Subscribe to Updates
Get the latest creative news from FooBar about art, design and business.
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
- ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
Author: admin
ಒಂದೇ ರಿಜಿಸ್ಟ್ರೇಷನ್ ನಂಬರ್ ನ ಎರಡು ಖಾಸಗಿ ಬಸ್ ಗಳನ್ನು ಆರ್.ಟಿ.ಓ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ಗೆ ಸೇರಿದ ರಸ್ತೆ ಸಾರಿಗೆ ಸಂಸ್ಥೆಯ (ಆರ್.ಟಿ.ಓ) ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಎರಡು ಬಸ್ ಗಳು ತಮಿಳುನಾಡಿನ ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಗೆ ಸೇರಿದ್ದಾಗಿದ್ದು, ಒಂದೇ ರಿಜಿಸ್ಟ್ರೇಷನ್ ನಂಬರ್ ಅನ್ನು ಎರಡು ಬಸ್ ಗಳಿಗೆ ಹಾಕಿಕೊಂಡು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಿದ್ದಾರೆ. ಇದೀಗ ಬಸ್ ಗಳನ್ನ ಆರ್ ಟಿ ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕೊರಟಗೆರೆ: ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಿ.ಜಿ.ಅರಸರಾಜು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ರೈಡ್ ಮಾಡಿರುವುದಾಗಿ ತಿಳಿದು ಬಂದಿದೆ. ಪಟ್ಟಣದ ಬೆಸ್ಕಾಂ ಕಛೇರಿಯಲ್ಲಿ ಬುಧವಾರ ಸಂಜೆ ಸಮಯದಲ್ಲಿ ಲಂಚ ಪಡೆಯತ್ತಿರುವಾಗ ದಾಳಿ ಮಾಡಿದ್ದಾರೆ. ಕಂಟ್ರಾಕ್ಟರ್ ಒಬ್ಬರ ಬಳಿ 50ಸಾವಿರ ರೂ. ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದ್ದು, ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸಂಜೆಯಿಂದಲೂ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ಮಾಹಿತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ.
ಬೆಂಗಳೂರು: ಚಂದ್ರನ ದಕ್ಷಿಣ ಧೃವದ ಮೇಲೆ ಚಂದ್ರಯಾಣ-3ಯ ವಿಕ್ರಮ ಲ್ಯಾಂಡರ್ ಸ್ಪರ್ಶಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಈ ಲ್ಯಾಂಡ್ ಅನ್ನು ವೀಕ್ಷಿಸಲು ಬೆಂಗಳೂರಿನ ನೆಹರು ತಾರಾಲಯದಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಬೆಂಗಳೂರಿನ ನೆಹರು ತಾರಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದೇವೆ. ದೊಡ್ಡ LED ಸ್ಕ್ರೀನ್ನಲ್ಲಿ ಸಾಫ್ಟ್ ಲ್ಯಾಂಡಿಂಗ್ ಲೈವ್ ವೀಕ್ಷಿಸಬಹುದು. ಇಂದು ಸಂಜೆ 5 ಗಂಟೆ 10 ನಿಮಿಷಕ್ಕೆ ಲೈವ್ ಆರಂಭವಾಗಲಿದೆ. ಮೊದಲು ಬೆಂಗಳೂರಿನ ಬಳ್ಳಾಲದ ಇಸ್ರೋಗೆ ಮಾಹಿತಿ ಬರುತ್ತೆ. ಬಳಿಕ ವಿಜ್ಞಾನಿಗಳು ಟ್ರ್ಯಾಕಿಂಗ್ ಸೆಂಟರ್ನಲ್ಲಿ ಮಾಹಿತಿ ಪಡೆಯುತ್ತಾರೆ. ಬಳಿಕ ನೆಹರು ತಾರಾಲಯದಲ್ಲಿ ಲೈವ್ ಆರಂಭವಾಗುತ್ತೆ. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಕಾಯುತ್ತಿದ್ದಾರೆ ಎಂದು ನೆಹರು ತಾರಾಲಯದ ನಿರ್ದೇಶಕ ಪ್ರಮೋದ್ ಗಲಗಲಿ ಹೇಳಿದ್ದಾರೆ.
ನಟಿ ರಾಖಿ ಸಾವಂತ್ ಹಾಗೂ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ವಿವಾಹವಾದ ಬಳಿಕ ಒಂದಲ್ಲ ಒಂದು ಕಾರಣಕ್ಕೆ ಇವರಿಬ್ಬರ ಯುದ್ಧ ಮುಂದುವರಿದಿದೆ. ಮದುವೆಯಾದ ಬಳಿಕ ಇಬ್ಬರು ಹೆಚ್ಚು ಕಾಲ ಜೊತೆಯಾಗಿರಲಿಲ್ಲ. ಈ ನಡುವೆ ಇವರಿಬ್ಬರ ನಡುವೆ ನಡೆದ ಕಿರಿಕ್ ನಿಂದಾಗಿ ಆದಿಲ್ ಖಾನ್ ಜೈಲಿಗೂ ಹೋಗಬೇಕಾಯ್ತು. ಇದೀಗ ಇವರಿಬ್ಬರ ಜಗಳ ಇನ್ನಷ್ಟು ತಾರಕಕ್ಕೇರಿದ್ದು, ಆದಿಲ್ ಖಾನ್ ವಿರುದ್ಧ ರಾಖಿ ಗಂಭೀರ ಆರೋಪ ಮಾಡಿದ್ದಾರೆ. ಆದಿಲ್ ಖಾನ್ ಗಂಡಸರ ಜೊತೆಗೂ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಎಂದು ರಾಖಿ ಆರೋಪಿಸಿದ್ದಾರೆ. ಆದಿಲ್ ಖಾನ್ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ರಾಖಿ ತನ್ನ ಯುದ್ಧ ಮುಂದುವರಿಸಿದ್ದಾರೆ. ಆದಿಲ್ ಖಾನ್ ಈವರೆಗೆ ಜೈಲಿನಲ್ಲಿದ್ದದ್ದು ನನ್ನ ಕಾರಣದಿಂದಾಗಿ ಅಲ್ಲ, ಆತನ ಇರಾನಿಯನ್ ಗರ್ಲ್ ಫ್ರೆಂಡ್ ಅತ್ಯಾಚಾರದ ಕೇಸ್ ಹಾಕಿದ್ದಳು, ಆತ ನನಗೆ ಹೊಡೆದಿದ್ದ, ಟಾರ್ಚರ್ ನೀಡಿದ್ದ ಆ ಕಾರಣದಿಂದಲೂ ಅವನು ಜೈಲಿಗೆ ಹೋಗಿದ್ದ. ಜೈಲಿನಲ್ಲಿದ್ದದ್ದು ಕೇವಲ 22 ದಿನ ಮಾತ್ರ ಎಂದು ರಾಖಿ ಆರೋಪಿಸಿದ್ದಾರೆ. ಮನೆಯಲ್ಲಿ ಆತ ಬೇರೆ…
ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಸಿಎಂ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆಯಲ್ಲಿ ಮಾತನಾಡಿ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಸೂಚಿಸಿದರು. ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಹಳಸಿದ ಓಟ್ಸ್ ಸೇವೆಗಾಗಿ ಸೂಪರ್ ಮಾರ್ಕೆಟ್ ವಿರುದ್ಧ ಫಿರ್ಯಾದಿಯ ದೂರನ್ನು ಎತ್ತಿಹಿಡಿಯಲಾಗಿದೆ. ಬೆಂಗಳೂರಿನ ನಿವಾಸಿ 49 ವರ್ಷದ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ಗ್ರಾಹಕ ಆಯೋಗವು ವೈದ್ಯಕೀಯ ವೆಚ್ಚಗಳು ಮತ್ತು ಕಾನೂನು ವೆಚ್ಚಗಳು ಸೇರಿದಂತೆ ಎಲ್ಲಾ ನಷ್ಟಗಳನ್ನು ಒಳಗೊಂಡಂತೆ ರೂ 10,000 ಪರಿಹಾರವನ್ನು ಆದೇಶಿಸಿತು. ಬೆಂಗಳೂರಿನ ಜಯನಗರದ ಸೂಪರ್ ಮಾರ್ಕೆಟ್‌ನಿಂದ 925 ರೂಪಾಯಿ ಮೌಲ್ಯದ ಓಟ್ಸ್ ಖರೀದಿಸಲಾಗಿದೆ. ಓಟ್ಸ್ ಮೀಲ್ ಸೇವಿಸಿದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದಾಗ ಆಹಾರದಲ್ಲಿ ವಿಷಪ್ರಾಶನವಾಗಿರುವುದು ಪತ್ತೆಯಾಗಿದೆ. ಅನುಮಾನಾಸ್ಪದ ದೂರುದಾರರು ಓಟ್ಸ್ ಪ್ಯಾಕೇಜಿಂಗ್ ಅನ್ನು ಪರಿಶೀಲಿಸಿದರು ಮತ್ತು ಸೂಪರ್ ಮಾರ್ಕೆಟ್ ಮೂಲ ಮುಕ್ತಾಯ ದಿನಾಂಕವನ್ನು ಹೊಸ ಲೇಬಲ್ ನೊಂದಿಗೆ ಮರೆ ಮಾಡಿದೆ ಮತ್ತು ಇನ್ನೊಂದು ದಿನಾಂಕವನ್ನು ಸೇರಿಸಿದೆ ಎಂದು ಕಂಡು ಹಿಡಿದಿದೆ. ಸೂಪರ್ ಮಾರ್ಕೆಟ್ ಅನ್ನು ಸಂಪರ್ಕಿಸಿದರೂ ಯಾವುದೇ ಗಣನೀಯ ಪ್ರತಿಕ್ರಿಯೆ ಬರಲಿಲ್ಲ. ಇದಾದ ಬಳಿಕ ದೂರು ದಾಖಲಿಸಲು ನಿರ್ಧರಿಸಲಾಗಿದೆ. ಸೇವಾ ಕೊರತೆ ಮತ್ತು ಅನ್ಯಾಯದ ವ್ಯಾಪಾರದ ಆಚರಣೆಗಳಲ್ಲಿ ತೊಡಗಿರುವ ಆರೋಪದ ಮೇಲೆ ಸೂಪರ್ಮಾರ್ಕೆಟ್ ಗೆ ಕಾನೂನು ನೋಟಿಸ್…
ಭಾರತದ ಮೂರನೇ ಚಂದ್ರಯಾನ-3 ಅನ್ನು ಅಪಹಾಸ್ಯ ಮಾಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಗೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಯಾನ ಬಿಡುಗಡೆ ಮಾಡಿದ ಮೊದಲ ಚಿತ್ರದ ಹೆಸರಿನಲ್ಲಿ ವ್ಯಕ್ತಿಯೊಬ್ಬ ಚಂದ್ರನ ಮೇಲೆ ಚಹಾ ಸುರಿಯುತ್ತಿರುವ ಕಾರ್ಟೂನ್ ಅನ್ನು ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಕೆಲವು ಸಂಘಟನೆಗಳು ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲಿಸಿದ್ದವು. ಆದರೆ ಚಂದ್ರಲೋಕಕ್ಕೆ ಹೋದರೂ ಅಲ್ಲಿ ಟೀ ಅಂಗಡಿ ಇರುವ ಮಲೆಯಾಳಿ ಇರುತ್ತಾನೆ ಎಂದು ತಮಾಷೆ ಮಾಡಲು ಉದ್ದೇಶಿಸಿದ್ದರು ಎಂದು ಪ್ರಕಾಶ್ ರಾಜ್ ಸಮಜಾಯಿಷಿ ನೀಡಿದ್ದು, ಟೀಕಾಕಾರರು ಯಾವ ಚಾಯ್ ವಾಲಾ ಎಂದು ಹೇಳುತ್ತಿದ್ದಾರೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಇದೇ ವೇಳೆ…
ಬೆಂಗಳೂರು: ಒಂದು ಕಡೆ ಕಾಂಗ್ರೆಸ್ ಆಪರೇಷನ್ ಆಟ ಶುರು ಮಾಡಿದ್ರೆ, ಇತ್ತ ಬಿಜೆಪಿ ಅದನ್ನು ದೊಡ್ಡ ಮಟ್ಟದಲ್ಲಿ ತಡೆಯುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದ್ರೆ ನಿನ್ನೆ(ಆಗಸ್ಟ್ 21) ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಆದ ಚರ್ಚೆ, ನಾಯಕರ ಮನಸ್ಥಿತಿ ಬೇರೆಯದ್ದನ್ನೇ ಹೇಳುತ್ತಿದೆ. ಕಾಂಗ್ರೆಸ್‌ನತ್ತ ಮುಖ ಮಾಡಿರುವ ಬಾಂಬೆ ಫ್ರೆಂಡ್ಸ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ ಎಂಬ ಮನಸ್ಥಿತಿಗೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅಸಮಾಧಾನದ ಬಗ್ಗೆ ಚರ್ಚೆ ನಡೆಸಿದ್ದು, ಬಿಜೆಪಿಗೆ ವಲಸೆ ಬಂದವರು ತಿರಗಾ ಕಾಂಗ್ರೆಸ್ ಬಾಗಿಲು ತಟ್ಟಿದರೆ ಸಿಕ್ಕಾಪಟ್ಟೆ ತಲೆಕೆಡಿಸಿಕೊಳ್ಳುವುದು ಬೇಡ ಎಂಬ ಮನಸ್ಥಿತಿಗೆ ಬಿಜೆಪಿ ರಾಜ್ಯ ನಾಯಕರು ಬಂದಿದ್ದಾರೆ. ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದು ಬೇಡ. ‘ಪಕ್ಷ ಬಿಡುವವರ ಮನವೊಲಿಸೋಣ ಆದ್ರೆ ಅಂಗಲಾಚುವುದು ಬೇಡ. 2024ರ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿ. ಪಕ್ಷ ಸಂಘಟನೆ ಬಲಗೊಳಿಸುವ…
ವೀಡಿಯೊ ಕರೆ ಚಿತ್ರೀಕರಿಸಿಕೊಂಡು ನಿವೃತ್ತ ಸರ್ಕಾರಿ ನೌಕರರೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಸ್ಥಳೀಯ ನಿವಾಸಿಯಾಗಿರುವ 74 ವರ್ಷ ವಯಸ್ಸಿನ ನಿವೃತ್ತ ನೌಕರರೊಬ್ಬರು ಸುಲಿಗೆ ಬಗ್ಗೆ ದೂರು ನೀಡಿದ್ದಾರೆ. ಮಹಿಳೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬಾಗಲಕೋಟೆ: ಏಕಾಗ್ರತೆ, ಸಮರ್ಥಣಾಭಾವ, ಬದ್ಧತೆ ಮತ್ತು ನಿರ್ಧಿಷ್ಟ ಗುರಿ ಇಟ್ಟುಕೊಂಡು ಅಧ್ಯಯನದಲ್ಲಿ ತೊಡಗುವುದರಿಂದ ಯಶಸ್ಸು ಸಾಧ್ಯ ಎಂದು ಎಸ್.ಬಿ ವಿಸ್ಡಮ್ ಕರಿಯರ್ ಅಕಾಡೆಮಿ ಅಧ್ಯಕ್ಷರಾದ ಶರಣಯ್ಯ ಭಂಡಾರಿಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಸ್.ಬಿ ವಿಸ್ಡಮ್ ಕರಿಯರ್ ಅಕಾಡೆಮಿ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ, ಉದ್ಯೋಗ ಮಾರ್ಗದರ್ಶಿ ಕೋಶ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಸಂಘದ ನೂತನ ಸಬಾಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರೀಕರಣ, ಜಾಗತೀಕರಣ, ಕೈಗಾರಿಕರಣದ ಅಭಿವೃದ್ಧಿಯಿಂದ ಪ್ರತಿ ಕ್ಷೇತ್ರದಲ್ಲಿಯೂ ಸ್ಪರ್ಧೆ ಏರ್ಪಡುತ್ತಿದ್ದು ಉದ್ಯೋಗ ಕ್ಷೇತ್ರವು ಮೊದಲ ಸ್ಥಾನದಲ್ಲಿದೆ. ಇಲ್ಲಿ ನಮ್ಮ ಕನಸಿನ ಹುದ್ದೆ ಪಡೆದುಕೊಳ್ಳಬೇಕೆಂದರೆ ನಿರ್ಧಿಷ್ಟವಾದ ನಡೆ ಮತ್ತು ವಿಭಿನ್ನ ಆಲೋಚನೆಗಳು ಅವಶ್ಯ ಎಂದರು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸೂಕ್ಷ್ಮ ಅದ್ಯಯನ ಅವಶ್ಯಕ. ಯಶಸ್ಸು ಒಂದು ದಿನದ ಕೊಡುಗೆಯಲ್ಲ, ನಿರಂತರ ಪ್ರಯತ್ನದ ಫಲವಾಗಿದೆ. ಕೇವಲ ಒಂದು ವಿಷಯದ ಆಯ್ಕೆಯಿಂದ…