Author: admin

ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ತಮ್ಮ ಹೆಸರು ಪ್ರಸ್ತಾಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಸಿ.ಟಿ ರವಿ, ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ ನಲ್ಲಿ ಇಲ್ಲ. ಪಕ್ಷ ಯಾವುದೇ ಹುದ್ದೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ ಸಿ.ಟಿ ರವಿ, ಮಂತ್ರಿ ಇದ್ದಾಗ ಪಕ್ಷ ಸೂಚನೆ ಕೊಟ್ಟಾಗ ರಾಜೀನಾಮೆ ಕೊಟ್ಟು ಪಕ್ಷದ ಕೆಲಸದಲ್ಲಿ ತೊಡಗಿಸಿಕೊಂಡೆ. ನನ್ನ ಹೆಸರನ್ನು ಎಲ್ಲದಕ್ಕೂ ತೂರಿಸಲಾಗುತ್ತೆ. ಸದ್ಯ ವಿರೋಧ ಪಕ್ಷದ ರೇಸ್ ನಲ್ಲಿ ಎನ್ನುವುದನ್ನು ತೋರಿಸಿಲ್ಲ. ಅದು ಆಗಲು ಸಾಧ್ಯವಿಲ್ಲ. ಪಕ್ಷ ಬಯಸಿದ್ರೆ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಟಿ ರವಿ, 28 ಸ್ಥಾನಗಳನ್ನ ಗೆಲ್ಲಲ್ಲು ಅಗತ್ಯ ಇರುವ ಎಲ್ಲಾ ಯೋಚನೆ ಮಾಡುತ್ತೇವೆ. ನಾವು 28 ಸ್ಥಾನ ಗೆಲ್ಲಬೇಕು. ಅದರ ಬಗ್ಗೆ ಯೋಚನೆ ಮಾಡುತ್ತೇವೆ. ದೇಶದ ಹಿತದೃಷ್ಟಿಯಿಂದ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಮುಂದಿನ ಅವಧಿಗೆ ವಿಶ್ವದ ಮೂರನೇ ಶಕ್ತಿಯಾಗಿ…

Read More

ಅಮೆಜಾನ್ ಇ-ಕಾಮರ್ಸ್ ಕಂಪನಿಗೆ ಗ್ರಾಹಕರ ಸೋಗಿನಲ್ಲಿ ವಂಚಿಸುತ್ತಿದ್ದ ಆರೋಪದಡಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಆರೋಪಿ, ತನ್ನದೇ ಸಹಪಾಠಿಗಳ ತಂಡ ಕಟ್ಟಿಕೊಂಡು ಕೃತ್ಯ ಎಸಗುತ್ತಿದ್ದ. ಕಂಪನಿ ವ್ಯವಸ್ಥಾಪಕ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. 7 20.34 ಲಕ್ಷ ಮೌಲ್ಯದ 16 ಮೊಬೈಲ್‌ಗಳು, ನಾಲ್ಕು ಲ್ಯಾಪ್‌ ಟಾಪ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

Read More

ಬಿಹಾರದಲ್ಲಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ. ಅರಾರಿಯಾ ಜಿಲ್ಲೆಯಲ್ಲಿ ನೆನ್ನೆ ಬೆಳಗ್ಗೆ ಈ ಘಟನೆ ನಡೆದಿದೆ. ಪತ್ರಕರ್ತರ ಮನೆಗೆ ನುಗ್ಗಿದ ನಾಲ್ವರ ತಂಡ ಗುಂಡಿನ ದಾಳಿ ನಡೆಸಿದೆ. ರಾಣಿಗಂಜ್ ಮೂಲದ ವಿಮಲ್ ಕುಮಾರ್ ಯಾದವ್ ಕೊಲೆಯಾದವರು. ಅಪರಿಚಿತ ದುಷ್ಕರ್ಮಿಗಳು ಮನೆಗೆ ನುಗ್ಗಿ ಯಾದವ್ ಅವರ ಎದೆಗೆ ಗುಂಡು ಹಾರಿಸಿದ್ದಾರೆ. ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಯಿತು. ಅರಾರಿಯಾ ಮರಣೋತ್ತರ ಪರೀಕ್ಷೆ ಮೈದಾನದಲ್ಲೂ ಗದ್ದಲ ಉಂಟಾಯಿತು. ಸದ್ಯ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಸ್ ಪಿ ಹಿಡಿದು ಸ್ಥಳೀಯ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿದರು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದು, ಸುಮಾರು 10ರಿಂದ 15 ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮಾತುಕತೆ ನಡೆಸುತ್ತಿರುವುದಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿರುವ ನಾಯಕರೊಂದಿಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ಅವರ ಹೆಸರು ಈಗ ಹೇಳಲು ಸಾಧ್ಯವಿಲ್ಲ ಎಂದರು. ಗುತ್ತಿಗೆದಾರರಿಂದ ಹಣ ವಸೂಲಿ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿ, ಪ್ರಶ್ನೆ ಕೇಳುತ್ತಿದ್ದಂತೆ ಅಯ್ಯೋ ಬಿಡಪ್ಪ, ಕೆಲಸ ಇಲ್ಲದವರು ಮಾತನಾಡುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. 2.5 ಲಕ್ಷ ಕೋಟಿ ಅನುದಾನವನ್ನ ಒಂದೇ ಸಲ ಎಷ್ಟೆಂದು ಕೊಡಲು ಆಗುತ್ತದೆ? ಎಂದು ಅವರು ಪ್ರಶ್ನಿಸಿದ್ರು.

Read More

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಹುಬ್ಬಳ್ಳಿ-ಧಾರವಾಡ ಪೊಲೀಸರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಷೇಧಿತ ವಸ್ತುಗಳ ಸರಬರಾಜನ್ನು ತಡೆಗಟ್ಟಲು ಹಾಗೂ ದಂಧೆಕೋರರ ಮೇಲೂ ನಿಗಾ ವಹಿಸಲು ಗೃಹ ಇಲಾಖೆ ಸನ್ನದ್ಧವಾಗಿದೆ. ಇನ್ನು ಮೂರು ತಿಂಗಳಲ್ಲಿ ಜಿಲ್ಲೆಯನ್ನು ‘ಮಾದಕ ವಸ್ತು ಮುಕ್ತ’ ಎಂದು ಘೋಷಿಸಲಾಗುವುದು ಎಂದು ತಿಳಿಸಿದರು. ಇಡೀ ರಾಜ್ಯದಲ್ಲಿ ಡ್ರಗ್ಸ್ ನಿಲ್ಲಿಸಲು ನಿರ್ಧರಿಸಿದ್ದೇವೆ. ಹು-ಧಾಗೆ ಗೋವಾ, ಒಡಿಶಾಗಳಿಂದ ಡ್ರಗ್ಸ್ ಬರಬಹುದು. ಇಲ್ಲಿಯ ಜನರಿಗೆ ಅನಾಹುತ ಆಗಬಾರದು ಎಂದು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಆರು ತಿಂಗಳು ಅವಕಾಶ ನೀಡಿದ್ದೇನೆ. ಇದನ್ನು ತಡೆಗಟ್ಟದಿದ್ದರೆ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ ಎಂದು ಪುನರುಚ್ಚರಿಸಿದ್ರು. ಧಾರವಾಡ ಜಿಲ್ಲೆ ಮತ್ತು ಅವಳಿ ನಗರದ ಅಪರಾಧ ಪ್ರಮಾಣ ರಾಜ್ಯದ ಇತರ ಭಾಗಗಳಿಗಿಂತ ಭಿನ್ನವಾಗಿಲ್ಲ ಎಂದ ಸಚಿವರು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ…

Read More

ಮೈಸೂರು: ಅಸ್ಥಿರತೆಯ ಭಯದಲ್ಲಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತಕ್ಕೆ ಮುಂದಾಗಿದೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದರೂ ಕಾಂಗ್ರೆಸ್ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ, ಎರಡು ತಿಂಗಳೊಳಗೆ ಭಿನ್ನಾಭಿಪ್ರಾಯಗಳು ಕೇಳಿಬಂದಿವೆ.  ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಮತ್ತು ಶಾಸಕರೊಂದಿಗೆ ಸಂವಾದ ನಡೆಸಲು ಜಿಲ್ಲಾವಾರು ಸಭೆ ನಡೆಸುವಂತಾಗಿದೆ ಎಂದರು. ಎಸ್.ಟಿ.ಸೋಮಶೇಖರ್ ಸೇರಿದಂತೆ ಬಿಜೆಪಿ ಶಾಸಕರೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಿಗೇ ಯಾವುದೇ ಸ್ಥಾನ ಸಿಗದಿರುವಾಗ ಇವರಿಗೆ ಏನು ಸಿಗುತ್ತದೆ ಎಂದು ಪ್ರಶ್ನಿಸಿದರು. ರಾಜ್ಯವು ಬರಗಾಲದ ಪರಿಸ್ಥಿತಿಯಲ್ಲಿ ತತ್ತರಿಸಿದ್ದು, ಜಲಾಶಯಗಳ ಮಟ್ಟ ಇನ್ನೂ ಸುಧಾರಿಸಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿದ್ಯುತ್ ಕಡಿತ ಮತ್ತು ಲೋಡ್ ಶೆಡ್ಡಿಂಗ್ ಸಮಸ್ಯೆ ಸಾಮಾನ್ಯವಾಗಿ ಹೋಗಿದೆ. ವಿದ್ಯುತ್ ಪೂರೈಕೆ ಇಲ್ಲದೆ, ಶೂನ್ಯ ವಿದ್ಯುತ್ ಬಿಲ್ ಕೊಟ್ಟರೆ ಏನು ಪ್ರಯೋಜನೆ ಎಂದು ಪ್ರಶ್ನಿಸಿದರು.

Read More

ವಿಜಯಪುರ: ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾಲಕ್ಕೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಈಗ ಸೂಪರ್ ಸಿಎಂ ಆಗಿದ್ದಾರೆ. ಆದರೆ, ಯಾವ ಕಾಲಕ್ಕೂ ಸಿಎಂ ಆಗಲ್ಲ ಎಂದು ಭವಿಷ್ಯ ನುಡಿದರು. ಸಿಎಂ ಕೂಡ ಸುಮ್ಮನೆ ಹುದ್ದೆಯಲ್ಲಿ ಇದ್ದಾರೆ. ಆದರೆ, ಆಡಳಿತ ಮಾತ್ರ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಇನ್ನು ಆರು ತಿಂಗಳಾಗಲಿ, ಐದು ವರ್ಷವೇ ಆಗಲೀ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಡುವುದಿಲ್ಲ, ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ, ಈ ಅವಧಿಯಲ್ಲಿ ಅವರೇ ಮೊದಲ ಮತ್ತು ಕೊನೆಯ ಸಿಎಂ ಎಂದು ತಿಳಿಸಿದರು. ಕಾಂಗ್ರೆಸ್ ತಳಿ ರಾಕ್ಷಸರದ್ದು ಎಂದು ವಾಗ್ದಾಳಿ ನಡೆಸಿದ ಅವರು, ಬಿಜೆಪಿಗೆ ಓಟು ಹಾಕಿದವರು ರಾಕ್ಷಸರು ಎಂಬ ಸುರ್ಜೆವಾಲಾ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

Read More

ಬೆಂಗಳೂರು: ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ರೈಲಿನ ಎರಡು ಕೋಚ್ ಗಳಿಗೆ ಆವರಿಸಿ ಆತಂಕ ಸೃಷ್ಟಿಸಿದೆ. ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್ ಪ್ರೆಸ್ ಪ್ಲಾಟ್ ಫಾರ್ಮ್ ಸಂಖ್ಯೆ 3 ರಲ್ಲಿ 05.45 ಗಂಟೆಗೆ ಸಂಗೊಳ್ಳಿ ರಾಯಣ್ಣ ಬಸ್ ನಿಲ್ದಾಣಕ್ಕೆ ಬಂದು ನಿಲ್ಲಿಸಿತು. ಸುಮಾರು 07.10ಗಂಟೆಗೆ ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಬೆಳಗ್ಗೆ 7:35ಕ್ಕೆ ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದ್ದು, ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅಪಾಯ ತಪ್ಪಿಸಿದೆ.

Read More

ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದ ಪತ್ನಿಯ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ಸುಲೋಚನಾ(45) ಕೊಲೆಯಾದ ಮಹಿಳೆಯಾಗಿದ್ದು, ನಾಗರಾಜಪ್ಪ(48) ಕೊಲೆ ಆರೋಪಿಯಾಗಿದ್ದಾನೆ. ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದ ನಾಗರಾಜಪ್ಪ ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ನಾಗರಾಜಪ್ಪ ಪೊಲೀಸರಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೇರಟ್ಟಿ ಗ್ರಾಮದ ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಅರ್ಜುನ ಆನೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಗೇರಟ್ಟಿ ಸಮೀಪದ ಕತ್ರಿ ಉಪ ಅರಣ್ಯ ಪ್ರದೇಶದಲ್ಲಿ ಕಾಡಾನೆಯನ್ನು ಸೆರೆ ಹಿಡಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಜನರಿಗೆ ಉಪಟಳ ನೀಡುತ್ತಿದ್ದ ಕಾಡಾನೆಯನ್ನು ಸಾಕಾನೆಗಳ ಜೊತೆಗೆ 100ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.

Read More