Author: admin

ಹಿಮಾಚಲ ಪ್ರದೇಶದಲ್ಲಿ ಮಳೆಗೆ 50 ಮಂದಿ ಬಲಿ. ಸಿಲುಕಿರುವ ಸುಮಾರು 20 ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಶಿಮ್ಲಾ ಮತ್ತು ಮಂಡಿಯಲ್ಲಿ ಭಾರೀ ಮಳೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸರ್ಕಾರ  ರದ್ದುಗೊಳಿಸಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ. ಭಾರೀ ಮಳೆಯಿಂದಾಗಿ ಋಷಿಕೇಶದಲ್ಲಿ ಗಂಗಾನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಭಾರೀ ಹಾನಿಯಾಗಿದೆ. ಹಿಮಾಚಲದಲ್ಲಿ ಕಲ್ಕಾ ಶಿಮ್ಲಾ ರೈಲ್ವೇ ಹಳಿ ಕೊಚ್ಚಿ  ಹೋಗಿದೆ. ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶವೊಂದರಲ್ಲೇ ಕಳೆದ 24 ಗಂಟೆಗಳಲ್ಲಿ 50 ಸಾವುಗಳು ವರದಿಯಾಗಿವೆ. ವಿವಿಧೆಡೆ ಸಿಲುಕಿರುವ ಸುಮಾರು 20 ಮಂದಿಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಶಿಮ್ಲಾ ಮತ್ತು ಮಂಡಿಯಲ್ಲಿ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖ್ ಮಾತನಾಡಿ, ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು ಜನರು…

Read More

ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ ಘಟನೆ ನಡೆದಿದೆ. ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬೆಟಾಲಿಯನ್ ನ ಪೇದೆಗಳಾದ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ನಿವಾಸಿ ಪಿ.ಮಹೇಶ್ (23) ಹಾಗೂ ಬಿಜಾಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಮರನಾಥ ತಾಳಿಕೋಟೆ (24) ಮೃತಪಟ್ಟವರು. ನಗರದ ಸಿದ್ದಾರ್ಥ ಬಡಾವಣೆ ಸಮೀಪದ ಫುಡ್ ಸ್ಟ್ರೀಟ್ ನಲ್ಲಿ ಊಟ ಸೇವಿಸಿದ ಬಳಿಕ ತಮ್ಮ ಪಲ್ಸರ್ ಬೈಕಿನಲ್ಲಿ ಕೆಎಸ್ ಆರ್ ಪಿ ಬೆಟಾಲಿಯನ್ ಕೇಂದ್ರದತ್ತ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಮಹೀಂದ್ರ ಥಾರ್ ವಾಹನ ಪೇದೆಗಳಿದ್ದ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಲ್ಸರ್ ಬೈಕ್ ಸುಮಾರು ಹತ್ತು ಮೀಟರ್ ದೂರ ಹೋಗಿ ಬಿದ್ದಿದ್ದರೆ, ಇಬ್ಬರೂ ಪೇದೆಗಳು ಮೇಲೆಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾರೆ. ಇದರಿಂದಾಗಿ ಇಬ್ಬರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ…

Read More

ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದರು. ಅನಾರೋಗ್ಯ ಹಿನ್ನೆಲೆ ಆಗಸ್ಟ್ 9 ರಂದು ಸುಮಾ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು. ನಂತರ ಮತ್ತೆ ಆಗಸ್ಟ್.11 ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಆಗಸ್ಟ್ 13 ರ ಸಂಜೆ ಸುಮಾ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಸ್ವಾತಂತ್ರ್ಯ ದಿನದ ಸೇನಾ ಪದಕಗಳನ್ನು ಪ್ರಕಟಿಸಲಾಗಿದೆ. ಮೇಜರ್ ವಿಕಾಸ್ ಬಿದಿರು, ಮೇಜರ್ ಮುಸ್ತಫಾ ಬೋಹ್ರಾ, ಹವಾಲ್ದಾರ್ ವಿವೇಕ್ ಸಿಂಗ್ ತೋಮರ್ ಮತ್ತು ರೈಫಲ್‌ಮ್ಯಾನ್ ಕುಲ್ ಭೂಷಣ್ ಮಂಡಾ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಘೋಷಿಸಿತು. ಸೇನೆಯಿಂದ ಮೇಜರ್ ವಿಜಯ್ ವರ್ಮಾ, ಮೇಜರ್ ಸಚಿನ್ ನೇಗಿ, ಮೇಜರ್ ರಾಜೇಂದ್ರ ಪ್ರಸಾದ್ ಜಟ್ಟ್, ಮೇಜರ್ ರವೀಂದ್ರನ್ ಸಿಂಗ್ ರಾವತ್, ನಾಯಕ್ ಭೀಮ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಕಾನ್‌ ಸ್ಟೆಬಲ್ ಸಫೀವುಲ್ಲಾ ಖಾದಿರಿ ಮತ್ತು ಸಿಆರ್‌ಪಿಎಫ್ ಕಾನ್‌ ಸ್ಟೆಬಲ್ ಗಮಿತ್ ಮುಖೇಶ್ ಕುಮಾರ್ ಅವರಿಗೂ ಶೌರ್ಯ ಚಕ್ರ ನೀಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು. 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್​ ಷಾ ಪರೇಡ್​​ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ ಉತ್ತೇಜನಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು. ಕೈಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗುತ್ತೆ. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದರು. ಭಾರತದ…

Read More

77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಸ್ತಾರವಾದ ಆಚರಣೆಗಳೊಂದಿಗೆ ಆಚರಿಸುತ್ತದೆ. ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆರಂಭವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ ಘಾಟ್‌ ನಲ್ಲಿ ಪುಷ್ಪಾರ್ಚನೆ ಮಾಡಿದರು. ಕೆಂಪು ಕೋಟೆಗೆ ಆಗಮಿಸಿದ ಪ್ರಧಾನಿ ಗೌರವ ವಂದನೆ ಸ್ವೀಕರಿಸಿದರು. ಪ್ರಧಾನಿ ಧ್ವಜಾರೋಹಣ ನೆರವೇರಿಸಿದ ಬಳಿಕ ಉತ್ಸವಕ್ಕೆ ಚಾಲನೆ ದೊರೆಯಿತು. ಸುಮಾರು 1800 ಆಹ್ವಾನಿತ ಅತಿಥಿಗಳು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 50 ದಾದಿಯರು ಮತ್ತು ಅವರ ಕುಟುಂಬ ಸದಸ್ಯರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದೆ ಎಂಬುದು ಗಮನಾರ್ಹ. ಕೆಂಪುಕೋಟೆ ತಲುಪಿದ ಪ್ರಧಾನಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರ ಮಾಡಿಕೊಂಡರು. ಪ್ರಧಾನಿಯವರನ್ನು ಸ್ವಾಗತಿಸಲು ಸೇನಾ ಮುಖ್ಯಸ್ಥರು ಕೂಡ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಪೇಟ ಧರಿಸಿ ಕೆಂಪು ಕೋಟೆಗೆ ಆಗಮಿಸಿದರು. ಪ್ರಧಾನಿಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ವಾಯುಪಡೆಯ ಹೆಲಿಕಾಪ್ಟರ್ ಕೆಂಪು ಕೋಟೆಯ ಮೇಲೆ ಪುಷ್ಪವೃಷ್ಟಿ ಮಾಡಿತು. ಕೆಂಪುಕೋಟೆಯಲ್ಲಿ ಲೋಪದೋಷದ ವ್ಯವಸ್ಥೆ ಮಾಡಲಾಗಿದೆ. ಕೆಂಪು ಕೋಟೆಯು…

Read More

ಮಳೆ ಕಡಿಮೆಯಾದ ಹಿನ್ನೆಲೆ ಟೊಮೆಟೊ ಬೆಲೆ ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುತ್ತಿದ್ದಂತೆ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ಆದ್ರೆ ಮತ್ತೊಂದು ಕಡೆ ಸದ್ದಿಲ್ಲದೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ. ಮುಂಗಾರು ಮಳೆ ಕೈಕೊಟ್ಟು ಚಿತ್ರದುರ್ಗ, ದಾವಣಗೆರೆ ಹಾಗೂ ಕರ್ನಾಟಕದ ಇತರೆಡೆಯಿಂದ ಈರುಳ್ಳಿ ಲಭ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್‌ ನಲ್ಲಿ ಬೆಳೆ ಕೊರತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಇಂದು ಧ್ವಜಾರೋಹಣ ನೆರವೇರಿಸಿದರು. ಮಠದಲ್ಲಿ ವ್ಯಾಸಂಗ ಮಾಡುತ್ತಿರುವ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿದ್ದಗಂಗಾ ಮಠದ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶ್ರೀ ಸಿದ್ದಲಿಂಗಸ್ವಾಮೀಜಿ, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶ್ರೀನಿವಾಸ್ ಮೂರ್ತಿ, ಜಿಲ್ಲಾವರಿಷ್ಟಾಧಿಕಾರಿ ರಾಹುಲ್ ಕುಮಾರ್ ಭಾಗಿಯಾಗಿದ್ದಾರೆ.

Read More

ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಅಧಿಕಾರ ಸಿಕ್ಕಿದೆ ಎಂದು ಲೂಟಿ ಹೊಡೆಯುವುದಲ್ಲ. ಎಂದು ಹೆಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ, ಅಧಿಕಾರ ಸಿಕ್ಕಿದೆ ಎಂದು ಸ್ಟೇಚ್ಛಾಚಾರ ಪ್ರದರ್ಶನ ಮಾಡುವುದಲ್ಲ. ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಸಚಿವರಾಗಿದ್ದಾರೆ. ಲೂಟಿ ಮಾಡುವುದನ್ನು ಬಿಟ್ಟು ಜನರ ಸೇವೆ ಮಾಡಲಿ. ಅವರು ಪ್ರಾಮಾಣಿಕರಾದ್ರೆ, ರಾಜ್ಯಪಾಲರವರೆಗೂ ದೂರು ಹೋಗಿದ್ದೇಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನ್ನಾಡುವುದು ಬಹಳ ಇದೆ. ಎಲ್ಲವನ್ನೂ ಮಾತನ್ನಾಡುತ್ತೇನೆ. ಇಂದೇ ಎಲ್ಲಾ ಏಕೆ ಮಾತನ್ನಾಡಬೇಕು? ನಾಳೆ, ನಾಡಿದ್ದು ಮಾತನ್ನಾಡಲೇಬೇಕು. ನಿಮ್ಮ ಮುಂದೆಯೇ ತಾನೇ ಎಲ್ಲವನ್ನೂ ಹೇಳಬೇಕು. ಖಂಡಿತವಾಗಿ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಿನ್ನೆ ತಡರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದ ಬಳಿ ಮಾಧ್ಯಮಗಳ ಮುಂದೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನನ್ನ ನೋಡಿದ್ರೆ ಕಾಂಗ್ರೆಸ್‌…

Read More

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶ ನೀಡಬೇಕು’ ಎಂದು ಆಯ್ಕೆಯಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. \ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭ್ಯರ್ಥಿಗಳು, ‘ಬಿಜೆಪಿ ಸರ್ಕಾರದಲ್ಲಿ ಪಿಎಸ್‌ಐ ಹಗರಣದ ತನಿಖೆ ದಾರಿ ತಪ್ಪಿತ್ತು. ಕಾಂಗ್ರೆಸ್ ಸರ್ಕಾರ ಹಗರಣದ ಮರು ತನಿಖೆ ನಡೆಸಿ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪರೀಕ್ಷೆಯಲ್ಲಿ ಆಯ್ಕೆಯಾಗಿರುವ 490ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನ್ಯಾಯಾಂಗ ತನಿಖೆ ಹಾಗೂ ಮಂಪರು ಪರೀಕ್ಷೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು. ‘ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಕಾರಣ ಉನ್ನತ ಅಧಿಕಾರಿಗಳು ಮತ್ತು ಕೆಲ ಅಭ್ಯರ್ಥಿಗಳು ಜೈಲು ಪಾಲಾಗಿದ್ದಾರೆ. 135ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳು ಎಲ್ಲ ರೀತಿಯ ತನಿಖೆಗೆ ಸಹಕಾರ ನೀಡಲಿದ್ದಾರೆ. ಕೂಡಲೇ ಅವರಿಗೆ ನೇಮಕಾತಿ ಆದೇಶ ಪ್ರತ ನೀಡಬೇಕು’ ಎಂದು ಆಯ್ಕೆಯಾಗಿರುವ ಅಭ್ಯರ್ಥಿಗಳಾದ ಚಂದನ್, ಕಿರಣ್, ಪ್ರತಾಪ್, ರಚನಾ, ಶ್ರೀಕಾಂತ್ ನಾಯಕ್ ಹೇಳಿದರು.…

Read More