Subscribe to Updates
Get the latest creative news from FooBar about art, design and business.
- ಬಳ್ಳಾರಿ: ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
- “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
Author: admin
ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಅರವಳಿಕೆ ಚುಚ್ಚುಮದ್ದು ನೀಡಿ ಯಶಸ್ವಿಯಾಗಿ ಹುಲಿಯನ್ನು ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1.45ರ ಹೊತ್ತಿಗೆ ಎರಡು ದಿನದ ಹಿಂದೆ ಹಸುವೊಂದನ್ನು ಕೊಂದಿದ್ದ ಜಾಗಕ್ಕೆ ಬಂದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು ಸದ್ಯ ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ.
ರಾಜ್ಯಾದ್ಯಂತ 202 ಡಯಾಲಿಸಿಸ್ ಕೇಂದ್ರಗಳಿದ್ದು, ನವೆಂಬರ್ 30 ರಿಂದ ಸಂಪೂರ್ಣ ಕೆಲಸ ನಿಲ್ಲಿಸಲಿವೆ. ಕೊರೊನಾದ ಕಾರಣ ಹೇಳಿ ಸರ್ಕಾರ ಡಯಾಲಿಸಿಸ್ ಸಿಬ್ಬಂದಿಗಳ ಸಂಬಳಕ್ಕೆ ಕತ್ತರಿ ಹಾಕಿದ್ದು, ಕಳೆದೆರಡು ವರ್ಷಗಳಿಂದ ಅರ್ಧ ಸಂಬಳ ಪಡೆದು ಕೆಲಸ ಮಾಡುತ್ತಿದ್ದಾರೆ. ಇದಲ್ಲದೆ ಕಳೆದ ಎರಡು ತಿಂಗಳುಗಳಿಂದ ಸಂಬಳವನ್ನು ಹೋಲ್ಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಪರದಾಡುವಂತಾಗಿದೆ. ರಾಜ್ಯ ಸರ್ಕಾರದ ಈ ನಡೆಯ ವಿರುದ್ದ ಪ್ರತಿಭಟನೆಗೆ ನಡೆಸಲಿದ್ದು, ನ.30ರಿಂದ ಡಯಾಲಿಸಿಸ್ ಕೇಂದ್ರಗಳು ಮುಚ್ಚಲಿವೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂಬ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಮಾಡಲಾಗಿದೆ. ಅಲ್ಲದೆ, ಸಾವಿರಾರು ಕೋಟಿ ಹಗರಣ ನಡೆಸಿದ್ದನ್ನು ಮುಂದಿಟ್ಟುಕೊಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಅಣಕಿಸಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಜಿ.ಡಿ ಮಂಜುನಾಥ್ ಎಂಬವರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಟಿ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಗ್ರೂಪ್ ತಯಾರಿಸಿ ಅದರಲ್ಲಿ ಸಚಿವರ ಹಾಗೂ ಸಚಿವರ ಪಕ್ಷಕ್ಕೆ ವಿರುದ್ಧವಾದ ಫೋಸ್ಟ್ ಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಾರ್ಚ್‌ನಲ್ಲಿ ನಿಯಮಗಳನ್ನು ಪ್ರಕಟಿಸಲಾಗುವುದು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2020 ರಲ್ಲಿ ಸಂಸತ್ತು ಅಂಗೀಕರಿಸಿತು. ಪೌರತ್ವ ಕಾಯ್ದೆ ಜಾರಿಯಾದಾಗ ಅದು ದೇಶದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು. ಕಾನೂನು ಜಾರಿಗೆ ಬಂದರೂ ಮುಷ್ಕರ ಪ್ರಬಲವಾದ ಕಾರಣ ನಿಯಮಗಳು ಪ್ರಕಟವಾಗಿಲ್ಲ. ಮೂರು ವರ್ಷಗಳ ನಂತರ ಕೇಂದ್ರ ಸರ್ಕಾರ ಇದಕ್ಕಾಗಿ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಕರಡು ನಿಯಮಗಳನ್ನು ಸಿದ್ಧಪಡಿಸಲಾಗಿದೆ ಎಂದು ವರದಿಯಾಗಿದೆ. ಸಾರ್ವತ್ರಿಕ ಚುನಾವಣೆಯ ಘೋಷಣೆಗೆ ಮುನ್ನ ಮಾರ್ಚ್‌ನಲ್ಲಿ ನಿಯಮಗಳ ಅಧಿಸೂಚನೆಯನ್ನು ಅಂತಿಮಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಇದನ್ನು ಖಚಿತಪಡಿಸಿದ್ದಾರೆ. ಪೌರತ್ವ ಕಾಯ್ದೆ ಬಿಜೆಪಿ ಪ್ರಣಾಳಿಕೆಯ ಭಾಗವಾಗಿದೆ. ಏಕರೂಪ ನಾಗರಿಕ ಸಂಹಿತೆ ಪ್ರಕ್ರಿಯೆಗಳಿಗಾಗಿ ಪೌರತ್ವ ಕಾನೂನುಗಳ ಶಾಸನವನ್ನು ಪ್ರಕಟಿಸುವುದು ಅವಶ್ಯಕ.
ಸದ್ಯದಲ್ಲೇ ಮಣಿಪುರದಲ್ಲಿ ಶಾಂತಿ ಒಪ್ಪಂದ ಏರ್ಪಡುವ ಸೂಚನೆಗಳಿವೆ. ಮಣಿಪುರ ಸರ್ಕಾರ ವಿವಿಧ ಸಂಘಟನೆಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಶಾಂತಿ ಒಪ್ಪಂದವು ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ಶಸ್ತ್ರಾಸ್ತ್ರಗಳ ವರ್ಗಾವಣೆ ಸೇರಿದಂತೆ ನಿಬಂಧನೆಗಳನ್ನು ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮಣಿಪುರದಲ್ಲಿ ಶಾಂತಿ ಒಪ್ಪಂದಕ್ಕೆ ಅನುಕೂಲ ಮಾಡಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಿ ತಿಂಗಳುಗಳೇ ಕಳೆದಿವೆ. ಘರ್ಷಣೆ ವ್ಯಾಪಿಸದೆ ಎರಡು ಬಣಗಳನ್ನು ಒಂದು ಮೇಜಿನ ಸುತ್ತ ತರಲು ಇದುವರೆಗೆ ಸಾಧ್ಯವಾಗಿಲ್ಲ. ಕೇಂದ್ರ ಗೃಹ ಸಚಿವಾಲಯದ ಪ್ರತಿನಿಧಿಗಳು ವಿವಿಧ ಸಂಘಟನೆಗಳೊಂದಿಗೆ ನಡೆಸಿದ ಅನೌಪಚಾರಿಕ ಮಾತುಕತೆ ಇದೀಗ ಸಹಕಾರವನ್ನು ಸಡಿಲಿಸಿದೆ. ವಿವಿಧ ಸಂಘಟನೆಗಳೊಂದಿಗೆ ಮಾತುಕತೆ ನಡೆಸುತ್ತಿರುವುದನ್ನು ಮಣಿಪುರ ಸರ್ಕಾರ ಖಚಿತಪಡಿಸಿದೆ. ಸದ್ಯದಲ್ಲೇ ಎರಡು ಬಣಗಳ ಜತೆ ಜಂಟಿ ಚರ್ಚೆ ನಡೆಸಲಾಗುವುದು ಎಂದು ಸರ್ಕಾರ ಪ್ರತಿಕ್ರಿಯಿಸಿದೆ. ಎರಡೂ ಕಡೆಯವರು ರಾಜ್ಯ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕುತ್ತಾರೆ. ಪ್ರಕರಣಗಳ ಹಿಂಪಡೆಯುವಿಕೆ ಮತ್ತು ಶಸ್ತ್ರಾಸ್ತ್ರಗಳ ವರ್ಗಾವಣೆಯನ್ನು ಶಾಂತಿ ಒಪ್ಪಂದದಲ್ಲಿ ಸೇರಿಸಲು ಪ್ರಸ್ತಾಪಿಸಲಾಗಿದೆ. ಕುಕಿಗಳ ಪ್ರತಿಭಟನೆಯು ಬಹುಸಂಖ್ಯಾತ ಮೀಥಿಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡುವ…
ತಮಿಳುನಾಡು: ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರ ಜನ್ಮದಿನಕ್ಕೆ ಉಡುಗೊರೆಯಾಗಿ ಡಿಸಿಎಂ ಹುದ್ದೆ ನೀಡಲು ತಮಿಳುನಾಡು ಸಿಎಂ ಸ್ಟಾಲಿನ್ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 17 ರಂದು ಸೇಲಂನಲ್ಲಿ ನಡೆಯಲಿರುವ ಡಿಎಂಕೆ ಯುವ ಘಟಕದ ಸಮಾವೇಶದಲ್ಲಿ ಈ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಗೆ ಡಿಸಿಎಂ ಪಟ್ಟ ನೀಡುವ ಸಾಧ್ಯತೆಯಿದೆ ಎಂದು ಡಿಎಂಕೆ ಪದಾಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಇನ್ನು ಮುಂದೆ ‘ಆಯುಷ್ಮಾನ್ ಆರೋಗ್ಯ ಮಂದಿರ’ ಎಂದು ಕರೆಯಲಾಗುವುದು: ಕೇಂದ್ರ ನಿರ್ದೇಶನ
ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಕುಟುಂಬ ಆರೋಗ್ಯ ಕೇಂದ್ರಗಳ ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರ ಬಯಸಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಆಯುಷ್ಮಾನ್ ಅನ್ನು ಆರೋಗ್ಯ ಮಂದಿರ ಎಂದು ಕರೆಯಬೇಕೆಂದು ಸಲಹೆ ನೀಡಿದೆ. ಆಯುಷ್ಮಾನ್ ಭಾರತ್ ಅಡಿಯಲ್ಲಿ ಅನುದಾನಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಕುಟುಂಬ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ‘ಆಯುಷ್ಮಾನ್ ಆರೋಗ್ಯ ಮಂದಿರ’ ಎಂದು ಕರೆಯಲ್ಪಡುತ್ತವೆ. ‘ಆರೋಗ್ಯಂ ಪರಮಂ ಧನಂ’ ಎಂಬ ಟ್ಯಾಗ್ ಲೈನ್ ಕೂಡ ಕೊಡಬೇಕು. ಡಿಸೆಂಬರ್ ಅಂತ್ಯದೊಳಗೆ ಹೆಸರು ಬದಲಾವಣೆ ಪೂರ್ಣಗೊಳ್ಳಬೇಕು. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದ್ದು, ಸ್ವಂತ ಕಟ್ಟಡದಲ್ಲಿ ಕೆಲಸ ಮಾಡದಿದ್ದರೆ ಫ್ಲಕ್ಸ್ ಬೋರ್ಡ್ ಮೇಲೆ ಹೆಸರು ಪ್ರದರ್ಶಿಸಬೇಕು. ಹೆಸರು ಬದಲಾವಣೆಗೆ 3,000 ಮೀಸಲಿಡಲಾಗಿದೆ. ಆಯುಷ್ಮಾನ್ ಮನ್ ಭಾರತ್ ಪೋರ್ಟಲ್ ನಲ್ಲಿ ಫೋಟೋವನ್ನು ಅಪ್ ಲೋಡ್ ಮಾಡಬೇಕು. ಆಯಾ ರಾಜ್ಯಗಳು ಹೆಸರನ್ನು ತಮ್ಮ ಭಾಷೆಗಳಿಗೆ ಬದಲಾಯಿಸಿಕೊಳ್ಳಬಹುದು. ಆದರೆ ಟ್ಯಾಗ್ ಲೈನ್ ಬದಲಾಯಿಸಬಾರದು.
ಶ್ರೀಲಂಕಾ ಸಂಪುಟದಿಂದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರನ್ನು ವಜಾಗೊಳಿಸಲಾಗಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅಧ್ಯಕ್ಷರು ಕ್ರಿಕೆಟ್ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೊಗೆಯಲು ಯತ್ನಿಸಿದಾಗ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಕ್ರೀಡಾ ಸಚಿವರು ಈ ಹಿಂದೆ ಆರೋಪಿಸಿದ್ದರು. ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಶ್ರೀಲಂಕಾದ ದಯನೀಯ ಸೋಲಿನ ನಂತರ ಕ್ರೀಡಾ ಸಚಿವರು ಇಡೀ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು (ಎಸ್ ಎ ಲ್‌ಸಿ) ವಿಸರ್ಜಿಸಿದ್ದಾರೆ. ನಂತರ 1996 ರ ವಿಶ್ವಕಪ್ ವಿಜೇತ ನಾಯಕ ಅರ್ಜುನ ರಣತುಂಗ ನೇತೃತ್ವದಲ್ಲಿ ಮಧ್ಯಂತರ ಸಮಿತಿಯನ್ನು ನೇಮಿಸಲಾಯಿತು. ಸಮಿತಿಯು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಮಾಜಿ ಮಂಡಳಿಯ ಅಧ್ಯಕ್ಷರು ಸೇರಿದಂತೆ ಏಳು ಸದಸ್ಯರನ್ನು ಒಳಗೊಂಡಿದೆ. ನ.7ರಂದು ನ್ಯಾಯಾಲಯವು ಕ್ರೀಡಾ ಸಚಿವರು ನೇಮಿಸಿದ್ದ ಮಧ್ಯಂತರ ಸಮಿತಿಯ ಕಾರ್ಯವನ್ನು ತಾತ್ಕಾಲಿಕವಾಗಿ ತಡೆಹಿಡಿದು ಮಧ್ಯಂತರ ಆದೇಶ ಹೊರಡಿಸಿತ್ತು. ಎಸ್ ಎಲ್ ಸಿ ಅಧ್ಯಕ್ಷ ಶಮ್ಮಿ ಸಿಲ್ವಾ ಸಲ್ಲಿಸಿದ್ದ ರಿಟ್ ಅರ್ಜಿಯ…
ಬೆಂಗಳೂರು: ಇತ್ತೀಚೆಗೆ ಬೈಯಪಗಪನಹಳ್ಳಿ ಪೊಲೀಸರು ಬೇಧಿಸಿರುವ ಅಲಮನೆಯೊಂದರಲ್ಲಿ ಭ್ರೂಣಹತ್ಯೆ ಪ್ರಕರಣದಲ್ಲಿ ಮೂರು ತಿಂಗಳಿನಲ್ಲಿ 242 ಭ್ರೂಣ ಹತ್ಯೆಗಳಾಗಿದ್ದು,ಅದೂ ಕೂಡ ಹೆಣ್ಣುಭ್ರೂಣ ಹತ್ಯೆ ಎಂಬುದು ಬೆಳಕಿಗೆ ಬಂದಿದೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ, ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ಬಿಚ್ಚಿಟ್ಟರು. ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000 ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದರು. ಪ್ರತಿ ಭ್ರೂಣ ಹತ್ಯೆಗೆ 25ರಿಂದ 30,000 ರೂ. ಚಾರ್ಜ್…
ಗೃಹ ಸಚಿವರ ತವರಿನಲ್ಲಿ ದಲಿತರ ದುಸ್ಥಿತಿ!: ದಲಿತ ದೌರ್ಜನ್ಯ ಬಗ್ಗೆ ದೂರು ನೀಡಿ 12 ದಿನಗಳಾದರೂ ಎಫ್ ಐಆರ್ ದಾಖಲಾಗಿಲ್ಲ!
ತುಮಕೂರು: ದಲಿತ ಸಮುದಾಯದ ವ್ಯಕ್ತಿಯನ್ನು ಜಮೀನು ದುರಸ್ತಿ ಮಾಡಿಕೊಡದೇ ಅಲೆದಾಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸಿದ್ದೇಶ್ ಹಾಗೂ ಇನ್ನಿತರರ ವಿರುದ್ಧ ಪೊಲೀಸ್ ಉಪಾಧೀಕ್ಷಕ ಅವರಿಗೆ ದೂರು ನೀಡಲಾಗಿದ್ದರೂ, ದೂರು ನೀಡಿ 12 ದಿನಗಳಾದರೂ ಎಫ್ ಐಆರ್ ದಾಖಲಿಸದ ಹಿನ್ನೆಲೆಯಲ್ಲಿ ಮಂಗಳವಾರ(ನವೆಂಬರ್ 28) ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಹಕಾರೊಂದಿಗೆ ನೊಂದ ಯಲ್ಲಪ್ಪ ಕುಟುಂಬವು ಎಸ್ ಪಿ ಕಚೇರಿಯಲ್ಲಿ ಮತ್ತೆ ದೂರು ದಾಖಲಿಸಿದೆ. ಗೌರಿಪುರ ಸರ್ವೇ ನಂಬರ್ 5ರಲ್ಲಿ ಸರ್ಕಾರವು 1988ರಲ್ಲಿ ತನ್ನ ಹೆಸರಿಗೆ ಸಾಗುವಳಿ ಪತ್ರ ನೀಡಿ 1.16 ಎಕರೆ ಜಮೀನು ಮಂಜೂರು ಮಾಡಿತ್ತು. ಇದೇ ಸರ್ವೇ ನಂಬರ್ ನಲ್ಲಿ ಇತರೆ ಹಿಡುವಳಿದಾರರ ಹೆಸರು ಜಂಟಿ ಪಹಣಿಯಲ್ಲಿ ನಮೂದಾಗಿದ್ದು, ಇದುವರೆಗೂ ತನ್ನ ಜಮೀನು ದುರಸ್ತಿಯಾಗಿರುವುದಿಲ್ಲ. ಸರಿಪಡಿಸಿಕೊಡುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಯಾವುದೇ ಕ್ರಮಕೈಗೊಳ್ಳದೇ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಅಲೆದಾಡಿಸುತ್ತಿದ್ದರು. ಆದ್ದರಿಂದ ತುಮಕೂರು ತಹಶೀಲ್ದಾರ್ ಸಿದ್ದೇಶ್ ಸೇರಿದಂತೆ ಇತರರ ವಿರುದ್ಧ ಯಲ್ಲಪ್ಪ ಅವರು ಪೊಲೀಸ್ ಉಪಾಧೀಕ್ಷಕ ಚಂದ್ರಶೇಖರ್…