನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ ಎಂದು ಅವರು ಹೇಳಿದರು. ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗ್ತಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ತುಮಕೂರು: ಇಂದು ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದಲ್ಲಿ ವಿಶೇಷ ಪೂಜಾ ವ್ಯವಸ್ಥೆಯನ್ನು ಮಾಡಲಾಗಿತ್ತು. ಬೆಳಗ್ಗೆಯಿಂದಲೂ ಶಾಂತಿ ಹೋಮ ಸೇರಿದಂತೆ ಪಂಚಾಮೃತ ಅಭಿಷೇಕವನ್ನು ನೆರವೇರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಇಂದು ವರಮಹಾಲಕ್ಷ್ಮಿ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಸುಮಾರು ಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಹಾಲಕ್ಷ್ಮಿ ದರ್ಶನ ಪಡೆದು ಪುನೀತರಾದರು.ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಪ್ರಸಿದ್ಧ ಗೊರವನಹಳ್ಳಿ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆರಾಜ್ಯದ ವಿವಿಧತೆಯಿಂದ ಹಾಗೂ ನೆರೆಯ ಆಂಧ್ರಪ್ರದೇಶದಿಂದಲೂ ಭಕ್ತರು ಬಂದು ದರ್ಶನ ಮಾಡಿದರು.ದೇವಿಯ ದರ್ಶನಕ್ಕೆ ಬಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದ್ದು, ಬಂಧನವಾಗಿ ಕೆಲವೇ ಹೊತ್ತಿನಲ್ಲಿ ಟ್ರಂಪ್ ಜಾಮೀನು ಪಡೆದು ಹೊರ ಬಂದಿದ್ದಾರೆ. 2020ರ ಅಧ್ಯಕ್ಷೀಯ ಚುನಾವನೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಪಿತೂರಿ, ವಂಚನೆ ಯತ್ನ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್ರನ್ನು ಬಂಧಿಸಿ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿದ್ದರು. ಆದರೆ $200,000 ಬಾಂಡ್ ನ ಇರಿಸಿ 20 ನಿಮಿಷಗಳ ಬಳಿಕ ಜಾಮೀನು ಪಡೆದು ಟ್ರಂಪ್ ಹೊರಬಂದಿದ್ದಾರೆ. ಸೂಟ್ ಮತ್ತು ಕೆಂಪು ಟೈ ಧರಿಸಿ ಕೋಪದಿಂದ ಕ್ಯಾಮರಾಗೆ ಪೋಸು ಕೊಟ್ಟ ಟ್ರಂಪ್ ಅವರ ಬಂಧನ ಫೋಟೋವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ ಅಂತ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಸೀಟ್ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈಹಾಕಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದು, ಬೆಂಗಳೂರು ಹಾಲು ಕರೆಯುವ ಹಸು, ಹಾಗಾಗಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಈಶಾನ್ಯ ರಾಜ್ಯದವರು ನಡೆಸುತ್ತಿರುವ ಅಂಗಡಿಗಳ ನಿಯೋಗ ಬಂದಿತ್ತು. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡಲಾಗುತ್ತಿದೆ. ಬಿಬಿಎಂಪಿಯವರು ಮಾಸಿಕ 15,000 ರೂ. ಕೇಳುತ್ತಿದ್ದಾರೆಂದು ಅವರು ಆರೋಪಿಸಿದರು. ಇದೇ ರೀತಿ ವಸೂಲಿಗೆ ಇಳಿದರೆ ಅವರೆಲ್ಲರೂ ಬೆಂಗಳೂರು ಬಿಡುತ್ತಾರೆ. ಯಾವ ಅಧಿಕಾರಿಗಳೂ ಸಮಾಧಾನದಿಂದಿಲ್ಲ, ಸ್ಥಳ ತೋರಿಸದೆ ವರ್ಗಾವಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂತಹ ಪರಿಸ್ಥಿತಿಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಂಸದೆ ಶೋಭಾ ವಾಗ್ದಾಳಿ ಮಾಡಿದರು.