Subscribe to Updates
Get the latest creative news from FooBar about art, design and business.
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
Author: admin
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಾಗೂ ಅಪಾಯಕಾರಿ ವಿದ್ಯುತ್ ಕಂಬಗಳು ತಮ್ಮ ಭಾಗದಲ್ಲಿ ಕಂಡುಬಂದರೆ ಬೆಸ್ಕಾಂ ಅಥವಾ ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಕೋರಿದ್ದಾರೆ. ನಗರದಲ್ಲಿ ಭಾನುವಾರ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಬೆಸ್ಕಾಂ ಸಹಾಯವಾಣಿ 1912 ಅಥವಾ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ತಿಳಿಸಬಹುದು. ಇದರಿಂದ ತಕ್ಷ
ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು. ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು…
ಕೊರಟಗೆರೆ: ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ಏರ್ಪಡಿಸಿರುವ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿರುವ ಕನ್ನಡ ನುಡಿ ನಮನ,ಪತ್ರಿಕಾ ದಿನಾಚರಣೆ,ಪತ್ರಿಕೆ ವಿತರಕರಿಗೆ ಜರ್ಕಿನ್ ವಿತರಣೆ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡುತ್ತಿರುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ್ ರವರು ಭಾಗವಹಿಸುತ್ತಿದ್ದಾರೆ.. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮಾಡಲಾಗುವುದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊರಟಗೆರೆ ಇವರ ವತಿಯಿಂದ ಕೊರಟಗೆರೆಯ ಹಿಂದೂ ಸಾದರ ಸಮುದಾಯ ಭವನದಲ್ಲಿ ಆಯೋಜಿಸಲಾಗಿರುವ ಕನ್ನಡ ನುಡಿ ನಮನ ಹಾಗೂ ಪತ್ರಕರ್ತರ ದಿನಾಚರಣೆಯ ಸಮಾರಂಭಕ್ಕೆ ಜಿಲ್ಲೆಯ ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿವರ್ಷ 25 ಲಕ್ಷ ಹಣವನ್ನ ಜೀವನಪರ್ಯಂತ ಮುಡಿಪಾಗಿಟ್ಟ ಸಜ್ಜನಿಕೆಯ ರಾಜಕಾರಣಿ ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಡಾ ಜಿ ಪರಮೇಶ್ವರ್ ಅವರಿಗೆ ಕೃತಜ್ಞತಾ ಸಲ್ಲಿಕೆ ಹಾಗೂ ಮಹಿಳಾ ಸಾಧಕರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ.ಝಕರಿಯ್ಯ ಎಂಬುವವರು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು-ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ.ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಜನ್ಮ ವಾರ್ಷಿಕೋತ್ಸವವನ್ನು ಸ್ಮರಿಸಲು ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ. ಇತರರಿಗೆ ಸೇವೆ ಸಲ್ಲಿಸುವ ಮತ್ತು ಸಹೋದರತ್ವವನ್ನು ಮುನ್ನಡೆಸುವ ಬೋಧನೆಗಳಲ್ಲಿ ಅಂತರ್ಗತವಾಗಿರುವ ಶಕ್ತಿಯನ್ನು ಎತ್ತಿ ತೋರಿಸುತ್ತದೆ. ಪ್ರಧಾನಮಂತ್ರಿಯವರು ಭಾನುವಾರ ತಮ್ಮ `ಮನ್ ಕಿ ಬಾತ್~ ಪ್ರಸಾರದಲ್ಲಿ ಗುರುನಾನಕ್ ದೇವ್ ಅವರಿಗೆ ಗೌರವ ಸಲ್ಲಿಸಿದರು, ಗುರುನಾನಕ್ ಅವರ ಬೋಧನೆಗಳ ನಿರಂತರ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಗುರುನಾನಕ್ ಜಯಂತಿಯ ಆಚರಣೆಯನ್ನು ಗುರುಪುರಬ್ ಎಂದೂ ಕರೆಯುತ್ತಾರೆ, ಇದು ಸಿಖ್ ಧರ್ಮದ ಮೊದಲ ಗುರು ಗುರುನಾನಕ್ ದೇವ್ ಜಿ ಅವರ ಜನ್ಮದಿನವನ್ನು ಗೌರವಿಸುತ್ತದೆ. ಸಿಖ್ ಧರ್ಮದ ಪವಿತ್ರ ಪುಸ್ತಕ, ಗುರು ಗ್ರಂಥ ಸಾಹಿಬ್ ಅನ್ನು ಹಬ್ಬದ ಸಮಯದಲ್ಲಿ ಗಟ್ಟಿಯಾಗಿ ಪಠಿಸಲಾಗುತ್ತದೆ, ಇದು ತೀವ್ರವಾದ ಭಕ್ತಿ ಮತ್ತು ಆಧ್ಯಾತ್ಮಿಕ ಸಭೆಗಳಿಂದ ಗುರುತಿಸಲ್ಪಟ್ಟಿದೆ. ಗುರು ನಾನಕ್ ದೇವ್ ಅವರು ಸಮಾನತೆ, ಸಹಿಷ್ಣುತೆ ಮತ್ತು ಶಾಂತಿಯನ್ನು ಉತ್ತೇಜಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರು 1469 ರಲ್ಲಿ ರಾಯ್ ಭೋಯ್…
ಹಸಿ ಕೊಬ್ಬರಿ, ಪಾಲಕ್ ತಿಂದರೆ ಏನಾಗುತ್ತೆ ಗೊತ್ತಾ? ಅನೇಕ ಜನರು ಹಸಿ ಕೊಬ್ಬರಿಯನ್ನು ತಿನ್ನಲು ಇಷ್ಟಪಡುತ್ತಾರೆ. ಅಲ್ಲದೆ, ಇದನ್ನು ನಿಯಮಿತವಾಗಿ ಸಾಕಷ್ಟು ಪ್ರಮಾಣದಲ್ಲಿ ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ. ಈಗ ಪಾಲಕ್ ಸೊಪ್ಪಿನ ಆರೋಗ್ಯಕಾರಿ ಪ್ರಯೋಜನಗಳನ್ನು ತಿಳಿಯೋಣ. ನಿತ್ಯವೂ ಪಾಲಕ್ ಸೊಪ್ಪನ್ನು ತಿಂದರೆ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಮಲಬದ್ಧತೆ ಸಮಸ್ಯೆಯೂ ಕಡಿಮೆಯಾಗುತ್ತದೆ. ಇದರಲ್ಲಿರುವ ಪೋಷಕಾಂಶಗಳು ಥೈರಾಯ್ಡ್ ಅನ್ನು ಕಡಿಮೆ ಮಾಡುತ್ತದೆ. ನಿತ್ಯ 5 ಖರ್ಜೂರ ತಿಂದರೆ ದೇಹಕ್ಕೆ ಹಲವಾರು ಪ್ರಯೋಜ..! ಖರ್ಜೂರವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ರಾತ್ರಿಯಿಡೀ ನೀರಿನಲ್ಲಿ ನೆನೆಸಿದ ಖರ್ಜೂರವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸುಲಭವಾಗಿ ತಿನ್ನಬಹುದು. ಇದರಲ್ಲಿ ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್, ಪೊಟ್ಯಾಸಿಯಮ್, ವಿಟಮಿನ್ ಕೆ ಮತ್ತು ಸೋಡಿಯಂ ಸಮೃದ್ಧವಾಗಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಮೂಳೆಗಳೂ ಬಲಗೊಳ್ಳುತ್ತವೆ. ಖರ್ಜೂರದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಸ್ವತಂತ್ರ ರಾಡಿಕಲ್‌ಗಳಿಂದ ರಕ್ಷಿಸಲು…
ಬೆಂಗಳೂರು: ಮದ್ಯಪಾನ, ಧೂಮಪಾನ, ತಂಬಾಕು ವಿರುದ್ಧ ದಿ ಸಲೋನಿ ಶಾಲೆ ವತಿಯಿಂದ ಮ್ಯಾರಥಾನ್ ಹಮ್ಮಿಕೊಂಡಿದ್ದರು, ಸುಮಾರು 500 ಮಕ್ಕಳು, ಪೋಷಕರು, ಸಾಮಾಜಿಕ ಕಾರ್ಯಕರ್ತರು, ಶಾಲಾ ಸಿಬ್ಬಂದಿಗಳು, ಹಳೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವಿಶ್ವಾಪ್ರಿಯಾ ಲೇಔಟ್ ಇಂದ ಪ್ರಾರಂಭವಾಗಿ ಸುಮಾರು 5 ಕಿಲೋಮೀಟರ್ ದೂರದವರೆಗೆ ಈ ಮ್ಯಾರಥಾನ್ ನಡೆಯಿತು. ಬೇಗೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಹಾಗೂ ಜಯಶ್ರೀ ಆಸ್ಪತ್ರೆಯಿಂದ ಆಂಬುಲೆನ್ಸ್ ವ್ಯವಸ್ಥೆ ಈ ಒಂದು ಮ್ಯಾರಥಾನ್ ಗೆ ವಿಶೇಷವಾಗಿತ್ತು. ವಿದ್ಯಾರ್ಥಿ ಹಾಗೂ ಶಾಲಾ ಸಿಬ್ಬಂದಿಗಳಿಂದ ಹಲವಾರು ಸ್ಲೋಗನ್ ಗಂಟಾಗೋಷವಾಗಿ ರಸ್ತೆಯ ತುಂಬೆಲ್ಲ ಇದೆ ಸದ್ದಗಿತ್ತು,ಶಾಲಾ ಮಕ್ಕಳು ಬ್ಯಾಂಡ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯ ಗಂಟೆಯನ್ನು ಮೊಳಗುತ್ತಾ ಬಂದಿದ್ದರು. ವಿಶೇಷ ಏನೆಂದರೆ ಈ ಮ್ಯಾರಥಾನ್ ನಡೆಯುವ ಸಮಯದಲ್ಲಿ ಒಂದು ಬಾರ್ ಈ ಮಕ್ಕಳ ಕೂಗನ್ನು ನೋಡಿ ಶಟರ್ ಮುಚ್ಚಿದ್ದು ಈ ಮಕ್ಕಳ ಮ್ಯಾರಥಾನ್ ಯಶಸ್ಸಿಗೆ ಕಾರಣ. ರಸ್ತೆಯಲ್ಲಿ ಹೋಗುತ್ತಿದ್ದ ಹಲವಾರು ಜನರು ಸೆಲ್ಫಿಗಳನ್ನು ಹಾಗೂ ವಿಡಿಯೋಗಳನ್ನು ಮಾಡವ ಮೂಲಕ ತಮ್ಮ ಬೆಂಬಲವನ್ನು ಈ…
ಬಹಳ ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ರಾಜ್ಯದ ಅಭಿವೃದ್ಧಿ ಉದ್ದೇಶದಿಂದ ಭೇಟಿಯಾಗಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ತೋಟದ ಮನೆಯಲ್ಲಿ ಮಾತನಾಡಿದ ಹೆಚ್. ಡಿ ಕುಮಾರಸ್ವಾಮಿ ಅವರು, ಮುಂದೆ ಎರಡು ಪಕ್ಷಗಳು ರಾಜ್ಯದ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಗೆದ್ದು ಪ್ರಧಾನಿ ಆಗುವುದಕ್ಕೆ ಸಂಘಟನೆಯಲ್ಲಿ ಪಾಲ್ಗೊಳ್ಳಲು ಇಂದಿನ ಭೇಟಿಯ ಉದ್ದೇಶವಾಗಿದೆ ಎಂದರು. ಧೃತಿಗೆಡಬೇಡಿ. ನಿಮ್ಮನ್ನು ಉಳಿಸಿ, ರಕ್ಷಣೆ ಮಾಡಿಕೊಳ್ಳುವ ಹೊಣೆ ನನ್ನದು ಎಂದು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಮುಖಂಡರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು. ಭಾನುವಾರ ತಮ್ಮನ್ನು ಭೇಟಿಯಾದ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು; ಪಕ್ಷದ ನಿಷ್ಠಾವಂತರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ ಎಂದರು.
11 ವರ್ಷದಲ್ಲೇ ಎಎಪಿ ರಾಷ್ಟ್ರೀಯ ಪಕ್ಷವಾಗಿ ಬೆಳೆದಿದೆ. ಇದಕ್ಕೆ ಕಾರ್ಯಕರ್ತರು ಕಾರಣ, ಮೊದಲ ಚುನಾವಣೆಯಲ್ಲಿ ಸರ್ಕಾರಿ ಟೀಚರ್ ಮಗಳಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದೇವೆ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹೇಳಿದರು. ಎಎಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು ಎಎಪಿ ಹುಟ್ಟಿದ್ದು ಬೆಂಗಳೂರಿನಲ್ಲೇ. ಬೆಂಗಳೂರಿನ ಜಿಂದಾಲ್ ನೇಚರ್ ಕೇರ್ ನಲ್ಲಿ ಪಕ್ಷ ಕಟ್ಟುವ ಬಗ್ಗೆ ಚರ್ಚೆ ನಡೆದಿದ್ದು, ಅರವಿಂದ್ ಕೇಜ್ರವಾಲ್, ಜಸ್ಟಿಸ್ ಹೆಗಡೆಯವರು ಚರ್ಚೆ ಮಾಡಿದ್ದರು ಎಂದರು. ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಎಎಪಿ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಎಎಪಿ ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ ಕೇಜ್ರವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಶಾಸಕ, ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. ಎಎಪಿ ಸ್ಥಾಪನೆಯಾಗಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜನರ ಜೀವನ ಸುಧಾರಿಸಲು ಪಕ್ಷ ಕೆಲಸ ಮಾಡಿದೆ.
ಬೆಂಗಳೂರು: ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ಉದ್ಯಮಿಗಳಿಂದ ದಾಖಲೆ ಪಡೆದು ವಂಚಿಸುತ್ತಿದ್ದ ಯುಸೂಫ್ ಎಂಬ ಆರೋಪಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎಂಬುವರಿಗೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ಬಳಿಕ, ಕೃಷ್ಣನ್ ಅವರನ್ನು ಬ್ಯಾಂಕ್ ಗೆ ಕರೆದೊಯ್ದು ಅರ್ಜಿಗಳಿಗೆ ಸಹಿ ಮಾಡಿಸಿಕೊಂಡಿದ್ದ.