Author: admin

ತಿಪಟೂರು: ತಾಲ್ಲೂಕಿನ ರಂಗಾಪುರ ವಲಯದ ಬನ್ನೀಹಳ್ಳಿ ಹಾಲಿನ ಡೈರಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.2 ಲಕ್ಷ ಮೊತ್ತದ ಡಿ ಡಿ ಮಂಜೂರಾಗಿದ್ದು ತಾಲ್ಲೂಕಿನ ಯೋಜನಾಧಿಕಾರಿ ಉದಯ್ ಕೆ. ಶುಭಹಾರೈಸಿ ಗ್ರಾಮಸ್ಥರಿಗೆ ಡಿಡಿ ವಿತರಿಸಿದರು. ಈ ಸಂಧರ್ಭದಲ್ಲಿ ಬನ್ನಿಹಳ್ಳಿ ಹಾಲು ಒಕ್ಕೂಟ ಸಹಕಾರ ಸಂಘದ ಅಧ್ಯಕ್ಷರಾದ ಪರಮೇಶ್ವರಯ್ಯ, ನಿರ್ದೇಶಕರಾದ ಬಿ.ಎಮ್.ಶಶಿಧರ್, ಮಂಜುನಾಥಸ್ವಾಮಿ, ಕುಮಾರಸ್ವಾಮಿ, ಬಿ.ಎಸ್.ಉಮೇಶ್, ರವಿಕುಮಾರ್, ನಾಗರಾಜು ಮುಖ್ಯಕಾರ್ಯನಿರ್ವಾಹಕರಾದ ಬಿ.ಎಮ್.ಪ್ರಕಾಶ್, ಹಾಲು ಪರೀಕ್ಷಕರಾದ ಬಿ.ಎಸ್.ಕಲ್ಯಾಣ್ ಕುಮಾರ್,  ವಲಯ ಮೇಲ್ವಿಚಾರಕ ದಿನೇಶ್, ಸೇವಾಪ್ರತಿನಿಧಿ ಪ್ರೀತಿ ಸಂಘದ ಪಾಲುದಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ:  ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಿತ್ರದುರ್ಗ: ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎಂದು ನೊಂದು ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜೆ.ಬಿ.ಹಳ್ಳಿಯಲ್ಲಿ ನಡೆದಿದೆ. ತಿರುಮಲ ರಾಂಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತಿರುಮಲ (31) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ತಿರುಮಲ ಹಲವು ವರ್ಷಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದು, ವಯಸ್ಸಾಗ್ತಿದೆ ಮದುವೆ ಮಾಡಿಕೊಳ್ಳಬೇಕು ಎನ್ನುವ ಚಿಂತೆಗೆ ಬಿದ್ದಿದ್ದರು ಎನ್ನಲಾಗಿದೆ. ಅಲ್ಲದೇ ಇತ್ತೀಚಿಗೆ ಮೂರು ಕಡೆ ಹೆಣ್ಣು ನೋಡಲು ತೆರಳಿದ್ದು, ಹೆಣ್ಣಿನ ಕಡೆಯವರಿಂದ ತಿರಸ್ಕಾರಗೊಂಡ ಪರಿಣಾಮ ಮನಸ್ಸಿಗೆ ಹೆಚ್ಚು ಘಾಸಿಯಾಗಿತ್ತು ಎನ್ನಲಾಗಿದೆ. ಮದುವೆ ಬಗ್ಗೆಯೇ ತೀವ್ರ ಯೋಚಿಸುತ್ತಿದ್ದ ತಿರುಮಲ ಮನನೊಂದು, ಮನೆಯಲ್ಲಿ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮೃತನ ತಂದೆ ಸೋಮರೆಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ನಟ ದರ್ಶನ್‌ ಅವರ ಬಹು ನಿರೀಕ್ಷಿತ ಚಿತ್ರ ʻದಿ ಡೆವಿಲ್‌ʼ ಸಿನಿಮಾ ಮೋಷನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಥಾಯ್ಲೆಂಡ್‌ ನಲ್ಲಿ ಶೂಟಿಂಗ್‌ ನಲ್ಲಿ ಬಿಝಿ ಚಿತ್ರತಂಡ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿದೆ. ಇದರ ವಿಡಿಯೋ ತುಣುಕನ್ನು ನಟ ದರ್ಶನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅತೀ ಶೀಘ್ರವೇ ಸಿನಿಮಾ ಬಿಡುಗಡೆಯಾಗಲಿದೆ ಎನ್ನುವ ಸುದ್ದಿಯನ್ನೂ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ ಖಾತೆಯಲ್ಲಿ ಮೋಷನ್‌ ಪೋಸ್ಟರ್‌ ನ 1:05 ನಿಮಿಷದ ವಿಡಿಯೋ ಹಂಚಿಕೊಂಡಿರುವ ದರ್ಶನ್,  ನಲ್ಮೆಯ ಸೆಲಬ್ರಿಟಿಗಳಿಗೆ… ನಿಮ್ಮೆಲ್ಲರ ಕಾತುರಕ್ಕೆ ಇಂದು ನಮ್ಮ ‘ದಿ ಡೆವಿಲ್’ ತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದರೊಂದಿಗೆ ಬೆಳ್ಳಿಪರದೆಯ ಮೇಲೆ ಶೀಘ್ರದಲ್ಲೇ ಬರುವ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ಈ ಪೋಸ್ಟರ್ ನೋಡಿ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ. ಈ ಮೋಷನ್‌ ಪೋಸ್ಟರ್‌ನಲ್ಲಿ ದರ್ಶನ್‌ ಖದರ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಬಿಹಾರ ಎಲೆಕ್ಷನ್‌ ಗಾಗಿ ಹಣ ಸಂಗ್ರಹಕ್ಕೆ ಸುರ್ಜೇವಾಲಾ ರಾಜ್ಯಕ್ಕೆ ಬಂದಿದ್ದಾರೆ. ಹಾಗಾಗಿ, ಸಿದ್ದರಾಮಯ್ಯ ಸರ್ಕಾರ ಹೂವು, ತರಕಾರಿ, ಟೀ ಅಂಗಡಿ, ಬೇಕರಿಗಳಿಗೆಲ್ಲಾ ನೋಟಿಸ್‌ ಕೊಟ್ಟು ಹಗಲು ದರೋಡೆ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದ್ದಾರೆ. ರಾಜ್ಯದ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಕೊಟ್ಟಿರೋ ಜಿಎಸ್‌ ಟಿ ನೊಟೀಸ್‌ ಸಂಬಂಧ  ಪ್ರತಿಕ್ರಿಯಿಸಿರುವ ಅವರು, ಗ್ಯಾರಂಟಿ ಯೋಜನೆಗಳಿಗೆ ಹಣ ಸಂಗ್ರಹಿಸಲು ತೆರಿಗೆ ಇಲಾಖೆ ಮೂಲಕ ನೋಟಿಸ್ ಕೊಡ್ತಿದ್ದಾರೆ ಕಿಡಿಕಾರಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ, ಈ ಬಗ್ಗೆ ಚರ್ಚೆ ಆಗ್ಬೇಕು. ಹಣಕಾಸು ಸಚಿವರು ಉತ್ತರ ಕೊಡ್ತಾರೆ ಅಂತ ಎಂದಿದ್ದಾರೆ. ಆದರೆ, ನೋಟಿಸ್ ಕೊಡೋದೇ ಕೇಂದ್ರ ಸರ್ಕಾರ ಅಂತ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಮಧ್ಯೆ, ವ್ಯಾಪಾರಿಗಳಿಗೆ ಜಿಎಸ್‌ ಟಿ ಜಂಜಾಟ ಮುಂದುವರಿದಿದೆ. ಯುಪಿಐ ಬೇಡ, ಕ್ಯಾಶ್ ಕೊಡಿ ಅನ್ನೋ ವ್ಯಾಪಾರಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಸರಗೂರು:   ತಾಲ್ಲೂಕು ಚಿಕ್ಕದೇವಮ್ಮನ ಬೆಟ್ಟದ ಸುತ್ತಮುತ್ತಲು ಕಳೆದ ಅನೇಕ ವರ್ಷಗಳಿಂದ ಕಾಡಾನೆಗಳ ಹಾವಳಿ ಹಾಗೂ ಕಾಡು ಪ್ರಾಣಿಗಳಿಂದ ರೈತರು ಬೆಳೆದಂತಹ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿದ್ದರೂ ಸಹ ಅರಣ್ಯಾಧಿಕಾರಿಗಳ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷದಿಂದ ಪ್ರತಿಯೊಬ್ಬ ರೈತರೂ ಸಹ ಲಕ್ಷಾಂತರ ರುಪಾಯಿ ಸಾಲಗಾರನಾಗಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಮನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುತ್ತಮುತ್ತಲ ಗ್ರಾಮಗಳಾದ ಲಂಕೆ, ಮನುಗನಹಳ್ಳಿ, ಹುಣಸಹಳ್ಳಿ, ಹೂವಿನಕೊಳ, ಅಲ್ಲಯ್ಯನಪುರ, ಬಸಾಪುರ, ಚಂದ್ರವಾಡಿ, ನಲ್ಲಿತಾಳಪುರ, ರಾಜೂರು, ಕಟ್ಟೆಹುಣಸೂರು, ನಂಜೀಪುರ, ಕುಂದೂರು, ಕಲ್ಲಂಬಾಳು ಹಾಗೂ ದಡದಹಳ್ಳಿ ಗ್ರಾಮದ ರೈತರು ಬೆಳೆದಂತಹ ಬೆಳೆ ಕಾಡುಪ್ರಾಣಿಗಳಿಂದ, ಕೈಗೆ ಬಂದತಹ ತುತ್ತು ಬಾಯಿಗೆ ಇಲ್ಲದಂತಾಗಿದೆ. ಇತ್ತ ಅರಣ್ಯಾಧಿಕಾರಿಗಳು ಬೆಳೆನಾಶಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಬೆಳೆ ನಷ್ಟ ನೀಡದೆ ಪರಿಹಾರವಾಗಿ ವರ್ಷಾನುಗಟ್ಟಲೆ ಕಾಯಿಸಿದ ನಂತರ ಬೆಳೆ ನಷ್ಟದ ಶೇ. 5% ನಷ್ಟನ್ನು ಮಾತ್ರ ಪರಿಹಾರದ ರೂಪವಾಗಿ ರೈತರಿಗೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಅರಣ್ಯಾಧಿಕಾರಿಗಳ ಈ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷವನ್ನು ಖಂಡಿಸಿ ಎಲ್ಲಾ…

Read More

ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ ಎಂ.ಬಿ.ಮ‌ಹದೇವ ಮತ್ತು ಬಿ ಮಟಕರೆ ಗ್ರಾಪಂ ಪಿಡಿಒ ಉಪಾಧ್ಯಕ್ಷೆಯಾಗಿ ಭಾಗ್ಯಮ್ಮ ಆಯ್ಕೆಯಾದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರದಂದು ಪ.ಜಾತಿ ಮತ್ತು ಪ.ಪಂಗಡ ಅಧಿಕಾರಿಗಳು ಹಾಗೂ ನೌಕರರ ಸಭೆ ನಡೆಸಿ ನಂತರ ಜಿಲ್ಲಾಧ್ಯಕ್ಷ ಪ್ರಕಾಶ್ ಹಾಗೂ ರಾಜ್ಯ ಹಾಗೂ ಜಿಲ್ಲಾ ಖಜಾಂಚಿ ಮಹದೇವ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅನಿಲ್  ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಪ್ರಕಾಶ್,  ನಮ್ಮ ಪ.ಜಾತಿ ಮತ್ತು ಪ.ಪಂಗಡ  ಸರ್ಕಾರಿ ನೌಕರರು ಶಿಸ್ತು, ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ನಡೆದುಕೊಂಡು, ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರಿಗೆ ಸ್ಪಂದಿಸಬೇಕು’ ಎಂದು ಸಲಹೆ ನೀಡಿದರು. ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಸರ್ಕಾರಿ ನೌಕರರದ್ದು. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ನೂತನ…

Read More

ಸರಗೂರು: ತಾ.ಪಂ. ಮತ್ತು ಜಿ.ಪಂ. ಚುನಾವಣೆ ನಡೆಸುವಲ್ಲಿ ಸರ್ಕಾರ ನಿರ್ಲಕ್ಷ್ಯ  ವಹಿಸಿದೆ ಎಂದು ಸರಗೂರು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ  ಆರೋಪಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು ಕೆಲಸಕಾರ್ಯಗಳು ಕುಂಠಿತವಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡುವಂತಾಗಿದೆ ಎಂದು ಅವರು ಹೇಳಿದರು. ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ, ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣೆ ಇದುವರೆಗೂ ಸರ್ಕಾರ ನಡೆಸದೇ ಇರುವುದು, ಸುಮಾರು ಐದು ವರ್ಷಗಳಿಂದಲೂ ಕಳೆದ ಬಿಜೆಪಿ ಸರ್ಕಾರದ ಆಡಳಿತದ ಎರಡು ಅವಧಿಯಲ್ಲೂ ಮತ್ತು ಈಗಿನ ಸರ್ಕಾರ ಈ ಚುನಾವಣೆಗಳನ್ನು ನಡೆಸುವಲ್ಲಿ ನಿರ್ಲಕ್ಷ್ಯ ತೋರುತ್ತಾ ಬಂದಿದೆ. ಇನ್ನು ಮುಂದಿನ ಅಭಿವೃದ್ದಿಯತ್ತ ಕೊಂಡೊಯ್ಯುವ ನಿರೀಕ್ಷೆಗಳೇ ಹುಸಿಯಾಗತೊಡಗಿದೆ ಎಂದು ಅವರು ಆರೋಪಿಸಿದರು. ಹಿಂದೆ ಈ ಚುನಾವಣೆಗಳನ್ನು ನಡೆಸುವ ಬಗ್ಗೆ ಚುನಾವಣಾ ಆಯೋಗವು ಹೈಕೋರ್ಟಿಗೆ ತನ್ನ ನಿಲುವಿನ ಪ್ರಸ್ತಾವನೆಯನ್ನು ಸಲ್ಲಿಸಿತು. ಅದರಂತೆ ಹೈಕೋರ್ಟ್ ಚುನಾವಣೆಗಳನ್ನು ನಡೆಸುವ ಬಗ್ಗೆ ತನ್ನ ಸೃಷ್ಟಿಕರಣ ನೀಡಲು ಕಳೆದ ಜುಲೈ ತಿಂಗಳ 11ನೇ ದಿನಾಂಕದ ಗಡುವನ್ನು ತಿರಸ್ಕರಿಸಿದಂತೆಯೇ…

Read More

ಬೀದರ್: ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಪುತ್ರ ಪ್ರತಿಕ್ ಚವ್ಹಾಣ್ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಔರಾದ್ ತಾಲ್ಲೂಕಿನ ಹೊಕ್ರಾಣಾ ಠಾಣೆಯಲ್ಲಿ ಪೊಲೀಸರು ದೂರು ಸ್ಥೀಕರಿಸಲು ನಿರಾಕರಿಸಿದ್ದರಿಂದ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ ಪ್ರತೀಕ್ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್   ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾದ ಪರಿಣಾಮ  25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ – ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವಿಜಯಪುರ:  ಸಾಲ ಪಡೆದ ಹಣ ವಾಪಸ್ ಕೊಡದ ಹಿನ್ನೆಲೆ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ನಡೆದಿದೆ. ಕುಮಾರ್‌ ಗೌಡ ಬಿರಾದಾರ್ ಎಂಬಾತ ಓರ್ವ ವ್ಯಕ್ತಿಯ ಕಾಲಿಗೆ ಸರಪಳಿ ಕಟ್ಟಿ ಅಮಾನುಷವಾಗಿ ನಡೆದುಕೊಂಡಿದ್ದಾನೆ. ಕುಮಾರ್‌ ಗೌಡನ ಬಳಿ ವ್ಯಕ್ತಿಯೋರ್ವ 20 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಸಾಲದ ಹಣವನ್ನು ವಾಪಸ್ ಕೊಡದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಕಂಬಕ್ಕೆ ಕಟ್ಟಿ ಹಾಕಿದ್ದಾನೆ. ಈ ಕೃತ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More