Subscribe to Updates
Get the latest creative news from FooBar about art, design and business.
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
- ತುಮಕೂರು | ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
Author: admin
ತುಮಕೂರು: ಮಾಂಸ ಮಾರಾಟ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಸುಮಾರು 70ರಿಂದ 80 ಕೆ.ಜಿ. ದನದ ಮಾಂಸ ವಶಕ್ಕೆ ಪಡೆದ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರಿನ ಮರಳೂರುದಿಣ್ಣೆಯಲ್ಲಿ ಈ ದಾಳಿ ನಡೆದಿದ್ದು, ಅಕ್ರಮವಾಗಿ ಮಾಂಸದ ಅಂಗಡಿಯಲ್ಲಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೂ ಮಾಂಸದಂಗಡಿಗೆ ಪೊಲೀಸರು ದಾಳಿ ನಡೆಸಿದ ವೇಳೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಕೂಡ ನಡೆಯಿತು. ಪೊಲೀಸರು ಹಾಗೂ ಸ್ಥಳೀಯರ ನಡುವೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಪೊಲೀಸ್ ಅಧಿಕಾರಿಗಳು ಸ್ಥಳೀಯರನ್ನು ತೀವ್ರವಾಗಿ ತರಾಟೆಗೆತ್ತಿಕೊಂಡ ಘಟನೆಯೂ ನಡೆಯಿತು.
ಬೆಂಗಳೂರು: ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ತಕ್ಷಣ ನೂತನ ಶಿಕ್ಷಣ ನೀತಿ (ಎನ್‍ಇಪಿ) ಬದಲಿಸುವ ಮಾತನಾಡಿದ್ದಾರೆ. ಅದರಲ್ಲಿರುವ ಲೋಪ ದೋಷ, ಅವುಗಳನ್ನು ಬದಲಿಸುವ ಮಾತನಾಡಿಲ್ಲ. ಇವತ್ತಿನ ರಾಜ್ಯ ಸರಕಾರದಲ್ಲಿ ಯಾರು ಶಿಕ್ಷಣ ಸಚಿವ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಆಕ್ಷೇಪಿಸಿದರು ಎಂದು ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದರು. ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಧು ಬಂಗಾರಪ್ಪ ಅವರಲ್ಲಿ ಯಾರು ಶಿಕ್ಷಣ ಸಚಿವರು ಎಂದು ಕೇಳಿದರು. ಸರಕಾರದ ಹಿಂದಿರುವ ಬುದ್ಧಿಜೀವಿಗಳು ಶಿಕ್ಷಣ ಸಚಿವರೇ ಎಂದು ಕೇಳಿದರು. ಅವರು ತಂದಿದ್ದನ್ನು ನಾವ್ಯಾಕೆ ಮಾಡಬೇಕ್ರಿ ಎಂಬ ಹಾರಿಕೆಯ ಉತ್ತರ ಸರಿಯಲ್ಲ ಎಂದು ಅವರು ಟೀಕಿಸಿದರು. ಉಡಾಫೆ ವ್ಯವಸ್ಥೆ ಇದೆ ಎಂದು ತಿಳಿಸಿದರು. ಭಾರತೀಯ ಯೋಚನೆಗೆ ಅನುಗುಣವಾಗಿ ಶಿಕ್ಷಣ ಪದ್ಧತಿ ಇರಬೇಕೆಂದು ಡಾ.ಅಂಬೇಡ್ಕರ್, ನೇತಾಜಿ ಅವರು ಅನೇಕ ಬಾರಿ ಮಾತನಾಡಿದ್ದಾರೆ. ಸ್ವದೇಶಿ ಯೋಚನೆಗಳನ್ನು ತರಬೇಕೆಂದು ಮಹಾತ್ಮ ಗಾಂಧೀಜಿ ನುಡಿದಿದ್ದರು ಎಂದು ಹೇಳಿದರು. ಶಿಕ್ಷಣ ತಜ್ಞರ ಸಮಿತಿ ಮಾಡಿ…
ರಾಹುಲ್ ಗಾಂಧಿಯವರ ಮೋದಿ ಉಲ್ಲೇಖ ಪ್ರಕರಣದಲ್ಲಿ ಕಾಂಗ್ರೆಸ್ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ. ಮೋದಿ ವಿರುದ್ಧದ ಎಲ್ಲಾ ಮಾನನಷ್ಟ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸುತ್ತದೆ. ಎಲ್ಲ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು. ಒಂದೇ ವಿಚಾರವಾಗಿ ಹಲವು ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಕ್ರಮ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸ್ಪಷ್ಟಪಡಿಸಲಾಗುವುದು. ಹಲವಾರು ರಾಜ್ಯಗಳಲ್ಲಿನ ಪ್ರಕರಣಗಳು ರಾಹುಲ್ ಗಾಂಧಿ ಅವರ ಜನಪ್ರತಿನಿಧಿಯಾಗಿ ಪ್ರಚಾರದ ಮೇಲೆ ಪರಿಣಾಮ ಬೀರುತ್ತಿವೆ ಎಂದು ಕಾಂಗ್ರೆಸ್ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಿದೆ. ಆಗಸ್ಟ್ 5 ರಂದು, ‘ಮೋದಿ’ ಹೇಳಿಕೆಯ ಹೆಸರಿನಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರೊಂದಿಗೆ ರಾಹುಲ್ ಅವರ ಲೋಕಸಭಾ ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ. ಅನರ್ಹತೆ ನೋಟಿಸ್ ಜಾರಿಯಾದ 134 ದಿನಗಳ ನಂತರ ರಾಹುಲ್ ಪರವಾಗಿ ತಡೆ ನೀಡಲಾಗಿದೆ. ಈ ಶಿಕ್ಷೆಯು ಸಾರ್ವಜನಿಕ ಕೆಲಸದಲ್ಲಿ ಮುಂದುವರಿಯುವ ರಾಹುಲ್ ಅವರ ಹಕ್ಕನ್ನು…
ಬಾಗಲಕೋಟೆ: ಸುಮಾರು ನಾಲ್ಕು ದಿನಗಳಿಂದ ಬಾಗಲಕೋಟೆ ನಗರದಲ್ಲಿ ಶಿವಾಜಿ ಮೂರ್ತಿ ಗಲಾಟೆ ಜೋರಾಗಿದೆ. ಆ.13 ರಂದು ಬೆಳ್ಳಂಬೆಳಿಗ್ಗೆ ಬಾಗಲಕೋಟೆ ನಗರದ ಹೊರವಲಯದ ಕಾಂಚನಾ ಪಾರ್ಕ್ ಬಳಿ ಜಾಗದಲ್ಲಿ ಸುಮಾರು 18 ಅಡಿ ಎತ್ತರದ ಶಿವಾಜಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ಜಿಲ್ಲೆಯ ಜನರಿಗೆ ಅಚ್ಚರಿ ಹಾಗೂ ಕುತೂಹಲ ಹೆಚ್ಚಾಗಿತ್ತು. ಶಿವಾಜಿ ಮೂರ್ತಿಯನ್ನು ರಾತ್ರೋ ರಾತ್ರಿ ಹಿಂದೂ ಅಭಿಮಾನಿಗಳು ಕೂರಿಸಿ ಹೋಗಿದ್ದಾರೆಂದು ನುಣುಚಿಕೊಂಡ ಬಿಜೆಪಿ ಮುಖಂಡರ ಒಂದು ಗುಂಪು ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಿದ್ದು ಸ್ವಾಗತಾರ್ಹ ಎಂದು ಸಮರ್ಥನೆ ಮಾಡಿಕೊಂಡಿತ್ತು. ಬಿಜೆಪಿಯ ಇನ್ನೊಂದು ಗುಂಪಿಗೆ ಈ ವಿಚಾರದಿಂದ ಬೇಸರವೂ ಆಗಿತ್ತು. ಮೂರ್ತಿ ಪ್ರತಿಷ್ಠಾಪನೆ ಖುಷಿಯ ವಿಚಾರ ಆದರೆ ರಾತ್ರೋ ರಾತ್ರೋ ಕಳ್ಳತನದಿಂದ ಶಿವಾಜಿಮೂರ್ತಿಯನ್ನು ಪ್ರತಿಷ್ಠಾಪಿಸುವ ಅವಶ್ಯಕತೆ ಏನಿತ್ತು? ಹಿಂದೂ ಹೃದಯ ಸಾಮ್ರಾಟ ಎಂದು ಕರೆಯಲ್ಪಡುವ ಶಿವಾಜಿ ಪ್ರತಿಮೆಯನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ತಂದು ಕೂರಿಸಬಹುದಿತ್ತು ಎಂದು ಬೇಸರವನ್ನೂ ಹೊರಹಾಕಿತ್ತು. ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರ ಇಷ್ಟಕ್ಕೆ ನಿಲ್ಲಲಿಲ್ಲ. ಶಿವಾಜಿ ಪ್ರತಿಮೆ…
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3ರ ಲ್ಯಾಂಡರ್ ವಿಕ್ರಮ್ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದೆ. ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್ ನಿಂದ ಲ್ಯಾಂಡರ್ ಮ್ಯಾಡ್ಯೂಲ್ ಬೇರ್ಪಟ್ಟಿದ್ದು, ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯಲು ಸಜ್ಜಾಗಿದೆ ಇಸ್ರೋ ತಿಳಿಸಿದೆ. ಈ ಮಾಹಿತಿಯನ್ನು ಟ್ವಿಟ್ಟರ್ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿರುವ ಇಸ್ರೋ, ಲ್ಯಾಂಡರ್ ಮ್ಯಾಡ್ಯೂಲ್, ಪ್ರೊಪಲ್ಷನ್ ಮಾಡ್ಯೂಲ್ ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ. ನಾಳೆಗೆ ಯೋಜಿಸಲಾದ 1,600 ಗಂಟೆಗಳ ಡಿಬೂಸ್ಟಿಂಗ್ ನಂತರ ಚಂದ್ರನ ಮೇಲೆ ಲ್ಯಾಂಡರ್ ಇಳಿಯಲಿದೆ. ಪ್ರೊಪಲ್ಷನ್ ಮಾಡ್ಯೂಲ್ ತಿಂಗಳುಗಳ ಕಾಲ ಅಥವಾ ವರ್ಷಗಳ ವರೆಗೆ ಪ್ರಸ್ತುತ ಕಕ್ಷೆಯಲ್ಲೇ ತನ್ನ ಪ್ರಯಾಣ ಮುಂದುವರಿಸಲಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಚಂದ್ರನ ದಕ್ಷಿಣ-ಧ್ರುವ ಸವಾಲಿನ ಭೂಪ್ರದೇಶದ ಹೊರತಾಗಿಯೂ, ಗಣನೀಯ ಪ್ರಮಾಣದ ಮಂಜುಗಡ್ಡೆಯ ಸಂಭಾವ್ಯ ಉಪಸ್ಥಿತಿಯಿಂದಾಗಿ ವಿಜ್ಞಾನಿಗಳಿಗೆ ಹೆಚ್ಚು ಸೂಕ್ಷ್ಮವಾಗಿರಬೇಕಾಗಿದೆ. ಇಂಧನ, ಆಮ್ಲಜನಕ ಮತ್ತು ಕುಡಿಯುವ ನೀರನ್ನು ಹೊರತೆಗೆಯಲು ಇದು ಉಪಯುಕ್ತವಾಗಿದೆ. ಆ.23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯ ಪ್ರಗ್ಯಾನ್ ರೋವರ್ ಅನ್ನು…
ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಹೇಳಿದರು. ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದ ಆಜಾದ್, ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ ನೆಲದೊಳಗೆ ಹೋಗುತ್ತಾರೆ, ಅವರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಭಾವನೆ ಏಕೆ ಎಂದು ಪ್ರಶ್ನಿಸಿದರು. ಗುಲಾಂ ನಬಿ ಆಜಾದ್…
ಬೆಂಗಳೂರು: ಮುಜರಾಯಿ ಇಲಾಖೆ ದೇವಸ್ಥಾನಗಳ ಹಣ ತಡೆ ಹಿಡಿದಿರುವ ಆದೇಶವನ್ನು ಹಿಂಪಡೆಯುವಂತೆ ಆಯುಕ್ತರಿಗೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ. ಗೊಂದಲದಿಂದ ಆಯುಕ್ತರು ಹಣ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ. ಕೇವಲ ದೇವಸ್ಥಾನ ಗಳ ಜೀರ್ಣೋದ್ಧಾರ, ಕಾಮಗಾರಿಗಳ ವಿವರ ಪಡೆಯುವಂತೆ ಸಚಿವರು ಸೂಚಿಸಿದ್ದರು. ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತರು ಆದೇಶ ವಾಪಸ್ ಪಡೆದಿದ್ದಾರೆ.
ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಳಿರೋದರಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣಾ ಸೇರಿದಂತೆ ಪ್ರಮುಖ ವಿಚಾರ ಬಗ್ಗೆ ಸರ್ವಪಕ್ಷಗಳ ಜತೆ ಚರ್ಚಿಸುವುದರಲ್ಲಿ ತಪ್ಪಿಲ್ಲ. ಸರ್ವಪಕ್ಷಗಳ ಸಭೆ ನಡೆಸುವ ಬಗ್ಗೆ ನಾವೂ ಆಲೋಚನೆ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಳಗಾವಿ: ಬಿಜೆಪಿ ಬಿಟ್ಟು ಯಾರು ಹೋಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತೇವೆ ಎಂದು ಯಾರೂ ನಿಖರವಾಗಿ ಹೇಳಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಮೂರು ತಿಂಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾತ್ರಿ ಕಂಡ ಬಾವಿಗೆ ಹಗಲಿನಲ್ಲಿ ಯಾರೂ ಬೀಳುವುದಿಲ್ಲ. ಈ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಕಾರಜೋಳ ವಾಗ್ದಾಳಿ ಮಾಡಿದರು.
ಮಹಾರಾಷ್ಟ್ರದ ಕಲ್ಯಾಣ್ ನಲ್ಲಿ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ 12 ವರ್ಷದ ಬಾಲಕಿಯನ್ನು ತಾಯಿಯ ಎದುರೇ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ. ಕೊಲೆ ಮಾಡಿದ 20 ವರ್ಷದ ಯುವಕನನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ತಾಯಿಯ ಕಿರುಚಾಟ ಕೇಳಿ ಸ್ಥಳೀಯರು ದಾಳಿಕೋರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಗೆ ಎಂಟು ಬಾರಿ ಇರಿದಿದ್ದಾನೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಅಪರಾಧಕ್ಕೆ ಬಳಸಿದ್ದ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.