Author: admin

ಚನ್ನಪಟ್ಟಣ: ಕುಟುಂಬದ ಗಲಾಟೆ ನಿಲ್ಲಿಸಲು ಬಂದ ಪೊಲೀಸ್ ಪೇದೆ  ತನ್ನ ಮೇಲೆ 4 ಬಾರಿ ಅತ್ಯಾಚಾರ ಮಾಡಿದ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ರಾಮನಗರದಲ್ಲಿ ಡಿಎಆರ್ ಪೇದೆಯೊಬ್ಬರ ವಿರುದ್ಧ ಮಹಿಳೆ ಅತ್ಯಾಚಾರದ ಆರೋಪ ಮಾಡಿದ್ದು, ಮಾತ್ರವಲ್ಲದೇ ತನ್ನಿಂದ 12 ಲಕ್ಷ ರೂ ಹಣ ಕೂಡ ಪಡೆದು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆ ಎಂ.ಕೆ.ದೊಡ್ಡಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಯಾವುದೋ ಗಲಾಟೆ‌ ಪ್ರಕರಣ ಸಂಬಂಧ ಸಂತ್ರಸ್ಥ ಮಹಿಳೆ 112 ಗೆ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ 112 ವಾಹನದ ಚಾಲಕ ಡಿಎಆರ್ ಪೇದೆ ಪುಟ್ಟಸ್ವಾಮಿ ಸಂತಸ್ಥ ಮಹಿಳೆಯ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಆಕೆಯಿಂದ ಪೋನ್ ನಂಬರ್ ಪಡೆದು ಸಲುಗೆ ಬೆಳೆಸಿಕೊಂಡಿದ್ದ.  ಬಳಿಕೆ ಆಕೆಗೆ ಹತ್ತಿರವಾಗಿ ವಿವಿಧ ಸಂದರ್ಭಗಳಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ರೀತಿ ಪೇದೆ ಪುಟ್ಟಸ್ವಾಮಿ ತನ್ನ ಮೇಲೆ ನಾಲ್ಕು…

Read More

ದಾವಣಗೆರೆ: ಚಾಕೊಲೇಟ್​​​ ಪಾನ್ ​ಗೆ​​​​​ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿರುವ ನಗರದ ಪೊಲೀಸರು, ಆತನ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ಆರೋಪಿಯು ದಾವಣಗೆರೆ ನಗರದ ರಾಮ್​ ಅಂಡ್​ ಕೋ ಸರ್ಕಲ್ ​ಲ್ಲಿ ರಾಜು ಪಾನ್‌ ಶಾಪ್​ ಹೆಸರಿಲ್ಲಿ ಅಂಗಡಿ ನಡೆಸುತ್ತಿದ್ದ. ಈತ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಿಶ್ರಿತ ಚಾಕೋಲೇಟ್​ ಪಾನ್​ ಮಾರಾಟ ಮಾಡುತ್ತಿದ್ದ. ಅಲ್ಲದೆ, ತನ್ನ ಅಪ್ರಾಪ್ತ ಮಗನ ಕೈಯಲ್ಲಿ ಗಾಂಜಾ ಮಿಶ್ರಿತ ಪಾನ್​ ಕೊಟ್ಟು ಕಾಲೇಜುಗಳ ಬಳಿ ಮಾರಾಟ ಮಾಡಿಸುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಮ್​ ಅಂಡ್​ ಕೋ ವೃತ್ತದಲ್ಲಿ ಪಾನ್​ ಶಾಪ್​​ನಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್​ ಪಾನ್ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ್ದೇವೆ. ಈ ಸಂದರ್ಭದಲ್ಲಿ 160 ಗಾಂಜಾ ಬೆರೆಸಿರುವ ಚಾಕೊಲೇಟ್ ಹಾಗೂ 1,115 ಗ್ರಾಂ ಗಾಂಜಾ…

Read More

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 30ಕ್ಕೆ ಕಾಯ್ದಿರಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಇಂದು ಆದೇಶ ಕಾಯ್ದಿರಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಎಸ್ಎಸ್ ಪಿ ಬಿ.ಎನ್.ಜಗದೀಶ್ ಹಾಗೂ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಜುಲೈ 30ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಜುಲೈ 30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್​, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮೈಸೂರು: ಧರ್ಮಸ್ಥಳದಲ್ಲಿ ಸರಣಿ ಅತ್ಯಾಚಾರ, ಹತ್ಯೆ ಪ್ರಕರಣಗಳ ಬಗ್ಗೆ ಸಾಕ್ಷಿ ಹೇಳಲು ಮುಂದೆ ಬಂದಿರುವ ಅನಾಮಿಕ ವ್ಯಕ್ತಿಯೊಬ್ಬರ ಪ್ರಕರಣವನ್ನು ಎಸ್ ಐಟಿಗೆ ವಹಿಸಬೇಕು ಎನ್ನುವ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ತನಿಖೆ ನಡೆಸುತ್ತಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು. ಪೊಲೀಸ್‌ ಇಲಾಖೆಯೊಂದಿಗೆ ಚರ್ಚಿಸಿ, ಎಸ್‌ ಐಟಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ.   ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ತಾಲೂಕಿನ ಅದಿ ದೇವತೆ ಚಿಕ್ಕದೇವಮ್ಮನ ಬೆಟ್ಟದಲ್ಲಿ ಶುಕ್ರವಾರ ನಾಲ್ಕನೇ ಆಷಾಡ ಮಾಸದ ವಿಶೇಷ ಪೂಜೆ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ಬೆಟ್ಟದ ಚಿಕ್ಕದೇವಮ್ಮ ದೇವಿಯನ್ನು ಮುತ್ತಿನ ಅಲಂಕಾರಗೊಳಿಸಿ, ನಿಂಬೆಹಣ್ಣು, ವಿವಿಧ ಹೂವುಗಳಿಂದ ಅಲಂಕೃತಗೊಳಿಸಲಾಗಿತ್ತು. ಬೆಳಗ್ಗೆ 6 ಗಂಟೆಯಿಂದಲೇ ದೇವಿಗೆ ಮಹಾನ್ಯಾಸ ಪೂರ್ವಕ, ಶ್ರೀಸೂಕ್ತ ಪಾರಾಯಣ, ಸಹಸ್ರನಾಮರ್ಚನೆ, ಪಂಚಾಮೃತಾಭಿಷೇಕ, ಹೋಮ–ಹವನ ಸೇರಿದಂತೆ ನಾನಾ ಪೂಜಾ ಕಾರ್ಯಕ್ರಮ ನೆರವೇರಿಸಿ ನಂತರ ದೇವಾಲಯದ ಸುತ್ತ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ಆಷಾಡದ ನಾಲ್ಕನೇ ಕೊನೆಯ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು. ನವ ವಧು–ವರರು ಬೆಟ್ಟಕ್ಕೆ ಆಗಮಿಸಿ, ಮುಂದಿನ ಬದುಕು ಬಂಗಾರವಾಗಲಿ ಎಂದು ಹರಸಿ, ದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ಬೆಳಗ್ಗೆಯೇ ದೇವರ ಉತ್ಸವಮೂರ್ತಿಯನ್ನು ಪ್ರಕಾರೋತ್ಸವ ಮಾಡಲಾಯಿತು. ಕುಂಕುಮಾರ್ಚನೆ ನೆರವೇರಿಸಲಾಯಿತು. ನಂತರ ರಾಜೋಪಚಾರ ಪೂಜೆ ನಡೆಯಿತು. ಭಕ್ತರಿಗೆ ಸಿಹಿ ವಿತರಣೆ ಮಾಡಲಾಯಿತು. ಇದಲ್ಲದೆ ದೇವಿಯ ಎದುರುಗಡೆ ಇರುವ ಕಾಲಭೈರವೇಶ್ವರಸ್ವಾಮಿಗೆ…

Read More

ಸರಗೂರು:  ಭೂಮಿ ಪ್ರತಿಯೊಂದು ವಸ್ತುವಿನ ಉತ್ಪಾದನಾ ಸಾಧನವಾಗಿದೆ. ಭೂಮಿ ಉಳ್ಳವರಿಗೆ ಸಾಮಾಜಿಕ ಘನತೆಯನ್ನು ಹಾಗೂ ಆಳುವ ವರ್ಗವಾಗಿ ಸಮಾಜವನ್ನು ನಿಯಂತ್ರಿಸುವ ಅಧಿಕಾರವನ್ನು ನೀಡುತ್ತದೆ. ತಲತಲಾಂತರಗಳಿಂದ  ರೈತರು ಹಾಗೂ ದಲಿತರನ್ನು ಭೂಮಿ ಹಾಗೂ ನೈಸರ್ಗಿಕ ಸಂಪತ್ತಿನಿಂದ ವೈದಿಕ ಧರ್ಮ ವಂಚಿಸುತ್ತಲೇ ಬಂದಿದೆ ಎಂದು ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮುಂಭಾಗದಲ್ಲಿ ಶುಕ್ರವಾರದಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆ ವತಿಯಿಂದ ಕಂದಾಯ ಇಲಾಖೆ ಸಾಗುವಾಳಿ ಪತ್ರ ವಿಲೇವಾರಿ ಮಾಡಿರುವ ಬಗ್ಗೆ ಪ್ರತಿಭಟನೆ ಹಮ್ಮಿಕೊಂಡು ಸರ್ಕಾರ ಮತ್ತು ತಾಲೂಕು ಆಡಳಿತ ವಿರುದ್ಧ ವಿವಿಧ ಘೋಷಣೆ ಕೂಗಿ ಅವರು ಮಾತನಾಡಿದರು. ಸ್ವಾತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರ ಆಂದೋಲನದಿಂದಾಗಿ ದಲಿತ ಮತ್ತು ಧಮನಿತರಲ್ಲಿ ಬೆಳೆಯುತ್ತಿರುವ ಸಾಮಾಜಿಕ ಮತ್ತು ವರ್ಗ ಪ್ರಜ್ಞೆಯಿಂದ ಬ್ರಾಹ್ಮಣಶಾಹಿ ಮತ್ತು ಬಂಡವಾಳ ಶಾಹಿಗೆ ನುಂಗಲಾರದ ತುತ್ತಾಗಿದೆ. ಕಳೆದ ನಾಲ್ಕು ದಶಕಗಳಿಂದ ಬಾಬಾ ಸಾಹೇಬರ ಸೈದ್ಧಾಂತಿಕ ನೆಲೆಯಲ್ಲಿ ದಲಿತ…

Read More

ಸರಗೂರು: ದೇಶದಲ್ಲಿ ಸಾಮಾಜಿಕ ವ್ಯವಸ್ಥೆ ಹದೆಗೆಟ್ಟಿದೆ. ವಿದೇಶಗಳಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಬೇಕಾದರೆ ಶಾಲೆಯಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ, ಭದ್ರತಾ ಸಿಬ್ಬಂದಿ ಇರುವ ಕುರಿತು ವಿಚಾರಿಸಿ ಬಳಿಕ ಮಕ್ಕಳನ್ನು ಶಾಲೆ ದಾಖಲಿಸುತ್ತಾರೆ. ಇದು ವಿದೇಶಿಗರು ಮಕ್ಕಳ ರಕ್ಷಣೆ ಬಗ್ಗೆ ಹೊಂದಿರುವ ವಿಶೇಷ ಒಲವು ತೋರಿಸುತ್ತದೆ. ಆದರೆ ನಮ್ಮಲ್ಲಿ ಅಂತಹ ಕಾಳಜಿ ಇಲ್ಲ’ ಎಂದು  ಸರಗೂರು ಪೊಲೀಸ್ ಠಾಣೆಯ ಸಬ್ ಇನ್‌ ಸ್ಪೆಕ್ಟರ್‌ ಆರ್.ಕಿರಣ್ ಹೇಳಿದರು. ಪಟ್ಟಣದ ಪೋಲಿಸ್ ಠಾಣೆಯ ಆವರಣದಲ್ಲಿ ಗುರುವಾರದಂದು ವಿವೇಕಾನಂದ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೋಲೀಸ್ ಇಲಾಖೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಬಗ್ಗೆ ಶಿಕ್ಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶೌಚಾಲಯ, ತರಗತಿಗಳು ನಡೆಯದ ಕೊಠಡಿಗಳು, ಆಟದ ಮೈದಾನದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆಯುವ ಸಂಭವ ಹೆಚ್ಚು ಇರುತ್ತದೆ. ಹೀಗಾಗಿ ಶಿಕ್ಷಕರು ಅಂತಹ ಸ್ಥಳಗಳಿಗೆ ಆಗಾಗ ಭೇಟಿ ನೀಡಿ ಗಮನಿಸುತ್ತಿರಬೇಕು. ಒಂದೊಮ್ಮೆ ಲೈಂಗಿಕ ದೌರ್ಜನ್ಯ…

Read More

ಔರಾದ: ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವ ವಿನೂತನ ಪರಿಕಲ್ಪನೆ ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಬುಧವಾರ  ಸಂತಪುರನಲ್ಲಿ ಚಾಲನೆ ನೀಡಲಾಯಿತು. ಸಂತಪುರ ಪೊಲೀಸ್ ಠಾಣೆ ಪಿ ಎಸ್ ಐ ನಂದಕುಮಾರ್, ಮೂಳೆ ಮತ್ತು ಸಿಬ್ಬಂದಿ ಸಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದರು. ನಂತರ ಸೈಬ‌ರ್ ಅಪರಾಧ, ಮಾದಕ ವಸ್ತು, ಪೋಕೋ ಕಾಯ್ದೆ, ಮನೆಗಳ್ಳತನ, ಸರಗಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.  ಇದೇ ವೇಳೆ ವಾರ್ಡ್ ಸದ್ಯಸರು, ಗ್ರಾಮಸ್ಥರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತಿಪಟೂರು: ಕರ್ನಾಟಕ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಸಮಿತಿ ವತಿಯಿಂದ ತಿಪಟೂರು ನಗರದ ಕಲ್ಪತರು ಇಂಜಿನಿಯರಿಂಗ್ ಕಾಲೇಜು ಆಡಿಟೋರಿಯಂನಲ್ಲಿ ಜಿಲ್ಲಾ ಸಮಾವೇಶವನ್ನು ಜುಲೈ 20ರ ಬೆಳಗ್ಗೆ 10 ಗಂಟೆಗೆ ಆಯೋಜನೆ ಮಾಡಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಎಲ್. ಆರ್. ಚಂದ್ರಶೇಖರ್ ತಿಳಿಸಿದರು ನಮ್ಮ ಸಮಾಜ ಸುಮಾರು 100 ವರ್ಷಗಳ ಇತಿಹಾಸ ಹೊಂದಿದ್ದು, ಸಮಾಜಕ್ಕೆ  ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಆರ್ಯವೈಶ್ಯ ಸಮಾಜದ ಅಭಿವೃದ್ಧಿ ಸಂಘಟನೆಗಾಗಿ ಹತ್ತಾರು ಯೋಜನೆಗಳನ್ನು ತಂದು ಬಡವರು, ಅಶಕ್ತರು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಇದರಲ್ಲಿ ವೃದ್ಧಾಪ್ಯ ವೇತನ ಸಂಧ್ಯಾ ಶ್ರೀ ಯೋಜನೆ ಅಂಗವಿಕಲರಿಗೆ ಮಾಸಾಸನ ಅಸಹಾಯಕ ವಿದ್ಯಾರ್ಥಿಗಳಿಗೆ ಅಮೃತ ಯೋಜನೆಯನ್ನು ಉದ್ಯೋಗ ಮಿತ್ರ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಯೋಜನೆ ಮಾಡಿಕೊಂಡು ಬಂದಿದ್ದೇವೆ. ಈ ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಸಾವಿರ ಜನ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು. ತಿಪಟೂರು ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಾಗೇಪಲ್ಲಿ ನಟರಾಜ ಮಾತನಾಡಿ, ನಮ್ಮ ಸಮಾಜದ ಜಿಲ್ಲಾ ಸಮಾವೇಶವನ್ನು ತಿಪಟೂರಿನಲ್ಲಿ…

Read More

ತಿಪಟೂರು:  ಕಾಂಗ್ರೆಸ್ ಸರ್ಕಾರ  ಶಕ್ತಿ ಯೋಜನೆ ಮಾಡಿರುವುದು ಸಾರ್ವಜನಿಕರ ಅನುಕೂಲಕ್ಕಾಗಿ, ಬಸ್ ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರ ಜೊತೆಗೆ ಸೌಜನ್ಯದಿಂದ ವರ್ತಿಸಬೇಕು, ಪ್ರಯಾಣಿಕರಿಂದ ಯಾವುದೇ ದೂರು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಎಂ.ಎನ್.ಕಾಂತರಾಜು ತಿಳಿಸಿದರು. ಶಕ್ತಿ ಯೋಜನೆಯಿಂದ ಮಹಿಳೆಯರು 500 ಕೋಟಿ ಉಚಿತ ಪ್ರಯಾಣ ನಡೆಸಿದ್ದಾರೆ, ಸಿಬ್ಬಂದಿಯಿಂದ ಪ್ರಯಾಣ ಮಾಡುವಾಗ ಕಿರಿಕಿರಿಯಾಗುತ್ತಿರುವ ದೂರುಗಳು ಬಂದಿದೆ. ಇಂಥ ವರ್ತನೆ ನಿಲ್ಲಬೇಕು. ದೂರು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಕಾಂತರಾಜು ತಿಳಿಸಿದರು. ಇದುವರೆಗೂ ತಾಲೂಕು ಒಟ್ಟು 1.60 ಕೋಟಿ ಜನರು ಶಕ್ತಿ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ಈ ವರ್ಷ ಜನವರಿಯಿಂದ ಜೂನ್ ಅಂತ್ಯದವರೆಗೆ 43 ಲಕ್ಷ ಮಹಿಳೆಯರು  ಪ್ರಯಾಣಿಸಿದ್ದಾರೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಟಿ.ಎನ್. ಪ್ರಕಾಶ್ ಅಧಿಕಾರಿಗಳಾದ ರೂಪಶ್ರೀ ಬಸ್ ನಿಲ್ದಾಣದ ನಿರ್ವಹಣಾಧಿಕಾರಿ ಪ್ರಸನ್ನ, ಹರೀಶ್ ಮುಂತಾದವರು ಇದ್ದರು ಹಾಗೂ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ  ಹಾಜರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ…

Read More