Subscribe to Updates
Get the latest creative news from FooBar about art, design and business.
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
- ತುಮಕೂರು | ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
Author: admin
ಬೆಂಗಳೂರು: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣನವರ 226 ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಆಗಸ್ಟ್ 15 ದೇಶದ ಸ್ವಾತಂತ್ರ್ಯ ದಿನ. ಇದೇ ದಿನ ಸಂಗೊಳ್ಳಿರಾಯಣ್ಣ ಅವರ ಜನ್ಮ ದಿನವೂ ಹೌದು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಅವರ ಆಶಯವೂ ಇದೇ ಆಗಿತ್ತು. ಆಗಸ್ಟ್ 15 ಕ್ಕೆ ರಾಯಣ್ಣರ ಹುಟ್ಟು ದಿನವಾದರೆ, ಜನವರಿ 26 ಬ್ರಿಟಿಷರು ರಾಯಣ್ಣರನ್ನು ಗಲ್ಲಿಗೇರಿಸಿದ ದಿನ. ಈ ಎರಡೂ ದಿನಗಳೂ ದೇಶದ ಚರಿತ್ರೆಯಲ್ಲಿ ಪ್ರಮುಖವಾದ ದಿನ ಎಂದರು. ಸರ್ವರಿಗೂ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ, ಧಾರ್ಮಿಕ ಸ್ವಾತಂತ್ರ್ಯ ಸಿಕ್ಕರೆ ಮಾತ್ರ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮರ ತ್ಯಾಗಕ್ಕೆ ಬೆಲೆ ಬರುತ್ತದೆ ಎಂದರು.…
ಬರಿ ಹೊಟ್ಟೆ ಸತ್ಯಾಗ್ರಹ ಪ್ರತಿಭಟನಾ ಸಭೆಯು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜರುಗಿತು. ಜನದನಿ ಕಲಾ ತಂಡದಿಂದ ಹೋರಾಟದ ಹಾಡುಗಳನ್ನು ಹಾಡುವುದರ ಮೂಲಕ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಯಿತು. ಹಿರಿಯ ಪತ್ರಕರ್ತರು, ಹೋರಾಟಗಾರರು ಆದ ಡಾ. ವಿಜಯಮ್ಮ ಅವರು ಎಚ್. ಎಸ್. ದೊರೆಸ್ವಾಮಿ ಅವರ ಫೋಟೋ ಮತ್ತು ಘೋಷಣೆಯನ್ನು ಅನಾವರಣ ಮಾಡಿ ಪ್ರತಿಜ್ಞಾವಿಧಿಯನ್ನು ಓದಿಸುವ ಮೂಲಕ ಉದ್ಘಾಟನೆ ಮಾಡಿದರು. ಭೂಮಿ, ವಸತಿ ಹಕ್ಕು ವಂಚಿತರಿಗೆ ಭೂಮಿ ಮತ್ತು ನಿವೇಶನದ ಹಕ್ಕು ದೊರೆಯುವವರೆಗೂ ಹೋರಾಟ ನಿಲ್ಲುವುದಿಲ್ಲ. ಭೂಮಿ ವಂಚಿತರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಘನತೆಯ ಬದುಕನ್ನ ಕಟ್ಟಿಕೊಡಲು ಹೋರಾಟ ಮಾಡಿಸಿ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿ ಅವರ ಆಶಯಗಳನ್ನು ಈಡೇರಿಸಲು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಹಿರಿಯ ಸಾಹಿತಿ, ಹೋರಾಟಗಾರ್ತಿ ಡಾ. ವಿಜಯಮ್ಮ ಹೇಳಿದ್ದಾರೆ. “ಸ್ವಾತಂತ್ರ್ಯ ಸೇನಾನಿ, ನಮ್ಮ ಹೋರಾಟದ ಪ್ರೇರಣೆಯೂ ಆದ ಹಿರಿಯ ದೊರೆಸ್ವಾಮಿ ಅವರು ಇಂದು ದೈಹಿಕವಾಗಿ ನಮ್ಮ ಜೊತೆಗಿಲ್ಲ. ಆದರೆ, ಚೈತನ್ಯವಾಗಿ ಈ ಹೋರಾಟದಲ್ಲಿ ನಮ್ಮ ಜೊತೆಯೇ ಇದ್ದಾರೆ. ಅವರು…
ತುಮಕೂರು: ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು, ಶಾಸಕರಾದ ಜಿ.ಬಿ ಜ್ಯೋತಿಗಣೇಶ್ , ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್, ಸಚಿವರೊಂದಿಗೆ ಬೋಟ್ ರೈಡಿಂಗ್ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಸೇರಿದ ಸಾರ್ವಜನಿಕರು, ಮಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮುಂದಿನ ವರ್ಷಇದೇ ಸ್ಥಳ, ಇದೇ ಸಮಯ ಕೆಂಪು ಕೋಟೆಯಲ್ಲಿ ಮತ್ತೆ ಧ್ವಜಾರೋಹಣ ಮಾಡುತ್ತೇನೆಂಬ ಪ್ರಧಾನಮಂತ್ರಿ ಮೋದಿ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷ ಪ್ರಧಾನ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಇಂದು ಧ್ವಜಾರೋಹಣ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಮುಂದಿನ ವರ್ಷ ಧ್ವಜಾರೋಹಣ ಮಾಡುತ್ತಾರೆ. ಆದರೆ, ಅದು ಅವರ ಮನೆಯಲ್ಲಿ. ಮುಂದಿನ ವರ್ಷ ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ದೇಶದ ಸಾಧನೆಯ ಕುರಿತು ನಾನು ಮಾತನಾಡುತ್ತೇನೆಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು. ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ. ವಸಾಹತುವಾದ…
ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಸಂಬಂಧ ಸುಪ್ರೀಂಕೋರ್ಟ್ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು. ಇನ್ನು ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ತಮಿಳುನಾಡಿಗೆ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ.…
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿ ಪತಿಯನ್ನೇ ಕೊಂದ ಘಟನೆ ನಡೆದಿದೆ. ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪತಿ ಸಂಜಯ್ ನನ್ನು ಪತ್ನಿ ಪಾವನಾ ಕೊಂದಿದ್ದಾಳೆ. ಆಗಸ್ಟ್ 6ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಸಹಜ ಸಾವಲ್ಲ, ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಯಗಟಿ ಪೊಲೀಸ್ ಠಾಣೆಯಲ್ಲಿ ನವೀನ್ ಪೋಷಕರು ದೂರು ದಾಖಲಿಸಿದ್ದರು. ತನಿಖೆ ವೇಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದಿದ್ದು ಬೆಳಕಿಗೆ ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ. NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿ ಕೊಟ್ಟಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149…
ಬಾಗಲಕೋಟೆ: ಭಾರತವು ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಬಲಿಷ್ಠವಾಗಿದ್ದು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಸಾಧನೆಯಿಂದ ವಿಶ್ವಕ್ಕೆ ಮಾದರಿಯಾಗಿದೆ. ಭ್ರಷ್ಟಾಚಾರ, ಭಯೋತ್ಪಾದನಾ, ಕೋಮುವಾದ, ಜಾತ್ಯತೀತ ರಾಷ್ಟ್ರಕ್ಕಾಗಿ ಯುವಶಕ್ತಿಯು ಈ ದಿನ ಸಂಕಲ್ಪ ತೊಡಬೇಕಾಗಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮುಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಾಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದರು. ಸ್ವಾತಂತ್ರ್ಯ ಸ್ಥಾಪನೆಗಾಗಿ ರಕ್ತ ತರ್ಪಣಗೈದ ವೀರಯೋಧರಿಗೆ ಗೌರವ ಸಲ್ಲಿಸುತ್ತ ಇಂದು ಕ್ವಿಟ್ ಇಂಡಿಯಾದ 79ನೇ ವರ್ಷಾಚರಣೆಯ ಸಂದರ್ಭದಲ್ಲಿದ್ದೆವೆ. ಭಾರತ ಸರ್ವತಂತ್ರ ಸ್ವತಂತ್ರ ರಾಷ್ಟ್ರವಾಗುವುದಲ್ಲದೆ, ಸ್ವಯಂಪೂರ್ಣ ಸ್ವಾವಲಂಭಿಯಾಗಿ ಆತ್ಮಗೌರವದಿಂದ ಪ್ರತಿಯೊಬ್ಬ ಪ್ರಜೆಯೂ ಬದುಕು ಕಟ್ಟಿಕೊಳ್ಳುವ ಸುಭದ್ರ ದೇಶವಾಗಿ ನಿರ್ಮಾಣವಾಗಿದೆ. ರಾಷ್ಟ್ರಾಭಿವೃದ್ಧಿಗೆ ಪೂರಕವಾದ ಅನೇಕ ಯೋಜನೆಗಳು, ಕ್ರಾಂತಿಗಳು ಪ್ರಗತಿಯ ಮೈಲುಗಲ್ಲುಗಳಾಗಿದ್ದು ನ್ಯೂಕ್ಲಿಯರ ಟೆಕ್ನಾಲಾಜಿ, ಸ್ಪೇಸ್ ಟೆಕ್ನಾಲಾಜಿಯಂತಹ ಅನೇಕ ಕ್ಷೇತ್ರಗಳಲ್ಲಿ ಭಾರತವು ತನ್ನ ಭೀಮ ಹೆಜ್ಜೆಗಳನ್ನಿರಿಸಿದೆ ಎಂದರು. ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ‘ಮನದ ಮಾತು’ ಕಾರ್ಯಕ್ರಮ ಹಾಗೂ ಸ್ವಚ್ಛಭಾರತ ಅಭಿಯಾನ, ಸುವರ್ಣ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಮುಂಜಾನೆ ಬಳಗದ ಸದಸ್ಯರುಗಳು, ಸಿದ್ದರಾಮೇಶ್ವರ ಬಡಾವಣೆ, ತುಮಕೂರು ಇವರುಗಳ ಸಹಯೋಗದೊಂದಿಗೆ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಿದ್ದಗಂಗಾ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಶಿವರುದ್ರಪ್ಪ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕೆ 1947ರವರೆಗೆ ಹಲವು ದಶಕಗಳ ಕಾಲ ನಮ್ಮ ಪೂರ್ವಜರು ಹೋರಾಡಿರುವುದನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬೇಕು. ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಒಂದಾದ ನಾಯಕರಂತೆ ಇಂದು ನಾವು ನಮ್ಮೆಲ್ಲರ ನಡುವೆ ಇರುವ ಕೋಮುವಾದ, ಭ್ರಷ್ಟಾಚಾರ, ನಮ್ಮ ದೇಶದ ಶಾಂತಿಗೆ ಧಕ್ಕೆ ತರುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಂದಾಗಬೇಕಿದೆ. ಅದಕ್ಕೆ ವಿದ್ಯಾರ್ಥಿಗಳು,ಜನಸಾಮಾನ್ಯರು ಪ್ರಪಂಚದ ಜ್ಞಾನ ಬೆಳೆಸಿಕೊಂಡು, ನಾಯಕತ್ವದ ಗುಣಗಳನ್ನು ರೂಡಿಸಿಕೊಳ್ಳಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ನಾವುಗಳು ಮೊದಲು ದೇಶ ಪ್ರೇಮವನ್ನು ಹೊಂದಬೇಕು ಎಂದು ತಿಳಿಸಿದರು.…