Author: admin

ಶೀಲ ಶಂಕಿಸಿ ಪತಿ ತನ್ನ ಪತ್ನಿಯನ್ನೇ ಕೊಂದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾದ ಮಹಿಳೆ. ಕರಡಹಳ್ಳಿ ಗ್ರಾಮದ ಮಂಜುನಾಥ್ ಜೊತೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಮಧುಶ್ರೀ ಮದುವೆಯಾಗಿತ್ತು. 4 ವರ್ಷದ ಗಂಡು ಮಗುವಿನ ಜೊತೆ ವಾಸವಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ ಊರಿಗೆ ಬಂದಿದ್ದ. ಈ ವೇಳೆ ದಂಪತಿ ನಡುವೆ ಜಗಳವಾಗಿದ್ದು ಕೊಲೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಳೆಯ ಕೊರತೆಯಿಂದ ಇಳುವರಿ ಕುಂಠಿತವಾಗಿರುವ ಪರಿಣಾಮ ಒಂದು ಕೆ. ಜಿ. ಏಲಕ್ಕಿ ಬಾಳೆ ಹಣ್ಣು ಕ 100 ರಂತೆ ಮಾರಾಟವಾಗುತ್ತಿದೆ. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರು ನಗರಕ್ಕೆ ಹೆಚ್ಚಾಗಿ ತಮಿಳುನಾಡಿನಿಂದ ಬಾಳೆ ಹಣ್ಣು ಪೂರೈಕೆಯಾಗುತ್ತದೆ. ಜತೆಗೆ ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಿಂದ ಬಾಳೆ ಹಣ್ಣು ಪೂರೈಕೆಯಾಗುತ್ತದೆ. ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ದರ ಹೆಚ್ಚಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಕಾಂಗ್ರೆಸ್‌ ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ. ಆಗಸ್ಟ್  15ಕ್ಕೆ ಫಲಾನುಭವಿಗಳಿಗೆ  ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್‌ ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಇಂದು ಬೆಳಗ್ಗೆ 8.30ಕ್ಕೆ ಚಂದ್ರಯಾನ 3 ಅಂತಿಮ ಕಕ್ಷೆಯ ಅವರೋಹಣ. ಚಂದ್ರನಿಂದ 100 ಕಿ.ಮೀ ದೂರದಲ್ಲಿರುವ ಕಕ್ಷೆಗೆ ಶೋಧಕವನ್ನು ಹಾಕುವುದು ಗುರಿಯಾಗಿದೆ. ಇದೇ ತಿಂಗಳ 23ರಂದು ಚಂದ್ರನ ಮೇಲ್ಮೈಯಲ್ಲಿ ಶೋಧಕವು ಮೃದುವಾಗಿ ಇಳಿಯಲಿದೆ. ಇದು ಬಾಹ್ಯಾಕಾಶ ನೌಕೆಯನ್ನು ವೃತ್ತಾಕಾರದ ಕಕ್ಷೆಗೆ ಸೇರಿಸುತ್ತದೆ. ಚಂದ್ರಯಾನ-3 ಪ್ರಸ್ತುತ ಚಂದ್ರನಿಂದ 177 ಕಿ.ಮೀ ದೂರದಲ್ಲಿ ಪರಿಭ್ರಮಿಸುತ್ತಿದೆ. ಹೆಚ್ಚು ನಿರ್ಣಾಯಕ ಲ್ಯಾಂಡರ್ ಮಾಡ್ಯೂಲ್ ಬೇರ್ಪಡಿಕೆ ಪ್ರಕ್ರಿಯೆಯು ಇನ್ನೊಂದು ದಿನವಾಗಿದೆ. ಜುಲೈ 14 ರಂದು ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ ಉಡಾವಣೆಯಾಯಿತು. ಚಂದ್ರಯಾನ 2 ಮಿಷನ್ 2019 ರಲ್ಲಿ ಸಾಫ್ಟ್ ಲ್ಯಾಂಡಿಂಗ್ ಸಮಯದಲ್ಲಿ ಸವಾಲುಗಳನ್ನು ಎದುರಿಸಿದ ನಂತರ ಇದು ಇಸ್ರೋದ ಎರಡನೇ ಪ್ರಯತ್ನವಾಗಿದೆ. ಯೋಜನೆಯ ಎಲ್ಲಾ ಹಂತಗಳನ್ನು ಒಮ್ಮೆ ಪರಿಶೀಲಿಸಿದ ನಂತರ ಕ್ಷಣಗಣನೆ ಪ್ರಾರಂಭವಾಯಿತು. 2019 ರಲ್ಲಿ ಉಡಾವಣೆಯಾದ ಚಂದ್ರಯಾನ 2 ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ತಲುಪಿತು, ಆದರೆ ರೋವರ್ ಅನ್ನು ಬಿಡುವಾಗ ಲ್ಯಾಂಡರ್ ಸ್ಫೋಟಗೊಂಡಿತು. ಇದು ಚಂದ್ರನ ರಹಸ್ಯಗಳ ಹುಡುಕಾಟದಲ್ಲಿ ಭಾರತದ ಮೂರನೇ…

Read More

ವಯೋವೃದ್ಧರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಹಣ ಸುಲಿಗೆ ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಸರ್ಕಾರಿ ನೌಕರನಾಗಿರುವ ಸುಧೀಂದ್ರ ಎಂಬುವರು ನೀಡಿದ ದೂರಿನ ಮೇರೆಗೆ ಅಣ್ಣಮ್ಮ, ಲೋಕೇಶ್ ಹಾಗೂ ಸ್ನೇಹ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರೆಲ್ಲರೂ ಮೂಲತಃ ಕೊಡಗಿನವರಾಗಿದ್ದು, ಬೊಮ್ಮನಹಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯನಾ, ನನಗೆ ಅವರ ಕಂಡರೆ ಭಯನಾ ಎಂಬುದು ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗುತ್ತೆ ಎಂದು ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಅವರು, ಚಲುವರಾಯಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸುತ್ತ, ನಾನು ನಕಲಿ ಪತ್ರದ ಬಗ್ಗೆ ಕುಮಾರಸ್ವಾಮಿ ಹೆಸರನ್ನು ಚರ್ಚೆನೇ ಮಾಡಿಲ್ಲ. ನಾನು ಅವರ ಹೆಸರನ್ನೂ ಹೇಳಿಲ್ಲ, ನನಗೇನು ಭಯ ಇಲ್ಲ. ಎಂದು ವಾಗ್ದಾಳಿ ನಡೆಸಿದರು.ಅದು ನಕಲಿ ಪತ್ರ ಎಂದು ಹೇಳಿದ್ದೇನೆ. ಅದಕ್ಕಾಗಿ ತನಿಖೆ ಮಾಡಲು ಹೇಳಿರುವೆ. ನಾನು ಕುಮಾರಸ್ವಾಮಿಯವರು ನಕಲಿ ಪತ್ರ ಕೊಟ್ಟಿದ್ದಾರೆ ಅಂದಿಲ್ಲ. ನಾನು ಅವರ ಹೆಸರು ಹೇಳೇ ಇಲ್ಲ. ಅವರು ಯಾರು ಹೆಸರು ಹೇಳುತ್ತಾರೆ ಎಂಬುದು ಗೊತ್ತಿಲ್ಲ. ನನಗೆ ಬೇಜಾರು ಕೂಡ ಇಲ್ಲ. ನಮಗೆ ಮಾಡಬೇಕಾದ ಕೆಲಸ ಹೆಚ್ಚಿದೆ ಎಂದು ಟಾಂಗ್ ನೀಡಿದರು. ನನ್ನ ಬಗ್ಗೆ ಭಯನಾ ಅಂತಾ ಹೇಳಿದ್ದಾರೆ. ಯಾರು ಗವರ್ನರ್ ಗೆ ಫೇಕ್ ಲೆಟರ್ ಕೊಟ್ಟಿದ್ದಾರೆ…

Read More

ಏಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್‌ ನನ್ನು (74) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಠಾಣೆ ವ್ಯಾಪ್ತಿಯ ನಿವಾಸಿ ಅಬ್ದುಲ್ ಹಫೀಜ್ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ  ಎಂದು ಪೊಲೀಸರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

‘ಸ್ವಿಗ್ಗಿ’ ಡೆಲಿವರಿ ಬಾಯ್‌ ಗೆ ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡಲಾಗಿದ್ದು, ಸುಲಿಗೆ ಸಂಬಂಧ ಡೆಲಿವರಿ ಬಾಯ್ ದೂರು ನೀಡಿದ್ದಾರೆ. ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪುಲಿಕೇಶಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರುದಾರ ಬಳಿಯ 11,000, ಮೊಬೈಲ್ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದ್ದು, ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ  ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಡ್ರಗ್ಸ್ ಮಾರಾಟದ ವಿರುದ್ಧ ಪ್ರತ್ಯೇಕ ಕಾರ್ಯಾಚರಣೆ ನಡೆಸಿರುವ ವಿ.ವಿ. ಪುರ, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಹಿಜಿಕಿ (35), ರಾಜಸ್ಥಾನದ ಪುಕಾರಾಮ್ ಚೌಧರಿ ಹಾಗೂ ಓಂ ಸಿಂಗ್ ಬಂಧಿತರು. ವಿದ್ಯಾರ್ಥಿ ವೀಸಾದಡಿ ನಗರಕ್ಕೆ ಬಂದಿದ್ದ ಹಿಜಿಕಿ, ಗೋವಾದಿಂದ ಡ್ರಗ್ಸ್  ಖರೀದಿಸಿ ತಂದು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ. ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನನಗೆ ಎಲ್ಲರ ಕಥೆಯೂ ಗೊತ್ತಿದೆ. ಯಾರು, ಯಾವಾಗ, ಯಾರ ಹತ್ತಿರ, ಏನು ಮಾತನ್ನಾಡಿದ್ದಾರೆ? ನಮ್ಮ ಅಶೋಕ್ ಚಕ್ರವರ್ತಿ, ನವರಂಗಿ ನಾರಾಯಣ, ಮಹಾಲಕ್ಷ್ಮಿಲೇಔಟ್ ಎಂಎಲ್, ಕುಮಾರಸ್ವಾಮಿ, ಹೀಗೆ ಎಲ್ಲರೂ ಏನೇನು ಮಾತನ್ನಾಡಿದ್ದಾರೆ? ಎಂಬುದು ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರ ಅನುದಾನ ತಡೆ ಹಿಡಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಖುದ್ದು ಗುತ್ತಿಗೆದಾರರೇ ಇಂದು ಡಿಕೆಶಿ ಅವರಿಗೂ ಅನುದಾನ ತಡೆಹಿಡಿದಿರುವುದಕ್ಕೂ ಸಂಬಂಧ ಇಲ್ಲ ಎಂದು ಯೂಟರ್ನ್ ಹೊಡೆದಿರುವ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನವರಂಗಿ ನಾರಾಯಣ, ಅಶೋಕ ಚಕ್ರವರ್ತಿ, ಗೋಪಾಲಯ್ಯ ಎಲ್ಲರ ಕಥೆಯನ್ನು ಹೇಳುತ್ತೇನೆ ಎನ್ನುವ ಮೂಲಕ ಗುತ್ತಿಗೆದಾರರ ವಿಚಾರ ಇನ್ನೊಮ್ಮೆ ಮಾತನ್ನಾಡುತ್ತೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More