Subscribe to Updates
Get the latest creative news from FooBar about art, design and business.
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
- ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
Author: admin
ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಭಾರತ ತಂಡವನ್ನ ಬಿಸಿಸಿಐ ಪ್ರಕಟಿಸಿದ್ದು ರೋಹಿತ್ ಶರ್ಮಾ ನಾಯಕರಾದರೇ , ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲ್ಲಿದ್ದಾರೆ. ಎಂದಿನಂತೆ ವಿರಾಟ್ ಕೊಹ್ಲಿ ತಂಡದಲ್ಲಿದ್ದಾರೆ. ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕಮ್ ಬ್ಯಾಕ್ ಮಾಡಿದ್ದಾರೆ. ಏಷ್ಯಾಕಪ್ ಮೂಲಕ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಈ ಮೊದಲೇ ಊಹಿಸಿದಂತೆ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹಾಗೂ ಸ್ಪಿನ್ ಬೌಲರ್ ಚಹಲ್ ರನ್ನ ಕೈಬಿಡಲಾಗಿದೆ. ಆದರೆ ಅಚ್ಚರಿಯ ಆಯ್ಕೆ ಎಂಬಂತೆ ಕೇವಲ 8 ಟಿ20 ಪಂದ್ಯಗಳನ್ನಾಡಿರುವ ಹಾಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ ಅನುಭವ ಹೊಂದಿರದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ತಂಡ ಹೀಗಿದೆ.. ರೋಹಿತ್ ಶರ್ಮಾ(ನಾಯಕ), ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೇಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್. ಹಾರ್ದಿಕ್ ಪಾಂಡ್ಯ(ಉಪನಾಯಕ),…
ಬೆಂಗಳೂರು: 70 ವರ್ಷದ ವೃದ್ಧನೊಬ್ಬ ತನ್ನನ್ನ ಮದುವೆಯಾಗುವುದಾಗಿ ನಂಬಿಸಿ ನಂತರ ಮದುವೆಗೆ ನಿರಾಕರಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ 63 ವರ್ಷದ ವೃದ್ಧೆಯೊಬ್ಬರು ಪೊಲೀಸ್ ಠಾಣಾ ಮೆಟ್ಟಿಲೇರಿರುವ ವಿಚಿತ್ರ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ನೊಂದ ವೃದ್ಧೆ ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೃದ್ಧೆಯನ್ನು ಯಾಮಾರಿಸಿ ಮೂರೂವರೆ ಕೋಟಿ ರೂಪಾಯಿ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಗಳನ್ನು ಬನಶಂಕರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. 63 ವರ್ಷದ ಶಾಂತಾ ಎಂಬವರಿಗೆ ವಂಚಿಸಿದ್ದ ಅಪೂರ್ವ ಯಾದವ್, ಈಕೆಯ ತಾಯಿ ವಿಶಾಲ, ಸ್ನೇಹಿತೆ ಅರುಂಧತಿ ಹಾಗೂ ಪತಿ ರಾಕೇಶ್ ಬಂಧಿತರು. ಪ್ರಕರಣದ ವಿವರ: ಬನಶಂಕರಿ 2ನೇ ಹಂತದ ಪದ್ಮನಾಭನಗರದಲ್ಲಿ ವಾಸವಿದ್ದ ವೃದ್ಧೆ ಶಾಂತಾ ಅವರ ಪತಿ ಇತ್ತೀಚೆಗಷ್ಟೆ ತೀರಿಕೊಂಡಿದ್ದರು. ಶಾಂತಾ ಮತ್ತು ಅವರ ಪುತ್ರಿ ಮಾತ್ರ ಮನೆಯಲ್ಲಿ ವಾಸವಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಅರುಂಧತಿ ಮತ್ತು ರಾಕೇಶ್ ದಂಪತಿ ಇನ್ಸುರೆನ್ಸ್…
“ನನ್ನನ್ನು ಮತ್ತು ನನ್ನ ಮಕ್ಕಳನ್ನು ಪತಿ ಮನೆಯಿಂದ ಹೊರ ಹಾಕಿದ್ದು, ನನಗೆ ಜೀವ ಬೆದರಿಕೆಯಿದೆ. ಆತ ಯಾವುದೇ ಕ್ಷಣದಲ್ಲೂ ನಮ್ಮನ್ನು ಕೊಲ್ಲಬಹುದು” ಎಂದು ಆರೋಪಿಸಿ ಮಹಿಳೆಯೊಬ್ಬರು ಮಕ್ಕಳ ಸಹಿತ ವಿಡಿಯೋ ಮಾಡಿ ರಕ್ಷಣೆ ಕೋರಿದ್ದಾರೆ. ಸಂಬಂಧ ಹೈದರಾಬಾದ್ ಮೂಲದ ಪೂಜಾ ಗಾಂಧಿ ಎಂಬುವವರು ಪತಿ ವೈಭವ್ ಜೈನ್ ಮತ್ತು ಗೀತಿಕಾ ಬಿಂದನಂ, ರೋಹನ್ ಸಾಲ್ಯಾನ್ ಎಂಬುವವರಿಂದ ಪ್ರಾಣ ಬೆದರಿಕೆ ಇದೆ ಎಂದು ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೊತ್ತನೂರು ನಿವಾಸಿ ಪೂಜಾ ಗಾಂಧಿ ಎಂಬುವವರು ಈ ವಿಡಿಯೋ ಮಾಡಿದ್ದಾರೆ. ಪತಿ ವೈಭವ್ ಜೈನ್, ಗೀತಿಕಾ ಬಿಂದನಂ, ರೋಹನ್ ಸಾಲ್ಯಾನ್ ಅವರಿಂದ ನನಗೆ ಮತ್ತು ಮಕ್ಕಳಿಗೆ ಜೀವ ಬೆದರಿಕೆ ಇದೆ ಎಂದು ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ನಡುವೆ ಪೂಜಾ ಗಾಂಧಿ ಸಹೋದರ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಸಹೋದರಿಯ ಸೆಲ್ಫಿ ವಿಡಿಯೋ ಹಂಚಿಕೊಂಡು, ಮುಖ್ಯಮಂತ್ರಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ. ಸಹೋದರಿಗೆ…
ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯು ಬೆಂಗಳೂರಿನ ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ವಿನೂತನ ಚಿಕಿತ್ಸೆಯಾದ ಸಮಗ್ರ ಜೀನೋಮಿಕ್ ಪ್ರೊಫೈಲಿಂಗ್ (ಸಿಜಿಪಿ) ಪೂರ್ಣಗೊಳಿಸಿದ್ದು, ಜೊತೆಗೆ, ಟ್ರಿಸ್ಟಾ ಸೈನ್ಸಸ್ ನ ಹೊಸ ಗುಣಮಟ್ಟದ ಕ್ಯಾನ್ಸರ್ ಆರೈಕೆಗೂ ಚಾಲನೆ ನೀಡುತ್ತಿದೆ ಎಂದು ಹೆಲ್ತ್‌ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ (ಎಚ್‌ಸಿಜಿ) – ಕಾರ್ಯನಿರ್ವಾಹಕ ಅಧ್ಯಕ್ಷ ಡಾ.ಬಿ.ಎಸ್. ಅಜೈಕುಮಾರ್ ತಿಳಿಸಿದರು. ಎಚ್ ಸಿಜಿ ನಗರದಲ್ಲಿ ಆಯೋಜಿಸಿದ್ದ “ಇಲ್ಯುಮಿನಾ-ಪ್ರೇಮಾಸ್ ಜೊತೆಗಿನ ವಿವಿಧ ಕ್ಯಾನ್ಸರ್ ಗಳ ಜೀನೋಮ್ ಪ್ರೊಫೈಲಿಂಗ್ ನ ಚಿಕಿತ್ಸಕ ಮತ್ತು ಭವಿಷ್ಯಜ್ಞಾನದ ಉಪಯುಕ್ತತೆ”ವಿಷಯದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ಬಡವರಿಗೂ ಸಹ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡುವುದು ನಮ್ಮ ಗುರಿಯಾಗಿದೆ. ಜೊತೆಗೆ, ಅತ್ಯಾಧುನಿಕ ಕ್ಯಾನ್ಸರ್ ಚಿಕಿತ್ಸೆ ನೀಡುವ ನಿಟ್ಟಿನಲ್ಲಿಯೂ ಸಾಕಷ್ಟು ಹೊಸ ಅನ್ವೇಷಣೆ ನಡೆಸಿದ್ದು, ಟ್ರಿಸ್ಟಾ ಸೈನ್ಸಸ್ ನ ಹೊಸ ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಯನ್ನೂ ಜಾರಿಗೆ ತರುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿದ್ದೇವೆ. ಇನ್ನು, ಅನುವಂಶಿಕವಾಗಿ ಬರುವ ಕ್ಯಾನ್ಸರ್ ತಡೆಗಟ್ಟಲು ಹಾಗೂ…
ರಾಜ್ಯದಲ್ಲಿ ಪಕ್ಷಾಂತರ ವಿಚಾರ ಇದೀಗ ಸಾಕಷ್ಟು ಸದ್ದು ಮಾಡುತ್ತಿದ್ದು. ಈ ಹಿಂದೆ ಬಿಜೆಪಿ ಸೇರಿದ್ದ ವಲಸೆ ಶಾಸಕರಲ್ಲಿ ಕೆಲವರು ಮತ್ತೆ ವಾಪಸ್ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ ಇಂದು ಕೆಲ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ವಿಧಾಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಆಯನೂರು ಮಂಜುನಾಥ್ ಇದೀಗ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ಮುಖಂಡ ಶಿಕಾರಿಪುರ ನಾಗರಾಜ್ ಗೌಡ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇನ್ನು ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ 15ಕ್ಕೂ ಅಧಿಕ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವರ್ಷ ಶ್ರಾವಣ ಬರೋಬರಿ ಎರಡು ತಿಂಗಳು ಬಂದಿದೆ, ಆದರೆ ಈ ಮೊದಲು ಬಂದಿರುವುದು ಶ್ರಾವಣ ಅಧಿಕ ಮಾಸ, ಆಗಸ್ಟ್ ೧೭ರಿಂದ ಶ್ರಾವಣ ಶುರು. ೩ ವರ್ಷಕ್ಕೊಮ್ಮೆ ಅಧಿಕ ಮಾಸ ಇರುತ್ತದೆ. ಈ ವರ್ಷ ಶ್ರಾವಣ ಅಧಿಕ ಮಾಸ ಬಂದಿದೆ. ಯಾವ ಮಾಸದ ಮೊದಲು ಅಧಿಕ ಮಾಸ ಬರುವುದೋ ಆ ಹೆಸರನ್ನು ನೀಡಲಾಗುವುದು, ಶ್ರಾವಣ ಅಧಿಕ ಮಾಸ ಜುಲೈ ೧೮ರಿಂದ ಆಗಸ್ಟ್ ೧೬ರವರೆಗೆ ಇತ್ತು. ಇದೀಗ ನಿಜ ಶ್ರಾವಣ ಮಾಸ ಆಗಸ್ಟ್ ೧೭ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ ೧೫ರವರೆಗೆ ಇರಲಿದೆ. ಅಧಿಕ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದಿಲ್ಲ ಸಾಮಾನ್ಯವಾಗಿ ಅಧಿಕ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದಿಲ್ಲ, ಆದರೆ ಪೂಜಾ ಕಾರ್ಯಗಳನ್ನು ಮಾಡಲಾಗುವುದು. ಅಧಿಕ ಮಾಸದಲ್ಲಿ ಪ್ರತಿನಿತ್ಯ ಶ್ರೀವಿಷ್ಣುವಿನ ನಾಮಸ್ಮರಣೆ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಈ ಅವಧಿಯಲ್ಲಿ ದೇವರ ಪೂಜೆಗಳನ್ನು ಮಾಡಲಾಗುವುದು, ಆದರೆ ಇದುವರೆಗೆ ಹೋಗದೇ ಇರುವ ದೇವಾಲಯಕ್ಕೆ ಈ ಅವಧಿಯಲ್ಲಿ ಹೋಗಬಾರದು. ಗೃಹ ಪ್ರವೇಶ, ಸಂನ್ಯಾಸಗ್ರಹಣ, ಗ್ರಹಣದೀಕ್ಷೆ, ವಿವಾಹ, ಉಪನಯನ ,…
ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್. ಪಿ. ಎಸ್. ಪಿ., ಟಿ. ಎಸ್. ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಲಪತಿಗಳು, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಲ್ಯಾಪ್ ಟಾಪ್ ಸಂಬಂಧ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು.
ಶೀಘ್ರವೇ 6 ಸಾವಿರ ಪೊಲೀಸ್ ಪೇದೆಗಳ ನೇಮಕಕ್ಕೆ ಸರಕಾರ ಕ್ರಮ ವಹಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿನ 2,500 ಹಾಗೂ ರಾಜ್ಯದ ಉಳಿದ ಭಾಗದಲ್ಲಿ ಖಾಲಿ ಇರುವಂತ 3,500 ಪೇದೆಗಳ ನೇಮಕಾತಿಯನ್ನು ಮಾಡಿಕೊಳ್ಳುವುದಾಗಿ ಗೃಹ ಸಚಿವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲಿ ಅಗತ್ಯ ಇದೆಯೋ ಅಲ್ಲಿ ಹೊಸ ಪೊಲೀಸ್ ಠಾಣೆ ಪ್ರಾರಂಭಿಸಲು ಉತ್ಸುಕವಾಗಿದೆ. ಆದರೇ ಸ್ಥಳೀಯವಾಗಿ ಪ್ರಸ್ತಾವನೆ ಬರಬೇಕು. ಕೆಲವೆಡೆ ಬಾಡಿಗೆ ಕಟ್ಟದಲ್ಲಿ ಪೊಲೀಸ್ ಠಾಣೆಗಳಿದ್ದು ಹಂತ ಹಂತವಾಗಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ. ಪಿಎಸ್‌ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಕೆಲ ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಕೋರ್ಟ್ ಸರ್ಕಾರ ಅಭಿಪ್ರಾಯ ಕೇಳಿತ್ತು. ಮರು ಪರೀಕ್ಷೆ ನಡೆಸುವುದಾಗಿ ಹೇಳಲಾಗಿದೆ. ಇನ್ನೂ ನ್ಯಾಯಾಲಯದಿಂದ ತೀರ್ಮಾನ ಹೊರಬಂದ ನಂತ್ರ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ತುಮಕೂರು: ವೃದ್ದೆಯೊಬ್ಬರು ಅಪಘಾತದಲ್ಲಿ ಗಾಯಗೊಂಡು ತಕ್ಷಣ ಸೂಕ್ತ ಚಿಕಿತ್ಸೆ ದೊರೆಯದೆ ರಸ್ತೆಯಲ್ಲೇ ನರಳಾಡಿದ ಘಟನೆ ತುಮಕೂರಿನ ಚಿಕ್ಕನಾಯನಹಳ್ಳಿಯಲ್ಲಿ ಪಟ್ಟಣದಲ್ಲಿ ನಡೆದಿದೆ. ಗೌರಮ್ಮ ಎಂಬುವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರ ಕಾಲಗಳ ಮೇಲೆ ಲಾರಿಯ ಚಕ್ರ ಹರಿದ ಪರಿಣಾಮ ಗಂಭೀರವಾದ ಗಾಯಗಳಾಗಿದ್ದು. ಅಲ್ಲದೆ ತಕ್ಷಣ ಚಿಕಿತ್ಸೆ ದೊರೆಯದೆ ಸುಮಾರು ಅರ್ಥ ಗಂಟೆಗೂ ಹೆಚ್ಚು ಕಾಲ ನರಳಾಡಿದರು. ಕಾಲು ಮುರಿದುಕೊಂಡು ರಕ್ತದ ಮಡುವಿನಲ್ಲಿ ಒದ್ದಾದುತ್ತಿದ್ದ ಹೃದಯ ಚಿಕಿತ್ಸೆ ಲಭಿಸಲೆಂದು ಸಾರ್ವಜನಿಕರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದ್ರೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿಯೇ ಈ ಘಟನೆ ಸಂಭವಿಸಿದರು ಕೂಡ ಸ್ಥಳಕ್ಕೆ ಅರ್ಧಗಂಟೆ ಗಂಟೆಯಾದರೂ ಆಂಬ್ಯುಲೆನ್ಸ್ ಬರ್ಲಿಲ್ಲ. ಇದರಿಂದಾಗಿ ರೊಚ್ಚಿಗೆದ್ದ ಸ್ಥಳೀಯರು ಆಟೋದಲ್ಲೇ ಅಜ್ಜಿಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿಕೊಟ್ಟರು. ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡ ಗೌರಮ್ಮಗೆ ಚಿಕಿತ್ಸೆ ನೀಡಲಾಗಿದೆ. ಕೊಡ್ಲಾಪುರ ಗ್ರಾಮದ ಅಜ್ಜಿ ಗೌರಮ್ಮ ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ. ಸರ್ಕಾರಿ ಶಾಲೆ ಮುಂಭಾಗ ವೇಗವಾಗ ಬಂದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು.…
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರಲ್ಲಿ ಪಾಲ್ಗೊಳ್ಳಲು ದಸರಾ ಗಜಪಡೆ ಮೈಸೂರು ಆಗಮನಕ್ಕೆ ಎರಡು ವಾರ ಮಾತ್ರ ಬಾಕಿ ಇದೆ. ಸೆಪ್ಟೆಂಬರ್ 1ರಂದು ಗಜಪಯಣ ಸಮಾರಂಭ ನಡೆಯಲಿದೆ. ಗಜಪಯಣ ಸಮಾರಂಭದ ಬಳಿಕ ಮೈಸೂರಿಗೆ ಆಗಮಿಸಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಸೆಪ್ಟೆಂಬರ್ 4ರಂದು ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣ ಪ್ರವೇಶಿಸಲಿದೆ. ಹೀಗಾಗಿ ಗಜಪಡೆಯ ವಾಸ್ತವ್ಯಕ್ಕಾಗಿ ತಾತ್ಕಾಲಿಕ ಶೆಡ್ ಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಕೆಲಸ ಭರದಿಂದ ಸಾಗಿದೆ. ಮೊದಲ ತಂಡದಲ್ಲಿ 9 ಆನೆಗಳು ಆಗಮಿಸಲಿದ್ದು, ಎರಡನೇ ತಂಡದಲ್ಲಿ ಐದು ಆನೆಗಳು ಆಗಮಿಸಲಿವೆ. ಆನೆಗಳ ಜೊತೆಗೆ ಮಾವುತರು, ಕಾವಾಡಿಗಳು ಕೂಡ ಬರಲಿದ್ದಾರೆ. ಹೀಗಾಗಿ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೂ ತಾತ್ಕಾಲಿಕ ಶೆಡ್ ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಕುರಿತು ಮಾತನಾಡಿದ ಡಿಸಿಎಫ್ ಸೌರಬ್ ಕುಮಾರ್, ಈ ಬಾರಿಯ ದಸರಾ ಮಹೋತ್ಸವಕ್ಕೆ ಆಗಮಿಸುವ ಗಜಪಡೆಗಳ ಆಗಮನಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿವೆ. ಎರಡನೇ ಹಂತದಲ್ಲಿ 5…