Subscribe to Updates
Get the latest creative news from FooBar about art, design and business.
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
Author: admin
ರಾಮನಗರ: ಜಿಲ್ಲಾ ಕೇಂದ್ರದಲ್ಲಿಯೇ ಸಿವಿಲ್ ಪ್ರಕರಣಗಳನ್ನು ವಿಚಾರಣೆ ನಡೆಸುವ ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ವರ್ಗಾವಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು; ಇದು ಮಕ್ಕಳಾಟವೇ ಎಂದು ಕಿಡಿಕಾರಿದ್ದಾರೆ. ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ, ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಎಸಿ ಕೋರ್ಟ್ ಅನ್ನು ವಾರದಲ್ಲಿ ಒಂದು ದಿನ ಕನಕಪುರಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಇದನ್ನು ಇಡೀ ರಾಜ್ಯದ ಪ್ರತಿ ತಾಲೂಕಿನಲ್ಲೂ ಮಾಡಿ, ಪ್ರತಿ ತಾಲೂಕಿಗೆ ಒಂದೊಂದು ಎಸಿ ಕೋರ್ಟ್ ಮಾಡಿ ಎಂದ ಅವರು; ಇದು ಸರ್ವಾಧಿಕಾರಿ ಧೋರಣೆ. ಕೋರ್ಟ್ ಸ್ಥಳಾಂತರಕ್ಕೆ ಅಂತಹ ತರಾತುರಿ ಏನಿದೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹೆದರಿಸಿ, ಬೆದರಿಸಿ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ಎಲ್ಲಾ ಭೂಮಿಗಳ ಪೋಡಿ ಮಾಡಿಸುವುದಕ್ಕೆ, ಲೂಟಿ ಮಾಡುವುದಕ್ಕೆ ಹೀಗೆ ಮಾಡ್ತಿದ್ದಾರೆ. ಅದೆಂತದ್ದೋ ಗ್ಲೋಬಲ್ ಸಿಟಿ ಮಾಡಲು, ಲೂಟಿ ಮಾಡೋಕೆ ಈ ಕೆಲಸಕ್ಕೆ…
ಬೆಂಗಳೂರು: ಬೆಂಗಳೂರಿನ ಪಶ್ಚಿಮ ವಿಭಾಗ, ಬ್ಯಾಟರಾಯನಪುರ ಉಪವಿಭಾಗ್ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಪೊಲೀಸರು ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧಿಸಿ,ಬಂಧಿತರಿಂದ 3,00,000/-ಬೆಲೆ ಬಾಳುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ: 23-10-2023 ರಂದು ರಾತ್ರಿ ಸಮಯದಲ್ಲಿ ರಾಜರಾಜೇಶ್ವರಿನಗರ ಐಡಿಯಲ್ ಹೋಮ್ಸ್‌ನ ಮುಂಭಾಗ ನಿಲ್ಲಿಸಿದ್ದ ಒಂದು ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಸದರಿ ಪ್ರಕರಣದ ತನಿಖೆಯನ್ನು ಮುಂದುವರೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿ, ಆರೋಪಿಗಳಿಂದ ₹ 3,00,000/- ಬೆಲೆ ಬಾಳುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಒಂದು ಪ್ರಕರಣ, ಬ್ಯಾಟರಾಯನಪುರ ಪೊಲೀಸ್ ಠಾಣೆಯ ಒಂದು ಪ್ರಕರಣ, ಸಿದ್ದಾಪುರ ಪೊಲೀಸ್ ಠಾಣೆಯ ಒಂದು ಪ್ರಕರಣ, ಮಾಗಡಿರಸ್ತೆ ಪೊಲೀಸ್ ಠಾಣೆಯ ಒಂದು ಪ್ರಕರಣ ಮತ್ತು ಕೋಣನಕುಂಟೆ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣ ಪತ್ತೆಯಾಗಿರುತ್ತದೆ. ಸದರಿ ಕಾರ್ಯಾಚರಣೆಯನ್ನು ಪಶ್ಚಿಮ…
ಬೆಂಗಳೂರು: ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೇ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರ ಇಂದು ಬೆಂಗಳೂರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಡಿಸಿಎಂ ವಿರುದ್ಧ ಆರೋಪದ ತನಿಖೆ ನಡೆಸಲು ಸಿಬಿಐಗೆ ನೀಡಿದ ಅನುಮತಿ ಹಿಂಪಡೆಯಲು ತೀರ್ಮಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಸರ್ಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರ್ಕಾರದ ಅನುಮತಿ ಅವಶ್ಯ. 2019 ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಇವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನ ಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕು. ಆದರೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆದಿಲ್ಲ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಅಂದಿನ…
ಬೆಂಗಳೂರು: ಬೆಂಗಳೂರು ಹೊರ ವಲಯದಲ್ಲಿ ಪದೆ ಪದೆ ಚಿರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಇನ್ನು, 2 ದಿನಗಳ ಒಳಗಾಗಿ ಕಾರ್ಯಾರಂಭ ಮಾಡಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಸಚಿವರು, ಮೂಡಿಗೆರೆಯಲ್ಲಿ ನಿನ್ನೆ ಕಾಡಾನೆ ನಿಗ್ರಹ ದಳದ ಕಾರ್ತಿಕ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಆನೆ ದಾಳಿ ಸಾವಿನ ಕುರಿತು ವರದಿಗೆ ಸೂಚನೆ: ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಆನೆ ದಾಳಿ ಸಾವಿನ ಎಲ್ಲ ಪ್ರಕರಣಗಳ ಕುರಿತಂತೆ ಪರಾಮರ್ಶಿಸಿ, ಯಾವ ಭಾಗದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ. ಇದಕ್ಕೆ ಕಾರಣವೇನು…
ಮುಂಬೈ: ಡ್ರಗ್ಸ್ ಗಾಗಿ ತಮ್ಮ ಇಬ್ಬರು ಮಕ್ಕಳನ್ನು ₹ 74 ಸಾವಿರಕ್ಕೆ ಮಾರಾಟ ಮಾಡಿದ್ದ ದಂಪತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿಯನ್ನು ಶಬ್ಬಿರ್ ಖಾನ್ ಹಾಗೂ ಸಾನಿಯಾ ಖಾನ್ ಎಂದು ಗುರುತಿಸಲಾಗಿದೆ. ಇವರ ಜೊತೆಗೆ ಮಕ್ಕಳ ಮಾರಾಟಕ್ಕೆ ನೆರವು ನೀಡಿದ್ದ ಶಕೀಲ್ ಮತ್ತು ಉಷಾ ಎಂಬುವರನ್ನು ಸಹ ಬಂಧಿಸಲಾಗಿದೆ. ಮಕ್ಕಳನ್ನು ಮಾರಾಟ ಮಾಡಿದ್ದ ದಂಪತಿ ಮಾದಕ ವಸ್ತು ವ್ಯಸನಿಗಳಾಗಿದ್ದರು. ಇವರು ಡ್ರಗ್ಸ್ ಪಡೆಯುವ ಸಲುವಾಗಿ 74 ಸಾವಿರಕ್ಕೆ ಮಕ್ಕಳನ್ನು ಮಾರಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಒಂದು ತಿಂಗಳ ಹೆಣ್ಣು ಮಗುವನ್ನು ರಕ್ಷಣೆ ಮಾಡಲಾಗಿದೆ. 2 ವರ್ಷ ಬಾಲಕನಿಗಾಗಿ ತನಿಖೆ ಮಾಡಲಾಗುತ್ತಿದ್ದು ಎರಡು ದಿನಗಳಲ್ಲಿ ಬಾಲಕನ ಪತ್ತೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಹೆಣ್ಣು ಮಗುವನ್ನು ₹14 ಸಾವಿರಕ್ಕೆ, ಗಂಡು ಮಗುವನ್ನು ₹ 60 ಸಾವಿರಕ್ಕೆ ಮಾರಾಟ ಮಾರಿದ್ದರು. ಘಟನೆ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮನಗರ: ಲೋಕಸಭೆ ಚುನಾವಣೆವರೆಗೂ ಈ ಸರಕಾರ ಜಾತಿಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟೀಕಿಸಿದರು. ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಜಾತಿ ಗಣತಿ ವರದಿಯನ್ನು ಸರಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಈ ಸರಕಾರದ ಕೈಯಲ್ಲಿ ಏನೂ ಆಗಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದೇ ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಆಗಲೇ ವರದಿ ಸಿದ್ದವಾಗಿತ್ತಲ್ವಾ? ನಿಮ್ಮ ಸರಕಾರ ಬಂದು 6 ತಿಂಗಳಾಗಿದೆ, ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ ಎಂದು ಅವರು ನೇರವಾಗಿ ಸಿದ್ದರಾಮಯ್ಯ ಅವರನ್ನೇ ಪ್ರಶ್ನೆ ಮಾಡಿದರು.
ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸಚಿವಸಂಪುಟ ಹಿಂದಕ್ಕೆ ಪಡೆದಿದೆ. ಇದು ಸಂವಿಧಾನ ವಿರೋಧಿ ಕ್ರಮ. ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ. ರವಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಬ್ಲ್ಯಾಕ್‍ಮೇಲ್ ಪಾಲಿಟಿಕ್ಸ್ ನಡೆದಿದೆ. ಅದರ ಅಂಗವಾಗಿ ಇಡೀ ಸಂಪುಟ, ಜನ ಏನೆಂದುಕೊಳ್ಳುವರೋ ಎಂಬುದನ್ನು ಯೋಚಿಸದೆ ಕೆಟ್ಟ ಪರಂಪರೆಗೆ ನಾಂದಿ ಹಾಡಿದೆ ಎಂದು ಆರೋಪಿಸಿದರು. ಇಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರಶ್ನೆ ಬರುವುದಿಲ್ಲ. ತನಿಖೆ ರದ್ದು ಎಂದರೆ ನ್ಯಾಯಾಂಗ ವ್ಯವಸ್ಥೆ ತಿರಸ್ಕರಿಸಿದಂತೆ ಎಂದ ಅವರು, ಇದು ಆಲಿಬಾಬಾ ಔರ್ ಚಾಲೀಸ್ ಚೋರ್ ಎಂಬಂತಿದೆ. ಒಬ್ಬ ಭ್ರಷ್ಟ ಆರೋಪಿಯ ಸಮರ್ಥನೆಗೆ ಇಡೀ ಕ್ಯಾಬಿನೆಟ್ ನಿಂತದ್ದು ಕರ್ನಾಟಕದ ಘನತೆಗೆ ಕಪ್ಪು ಚುಕ್ಕಿ ಇಟ್ಟಂತೆ. ಇದು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ…
ತೂಕ ಮತ್ತು ಸಕ್ಕರೆಯನ್ನು ನಿಯಂತ್ರಣದಲ್ಲಿಡುವ ಕಪ್ಪು ಎಳ್ಳಿನ ಔಷಧೀಯ ಗುಣ ಬಲ್ಲೀರಾ..? ಕಪ್ಪು ಎಳ್ಳನ್ನು ವಿವಿಧ ಭಕ್ಷ್ಯಗಳಲ್ಲಿ ಮಸಾಲೆಯಾಗಿ ಬಳಸಲಾಗುತ್ತದೆ. ಅವುಗಳ ರುಚಿಯೂ ವಿಭಿನ್ನವಾಗಿರುತ್ತದೆ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಹಲವಾರು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಇದನ್ನು ಪ್ರಾಚೀನ ಕಾಲದಿಂದಲೂ ಬಳಸಲಾಗುತ್ತದೆ. ಈ ಬೀಜಗಳು ಕ್ಯಾನ್ಸರ್, ತೂಕ ಹೆಚ್ಚಾಗುವುದು, ಮಧುಮೇಹ, ಬೊಜ್ಜು, ಹೃದ್ರೋಗ ಮತ್ತು ಸ್ಕೂಲಕಾಯತೆಯಂತಹ ಅನೇಕ ದೀರ್ಘಕಾಲದ ಪರಿಸ್ಥಿತಿಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿಲಸು ಖರ್ಜೂರ ಸೇವಿಸಿ ರಕ್ತಹೀನತೆಯ ಸಮಸ್ಯೆ ಬಹುತೇಕ ಮಹಿಳೆಯರಲ್ಲಿ ಕಂಡುಬರುತ್ತದೆ. ರಕ್ತಹೀನತೆ ಎಂದರೆ ದೇಹದಲ್ಲಿ ರಕ್ತದ ಕೊರತೆ ಇರುವುದು. ಖರ್ಜೂರವು ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುವ ಮೂಲಕ ರಕ್ತಹೀನತೆಯ ಸಮಸ್ಯೆ ನಿವಾರಿಸುತ್ತದೆ. ಖರ್ಜೂರದಲ್ಲಿ ಕಬ್ಬಿಣಾಂಶವು ಕಂಡುಬರುತ್ತದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಿಸುತ್ತದೆ. ದೇಹಕ್ಕೆ ರಕ್ತವನ್ನು ಪೂರೈಸುತ್ತದೆ. ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ.
ಬೆಂಗಳೂರು: ಡಿ.ಕೆ. ಶಿವಕುಮಾರ್ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುಬೈಗೆ ತೆರಳಲು ಅನುಮತಿ ಕೋರಿ ಡಿಸಿಎಂ ಡಿ.ಕೆ. ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಐಟಿ ಪ್ರಕರಣದಲ್ಲಿ ಆರೋಪಿಯಾಗಿರುವ ಡಿ.ಕೆ. ಶಿವಕುಮಾರ್ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಬೇಕಿದೆ. ಹೀಗಾಗಿ ನ.29ರಿಂದ ಡಿ.3ರವರೆಗೆ ತೆರಳಲು ಅನುಮತಿ ಕೋರಿದ ಅರ್ಜಿಯನ್ನು ವಿಚಾರಣೆ ನಡೆಸಿ ನ್ಯಾಯಾಧೀಶೆ ಜೆ. ಪ್ರೀತ್ ಅವರು ಅನುಮತಿ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಧು ಚಂದ್ರ ಕಾಲ ಮುಕ್ತಾಯವಾಗಿದೆ. ಈ ಆರು ತಿಂಗಳ ಕಾಲಾವಧಿಯಲ್ಲಿ ವಿರೋಧ ಪಕ್ಷದ ಸಮರ್ಥವಾದ ನಾಯಕರು ಇಲ್ಲದೆ ಎರಡು ಅಧಿವೇಶನಗಳನ್ನು ಸರ್ಕಾರ ಪೂರ್ಣಗೊಳಿಸಿದೆ. ಈಗ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ ಬೆಳಗಾವಿಯಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರನ್ನಾಗಿ ಅಳದು ತೂಗಿ ಆರ್ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿಎಸ್ ವೈ ಅವರ ಪುತ್ರ ಬಿಎಸ್ ವೈ ವಿಜಯೇಂದ್ರ ಈಗ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಬಿಜೆಪಿಯ ಈ ಜೋಡೆತ್ತುಗಳಿಗೆ ಸವಾಲುಗಳು ಸರಮಾಲೆಯೇ ಮುಂದಿದೆ ಈ ಕಡೆ ಸರ್ಕಾರದ ವೈಫಲ್ಯ ಮತ್ತು ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಲು ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಅಧ್ಯಕ್ಷರ ಹೆಗಲ ಮೇಲಿದೆ ಅದರ ಜೊತೆಗೆ ಸ್ವಹಪಕ್ಷದ ಶಾಸಕರು ಆಪರೇಷನ್ ಹಸ್ತಕ್ಕೆ ಗುರಿಯಾಗುವ ಸಂಭವ ಹೆಚ್ಚಾಗಿದೆ. ಅವರನ್ನು ಪಕ್ಷದಲ್ಲಿ…