Subscribe to Updates
Get the latest creative news from FooBar about art, design and business.
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
- ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
Author: admin
ಸಿಎಂ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾ ವೃತ್ತಿ ಸಂಬಂಧಿತ ನಾನಾ ಪದಾಧಿಕಾರಿಗಳ ಜತೆ ಸಭೆ ನಡೆಸಿ ಎಲ್ಲರ ಅಹವಾಲು ಮತ್ತು ಬೇಡಿಕೆಗಳನ್ನು ಆಲಿಸಿದರು.ಪತ್ರಿಕಾ ವಿತರಕರ ಸಂಘ ಸೇರಿ ಕಾರ್ಯನಿರತ ಪತ್ರಕರ್ತರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಒಟ್ಟು ಒಂಬತ್ತು ಸಂಘಟನೆಗಳ 12 ಮಂದಿ ಪದಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಎಲ್ಲರ ಬೇಡಿಕೆಗಳನ್ನೂ ಸಮಗ್ರವಾಗಿ ಪರಿಶೀಲಿಸಿ ಬಳಿಕ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರು ಕ್ಲೀನ್ಸ್ ರಸ್ತೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000/- ರೂ. ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ರಾಜ್ಯದ ಎಲ್ಲಾ ಪಧಾಧಿಕಾರಿಗಳು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.
ರಾಜ್ಯದಲ್ಲಿ ಮತ್ತೆ ಕೊರೊನಾ ರೂಪಾಂತರಿ ವೈರಸ್ ಆತಂಕ ಹುಟ್ಟಿಕೊಂಡಿದೆ. ಆರೋಗ್ಯದ ಬಗ್ಗೆ ಎಚ್ಚರವಹಿಸಲು ಆರೋಗ್ಯ ಇಲಾಖೆ ಸೂಚನೆ ಕೊಟ್ಟಿದೆ. ಕೊರೊನಾ ರೂಪಾಂತರಿ ಎರಿಸ್ EG.5 ವಿದೇಶಗಳಲ್ಲಿ ಆತಂಕ ಸೃಷ್ಟಿಸಿದೆ. ಒಮಿಕ್ರಾನ್ ರೂಪಾಂತರಿಯ ಉಪ ತಳಿ ಎರಿಸ್ EG.5 ವೈರಸ್ ಅತಿವೇಗವಾಗಿ ಹರಡುವ ಆತಂಕವಿದೆ. ಅಮೆರಿಕ, ಜಪಾನ್, ಬ್ರಿಟನ್ ನಲ್ಲಿ ಎರಿಸ್ EG.5 ವೈರಸ್ ಭೀತಿ ಹೆಚ್ಚಿದೆ. ಹೀಗಾಗಿ ರಾಜ್ಯದಲ್ಲೂ ಮತ್ತೆ ಕೊವಿಡ್ ಹರಡುವ ಆತಂಕ ಉಂಟಾಗಿದೆ.
ಬೆಂಗಳೂರು ನಗರದ ಎಚ್ ಎಎಲ್ ಬಳಿಯ ವಾಯುಸೇನೆ ಜಾಗಕ್ಕೆ ಪಾನಮತ್ತನಾಗಿ ಅಕ್ರಮವಾಗಿ ಪ್ರವೇಶಿಸಿದ್ದ ರಾಜ್ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ರಾಜ್ ಕುಮಾರ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ವಾಯುಸೇನೆ ಜಾಗದಲ್ಲಿ ಸುತ್ತಾಡುತ್ತಿದ್ದ ಈತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಠಾಣೆಗೆ ಒಪ್ಪಿಸಿದ್ದಾರೆ. ‘ಅಕ್ರಮ ಪ್ರವೇಶ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ನೀಲಿ ಬಣ್ಣದ ಕುರ್ತಾ ಧರಿಸಿದ್ದ ರಾಜ್ ಕುಮಾರ್, ಪಾನಮತ್ತನಾಗಿ ವಾಯುಸೇನೆಯ ತಾಂತ್ರಿಕ ವಿಭಾಗದ ಜಾಗದೊಳಗೆ ಹೋಗಿದ್ದ. ಆತನನ್ನು ನೋಡಿದ್ದ ಭದ್ರತಾ ಸಿಬ್ಬಂದಿ, ಸುತ್ತುವರೆದು ಹಿಡಿದಿದ್ದರು. ಆರೋಪಿಯನ್ನು ವಿಚಾರಣೆ ಮಾಡಲಾಗಿದೆ. ಈತನ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ’ ಎಂದು ತಿಳಿಸಿವೆ.
ಬೆಂಗಳೂರು: ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮದಿ ಅಳಗನ್ (50) ಅವರು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳೀಯ ನಿವಾಸಿ ಮದಿ ಅಳಗನ್ ಅವರು ನಾಯಂಡನಹಳ್ಳಿ ಜಂಕ್ಷನ್ ಬಳಿ ಆಗಸ್ಟ್ 19ರಂದು ರಾತ್ರಿ ರಸ್ತೆ ದಾಟುತ್ತಿದ್ದರು. ಅದೇ ಸಂದರ್ಭದಲ್ಲಿ ಅತೀ ವೇಗವಾಗಿ ಬಂದಿದ್ದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು’ ಎಂದು ಪೊಲೀಸರು ಹೇಳಿದ್ದಾರೆ. .
ನಾನು ಬಿಜೆಪಿಯಲ್ಲೇ ಇರುತ್ತೇನೆ, ಕಾಂಗ್ರೆಸ್ ಸೇರಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿಕೆ ನೀಡಿದರು. ನಾನು ಲೋಕಸಭೆ ಚುಣಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ. ಬೇಕಾದ್ರೇ ರಕ್ತದಲ್ಲಿ ಬರೆದು ಕೊಡುತ್ತೇನೆ ಕಾಂಗ್ರೆಸ್ ಸೇರಲ್ಲ. ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುತ್ತೆ ಎಂಬ ವಿಶ್ವಾಸ ಇದೆ. ಟಿಕೆಟ್ ನೀಡದಿದ್ದರೂ ಪಕ್ಷದ ಪರವಾಗಿ ಕೆಲಸ ಮಾಡ್ತೇನೆ. ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಬಿಜೆಪಿ ಬಿಡುವುದಿಲ್ಲ ಎಂದರು.
ತುರುವೇಕೆರೆ : ಈ ಕ್ಷೇತ್ರದ ವಸತಿ ಯೋಜನೆ ಅಡಿಯಲ್ಲಿ ಬಂದಂತಹ ಮನೆಗಳನ್ನು ಮಸಾಲ ಜಯರಾಮ್ ರವರ ಕುಮ್ಮಕ್ಕಿನಿಂದ ಕುಣಿಗಲ್ ಕ್ಷೇತ್ರಕ್ಕೆ ನೀಡಲಾಗಿದೆ ಎಂಬ ಶಾಸಕ ಎಂ.ಟಿ.ಕೃಷ್ಣಪ್ಪನವರ ಮಾತು ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ. ತಮ್ಮ ಫಾರ್ಮ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೋಂಗಿ ರಾಜಕಾರಣ ಮಾಡುವುದನ್ನು ಮೊದಲು ಬಿಡಿ ಎಂ.ಟಿ.ಕೃಷ್ಣಪ್ಪನವರೆ, ಕೊಟ್ಟ ಕುದುರೆಯನ್ನು ಏರದವನು ಶೂರನು ಅಲ್ಲ ಧೀರನು ಅಲ್ಲ, ತಾಲೂಕಿಗೆ ತಂದಂತಹ ಮನೆಗಳನ್ನು ಸರಿಯಾಗಿ ಬಳಸಿಕೊಳ್ಳಲಾಗದೆ ಅಸಹಾಯಕತೆಯಿಂದ ಈ ಮಾತನ್ನು ಆಡುತ್ತಿದ್ದಾರೆ. ಕೈಲಾಗದವನು ಮೈಯನ್ನು ಪರಚಿಕೊಂಡ ಎಂಬ ಗಾದೆ ಎಂ.ಟಿ.ಕೃಷ್ಣಪ್ಪರಂತಹವರನ್ನು ನೋಡಿ ಹಿರಿಯರು ಮಾಡಿರಬೇಕು ಎಂದರು. 2023ರವರೆಗೆ ಮಾಡುತ್ತಿದ್ದ ಕಾಮಗಾರಿಗಳನ್ನು ನನ್ನ ಅವಧಿಯಲ್ಲಿ ಆದಂತಹ ಕಾಮಗಾರಿಗಳು ಎಂದು ಸುಳ್ಳು ಹೇಳಿಕೊಂಡೆ ಓಡಾಡಿದ್ದಾರೆ, ಈಗಲೂ ನನಗೆ ಮನೆ ತರುವ ಸಾಮರ್ಥ್ಯವಿದೆ. ಮಾನ್ಯ ಸಂಸದರಾದ ಬಸವರಾಜ್ ಅವರ ಬಳಿ ಮಾತಾಡಿದ್ದೇನೆ. ಕೊಡುತ್ತೇನೆ ಎಂಬ ಭರವಸೆಯನ್ನು ನೀಡುತ್ತಿದ್ದಾರೆ, 1000 ಮನೆಗಳನ್ನು ಈ ಕ್ಷೇತ್ರಕ್ಕೆ ತಂದೆ ತರುತ್ತೇನೆ ಎಂದು ಈ…
ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ಭಾನುವಾರ ತುಮಕೂರು ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಧ್ಯಾಹ್ನ ಉಪಹಾರ ಯೋಜನೆ ಪ್ರಧಾನ ಮಂತ್ರಿ ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮೊಟ್ಟೆ, ಬಾಳೆ ಹಣ್ಣು ಹಾಗೂ ಚಿಕ್ಕಿ ವಿತರಣೆ ಮಾಡುವ ಮೂಲಕ ಅಭಿಯಾಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಹೆಚ್.ವಿ.ವೆಂಕಟೇಶ್ ಮತ್ತು ಸುರೇಶ್ ಗೌಡ , ಮಹಾಪೌರರಾದ ಪ್ರಭಾವತಿ, ಜಿಲ್ಲಾಧಿಕಾರಿಗಳಾದ ಶ್ರೀನಿವಾಸ್, ಜಿ.ಪಂ.ಕಾರ್ಯನಿರ್ವಹಕಾಧಿಕಾರಿಗಳಾದ ಪ್ರಭು ಸೇರಿದಂತೆ ಹಲವು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತುಮಕೂರು: 15 ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿ ಮಗುವಿಗೆ ಜನ್ಮ ನೀಡಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ(FTSC) ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1.50 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ನಾಗೇಶ್ ಎಂಬ ಅಪರಾಧಿಯು ಪುರ ತಾಂಡ್ಯ ಹಾಗಲವಾಡಿ ಹೋಬಳಿಯ ಅಪ್ಪಣ್ಣನಹಳ್ಳಿಯವನಾಗಿದ್ದಾನೆ. ಈತ ನೊಂದ ಬಾಲಕಿಯ ಮನೆಗೆ ಕೆಲಸಕ್ಕಾಗಿ ಆಗಾಗ ಹೋಗಿ ಬರುತ್ತಿದ್ದನು. ಈ ವೇಳೆ ಬಾಲಕಿಗೆ ಪ್ರೀತಿ ಪ್ರೇಮ ಎಂಬ ನೆಪದಲ್ಲಿ ಪುಸಲಾಯಿಸಿ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ 7—8 ಬಾರಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ನೀಡಿದ್ದನು. ಇದರಿಂದಾಗಿ ಬಾಲಕಿಯು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು ಎಂದು ಈ ಪ್ರಕರಣದ ತನಿಖಾಧಿಕಾರಿ ಚೇಳೂರು ಪೊಲೀಸ್ ಠಾಣೆಯ ಎಫ್.ಕೆ. ನಡಾಪ್ ಅವರು ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ನಾಗೇಶನ ಮೇಲಿರುವ ಆರೋಪ ಸಾಬೀತಾಗಿದ್ದು, ಗೌರವಾನ್ವಿತ ನ್ಯಾಯಾಲಯದ ನ್ಯಾಯಾಧೀಶರು…
ಅಸ್ಸಾಂ: ಭಾರತದ ಅತ್ಯಂತ ಹಿರಿಯ ಸಾಕಾನೆ 89 ವರ್ಷದ ‘ಬಿಜುಲಿ ಪ್ರಸಾದ್’ ಇಂದು ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ಬೆಹಾಲಿ ಟೀ ಎಸ್ಟೇಟ್‌ನಲ್ಲಿ ಸಾವನ್ನಪ್ಪಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತಿದ್ದ ಆನೆ ಇಂದು ಮುಂಜಾನೆ 3.30ರ ಹೊತ್ತಿಗೆ ‘ದಿ ವಿಲಿಯಮ್ಸನ್ ಮಾಗೊರ್ ಗ್ರೂಪ್’ ಕಂಪನಿಗೆ ಸೇರಿದ ಬೆಹಾಲಿ ಟೀ ಎಸ್ಟೇಟ್‌ನಲ್ಲಿ ಕೊನೆಯುಸಿರೆಳೆದಿದೆ ಎಂದು ಎಸ್ಟೇಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ಸಣ್ಣ ಮರಿಯಿದ್ದಾಗ ಬಿಜುಲಿ ಪ್ರಸಾದ್‌ನನ್ನು ಬಾರ್‌ಗಾಂಗ್ ಟೀ ಎಸ್ಟೇಟ್‌ಗೆ ಕರೆತರಲಾಗಿತ್ತು. ಬಾರ್‌ಗಾಂಗ್ ಟೀ ಎಸ್ಟೇಟ್ ಮಾರಾಟಮಾಡಿದ ನಂತರ ಆನೆಯನ್ನು ಬೆಹಾಲಿ ಟೀ ಎಸ್ಟೇಟ್‌ಗೆ ತರಲಾಯಿತು. ಆನೆಯು ಇಡೀ ಎಸ್ಟೇಟ್‌ನ ಹೆಮ್ಮೆಯ ಸಂಕೇತದಂತಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.