Subscribe to Updates
Get the latest creative news from FooBar about art, design and business.
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
Author: admin
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ ಎಂದರು. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ಹೆಚ್ಚಳವಾಗಿದೆ ಎಂದು ಮಾಹಿತಿ ನೀಡಿದರು. ಕರ್ನಾಟಕದಲ್ಲಿ ಬಸ್ ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್ ಚಾಲಿತ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಹೇಳಿದರು. ಇದೇ ವೇಳೆ ಬಸ್ ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಫೇಕ್ ಸೋಷಿಯಲ್ ಮೀಡಿಯಾ ಅಕೌಂಟ್ ಮತ್ತು ಡೀಪ್ ಫೇಕ್ ಫೋಟೋ ವೈರಲ್ ಆಗುತ್ತಿರುವ ವಿರುದ್ಧ ಸಾರಾ ತೆಂಡೂಲ್ಕರ್. ತಂತ್ರಜ್ಞಾನದ ದುರ್ಬಳಕೆ ಆತಂಕಕಾರಿಯಾಗಿದೆ. ಡೀಪ್ ಫೇಕ್ ತನ್ನ ಹೆಸರಿನಲ್ಲಿರುವ ನಕಲಿ ಖಾತೆಯಿಂದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘X’ ಅಂತಹ ಖಾತೆಗಳನ್ನು ತನಿಖೆ ಮಾಡಲು ಮತ್ತು ಅಮಾನತುಗೊಳಿಸಲು ತಾನು ನಿರೀಕ್ಷಿಸುತ್ತೇನೆ ಎಂದು ಸಾರಾ ಹೇಳಿದರು. ಇತ್ತೀಚೆಗೆ ‘X’ ಖಾತೆ @SaraTendulkar__ ಭಾರತೀಯ ಆರಂಭಿಕ ಬ್ಯಾಟ್ಸ್ ಮನ್ ಶುಭಮಾನ್ ಗಿಲ್ ಅವರೊಂದಿಗೆ ಸಾರಾ ತೆಂಡೂಲ್ಕರ್ ಅವರ ಡೀಪ್ ಫೇಕ್ ಚಿತ್ರಗಳನ್ನು ಹಂಚಿ ಕೊಂಡಿದ್ದಾರೆ. ಇನ್ನೂರು ಐವತ್ತು ಸಾವಿರಕ್ಕೂ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಖಾತೆಯಿಂದ ಶುಬ್ ಮಾನ್ ಗಿಲ್ ಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂಬ ವದಂತಿಗಳಿವೆ. ಇದು ಸಾರಾ ಅವರ ಪ್ರತಿಕ್ರಿಯೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡಿರುವ ಟಿಪ್ಪಣಿಯ ಮೂಲಕ ಸಾರಾ ಟೀಕೆಗಳನ್ನು ಎತ್ತಿದ್ದಾರೆ. ‘ಸಂತೋಷ, ದುಃಖ ಮತ್ತು ದೈನಂದಿನ ಚಟುವಟಿಕೆಗಳನ್ನು ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮ ಉತ್ತಮ ಸ್ಥಳವಾಗಿದೆ. ಆದರೆ ತಂತ್ರಜ್ಞಾನದ ದುರ್ಬಳಕೆ ಆತಂಕಕಾರಿಯಾಗಿದೆ. ಸುಳ್ಳುಗಳನ್ನು ಹಂಚಿಕೊಳ್ಳುವ ಕಾಲಕ್ಷೇಪಗಳು…
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ರಾಜಕೀಯ ಲಾಭ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವಿಷಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ನೂತನ ಕಚೇರಿ ಉದ್ಘಾಟನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಯ ವಿಚಾರದಲ್ಲಿ ಸಿದ್ದರಾಮಯ್ಯ ನವರು ಮೊದಲಿನಿಂದಲೂ ಗೊಂದಲದ ಗೂಡು ಮಾಡಿದ್ದಾರೆ. ಆರಂಭದಲ್ಲಿ ಜಾತಿಗಣತಿ ಅಂದರು, ಆಮೇಲೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ವರದಿ ಅಂದರು. ಸರ್ಕಾರಿ ಆದೇಶದಲ್ಲಿ ಸಾಮಾಜಿಕ ಶೈಕ್ಷಣಿಕ ವರದಿ ಅಂತ ಬರೆದಿದ್ದಾರೆ ಎಂದರು. ಹಿಂದುಳಿದ ವರ್ಗಗಳ ಆಯೋಗ ಮಾಡಿರುವುದು ಸರಿಯಾಗಿ ಸಮೀಕ್ಷೆ ಆಗಿಲ್ಲ, ಸದಸ್ಯರು, ಅಧ್ಯಕ್ಷರಿಗೆ ಸಾಮ್ಯತೆ ಇರಲಿಲ್ಲ, ರಾಜಕೀಯ ಹಸ್ತಕ್ಷೇಪ ಇತ್ತು , ಇಷ್ಟೆಲ್ಲ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರು ಸುಮ್ಮನಿದ್ದರು. ಆಗ ವರದಿ ಪಡೆದಿಲ್ಲ. ಈಗ ಚುನಾವಣೆ ಬರುತ್ತಿದೆ ಎಂದು ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಸ್ಪಷ್ಟ ವರದಿ ಬಂದ ಮೇಲೆ ನಮ್ಮ ತೀರ್ಮಾನ ತಿಳಿಸುತ್ತೇವೆ…
ತುಮಕೂರು: ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಚಿತ್ರಕಲಾ ಶಿಕ್ಷಣವನ್ನು ಕಲಿಯುತ್ತಿದ್ದು, ವಿಶೇಷವಾಗಿ ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಅತಿಥಿ ಉಪನ್ಯಾಸಕರಿಗೆ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗುರು-ಶಿಷ್ಯರ ಸಂಬಂಧ ತಂದೆ ಮಕ್ಕಳಂತೆ ಹಾಗೆಯೇ ಇಲ್ಲಿಯ ವಿದ್ಯಾರ್ಥಿಗಳು ಸಹೋದರರಂತೆ ಪ್ರೀತಿ ವಾತ್ಸಲ್ಯದ ವಾತಾವರಣವನ್ನು ಕಾಪಾಡಿಟ್ಟುಕೊಂಡು ಗುರುಗಳ ಮಾರ್ಗದರ್ಶನ ಪಡೆಯುವ ಮೂಲಕ ಉತ್ತಮ ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಮ್ಮ ಕಾಲೇಜಿಗೆ ಹಳೆ ವಿದ್ಯಾರ್ಥಿಗಳ ಸಂಘ ಸದಾ ಬೆಂಬಲವಾಗಿ ನಿಂತಿದೆ. ಆ ಸಂಘದ ಪ್ರತಿಯೊಬ್ಬ ಕಾರ್ಯಕರ್ತನೂ ಅವರ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವುದು ಖುಷಿಯ ಸಂಗತಿ. ಇಂದಿನ ವಿದ್ಯಾರ್ಥಿಗಳು ಕಾಲೇಜಿನ ಉಪಾನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿಗಳ ಮಾರ್ಗದರ್ಶನ ಪಡೆದು ಸಮಾಜದಲ್ಲಿ ಒಬ್ಬ ಉತ್ತಮ ಚಿತ್ರಕಲಾವಿದರಾಗಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…
ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬಾಲ ಭವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಸಮಾರಂಭದ ಬಳಿಕ ಮಾತನಾಡಿದ ಸಚಿವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಓ , ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು. ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿಯಲ್ಲಿ 135 ವರ್ಷಗಳ ಹಿಂದೆ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಇತ್ತು. ಈ ಶಾಲೆ ಕಳೆದ ಕೆಲವರ್ಷಗಳಿಂದ ಮಳೆಗಾಲದಲ್ಲಿ ಸೋರಲಾರಂಭಿಸಿದೆ. ಆದರೆ, ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ, ವಿದ್ಯಾರ್ಥಿಗಳು ತಾವು ಕಲಿತ ಶಾಲೆ ದುರಸ್ತಿಗೆ ತಾವೇ ಮುಂದೆ ಬಂದಿದ್ದಾರೆ. ಮಾಜಿ ವಿದ್ಯಾರ್ಥಿಗಳ ಸಂಘ ಕಟ್ಟಿಕೊಂಡು ಶಾಲೆಯ ದುರಸ್ತಿಗೆ ನಿಂತಿದ್ದಾರೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮೂವರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಐಎಸ್ ಐ ಬೆಂಬಲಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದನ್ನು ಬಂಧಿಸಲಾಗಿದೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಪಂಜಾಬ್ ನ ಬಟಿಂಡಾದಿಂದ ಉಗ್ರರನ್ನು ಹಿಡಿಯಲಾಗಿದೆ. ಬಟಿಂಡಾದಲ್ಲಿನ ಕೌಂಟರ್ ಇಂಟಲಿಜೆನ್ಸ್ ತಂಡ ಈ ಕಾರ್ಯಾಚರಣೆಯ ಹಿಂದೆ ಇತ್ತು. ಬಂಧಿತ ಮೂವರು ವ್ಯಕ್ತಿಗಳು ಸಂಗ್ರೂರ್ ಜೈಲಿನಲ್ಲಿರುವ ಯುಎಪಿಎ ಆರೋಪಿಗಳಿಗೆ ಸಂಬಂಧಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಧಿತರಿಂದ 8 ಪಿಸ್ತೂಲ್ ಗಳು, 9 ಮ್ಯಾಗಜೀನ್ ಗಳು ಮತ್ತು 30 ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೂವರ ವಿರುದ್ಧ ಬಟಿಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಂಪಿನಲ್ಲಿ ಉಳಿದವರ ಪತ್ತೆಗಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪಂಜಾಬ್ ಪೊಲೀಸರು ಭಯೋತ್ಪಾದನಾ ಘಟಕಗಳ ವಿರುದ್ಧ ನಿಗಾವನ್ನು ತೀವ್ರಗೊಳಿಸಿದ್ದಾರೆ. ದೀಪಾವಳಿಯ ನಂತರ, ಪೊಲೀಸರು ಅಂತಹ 8 ಕ್ಕೂ ಹೆಚ್ಚು ಭಯೋತ್ಪಾದಕ ಘಟಕಗಳನ್ನು ಪತ್ತೆ ಮಾಡಿದರು. ಅವರು ಸೆಲೆಬ್ರಿಟಿಗಳು, ಉದ್ಯಮಿಗಳು ಮತ್ತು ಪೊಲೀಸ್…
ಕಂಬಳಕ್ಕೆ 228 ಜೊತೆ ಕೋಣಗಳು ರಿಜಿಸ್ಟರ್ ಆಗಿವೆ ಎಂದು ಶಾಸಕ ಆಶೋಕ್ ರೈ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶು ಇಲಾಖೆಯಿಂದ ಪರ್ಮಿಷನ್ ತೆಗೆದುಕೊಂಡಿದ್ದೇವೆ. ಕೋಣಗಳ ಆಹಾರ ಮತ್ತು ನೀರಿನ ಬಗ್ಗೆ ಕೋಣಗಳ ಯಜಮಾನರು ನೋಡಿಕೊಳ್ಳುತ್ತಾರೆ. ಕಂಬಳದ ಟ್ರಾಕ್ ಬಗ್ಗೆ ಒಳ್ಳೆಯ ಅಭಿಪ್ರಾಯ ಕೇಳಿ ಬಂದಿವೆ. ಈ ಕೋಣಗಳಲ್ಲಿ 50 ಬಗೆಯ ಕೋಣಗಳ ರೆಕಾರ್ಡ್ ಮಾಡಿವೆ. ಕಂಬಳಕ್ಕೆ ಹೊಸ ಕೋಣಗಳನ್ನ ಖರೀದಿ ಮಾಡಲಾಗಿದೆ. 180 ಸ್ಟಾಲ್ ಗಳನ್ನ ಹಾಕಲಾಗಿದೆ. ಎರಡು ದಿನ ನಿರಂತರವಾಗಿ ನಡೆಯಲಿದೆ ಎಂದರು. ಕಂಬಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿವಿಐಪಿ, ವಿಐಪಿಗೆ ಸೆಪೆರೇಟ್ ವ್ಯವಸ್ಥೆ ಮಾಡಲಾಗಿದೆ. ಕಂಬಳದಲ್ಲಿ ಗೆದ್ದವರಿಗೆ ಮೊದಲ ಬಹುಮಾನ 16 ಗ್ರಾಂ ಚಿನ್ನ 1 ಲಕ್ಷ ನಗದು ನೀಡಲಾಗುತ್ತದೆ. ದ್ವಿತೀಯ ಸ್ಥಾನಕ್ಕೆ 8 ಗ್ರಾಮ್ ಚಿನ್ನ, 50 ಸಾವಿರ ಕೊಡಲಾಗುತ್ತದೆ. ತೃತೀಯ ಸ್ಥಾನಕ್ಕೆ 4 ಗ್ರಾಂ ಚಿನ್ನ 25 ಸಾವಿರ ನಗದನ್ನ ಬಹುಮಾನವಾಗಿ…
ರಾತ್ರಿ ಮಲಗುವ ಮುನ್ನ ಪಾಸ್ಟಾ, ಅನ್ನ ಮತ್ತು ಆಲೂಗಡ್ಡೆ ಇರುವ ಆಹಾರವನ್ನು ಸೇವಿಸಬಾರದು. ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟವು ಹೆಚ್ಚಾಗುತ್ತದೆ ಮತ್ತು ದೇಹದ ಚಯಾಪಚಯ ಕಡಿಮೆಯಾಗುತ್ತದೆ. ರಾತ್ರಿಯಲ್ಲಿ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಎದೆಯುರಿ ಉಂಟಾಗುತ್ತದೆ. ಊಟದ ಸಮಯದಲ್ಲಿ ಎಣ್ಣೆಯುಕ್ತ ಮತ್ತು ಕೊಬ್ಬಿನ ಆಹಾರವನ್ನು ಸೇವಿಸುವುದರಿಂದ ಅವು ಸರಿಯಾಗಿ ಜೀರ್ಣವಾಗುವುದಿಲ್ಲ. ರಾತ್ರಿ ಚಾಕಲೇಟ್ ತಿಂದರೆ ಅದರಲ್ಲಿರುವ ಕೆಫೀನ್ ನಿದ್ದೆ ಬರದಂತೆ ತಡೆಯುತ್ತದೆ.
ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರು ಗ್ರಾಮದಲ್ಲಿ ನೂತನವಾಗಿ ಗ್ರಂಥಾಲಯ ನಿರ್ಮಾಣ ಕಾರ್ಯಕ್ಕೆ ಶಾಸಕಿ ಮಂಜುಳಾ ಲಿಂಬಾವಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರ್ವಾಹ ಅಧಿಕಾರಿ ವಸಂತ್ ಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಬಿ. ಎನ್. ನಟರಾಜ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಸ್ವಾಮಿ, ಉಪಾಧ್ಯಕ್ಷರಾದ ಶ್ರೀ ನವೀನ ರೆಡ್ಡಿ ಸೇರಿದಂತೆ ಪಂಚಾಯತ್ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರು ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು. ಈ ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇರುವ ಕುಂದುಕೊರತೆ ಬಗ್ಗೆ ಚರ್ಚಿಸಿ, ಅವುಗಳ ನಿವಾರಣೆಗೆ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಗ್ರಾಮದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಹಾಯ ಧನ ವಿತರಿಸಲಾಯಿತು.