Subscribe to Updates
Get the latest creative news from FooBar about art, design and business.
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
- ತುಮಕೂರು | ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
Author: admin
ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 15 ರ ರಾತ್ರಿ, ಮಾರುತಿ ನಗರದ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವೀಗೀಡಾಗಿದ್ದಾರೆ. ನರಸಪ್ಪ (51) ಹಾಗೂ ರಕ್ಷಾ ಮೃತರು. ರಕ್ಷಾ ಹಾಗೂ ಕಾಲೇಜು ವಿದ್ಯಾರ್ಥಿ ಚಂದನ್ ಮಾರುತಿ ನಗರದಿಂದ ಕೆಎಲ್‌ಇ ಕಾಲೇಜಿನೆಡೆಗೆ ವೇಗವಾಗಿ ಹೋಗುತ್ತಿದ್ದಾಗ ನರಸಪ್ಪ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನರಸಪ್ಪ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡಿದ್ದ ರಕ್ಷಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮೋದಿ ಹೇಳಿಕೆಯಿಂದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್. ರಾಹುಲ್ ಗಾಂಧಿ ಖುದ್ದು ಜಾರ್ಖಂಡ್ ನ್ಯಾಯಾಲಯಕ್ಕೆ ಹಾಜರಾಗುವ ಅಗತ್ಯವಿಲ್ಲ. ಇದಕ್ಕೂ ಮುನ್ನ ರಾಂಚಿಯ ಜನಪ್ರತಿನಿಧಿಗಳ ನ್ಯಾಯಾಲಯ ರಾಹುಲ್ ಗಾಂಧಿಗೆ ಹಾಜರಾಗುವಂತೆ ಸೂಚಿಸಿತ್ತು. ಪ್ರದೀಪ್ ಮೋದಿ ಪ್ರಕರಣದ ಅರ್ಜಿದಾರರಾಗಿದ್ದಾರೆ. ಖುದ್ದು ಹಾಜರಾಗುವಂತೆ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೆ.ದ್ವಿವೇದಿ, ಕೆಲವು ಷರತ್ತುಗಳೊಂದಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗದೇ ವಿನಾಯಿತಿ ನೀಡಿದರು. ಜಾರ್ಖಂಡ್ ನ ರಾಂಚಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ‘ಮೋದಿ ಹೆಸರಿಟ್ಟವರೆಲ್ಲ ಕಳ್ಳರು’ ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ರಾಹುಲ್ ತಪ್ಪಿತಸ್ಥ ಎಂದು ಸೂರತ್ ಕೋರ್ಟ್ ನೀಡಿದ ತೀರ್ಪಿನಿಂದ ಸಂಸದರ ಸಂಸತ್ ಸದಸ್ಯತ್ವ ರದ್ದಾಗಿದೆ. ನಂತರ ಸುಪ್ರೀಂ ಕೋರ್ಟ್ ಈ ತೀರ್ಪಿಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಗಿದೆ. ರಾಹುಲ್ ಗಾಂಧಿ ಅವರು ಜಾರ್ಖಂಡ್ ಒಂದರಲ್ಲೇ ಮೂರು ಮಾನನಷ್ಟ ಪ್ರಕರಣಗಳನ್ನು…
ಕಾಲೇಜಿನ ಯುವಕ ಯುವತಿಯರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸುವಲ್ಲಿ ಸೂರ್ಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಬಂದಿತ ಆರೋಪಿಗಳು ಆನೇಕಲ್ ಹುಸ್ಕೂರು ಸಮೀಪದ ಚನ್ನಕೇಶವ ನಗರದ ಅಭಿ(19) ತರಣ್(20), ಸೂರ್ಯ(21), ಹರ್ಷ (21)ಬಂಧಿತ ಆರೋಪಿಗಳು. ಇನ್ನು ಬಂಧಿತ ಆರೋಪಿಗಳಿಂದ ಮಾಲ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ತುಮಕೂರಿನಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರು ನಗರ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ಮನೆ ಮೇಲೆ ದಾಳಿ ಸುಮಾರು 10ಕ್ಕೂ ಹೆಚ್ಚು ಮಂದಿಗೆ ಲೋಕಾಯುಕ್ತ ಪೊಲೀಸರು ದಿಡೀರ್ ದಾಳಿ ನಡೆಸಿದ್ದಾರೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ನಾಗರಾಜ್ ಅವರಿಗೆ ಸೇರಿದ ಮನೆ ಮೇಲೆ ಬೆಳಗ್ಗೆ ಸುಮಾರು ಐದು ಗಂಟೆ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಕಾಗದಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಅವರನ್ನು ವಿಚಾರಣೆಗೂ ಕೂಡ ಒಳಪಡಿಸಿದ್ದಾರೆ. ಹಲವು ದಿನಗಳಿಂದ ಇವರ ಮೇಲೆ ಸಾಕಷ್ಟು ದೂರುಗಳು ಲೋಕಾಯುಕ್ತ ಪೊಲೀಸರಿಗೆ ಬಂದಿದ್ದವು. ಇದರ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಇಂದು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ತುಮಕೂರು ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸ ಹಾಗೂ ಪಾವಗಡ ತಾಲೂಕು ಅರಸೀಕೆರೆಯ ನಿವಾಸ ಹಾಗೂ ಟೂಡಾ ಕಚೇರಿಯಲ್ಲಿ ಮೂರು ಪ್ರತ್ಯೇಕ ತಂಡಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು ಮಹತ್ವದ…
ಬೆಂಗಳೂರಿನಲ್ಲಿ 18 ಶ್ವಾನಗಳಿಗೆ ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಆರ್‌ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ. ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ಸಂಪೂರ್ಣ ಕೊಳೆತು ಹೋಗಿದೆ. ನಾಯಿಗಳ ದೇಹವನ್ನ ಹಗ್ಗ ಮತ್ತು ಚೀಲದಲ್ಲಿ ಹಾಕಿ ತುಂಬಲಾಗಿದೆ. ಈ ಬಗ್ಗೆ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಿವಾಸಿ ಶಶಿಧರ್ ಮೃತ ಯುವಕ. ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿದ್ದನು. ಶಶಿಧರ್ ಮೇಲೆ ಬಾಲಕಿಯ ಪೋಷಕರು ಬಸವನ ಬಾಗೇವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವಿಷಯ ತಿಳಿದ ಶಶಿಧರ್ ಇನ್ ಸ್ಟಾಗ್ರಾಂನಲ್ಲಿ ನನ್ನ ಸಾವಿಗೆ ಬಾಲಕಿ ಅಪ್ಪ, ಅಮ್ಮ ಮತ್ತೆ ಅವರ ಚಿಕ್ಕಪ್ಪ, ಅವರಜ್ಜಿ ಕಾರಣ ಅಂತ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಭ್ರಷ್ಟಾಚಾರದಲ್ಲಿ ಸಚಿವ ಚಲುವರಾಯಸ್ವಾಮಿಗೆ ಮೊದಲ ಸ್ಥಾನ. ಚಲುವರಾಯಸ್ವಾಮಿ 300ರಿಂದ 400 ಕೋಟಿ ಹಣ ಲೂಟಿ ಹೊಡೆದಿದ್ದಾನೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ಹಣವನ್ನು ಏರ್ ಲಿಫ್ಟ್ ಮಾಡ್ತಿದೆ. ಹಿಂದಿನ ಸರ್ಕಾರದಲ್ಲಿ ಜೆಸಿಬಿಯಲ್ಲಿ ಹಣ ತುಂಬುತ್ತಾರೆ ಅಂತಿದ್ರು. ಆದರೆ ಈ ಸರ್ಕಾರ ಭ್ರಷ್ಟ ಹಣವನ್ನು ಏರ್ ಲಿಫ್ಟ್ ಮಾಡ್ತಿದೆ. ಈ ಸರ್ಕಾರದವರು ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ ಎಂದು ನಾಗಮಂಗಲದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಆರೋಪ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಬಿಜೆಪಿ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳಿ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು. ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದ್ದಾರೆ. ಪರಿಶೀಲನೆ ಮಾಡಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಐಡಿಯಾಲಜಿ ನಂಬಿ, ಕಾಂಗ್ರೆಸ್ ಲೀಡರ್ ಶಿಪ್ ಮೇಲೆ ನಂಬಿಕೆ ಇಟ್ಟು ಪಕ್ಷಕ್ಕೆ ಬಂದರೆ ಬರಬಹುದು. ಹಿಂದೆ ಪಕ್ಷ ಬಿಟ್ಟು ಹೋದವರು ಕೂಡಾ ಬರಬಹುದು ಎಂದು ಸ್ಪಷ್ಟಪಡಿಸಿದರು. ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗಲ್ಲ. ತಪ್ಪು ಮಾಡಿದ್ದನ್ನು ಸರಿ…
ಹರಿಯಾಣದ ನುಹ್ ಮತ್ತು ಗುರುಗ್ರಾಮ್ ನಲ್ಲಿ ನಡೆದ ಕೋಮು ಗಲಭೆಗೆ ಸಂಬಂಧಿಸಿದಂತೆ ಬಜರಂಗದಳ ಸದಸ್ಯ ಮತ್ತು ಗೋರಕ್ಷಕ ಬಿಟ್ಟು ಬಜರಂಗಿಯನ್ನು ಬಂಧಿಸಲಾಗಿದೆ. ಬಿಟ್ಟು ಮತ್ತು ಅವರ ಬಜರಂಗದಳದ ಕಾರ್ಯಕರ್ತ ಮೋನು ಮಾನೇಸರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಹಿಂಸಾಚಾರವನ್ನು ಪ್ರಚೋದಿಸಲಾಗಿದೆ ಎಂಬ ಆರೋಪದ ನಡುವೆ ಬಂಧಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಟ್ಟು ಬಜರಂಗಿಯನ್ನು ಹಿಂಸಾಚಾರ ನಡೆದ 20 ದಿನಗಳ ನಂತರ ಫರಿದಾಬಾದ್ ನ ಆತನ ಮನೆಯ ಬಳಿ ಬಂಧಿಸಲಾಗಿದ್ದು, ಕೇಸರಿ ಬಟ್ಟೆಯಲ್ಲಿ ನಡೆದುಕೊಂಡು ಆಯುಧಗಳನ್ನು ಪ್ರದರ್ಶಿಸಿ ಪ್ರಚೋದನಕಾರಿ ಹಾಡುಗಳನ್ನು ಹಾಡುತ್ತಿರುವ ವಿಡಿಯೋದಲ್ಲಿ ಬಿಟ್ಟು ಬಜರಂಗಿ ಬಿಡುಗಡೆ ಮಾಡಿದ್ದಾರೆ. ಮಫ್ತಿಗೆ ಬಂದ ಪೊಲೀಸ್ ತಂಡ ಬಿಟ್ಟು ಬೆನ್ನತ್ತಿ ಹಿಡಿದು ಬಂಧಿಸಿರುವ ಸಿಸಿಟಿವಿ ದೃಶ್ಯಾವಳಿ ಬಿಡುಗಡೆಯಾಗಿದೆ. ಬಿಟ್ಟು ಅವರ ವಿರುದ್ಧ ಗಲಭೆ, ಹಿಂಸಾಚಾರ, ಬೆದರಿಕೆ, ಕೆಲಸಕ್ಕೆ ಅಡ್ಡಿಪಡಿಸುವುದು, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮತ್ತು ಮಾರಕ ಆಯುಧದಿಂದ ಹಲ್ಲೆ ಮಾಡಿದ ಆರೋಪಗಳನ್ನು ಹೊರಿಸಲಾಗಿದೆ. ಮಾರ್ಕೆಟ್ ನಲ್ಲಿ ಹಣ್ಣು ತರಕಾರಿ ವ್ಯಾಪಾರಿಯಾಗಿರುವ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿ…
ಕಾಂಗ್ರೆಸ್‌ನವರು ಸಮಾನತೆ ತರುತ್ತೇವೆ ಎಂದು ಹೇಳ್ತಾರೆ. ಇವರು ಯಾವುದರಲ್ಲಿ ಸಮಾನತೆ ತರುತ್ತಾರೆ. ಪುಕ್ಕಟೆ ಕೊಡುವ ಮೂಲಕ ಎಲ್ಲರೂ ಕೈ ಒಡ್ಡುವಂತೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಬದಲು, ಈ ರೀತಿ ಮಾಡುತ್ತಿದ್ದಾರೆ. ದೇಶದ ಆರ್ಥಿಕ ಸಂಪತ್ತು ವೃದ್ಧಿ ಆಗುತ್ತಿದೆ. ಆದರೆ, ಆ ಸಂಪತ್ತು ಎಲ್ಲರಿಗೂ ತಲುಪುವ ಕೆಲಸವಾಗುತ್ತಿಲ್ಲ. ಕೇವಲ ಕೆಲವು ಜನರಿಗೆ ತಲುಪುತ್ತಿದೆ. ನಮ್ಮ ದೇಶದಲ್ಲಿ ನೂರಾರು ಈಸ್ಟ್ ಇಂಡಿಯಾ ಕಂಪನಿಗಳು ಹುಟ್ಟಿಕೊಂಡಿವೆ. ಸ್ವಾತಂತ್ರ್ಯ ಬಂದ ನಂತರವೂ ಈಸ್ಟ್ ಇಂಡಿಯಾ ಕಂಪನಿಯ ಪಳಿಯುಳಿಕೆಗ ಳಾಗಿ ಎರಡು ಪಕ್ಷಗಳು ನಮ್ಮಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA