Subscribe to Updates
Get the latest creative news from FooBar about art, design and business.
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
Author: admin
ಬೆಂಗಳೂರಿನ ಕುಖ್ಯಾತ ರೌಡಿ ಕಾಡುಬೀಸನಹಳ್ಳಿ ಸೋಮನ ಕಾರು ಚಾಲಕನ ಹತ್ಯೆ ಹಾಗು ರಾಜಾನುಕುಂಟೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೆ ಮೃತಪಟ್ಟಿರುವುದಾಗಿ ಬಿಂಬಿಸಿಕೊಂಡು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿ. ಮಲ್ಲಿಕಾರ್ಜುನ ಮೃತಪಟ್ಟಿರುವ ದಾಖಲೆಗಳನ್ನು ಕುಟುಂಬಸ್ಥರು ತೋರಿಸಿದ್ದರು. ಅದರೂ ಸಹ ಅನುಮಾನಗೊಂಡ ಸಿಸಿಬಿ ಪೊಲೀಸರು ತಲಾಶ್ ನಡೆಸಿ ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. 661 ಕೋಟಿ ಮೌಲ್ಯದ ಆಸ್ತಿ ಮತ್ತು 90.21 ಕೋಟಿ ಮೌಲ್ಯದ ಷೇರುಗಳನ್ನು ಇಡಿ ವಶಪಡಿಸಿಕೊಂಡಿದೆ. ದೆಹಲಿ, ಮುಂಬೈ ಮತ್ತು ಲಕ್ನೋದಲ್ಲಿ ಒಟ್ಟು 752 ಕೋಟಿ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಯಂಗ್ ಇಂಡಿಯಾದ ನಿರ್ದೇಶಕರು ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ. ಖರ್ಗೆ ಮತ್ತು ಸ್ಯಾಮ್ ಪಿತ್ರೋಡಾ ಸಹಾಯಕ ಜರ್ನಲ್ ನಿರ್ದೇಶಕರು. ಇಡಿ ಕ್ರಮವು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದೆ. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್ ಮುಖವಾಣಿಯಾದ ನ್ಯಾಷನಲ್ ಹೆರಾಲ್ಡ್ ನ ಪ್ರಕಾಶಕರು. ಇದರ ಹಿಡುವಳಿ ಕಂಪನಿ ಯಂಗ್ ಇಂಡಿಯಾ. ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ಅವರು 2013ರಲ್ಲಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಖಾಸಗಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ವಂಚನೆ ಮತ್ತು ಹಣ ದುರುಪಯೋಗವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿಚಾರಣಾ ನ್ಯಾಯಾಲಯವು 2015ರ ಡಿಸೆಂಬರ್ ನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾಮೀನು ನೀಡಿತ್ತು.…
ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತ ಸೋಲಿನ ನಂತರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಅಹಮದಾಬಾದ್ ಬದಲಿಗೆ ಲಕ್ನೋದಲ್ಲಿ ಪಂದ್ಯ ನಡೆದಿದ್ದರೆ ಟೀಂ ಇಂಡಿಯಾ ಗೆಲ್ಲುತ್ತಿತ್ತು ಎಂದರು. ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಆರನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪ್ರಧಾನಿಯವರು ಡ್ರೆಸ್ಸಿಂಗ್ ರೂಮ್ ತಲುಪಿ ಆಟಗಾರರಿಗೆ ಸಾಂತ್ವನ ಹೇಳುವ ವಿಡಿಯೋ ಕಳೆದ ದಿನ ಬಿಡುಗಡೆಯಾಗಿತ್ತು. ಆ ನಂತರ ಅಖಿಲೇಶ್ ಯಾದವ್ ಪರೋಕ್ಷವಾಗಿ ಲೇವಡಿ ಮಾಡಿದರು. ಲಕ್ನೋದಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು. ತಂಡವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ವಿಷ್ಣು ದೇವರ ಆಶೀರ್ವಾದವನ್ನು ಪಡೆಯಲಿದೆ ಎಂದು ಅವರು ಹೇಳಿದರು. ಗುಜರಾತ್ ನಲ್ಲಿ (ವಿಶ್ವಕಪ್ 2023 ರ ಫೈನಲ್) ಪಂದ್ಯವು ಲಕ್ನೋದಲ್ಲಿ ನಡೆದಿದ್ದರೆ, ಅವರು (ಟೀಮ್ ಇಂಡಿಯಾ)…
ನಟಿ ತ್ರಿಶಾ ಕೃಷ್ಣ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮನ್ಸೂರ್ ಅಲಿ ಖಾನ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ರಾಷ್ಟ್ರೀಯ ಮಹಿಳಾ ಆಯೋಗ, ಪ್ರಕರಣ ದಾಖಲಿಸುವಂತೆ ಡಿಜಿಪಿಗೆ ಸೂಚಿಸಿತ್ತು. ಇದನ್ನು ಕ್ರಮ ಅನುಸರಿಸಲಾಗುತ್ತದೆ. ತ್ರಿಷಾ ದೂರಿನ ಮೇರೆಗೆ ನುಂಗಂಬಾಕ್ಕಂ ಪೊಲೀಸರು ನಟನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 354ಎ ಮತ್ತು 509ರ ಅಡಿ ಪ್ರಕರಣ ದಾಖಲಿಸಲಾಗಿದೆ. ಲಿಯೋ ಚಿತ್ರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿಚಾರಣೆ ವೇಳೆ ನಟಿ ತ್ರಿಷಾ ವಿರುದ್ಧ ಮನ್ಸೂರ್ ಅಲಿಖಾನ್ ಅಶ್ಲೀಲ ಟೀಕೆಗಳನ್ನು ಮಾಡಿದ್ದರು. ಇದರ ವಿರುದ್ಧ ಮೊದಲು ಸಾಮಾಜಿಕ ಜಾಲತಾಣಗಳ ಮೂಲಕ ತ್ರಿಶಾ ಪ್ರತಿಕ್ರಿಯಿಸಿದ್ದರು. ಇನ್ನು ಮುಂದೆ ಈ ನಟನ ಜೊತೆ ನಟಿಸುವುದಿಲ್ಲ ಎಂದು ತ್ರಿಷಾ ಸ್ಪಷ್ಟಪಡಿಸಿದ್ದಾರೆ. ನಂತರ, ನಟಿ ಖುಷ್ಬು, ನಿರ್ದೇಶಕ ಲೋಕೇಶ್ ಕನಕರಾಜ್, ಗಾಯಕಿ ಚಿನ್ಮಯಿ ಮತ್ತು ಚಿರಂಜೀವಿ ಸೇರಿದಂತೆ ಹಲವಾರು ಗಣ್ಯರು ಮನ್ಸೂರ್ ಅಲಿ ಖಾನ್ ಅವರ ಹೇಳಿಕೆಯನ್ನು ಖಂಡಿಸಿದರು. ಮನ್ಸೂರ್ ಅಲಿ ಖಾನ್…
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಮಂಗಳವಾರ ಸಂಜೆ ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಕಲಚೇತನರು ಧರಣಿ ವಾಪಸ್ ಪಡೆದರು. ಧರಣಿ ಸ್ಥಳಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ರಾಜ್ಯದ 6,860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಹುದ್ದೆಗಳನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಿರತರು ಸಚಿವರಿಗೆ ಮನವಿ ಸಲ್ಲಿಸಿದರು. ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜತೆ ಈ ಕುರಿತು ಚರ್ಚಿಸುತ್ತೇನೆ. ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಳದ ಅಧಿವೇಶನದ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುತ್ತೇನೆ ಎಂದು ಲಕ್ಷ್ಮೀ…
2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 35 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಡಿಸೆಂಬರ್ 6, 2023 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದ…
ಬೆಂಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ ಎಂದು ತಿಳಿಸಿದರು. ನವದೆಹಲಿಯಿಂದ ಪಕ್ಷದ ವರಿಷ್ಠರಾದ ರಣದೀಪ್ ಸುರ್ಜೆವಾಲ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.
ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನವನ್ನು ರಾಜ್ಯ ಸರ್ಕಾರ ನಡೆಸಲು ನಿರ್ಧರಿಸಿರುವ ಹಿನ್ನೆಲೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದು, ಅಧಿವೇಶನದ ಅತ್ಯಮೂಲ್ಯವಾದ ಸಮಯು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ. ಪತ್ರದಲ್ಲಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್.ಹೊರಟ್ಟಿ ಅವರು ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು…
ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಕಡೆ ಹೆಚ್ಚು ಗಮನ ಕೊಡಲಿಲ್ಲ. ನನ್ನ 48ನೇ ವಯಸ್ಸಿಗೆ ನಾನು ಪದವೀಧರನಾದೆ. ಮಂತ್ರಿಯಾಗಿದಕ್ಕಿಂತ ನನಗೆ ಪದವೀಧರನಾದಾಗ ಹೆಚ್ಚು ಸಂತೋಷವಾಯಿತು. ನೀವುಗಳು ರಾಷ್ಟ್ರ ಮಟ್ಟದಲ್ಲಿ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವವರು. ಕೆಲವು ಶಾಲೆಗಳಲ್ಲಿ ಕೇವಲ ಹೆಚ್ಚು ಅಂಕಗಳಿಸಿದವರನ್ನು ಮಾತ್ರ ಸೇರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಎಲ್ಲರನ್ನು ಸೇರಿಸಿಕೊಳ್ಳುತ್ತಾರೆ. ಕುದುರೆಯನ್ನು ರೇಸ್ ನಲ್ಲಿ ಓಡುವಂತೆ ಮಾಡುವುದಲ್ಲ, ಕತ್ತೆಯನ್ನು ರೇಸ್ ನಲ್ಲಿ ಓಡುವಂತೆ ಮಾಡುವುದು ನಿಜವಾದ ಶಿಕ್ಷಣ. ಈ ಸಂಸ್ಥೆ ಈ ಪ್ರಯತ್ನ ಮಾಡುತ್ತಿದೆ. ನಾನು ಈ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಲ್ಲಿ ಒಂದು ಮನವಿ ಇದೆ. ಈ ಕಾರ್ಯಕ್ರಮ ಸ್ವಾಗತ, ಪರಿಚಯವನ್ನು ಶಿಕ್ಷಕರ ಬದಲಿಗೆ ಮಕ್ಕಳಿಂದ ಮಾಡಿಸಿ. ಅವರು ಭವಿಷ್ಯದ ನಾಯಕರು. ನಾಯಕನಾದವನು ಮತ್ತೊಬ್ಬ ನಾಯಕನನ್ನು ತಯಾರು ಮಾಡಬೇಕು. ನಮ್ಮ ಮಕ್ಕಳಲ್ಲಿ ಪ್ರತಿಭೆ ಇದೆ. ಈ ಹಿಂದೆ ಇದ್ದ ಗುರು ಶಿಷ್ಯರ ಸಂಬಂಧವೇ ಬೇರೆ, ಈಗಿರುವ ಗುರು ಶಿಷ್ಯರ ಸಂಬಂಧವೇ ಬೇರೆ. “ತ್ರೇತದೊಳ ಗುರುವು ಶಿಷ್ಯಗೆ ಜಂಗಿಸಿ ವಿದ್ಯೆ ಕಲಿಸಿ ಮಹಾಪ್ರಸಾದಂಗೆ, ದ್ವಾಪರದೊಳ್…
ಬೆಂಗಳೂರು: ಕಾಂಗ್ರೆಸ್ ನವರದ್ದು ನುಡಿದಂತೆ ನಡೆದ ಸರಕಾರ ಅಲ್ಲ. ಕಾಂಗ್ರೆಸ್ ಸರಕಾರವು 6 ತಿಂಗಳ ಆಡಳಿತ ಸಂಬಂಧ ಕೊಟ್ಟಿರುವ ಅಂಕಿಅಂಶಗಳು ಪ್ರಶ್ನಾರ್ಥಕವಾಗಿವೆ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣೆ ಸಂದರ್ಭದಲ್ಲಿ ಜನರಿಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಕೊಟ್ಟ ಮಾತಿನಂತೆ ಅಥವಾ ನುಡಿದಂತೆ ನಡೆದಿದ್ದೇವೆ ಎಂದು ನಿನ್ನೆ ದೊಡ್ಡ ದೊಡ್ಡ ಜಾಹೀರಾತು ನೀಡಿದ್ದಾರೆ. ಅಂಕಿಅಂಶಗಳನ್ನೂ ಕೊಟ್ಟಿದ್ದಾರೆ. ಆದರೆ, ಎಷ್ಟೋ ಜನರಿಗೆ ಅಕ್ಕಿಗೆ ಕೊಡುವ ಹಣ ಸಿಕ್ಕಿಲ್ಲ. ಮಹಿಳೆಯರಿಗೆ 2 ಸಾವಿರ ರೂಪಾಯಿ ಒಂದು ಕಂತು ಮಾತ್ರ ಸಿಕ್ಕಿದೆ. ಇನ್ನೂ 3 ತಿಂಗಳು ಬಂದಿಲ್ಲ. ವಿದ್ಯುತ್ 200 ಯೂನಿಟ್ ಎಂದಿದ್ದರು. 200 ಯೂನಿಟ್ ಬದಲು ವರ್ಷದ ಸರಾಸರಿ ಯೂನಿಟ್ ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಯುವನೀತಿ ಇನ್ನೂ ಪ್ರಾರಂಭಿಸಿಲ್ಲ. ಎಂದು ಎಂದು…