Subscribe to Updates
Get the latest creative news from FooBar about art, design and business.
- ಬಳ್ಳಾರಿ: ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
- “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
Author: admin
ಇತ್ತೀಚೆಗೆ ಬಾರ್ ಆಂಡ್ ರೆಸ್ಟೋರೆಂಟ್ ಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಆರ್. ಟಿ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲದ ಇಮ್ರಾನ್ ಅಲಿಯಾಸ್ ಬೊಡ್ಡೆ(29), ಕೆ. ಜಿ. ಹಳ್ಳಿಯ ಮೋಹಿತ್ ಅಲಿಯಾಸ್ ಮೋಹನ್(24), ಅರಾಫತ್ ಅಹಮದ್(25) ಹಾಗೂ ಸೈಯದ್ ಮಾಜ್(22) ಬಂಧಿತರು. ಆರೋಪಿಗಳಿಂದ 12,500 ರೂ. ನಗದು ಹಾಗೂ ನಾಲ್ಕು ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ.
ದಾವಣಗೆರೆಯಲ್ಲಿ ಒಂಬತ್ತು ತಿಂಗಳ ಹಿಂದೆ ನಡೆದ ರೇಣುಕಾಚಾರ್ಯ ಅವರ ಸಹೋದರನ ಮಗನ ಅನುಮಾನಾಸ್ಪದ ಸಾವು ಪ್ರಕರಣ ರಾಜಕೀಯ ವಲಯದಲ್ಲಿ ತಲ್ಲಣ ಎಬ್ಬಿಸಿತ್ತು. ಇದು ಅಪಘಾತವೋ? ಕೊಲೆಯೋ ಅನ್ನೋ ಅನುಮಾನ ಮೂಡಿಸಿತ್ತು. ಆದರೆ ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದೆ. ದಾವಣಗೆರೆಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಇದು ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ತಮ್ಮ ವರದಿಯಲ್ಲಿ ಉಲ್ಲೇಖಿಸಿದೆ.
ಹಿಮೋಗ್ಲೋಬಿನ್ ಕೆಂಪು ರಕ್ತ ಕಣಗಳಲ್ಲಿ ಕಂಡುಬರುವ ಪ್ರೋಟೀನ್ ಆಗಿದೆ. ರಕ್ತ ಕಣಗಳ ಕಾರ್ಯವು ದೇಹದಾದ್ಯಂತ ಆಮ್ಲಜನಕವನ್ನು ಸಾಗಿಸುವುದು. ಕಡಿಮೆ ಹಿಮೋಗ್ಲೋಬಿನ್ ಮಟ್ಟದಿಂದಾಗಿ, ದೇಹದ ಕಾರ್ಯಚಟುವಟಿಕೆಯು ಕೆಟ್ಟದಾಗಿ ಪರಿಣಾಮ ಬೀರಬಹುದು. ಕಡಿಮೆ ಮಟ್ಟಗಳು ನೀವು ರಕ್ತಹೀನತೆ ಅಥವಾ ಕೆಲವು ಯಕೃತ್ತು ಅಥವಾ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದೀರಿ ಎಂದು ಸೂಚಿಸುತ್ತದೆ. ಹಿಮೋಗ್ಲೋಬಿನ್ ಕೊರತೆಯಿಂದಾಗಿ, ನೀವು ಆಯಾಸ, ದೌರ್ಬಲ್ಯ, ಕಾಮಾಲೆ ಅಥವಾ ಆಗಾಗ್ಗೆ ತಲೆನೋವು ಮುಂತಾದ ಲಕ್ಷಣಗಳನ್ನು ಅನುಭವಿಸಬಹುದು. ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು, ನೀವು ಕಬ್ಬಿಣದ ಭರಿತ ಆಹಾರವನ್ನು ಸೇವಿಸಬೇಕು. ನಿಮ್ಮ ಹಿಮೋಗ್ಲೋಬಿನ್ ಮಟ್ಟವನ್ನು ನೈಸರ್ಗಿಕವಾಗಿ ಕಾಪಾಡಿಕೊಳ್ಳಲು ಸಹಾಯ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಬೀಟ್ರೂಟ್: ಬೀಟ್ರೂಟ್ ಕಬ್ಬಿಣ, ಮೆಗ್ನೀಸಿಯಮ್, ತಾಮ್ರ, ರಂಜಕ ಮತ್ತು ವಿಟಮಿನ್ ಬಿ 1, ಬಿ 2, ಬಿ 6, ಬಿ 12 ಮತ್ತು ಸಿ ಯಲ್ಲಿ ಸಮೃದ್ಧವಾಗಿದೆ. ಈ ಅದ್ಭುತ ತರಕಾರಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಕೆಂಪು ರಕ್ತ ಕಣಗಳನ್ನು ಉತ್ಪಾದಿಸಲು ಕೆಲಸ ಮಾಡುತ್ತದೆ. ನೀವು ಇದನ್ನು ತರಕಾರಿಗಳು,…
ತಿಪಟೂರಿನಲ್ಲಿ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕ ಬಾಲಕಿಯರ ರಾಷ್ಟ್ರೀಯ ಖೋ ಖೋ ಚಾಂಪಿಯನ್ ಶಿಪ್ ಡಿಸೆಂಬರ್ 13 ರಿಂದ 17ರವರೆಗೆ ಆಯೋಜಿಸಲಾಗಿದೆ. ಈಗಾಗಲೇ ಹಲವು ಬಾರಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕೋ ಕೋ ಪಂದ್ಯಾವಳಿಗಳನ್ನು ತಿಪಟೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಲೋಕೇಶ್ವರ್ ಅನುಭವ ಅವರಿಗಿದ್ದು, ಈಗ ಅವರು ರಾಷ್ಟ್ರೀಯ ಕೋಕೋ ಫೆಡರೇಶನ್ ಉಪಾಧ್ಯಕ್ಷ ಸ್ಥಾನದ ಜೊತೆಗೆ ಕರ್ನಾಟಕ ಖೋ ಖೋ ಸಂಸ್ಥೆಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು ಈ ಪಂದ್ಯಾವಳಿ ಮಹತ್ವ ಪಡೆದುಕೊಂಡಿದೆ ಡಿಸೆಂಬರ್ 13ರಂದು ಗೃಹ ಸಚಿವ ಪರಮೇಶ್ವರ್ ಕ್ರೀಡಾ ಸಚಿವ ಬಿ ನಾಗೇಂದ್ರ ಅವರು ರಾಷ್ಟ್ರೀಯ ಕೋ ಕೋ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಬಹುಮಾನ ವಿತರಣೆಯನ್ನು ಸಹಕಾರ ಸಚಿವ ಕೆ. ಎನ್. ರಾಜಣ್ಣ ಸಂಸದ ಡಿ ಎಸ್ ಬಸವರಾಜ್ ತಿಪಟೂರು ಶಾಸಕ ಕೆ ಷಡಕ್ಷರಿ ಅವರು ಆಗಮಿಸಲಿದ್ದಾರೆ. ಪಂದ್ಯಾವಳಿಗಾಗಿ ಎರಡು ಸಂಪೂರ್ಣ ಸಿಂಥಟಿಕ್ ಕೋಟ್ ಸೇರಿ ಐದು ವಿಶೇಷ ಕೋರ್ಟ್ ಗಳನ್ನು ನಿರ್ಮಿಸಲಾಗಿದ್ದು, ಈ ಪಂದ್ಯಾವಳಿ ಯಶಸ್ವಿಗೆ ಹಲವು ಕ್ರೀಡಾ ಸಂಘ…
ಕೊರಟಗೆರೆ: ಮದುವೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆ ಹಾಗೂ ಅವರ ಸ್ನೇಹಿತ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಮಾರ್ಗದಲ್ಲಿ ನಡೆದಿದೆ. ಕೊಡಿಗೆನಹಳ್ಳಿ ಪೊಲೀಸ್ ಠಾಣೆಯ ಮುಖ್ಯಪೇದೆ ಮಹೇಶ್ (27) ಹಾಗೂ ಚಂದ್ರಯ್ಯ (35) ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ ಭರತ್ (22) ಎಂಬವರು ಗಾಯಗೊಂಡಿದ್ದು, ಅವರನ್ನು ತುಮಕೂರಿನ ಆದಿತ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಸಿಲುಕಿದವರೆಲ್ಲರೂ ಮಧುಗಿರಿ ತಾಲೂಕಿನ ಗರಣಿ ಗ್ರಾಮದ ಯುವಕರಾಗಿದ್ದಾರೆ. ಸ್ನೇಹಿತನ ಮದುವೆ ಮುಗಿಸಿ, ಸಿದ್ಧರಬೇಟ್ಟದಿಂದ ಕೊರಟಗೆರೆಗೆ ಬರುವ ಮಾರ್ಗದ ಅರಣ್ಯ ಇಲಾಖೆಯ ನರ್ಸರಿಯ ಸಮೀಪದ ರಸ್ತೆಯ ತಿರುವಿನಲ್ಲಿ ಬೈಕ್ ಆಯಾ ತಪ್ಪಿ ಬಿದ್ದಿದ್ದು, ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ, ಕೊರಟಗೆರೆ ಸಿಪಿಐ, ಪಿಎಸೈ ಭೇಟಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ
ಬೆಂಗಳೂರು: “ನಮ್ಮ ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದೇವೆ. ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಿಎಸ್ಆರ್ ನಿಧಿಯನ್ನು ಮೀಸಲಿಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಯಮಿಗಳಿಗೆ ಕರೆ ನೀಡಿದರು. ಬೆಂಗಳೂರು ಮುಖ್ಯ ಅರಮನೆಯಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,“ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿದರೆ ಆ ಭಾಗದ ಮಕ್ಕಳು ಕೂಡ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗುತ್ತದೆ. ಈ ಬಗ್ಗೆ ಪ್ರೇಮ್ ಜೀ ಸೇರಿದಂತೆ ಹಲವರ ಜತೆ ಚರ್ಚೆ ಮಾಡಿದ್ದು, ಈಗಾಗಲೇ 2 ಸಾವಿರ ಕೋಟಿ ಹಣವನ್ನು ಈ ಉದ್ದೇಶಕ್ಕೆ ನೀಡಲು ಅವರು ಮುಂದಾಗಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಡಿಕೆಶಿ ಕರೆ ನೀಡಿದರು. ರಾಜ್ಯದಲ್ಲಿ ನೂತನ ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗಿದೆ. ಆದರೂ ಉದ್ಯಮದಾರರಿಗೆ ರಾಜ್ಯ ಸರ್ಕಾರ ಯಾವ ಸವಲತ್ತು ಹಾಗೂ ಪ್ರೋತ್ಸಾಹ ಸಿಗುತ್ತದೆ ಎಂಬುದು ಮುಖ್ಯವಾಗುತ್ತದೆ. ಉದ್ಯಮಿಗಳು, ಬಂಡವಾಳ ಹೂಡಿಕೆದಾರರು ಬಲಿಷ್ಠವಾದರೆ,…
ಕೇರಳ: ಪುರಸಭೆ ಸಭೆಯ ವೇಳೆ ಫ್ಯಾನ್ ಮುರಿದು ಬಿದ್ದಿದೆ. ಫ್ಯಾನ್ ರೆಕ್ಕೆಗಳಿಂದ ಕೌನ್ಸಿಲರ್ ಅನೀಶ್ ಉಣ್ಣಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾದ ಕೌನ್ಸಿಲ್ ಸಭೆಯಲ್ಲಿ ಈ ಘಟನೆ ನಡೆದಿದೆ. ಅನೀಶ್ 24ನೇ ವಿಭಾಗದ ಕೌನ್ಸಿಲರ್. ನೆಟ್ಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ವಾಟ್ಸಾಪ್ ಮೂಲಕ ಜನರಿಗೆ ಸುಲಭವಾಗಿ ಮಾಹಿತಿ ತಲುಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ನಡುವೆ ಮಾಹಿತಿ ಸಂವಹನವನ್ನು ಸುಗಮಗೊಳಿಸಿ ವಾಟ್ಸಾಪ್ ಮೂಲಕ ಜನರಿಗೆ ಸುಲಭವಾಗಿ ಮಾಹಿತಿ ತಲುಪಿಸಲು ಐಟಿಬಿಟಿ/ಆರ್ ಟಿಪಿಆರ್ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ಚಾಟ್ ಬಾಟ್ ಅಭಿವೃದ್ಧಿಪಡಿಸುವುದು ಎಂದು ಹೇಳಿದರು. ಆನ್ ಲೈನ್ ಸುರಕ್ಷತೆ ಕುರಿತ ಮಾಹಿತಿಗಳು ಮತ್ತು ಜಾಗೃತಿ ಸಂದೇಶಗಳನ್ನು ಜನತೆಗೆ ತಲುಪಿಸಲು ಡಿಜಿಟಲ್ ಸುರಕ್ಷತಾ ಚಾಟ್ ಬಾಟ್ ಅಭಿವೃದ್ಧಿಪಡಿಸುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಗ್ಯ, ಶಿಕ್ಷಣ ಮತ್ತು ಗೇಮಿಂಗ್ ಕ್ಷೇತ್ರಗಳಿಗಾಗಿ ಕರ್ನಾಟಕ ಸರ್ಕಾರ ಮತ್ತು ಮೆಟಾದ AR/VRನ ಪಾಲುದಾರಿಕೆ ಸಾಧ್ಯವಾಗಲಿದೆ ಎಂದು ಹೇಳಿದರು.
ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದರು. ಕನಕದಾಸರು -ಸಮಸಮಾಜದ ಕನಸು ಕಂಡ ದಾಸಶ್ರೇಷ್ಠ: ಕನಕದಾಸರು ಸಮಾಜಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದವರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ. ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ…
ಇಸ್ರೇಲ್ ವಿರುದ್ಧ ತನ್ನ Instagram ಪೋಸ್ಟ್ ನಂತರ, ಅಮೇರಿಕನ್ ಸೂಪರ್ ಮಾಡೆಲ್ ಗಿಗಿ ಹಡಿದ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಟೀಕೆಗೊಳಗಾಗಿದ್ದಾರೆ. ನಂತರ, ನಟಿ ಪೋಸ್ಟ್ ಅನ್ನು ತೆಗೆದು ಹಾಕಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ನಡೆಸಿದ ದಾಳಿಯ ಮೊದಲು ಇಸ್ರೇಲ್ ಫೆಲೆಸ್ತೀನಿಯರನ್ನು ಕೊಲ್ಲುವ, ಚಿತ್ರಹಿಂಸೆ ನೀಡುವ ಮತ್ತು ಕಳ್ಳಸಾಗಣೆ ಮಾಡುವ ಮೂಲಕ ಅವರಿಗೆ ಹಾನಿ ಮಾಡುತ್ತಿದೆ ಎಂದು ಗಿಗಿ ಹಡಿದ್ Instagram ನಲ್ಲಿ ಬರೆದಿದ್ದಾರೆ. ಮಕ್ಕಳನ್ನು ಯುದ್ಧ ಕೈದಿಗಳನ್ನಾಗಿ ತೆಗೆದುಕೊಳ್ಳುವ ವಿಶ್ವದ ಏಕೈಕ ದೇಶ ಇಸ್ರೇಲ್ ಎಂದು ಗಿಗಿ ಹಡಿದ್ ಬಹಿರಂಗವಾಗಿ ಹೇಳಿದ್ದಾರೆ. ಗಿಗಿ ಹಡಿದ್ ಅವರು ಹಂಚಿಕೊಂಡ ಪೋಸ್ಟ್ ನಲ್ಲಿ ಇಸ್ರೇಲ್ ಸತ್ತ ಪ್ಯಾಲೆಸ್ತೀನಿಯರ ಅಂಗಗಳನ್ನು ಅವರ ಅನುಮತಿಯಿಲ್ಲದೆ ಕೊಯ್ಲು ಮಾಡುತ್ತದೆ ಎಂದು ಹೇಳುತ್ತದೆ. ಪೋಸ್ಟ್ ವೈರಲ್ ಆದ ನಂತರ, ಗಿಗಿ ಹಡಿದ್ ಅವರನ್ನು ಟೀಕಿಸಲು ಅನೇಕರು ಮುಂದೆ ಬಂದಿದ್ದಾರೆ. ಇಸ್ರೇಲ್ ಸರ್ಕಾರ ಕೂಡ ಗಿಗಿ ಹಡಿದ್ ವಿರುದ್ಧ ಹರಿಹಾಯ್ದಿದೆ. ಇಸ್ರೇಲ್‌ನ ಮೇಲೆ ಹಮಾಸ್‌ನ ದಾಳಿಯ ಬಗ್ಗೆ ಧೈರ್ಯವಿಲ್ಲ ಮತ್ತು…