Subscribe to Updates
Get the latest creative news from FooBar about art, design and business.
- ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
- ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
Author: admin
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದ ಪತ್ನಿಯ ಕೊಲೆ ನಡೆದಿದೆ. ಪತ್ನಿ ಸುಲೋಚನಾ(45) ಕೊಲೆ ಮಾಡಿದ ಪತಿ ನಾಗರಾಜಪ್ಪ(48). ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದ ನಾಗರಾಜಪ್ಪ ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆ. ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಹಿರ್ದೆಸೆಗೆ ತೆರಳಿದ್ದಾಗ ಯುವಕ ನಾಗೇಶ್ ನನ್ನು ಆನೆ ಸೊಂಡಿಲಿನಿಂದ ಎತ್ತಿ ಎಸೆದಿದೆ. ರಾತ್ರಿಯಿಡೀ ಕಾಡಿನಲ್ಲೇ ನರಳಾಡಿದ್ದು ಬೆಳಗ್ಗೆ ಸ್ಥಳೀಯರು ಯುವಕನನ್ನು ಗಮನಿಸಿ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ತಪಾಸಣೆ ವೇಳೆ ಬಲಗಾಲು ಸ್ವಾಧೀನ ತಪ್ಪಿರುವುದು ಪತ್ತೆಯಾಗಿದೆ.
ಭಾರತೀಯ ಜನತಾ ಪಾರ್ಟಿ ಶಾಸಕರು ಅಸಮಾಧಾನಗೊಂಡ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಜೊತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ. ಶಾಸಕರ ಅಸಮಾಧಾನ ಕುರಿತು ವರಿಷ್ಠರ ಗಮನಕ್ಕೆ ತರಲು ಚಿಂತನೆ ನಡೆದಿದೆ. ಅಸಮಾಧಾನಿತ ಶಾಸಕರಾದ S.T.ಸೋಮಶೇಖರ್, ಶಿವರಾಂ ಹೆಬ್ಬಾರ್, ಇಬ್ಬರನ್ನೂ ಸಮಾಧಾನಿಸುವ ಜವಾಬ್ದಾರಿ ಬಸವರಾಜ ಬೊಮ್ಮಾಯಿ ಹೆಗಲಿಗಿದ್ದು ಉಭಯ ಶಾಸಕರು ಇನ್ನೆರಡು ದಿನಗಳಲ್ಲಿ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ.
ಬೆಳಗಾವಿ: ಪತಿಯ ಎರಡು ಎಕರೆ ಜಮೀನನ್ನು ತನ್ನ ಹೆಸರಿಗೆ ಮಾಡಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸವದತ್ತಿಯ ಗೋರಾಬಾಳದಲ್ಲಿ ನಡೆದಿದೆ. ಸಾವಕ್ಕ (32) ಎಂಬಾಕೆ ಪತಿಗೆ ಆ.11ರ ಬೆಳಗ್ಗೆ ಉಪ್ಪಿಟ್ಟು ಮಾಡಿಕೊಟ್ಟಿದ್ದಳು. ಉಪ್ಪಿಟ್ಟು ತಿಂದ ಬಳಿಕ ನಿಂಗಪ್ಪ ಹಮಾನಿ (35) ತೀವ್ರ ಹೊಟ್ಟೆ ನೋವಿನಿಂದ ಬಳಲಿದ್ದು, ತಕ್ಷಣವೇ ಆತನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ವಿಷ ಆಹಾರ ಸೇವಿಸಿರುವ ವಿಚಾರವನ್ನು ವೈದ್ಯರು ತಿಳಿಸಿದ್ದಾರೆ. ನಿಂಗಪ್ಪನಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಆತನಿಗೆ ನೀಡಿದ್ದ ಉಪ್ಪಿಟ್ಟನ್ನು ತಿಂದ ಒಂದು ನಾಯಿ ಮತ್ತು ಒಂದು ಬೆಕ್ಕು ಸತ್ತುಹೋಗಿವೆ ಎಂದು ಜಿಲ್ಲಾ ಪೊಲೀಸ್ (Police) ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ. ನಿಂಗಪ್ಪ ಅವರ ತಂದೆ ಫಕೀರಪ್ಪ ನೀಡಿದ ದೂರಿನ ಅನ್ವಯ ಸಾವಕ್ಕ ಹಾಗೂ ಆಕೆಯ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಎಂಬಾತನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕೊರಟಗೆರೆ: ಶ್ರಾವಣ ಮಾಸದ ಮೊದಲನೇ ಶನಿವಾರದಂದು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವುದು ಹಿಂದೂ ಸಂಪ್ರದಾಯದ ಆಚಾರವಾಗಿದ್ದು, ಶ್ರಾವಣ ಬಂತೆಂದರೆ ಸಾಕು, ದೇವಾಲಯಗಳಲ್ಲಿ ವಿಶೇಷ ಪೂಜೆ ಹೋಮ ಅವನ ವಿಶೇಷ ಕಾರ್ಯಗಳನ್ನು ಭಕ್ತಾದಿಗಳು ನೆರವೇರಿಸುತ್ತಾರೆ. ಅದರಂತೆಯೇ ಪಟ್ಟಣದ ತೇರಿನ ಬೀದಿಯ ಶ್ರೀ ಶನೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಇಂದು ವಿಶೇಷ ಪೂಜೆಯನ್ನ ಸಲ್ಲಿಸಲಾಯಿತು. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಧೀರ್ ಮಾತನಾಡಿ, ನಮ್ಮ ಕೊರಟಗೆರೆ ಪಟ್ಟಣದಲ್ಲಿ ದಕ್ಷಿಣ ಕಾಶಿ ಎಂದೇ ಇತಿಹಾಸ ಪ್ರಸಿದ್ಧವಾಗಿರುವ ದೇವಾಲಯಗಳಲ್ಲಿ ಒಂದಾದ ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದಂದು ನಮ್ಮ ಪೂರ್ವಿಕರ ಕಾಲದಿಂದಲೂ ವಿಶೇಷ ಪೂಜೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ. ಶ್ರೀ ಶನೇಶ್ವರ ಸ್ವಾಮಿಯು ಎಲ್ಲ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು. ದೇವಸ್ಥಾನದ ಆಡಳಿತ ಮಂಡಳಿಯ ನಿರ್ದೇಶಕರಾದ ಪುರುಷೋತ್ತಮ ಮಾತನಾಡಿ, 150 ವರ್ಷಗಳ ಇತಿಹಾಸವಿರುವ ಶ್ರೀಶನೇಶ್ವರ ಸ್ವಾಮಿ ದೇವಾಲಯದಲ್ಲಿ, ಬೇಡಿ ಬಂದ ಭಕ್ತರ ಇಷ್ಟಾರ್ಥಗಳು ನೆರವೇರುತ್ತದೆ. ಈ…
ಬೆಂಗಳೂರು: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ರೈತರ ಮತ್ತು ಕೃಷಿಕರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಎಚ್ಚರಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಯಂತೆ ಸರಿಯಾದ ಪ್ರಮಾಣದಲ್ಲಿ ಮಳೆ ಆಗಿಲ್ಲ. ರಾಜ್ಯದ ಎಲ್ಲ ಕಡೆಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಜಲಾಶಯಗಳಲ್ಲಿ ಸಹ ನೀರಿನ ಸಂಗ್ರಹ ಪ್ರಮಾಣ ತೃಪ್ತಿಕರವಾಗಿಲ್ಲ. ಬಿತ್ತನೆ ಪ್ರಮಾಣ ಸಹ ಕುಂಠಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಐಪಿ ಸೆಟ್ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ರಾಜ್ಯದಲ್ಲಿ ಆಹಾರ ಉತ್ಪನ್ನಗಳ ಮೇಲೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ರೈತರು ಆರ್ಥಿಕವಾಗಿಯೂ ಜರ್ಜರಿತರಾಗುತ್ತಾರೆ. ಹಾಗಾಗಿ ವಿದ್ಯುತ್…
ಸದ್ಯಕ್ಕೆ ಅನ್ನಭಾಗ್ಯದಡಿ 10 ಕೆಜಿ ಪಡಿತರ ಅಕ್ಕಿ ಸಿಗೋದು ಡೌಟ್ ಎನ್ನಲಾಗ್ತಿದೆ. ಮುಂದಿನ ತಿಂಗಳು 10 ಕೆಜಿ ಸಿಗೋದು ಡೌಟ್ ಎನ್ನಲಾಗಿದೆ. ಈ ಬಗ್ಗೆ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಸುಳಿವು ನೀಡಿದ್ದಾರೆ. ಅಕ್ಕಿ ದರದ ಬಗ್ಗೆ ಮಾತುಕತೆ ನಡೆಯುತ್ತಿದೆ. ತೆಲಂಗಾಣ & ಆಂಧ್ರಪ್ರದೇಶ ಅಕ್ಕಿ ಕೊಡಲು ಮುಂದೆ ಬಂದಿವೆ. ವಾರ ಇಲ್ಲವೇ 10 ದಿನಗಳ ಒಳಗೆ ಎಲ್ಲವೂ ಫೈನಲ್ ಆಗಲಿದೆ. ಹೀಗಾಗಿ ಇದೇ 25 & 26ರ ಒಳಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಎಂದರು. ಕರ್ನಾಟಕದಲ್ಲಿ ಬಿಪಿಎಲ್, ಎಪಿಎಲ್ ಹೊಸ ಕಾರ್ಡ್ ನೋಂದಣಿ ಕೂಡ ಸದ್ಯಕ್ಕಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸ ಕಾರ್ಡ್ ನೋಂದಣಿ ಬಗ್ಗೆ ಇನ್ನೂ ಆ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ. ಎಂದರು. ಇನ್ನು ರಾಜ್ಯದಲ್ಲಿ ಬಿಪಿಎಲ್ ಕಾರ್ಡಿಗೆ 2 ಲಕ್ಷದ 95 ಸಾವಿರ ಅರ್ಜಿ ಸಲ್ಲಿಕೆ ಆಗಿವೆ ಎಂದಯ…
ಇಂದು ಜೀವನ ವೆಚ್ಚ ಹೆಚ್ಚುತ್ತಿದೆ. ಭಾರತದ ಪ್ರಸ್ತುತ ಪರಿಸ್ಥಿತಿ ಸಾಮಾನ್ಯ ಮನುಷ್ಯನು ಸಹಿಸಿಕೊಳ್ಳುವಷ್ಟು ಮೀರಿದೆ. ಯಾವ ನಗರದಲ್ಲಿ ವಾಸಿಸಲು ಹೆಚ್ಚು ದುಬಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ? ಅದು ಮುಂಬೈ. ನೈಟ್ ಫ್ರಾಂಕ್ ಇಂಡಿಯಾ ಎಂಬ ಹೆಸರಾಂತ ಪ್ರಾಪರ್ಟಿ ಕನ್ಸಲ್ಟೆನ್ಸಿ ಸಂಸ್ಥೆಯ ವರದಿಯ ಪ್ರಕಾರ ಮುಂಬೈ ಈ ಸ್ಥಾನಕ್ಕೆ ತಲುಪಿದೆ. ವಿಶ್ವದ 32 ನಗರಗಳಲ್ಲಿ ಮುಂಬೈ ಎರಡನೇ ಸ್ಥಾನದಲ್ಲಿದೆ. ನೈಟ್ ಫ್ರಾಂಕ್ ವರದಿಯು ಕೈಗೆಟುಕುವ ವಸತಿ ಸೌಕರ್ಯಗಳ ಲಭ್ಯತೆಯ ಆಧಾರದ ಮೇಲೆ ಡೇಟಾವನ್ನು ಆಧರಿಸಿದೆ. ಗುಜರಾತ್ ನ ಅತಿದೊಡ್ಡ ನಗರವಾದ ಅಹಮದಾಬಾದ್, ಅತ್ಯಂತ ಕೈಗೆಟುಕುವ ಜೀವನ ವೆಚ್ಚವನ್ನು ಹೊಂದಿರುವ ಭಾರತೀಯ ನಗರವೆಂದು ಆಯ್ಕೆಯಾಗಿದೆ. ಅಹಮದಾಬಾದ್ ಅತ್ಯಂತ ಕೈಗೆಟುಕುವ ವಸತಿ ಮಾರುಕಟ್ಟೆಯಾಗಿದೆ. ನಂತರ ಪುಣೆ ಮತ್ತು ಕೋಲ್ಕತ್ತಾ. EMI-ಟು-ಆದಾಯ ಅನುಪಾತವು ಅಹಮದಾಬಾದ್ ನಲ್ಲಿ 23 ಪ್ರತಿಶತ ಮತ್ತು ಪುಣೆ ಮತ್ತು ಕೋಲ್ಕತ್ತಾದಲ್ಲಿ ತಲಾ 26 ಪ್ರತಿಶತ. ಬೆಂಗಳೂರು ಮತ್ತು ಚೆನ್ನೈನಲ್ಲಿ ತಲಾ ಶೇ 28, ದೆಹಲಿಯಲ್ಲಿ ಶೇ 30, ಹೈದರಾಬಾದ್ ನಲ್ಲಿ ಶೇ. 31…
ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಹೇಳಿದ್ದಾರೆ. ವಾರಣಾಸಿಯಿಂದ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ಆಸಕ್ತಿ ತೋರಿದರೆ, ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರಿಯಾಂಕಾ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಅಜಯ್ ರೈ ಹೇಳಿದ್ದಾರೆ. ರಾಜ್ಯ ನಾಯಕತ್ವದ ನಿರ್ಧಾರದ ಅಂತಿಮ ನಿರ್ಧಾರ ರಾಷ್ಟ್ರೀಯ ನಾಯಕತ್ವದ ಮೇಲಿದೆ. 2024ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಒಂದು ವೇಳೆ ರಾಹುಲ್ ಮತ್ತು ಪ್ರಿಯಾಂಕಾ ರೇಸ್ ಗೆ ಬಂದರೆ ಉತ್ತರ ಪ್ರದೇಶದಲ್ಲಿ ಈ ಬಾರಿ ಟಫ್ ಫೈಟ್ ಆಗಲಿದೆ. 2019ರಲ್ಲಿ ಕಾಂಗ್ರೆಸ್ ನ ಸಾಂಪ್ರದಾಯಿಕ ಸ್ಥಾನಗಳು ಉರುಳಿದವು. ರಾಯ್ ಬರೇಲಿಯನ್ನೂ ಉರುಳಿಸಲು ಬಿಜೆಪಿ ನಿರ್ಧರಿಸಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ರಾಯ್ ಬರೇಲಿಯ ಉಸ್ತುವಾರಿ ನೀಡಲಾಗಿದೆ. ನರೇಂದ್ರ ಸಿಂಗ್ ತೋಮರ್ ಈಗಾಗಲೇ ಎರಡು ಬಾರಿ ಕ್ಷೇತ್ರವನ್ನು ತಲುಪಿದ್ದಾರೆ.
ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ತೆರಳಲಿದ್ದಾರೆ. 22ರಿಂದ 24ರವರೆಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ 15ನೇ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. 2019 ರಿಂದ ಇದು ಮೊದಲ ನೇರ ಬ್ರಿಕ್ಸ್ ಶೃಂಗ ಸಭೆಯಾಗಿದೆ. ಬ್ರಿಕ್ಸ್ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸುವುದು ಮತ್ತು ಭವಿಷ್ಯದ ಚಟುವಟಿಕೆಗಳನ್ನು ಯೋಜಿಸುವುದು ಶೃಂಗಸಭೆಯ ಕಾರ್ಯ ಸೂಚಿಯಾಗಿದೆ. ಬ್ರಿಕ್ಸ್ ಶೃಂಗಸಭೆಯ ನಂತರ, ಪ್ರಧಾನಮಂತ್ರಿಯವರು ಬ್ರಿಕ್ಸ್ ಆಫ್ರಿಕಾ ಔಟ್ರೀಚ್, ಬ್ರಿಕ್ಸ್ ಪ್ಲಸ್ ಸಂವಾದದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿಯವರು ಜೋಹಾನ್ಸ್‌ಬರ್ಗ್‌ನಲ್ಲಿ ವಿವಿಧ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಬ್ರಿಕ್ಸ್ ಶೃಂಗಸಭೆಯ ನಂತರ ಪ್ರಧಾನಿ ಗ್ರೀಸ್ ಗೂ ಭೇಟಿ ನೀಡಲಿದ್ದಾರೆ. ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿತ್ಸೋಟಾಕಿಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗ್ರೀಸ್ ಗೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದರು. 25ರಂದು ಅಧಿಕೃತ ಭೇಟಿಯ ಮೇರೆಗೆ ಪ್ರಧಾನಿ ಗ್ರೀಸ್ ಗೆ ಆಗಮಿಸಲಿದ್ದಾರೆ. 40…