Subscribe to Updates
Get the latest creative news from FooBar about art, design and business.
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
Author: admin
ಅಯೋಧ್ಯೆ ಘಟನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರಿಸಲು ಎನ್ ಸಿಇಆರ್ ಟಿ ತಜ್ಞರ ಸಮಿತಿ ವರದಿ. ಅಯೋಧ್ಯೆಯನ್ನು ಆಧುನಿಕ ಇತಿಹಾಸದ ಭಾಗವನ್ನಾಗಿ ಮಾಡಲು ಶಿಫಾರಸು ಮಾಡಲಾಗಿದೆ. ವರದಿಯ ಪ್ರಕಾರ ರಾಮಾಯಣ, ಭಾಗವತ ಮತ್ತು ವೇದಗಳನ್ನು ಶಾಸ್ತ್ರೀಯ ಇತಿಹಾಸದಲ್ಲಿ ಸೇರಿಸಬೇಕು. ಅಯೋಧ್ಯೆಯ ಘಟನೆಗಳ ಹೊರತಾಗಿ, ಶಾಸ್ತ್ರೀಯ ಇತಿಹಾಸ ಪಠ್ಯಕ್ರಮದಲ್ಲಿ ಭಗವಾನ್ ರಾಮನ ಕಥೆಗಳನ್ನು ಸೇರಿಸಲು ತಜ್ಞರ ಸಮಿತಿಯು ನಿರ್ಧರಿಸಿದೆ. ವೇದಗಳು, ವೇದಕಾಲ, ರಾಮಾಯಣದ ಭಾಗಗಳು, ರಾಮನ ಪ್ರಯಾಣ ಇತ್ಯಾದಿಗಳನ್ನು ಶಾಸ್ತ್ರೀಯ ಇತಿಹಾಸದಲ್ಲಿ ಸೇರಿಸಲು ಮುಂದಾಗಿದೆ. ಶಿಫಾರಸುಗಳು ಸಮಾಜ ವಿಜ್ಞಾನ ಪಾಠಗಳ ಸುಧಾರಣೆಯ ಭಾಗವಾಗಿದೆ. ತರಗತಿಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರದರ್ಶಿಸಬೇಕು ಎಂಬುದನ್ನೂ ಪ್ರಸ್ತಾವನೆಯಲ್ಲಿ ಸೇರಿಸಲಾಗಿದೆ. ಸುಧಾರಣೆಯ ಭಾಗವಾಗಿ ಕಳೆದ ವರ್ಷ ಏಳು ಸದಸ್ಯರ ಸಮಿತಿಯನ್ನು ರಚಿಸಲಾಯಿತು. 3 ರಿಂದ 12 ನೇ ತರಗತಿಯ ಪಠ್ಯಕ್ರಮದಲ್ಲಿ ಶಾಸ್ತ್ರೀಯ ಇತಿಹಾಸವನ್ನು ಶಾಸ್ತ್ರೀಯ ಇತಿಹಾಸದೊಂದಿಗೆ ಬದಲಾಯಿಸಬೇಕು ಮತ್ತು ಪಠ್ಯಪುಸ್ತಕಗಳಲ್ಲಿ ಭಾರತ ಎಂಬ ಹೆಸರನ್ನು ‘ಭಾರತ್’ ಎಂದು ಬದಲಾಯಿಸಬೇಕು ಎಂದು ಸಮಿತಿಯು ಈ ಹಿಂದೆ ಶಿಫಾರಸು ಮಾಡಿತ್ತು. 7ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ…
ಅಯೋಧ್ಯೆಯಲ್ಲಿ ಪೂರ್ಣಗೊಳ್ಳುತ್ತಿರುವ ರಾಮಮಂದಿರದಲ್ಲಿ ಅರ್ಚಕರ ವಿವಿಧ ಹುದ್ದೆಗಳಿಗೆ ಸುಮಾರು 3000 ಅರ್ಜಿದಾರರು. ಅರ್ಜಿದಾರರ ಪೈಕಿ 200 ಮಂದಿಯನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ. ಈ ಪೈಕಿ 20 ಮಂದಿಯನ್ನು ನೇಮಕ ಮಾಡಲಾಗುವುದು.ರಾಮಮಂದಿರ ತೀರ್ಥ ದೇವಸ್ಥಾನ ಟ್ರಸ್ಟ್ ಈ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಅಲ್ಲದೆ 200 ಜನರ ಕಿರು ಪಟ್ಟಿಯನ್ನು ಸಿದ್ಧಪಡಿಸಿ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ಅರ್ಜಿ ಸಲ್ಲಿಸಿದ ಸುಮಾರು 3000 ಜನರ ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ 200 ಜನರ ಶಾರ್ಟ್‌ಲಿಸ್ಟ್ ತಯಾರಿಸಲಾಗಿದೆ. ವಿಶ್ವ ಹಿಂದೂ ಪರಿಷತ್ತಿನ (ವಿಎಚ್‌ಪಿ) ಪ್ರಧಾನ ಕಛೇರಿ ಕರಸೇವಕ ಪುರಂನಲ್ಲಿ ಸಂದರ್ಶನ ನಡೆಯಿತು. ವೃಂದಾವನ, ಜೈಕಾಂತ್ ಮಿಶ್ರಾ ಮತ್ತು ಅಯೋಧ್ಯೆಯ ಮಹಾಂತರಾದ ಮಿಥಿಲೇಶ್ ನಂದಿನಿ ಶರಣ್ ಮತ್ತು ಸತ್ಯನಾರಾಯಣ ದಾಸ್ ಅವರ ಭಾಷಣಕಾರರ ಸಮಿತಿಯನ್ನು ಸಂದರ್ಶಿಸಲಾಗುತ್ತದೆ. ಆಯ್ಕೆಯಾದವರನ್ನು ಅರ್ಚಕರನ್ನಾಗಿ ನೇಮಿಸಲಾಗುವುದು. ಆರು ತಿಂಗಳ ತರಬೇತಿಯ ನಂತರ ಅವರನ್ನು ವಿವಿಧ ಹುದ್ದೆಗಳಿಗೆ ನೇಮಿಸಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾಗದವರೂ ತರಬೇತಿಯಲ್ಲಿ ಭಾಗವಹಿಸಬಹುದು. ಅವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಟ್ರಸ್ಟ್…
ಬೆಂಗಳೂರು: ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಕುಸಿಯುತ್ತಿದೆ. ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ.ಏಕೆ ಹೀಗಾಯ್ತು ಎಂದು ವಿಶ್ವಗುರು ಎಂದು ಸುಮ್ ಸುಮ್ನೆ ಕರೆಸಿಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್ಯಂತ ಜನಾರೋಗ್ಯ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗುಜರಾತ್ ಮಾದರಿ ಎಂದು ಭಜನೆ ಮಾಡಿದವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಾ, ಆರೋಗ್ಯ ಸೂಚ್ಯಂಕದಲ್ಲಿ ಕುಸಿಯುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಇದೇ ಇಡೀ ದೇಶಕ್ಕೆ ಮಾದರಿ ಆಗಲು ಸಾಧ್ಯವೇ ಎಂದು ಲೇವಡಿ ಮಾಡಿದರು. ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆಧ್ಯತೆಯಾಗಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿದ್ದಷ್ಟು ಹಣ ನೀಡಲು ಸಿದ್ದವಿದೆ ಎಂದರು. ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ…
ಬೆಂಗಳೂರು: “ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. “ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು. ನೀವು…
ಜೀವಿತ ಪ್ರಮಾಣಪತ್ರವನ್ನು ನವೀಕರಿಸಲು ಹೋಗಿ ಸೈಬರ್ ಕೈಂ ಆರೋಪಿಗಳನ್ನೇ ಬ್ಯಾಂಕ್ ಸಿಬ್ಬಂದಿ ಎಂದು ನಂಬಿ ಸರ್ಕಾರಿ ದಾಖಲೆಗಳನ್ನು ಹಂಚಿಕೊಂಡ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬರೊಬ್ಬರಿ 1.27 ಲಕ್ಷ ರೂ. ಗಳನ್ನು ಕಳೆದು ಕೊಂಡಿದ್ದಾರೆ. ಜೀವಿತ ಪ್ರಮಾಣಪತ್ರ ಎನ್ನುವುದು ಸರ್ಕಾರಿ ನೌಕರರಿಗೆ ಪಿಂಚಣಿ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸಲು ಒದಗಿಸಲಾದ ಬಯೋಮೆಟ್ರಿಕ್-ಸಕ್ರಿಯ ಸೇವೆಯಾಗಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಅವರು ಸರ್ಕಾರದ ಸಹಕಾರ ಪಡೆದು ಸಮುದಾಯದವರಿಗೆ ಸಾಕಷ್ಟು ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರೀ ಸಮುದ್ರದಲ್ಲೇ ಮೀನುಗಾರಿಕೆ ಮಾಡುವುದಕ್ಕಿಂತ ಸಿಹಿ ನೀರಿನ ಮೀನುಗಾರಿಕೆ ಮಾಡಲು ಸಮುದಾಯದವರು ಮುಂದಾಗಬೇಕು. ರಾಜ್ಯ ಸರ್ಕಾರ ಈಗಾಗಲೇ ಏತ ನೀರಾವರಿ ಮೂಲಕ ಸಾಕಷ್ಟು ಕೆರೆಗಳನ್ನು ತುಂಬಿಸಿದ್ದು ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು ಎಂದರು. ಎಳೆಯ ಪ್ರಾಯದಲ್ಲಿ ನಾನು ಕೂಡ ನಮ್ಮೂರಿನ ಬಳಿಯ ಸಂಗಮದಲ್ಲಿ ಮೀನು ಹಿಡಿಯಲು ಹೋಗುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಾಳ ಹಾಕಿ ತಾಸುಗಟ್ಟಲೆ ಕುಳಿತುಕೊಳ್ಳಲು ತಾಳ್ಮೆ ಬೇಕು. ಮಹಶೀರ್ ಮೀನು ಹಿಡಿದು ಕೆರೆಯಲ್ಲಿ ವಾಪಸ್ ಬಿಡಲು ಆಗ ಹೊರದೇಶದಿಂದಲೂ ಬರುತ್ತಿದ್ದರು. ಮೀನುಗಾರಿಕಾ ಸಮುದಾಯದವರೂ ಕೂಡ ಉತ್ತಮ ತಳಿಗಳನ್ನು ತಂದು ಸಾಕಿ ಲಾಭ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನಗಣತಿ) ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಒಕ್ಕಲಿಗರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ. ರಾಜ್ಯ ಒಕ್ಕಲಿಗರ ಸಂಘ ಮತ್ತು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಸದಸ್ಯರ ನಿಯೋಗ ಮುಖ್ಯಮಂತ್ರಿಯವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು ನಗರದಲ್ಲಿರುವ ಪೇಯಿಂಗ್ ಗೆಸ್ಟ್ (ಪಿ. ಜಿ) ಕಟ್ಟಡಗಳ ಬಗ್ಗೆ ಮಾಹಿತಿ ದಾಖಲಿಸಲು ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದ್ದು, ಮಾಹಿತಿ ಭರ್ತಿ ಮಾಡಲು ಕಟ್ಟಡಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ’ ಎಂದು ಕಮಿಷನರ್ ಬಿ. ದಯಾನಂದ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾರತ್ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ಯಶಸ್ವಿಯಾದರೆ, ನಗರದ ಎಲ್ಲ ಕಡೆಯೂ ವಿಸ್ತರಣೆ ಮಾಡಲಾಗುವುದು’ ಎಂದರು. ಪಿಜಿಗಳಲ್ಲಿರುವ ಅವ್ಯವಸ್ಥೆ ಬಗ್ಗೆ ಪಿಜಿಯ ಅಕ್ಕ ಪಕ್ಕದ ಮನೆಯವರಿಂದ ಬಿಬಿಎಂಪಿಗೆ ದೂರುಗಳು ಬರುತ್ತಿವೆ. ಹೀಗಾಗಿ ಬಿಬಿಎಂಪಿ ಪಿಜಿಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲು ಮುಂದಾಗಿದೆ. ಇದರ ನಡುವೆ ಈಗ ಬೆಂಗಳೂರಿನ ಪಿಜಿಗಳಿಗೆ ಅಂಕಿ ಅಂಶ ಮ್ಯಾನೇಜ್ ಮಾಡಲು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸಲಹೆ ನೀಡಿದ್ದಾರೆ. ಜೊತೆಗೆ ಪಿಜಿ, ಹಾಸ್ಟಲ್ ಗಳಿಗೆ ವೆಬ್ ಪೋರ್ಟಲ್ ನೀಡಲಾಗಿದ್ದು ಅದಕ್ಕೆ ಪಿಜಿ ಮಾಲೀಕರು ಮಾಹಿತಿ ಅಪ್ಲೋಡ್ ಮಾಡಬಹುದು ಎಂದು ತಿಳಿಸಿದ್ದಾರೆ.
ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ(ನ.20) ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು. ಇದಾದ ಬಳಿಕ ನಗರ ನಿಯಂತ್ರಣ ಕೊಠಡಿಯನ್ನು ಹಾಗೂ ವೈರ್ ಲೆಸ್ ವಿಭಾಗದ ಕಾರ್ಯಚಟುವಟಿಕೆಗಳನ್ನು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರು. ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.…
ಕರ್ನಾಟಕ ವಿದ್ಯುತ್ ನಿಗಮದ ಮಾಜಿ ನಿರ್ದೇಶಕ, ಅಖಿಲ ಭಾರತ ಸಾರ್ವಜನಿಕ ಸಂಪರ್ಕ ಮಂಡಳಿ ಸ್ಥಾಪಕ ಅಧ್ಯಕ್ಷ ಎಂ. ಬಿ. ಜಯರಾಮ್ ಅವರನ್ನು ಭುವನೇಶ್ವರದ ಉಟ್ಕಳ ವಿಶ್ವವಿದ್ಯಾಲಯ ಜೀವಮಾನದ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಾರ್ವಜನಿಕ ಸಂಪರ್ಕ ಹಾಗೂ ಸಂವಹನದಲ್ಲಿ 45 ವರ್ಷಗಳಲ್ಲಿ ಮಾಡಿದ ಕೆಲಸವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ನ.23ರಂದು ನಡೆಯಲಿರುವ 7ನೇ ರಾಷ್ಟ್ರೀಯ ಮಾಧ್ಯಮ ಸಮಾವೇಶದ ಸಮಾರೋಪದಲ್ಲಿ ಒಡಿಶಾದ ಮಾಧ್ಯಮ, ಸಂವಹನ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.