Author: admin

ವಿಪಕ್ಷ ನಾಯಕನ ಆಯ್ಕೆಯ ಶಾಸಕಾಂಗ ಸಭೆಗೆ ಶಾಸಕ ಯತ್ನಾಳ್‌, ರಮೇಶ್ ಜಾರಕಿಹೊಳಿ ಆಗಮಿಸಿಲ್ಲ. ಈ ಕುರಿತು ಪ್ರತಿಕ್ರಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸಭೆಗೆ ಆಗಮಿಸಿಲ್ಲ ಅಷ್ಟೇ, ಆದರೆ ಕೇಂದ್ರದಿಂದ ಬಂದ ವೀಕ್ಷಕರಿಗೆ ವಿಪಕ್ಷ ನಾಯಕ ಯಾರಾಗಬೇಕು ಎಂಬ ಅಭಿಪ್ರಾಯ ತಿಳಿಸಿ ಹೋಗಿದ್ದರು ಎಂದು ಹೇಳಿದ್ದಾರೆ. ಶಾಸಕ ಯತ್ನಾಳ್‌, ವಿಪಕ್ಷ ಸ್ಥಾನವನ್ನು ಉತ್ತರ ಕರ್ನಾಟಕದ ಶಾಸಕರಿಗೆ ನೀಡಬೇಕು ಎಂದು ಬಹಿರಂಗವಾಗಿ ಹೇಳಿದ್ದರು.

Read More

ಭಾರತದಲ್ಲಿ ಲಿಥಿಯಂ ನಿಕ್ಷೇಪಗಳು ಮತ್ತೆ ಪತ್ತೆಯಾಗಿವೆ ಜಾರ್ಖಂಡ್‌ ನ ಕೊಡೆರ್ಮಾ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಚಿನ್ನದ ನಿಕ್ಷೇಪಗಳ ಜೊತೆಗೆ ಲಿಥಿಯಂ ನಿಕ್ಷೇಪಗಳು ಕಂಡುಬಂದಿವೆ. ಈ ಲಿಥಿಯಂ ಮೀಸಲು ತುಂಬಾ ದೊಡ್ಡದಾಗಿದೆ ಎಂದು ಸಂಶೋಧಕರು ಹೇಳುತ್ತಾರೆ. ಭಾರತದಲ್ಲಿ ಲಿಥಿಯಂ ಹೊರತೆಗೆಯುವ ತಂತ್ರಜ್ಞಾನವನ್ನು ಇನ್ನೂ ಅಭಿವೃದ್ಧಿಪಡಿಸಲಾಗಿಲ್ಲವಾದ್ದರಿಂದ, ಅದನ್ನು ಹೊರತೆಗೆಯಲು ವಿದೇಶಿ ಕಂಪನಿಗಳ ಸಹಾಯವನ್ನೂ ಪಡೆಯಬಹುದು ಎಂದು ನಂಬಲಾಗಿದೆ. ಕಾಶ್ಮೀರದ ನಂತರ ಜಾರ್ಖಂಡ್ ‌ನಲ್ಲಿ ಲಿಥಿಯಂನ ಆವಿಷ್ಕಾರದೊಂದಿಗೆ, ಭಾರತವು ವಿಶ್ವದ ಅತಿದೊಡ್ಡ ಲಿಥಿಯಂ ಉತ್ಪಾದಕರಾಗಬಹುದು ಎಂದು ವರದಿಯಾಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿಗಳನ್ನು ತಯಾರಿಸುವಲ್ಲಿ ಲಿಥಿಯಂ ಪ್ರಮುಖ ಅಂಶವಾಗಿದೆ. ಈ ಆವಿಷ್ಕಾರದೊಂದಿಗೆ, ಸಾವಯವ ಶಕ್ತಿಯನ್ನು ಕಡಿಮೆ ಮಾಡುವ ಪ್ರಮುಖ ಅಸ್ತ್ರವನ್ನು ಭಾರತ ಪಡೆದುಕೊಂಡಿದೆ. ಲಿಥಿಯಂ ಅನ್ನು ಏರೋಸ್ಪೇಸ್ ಉದ್ಯಮದಲ್ಲಿ ರಾಕೆಟ್ ಇಂಧನವಾಗಿ ಬಳಸಲಾಗುತ್ತದೆ. ಕೋಡರ್ಮಾದಲ್ಲಿನ ಮೈಕಾ ಬೆಲ್ಟ್‌ನಲ್ಲಿ ಮುಂದಿನ ಹಂತದ ಲಿಥಿಯಂ ಅನ್ವೇಷಣೆಗೆ ಸಿದ್ಧತೆಗಳು ನಡೆಯುತ್ತಿವೆ.ಪ್ರಾಥಮಿಕ ಪರಿಶೋಧನೆಯಲ್ಲಿ ಲಿಥಿಯಂ ಪತ್ತೆಯಾಗಿದೆ.

Read More

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ವಿಶೇಷ ಯೋಜನೆಯನ್ನು ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಟಾಪನೆಯ ಕಾಲಂ ಪೂಜೆಯನ್ನು ಭಾನುವಾರ ನೆರವೇರಿಸಿ ಅವರು ಮಾತನಾಡಿದರು. ನಾನು ಶಾಸಕಿಯಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕಾಗಿ 1,800 ಕೋಟಿ ರೂ.ಗಳನ್ನು ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿದ್ದೇನೆ. 5 ವರ್ಷ ನಿರಂತರವಾಗಿ ಕ್ಷೇತ್ರದ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಕೆಲಸ ಮಾಡಿದ್ದೇನೆ. ಆಗ ಕೊರೋನಾ, ಪ್ರವಾಹಗಳಿಂದಾಗಿ ಒಂದಿಷ್ಚು ಸಮಸ್ಯೆಯಾಯಿತು. ಆದಾಗ್ಯ ಅಭಿವೃದ್ಧಿಯನ್ನು ಮಾತ್ರ ನಿಲ್ಲಿಸಲಿಲ್ಲ. ಹಾಗಾಗಿಯೇ ಕಳೆದ ಚುನಾವಣೆಯಲ್ಲಿ ನನ್ನನ್ನು ಹಿಂದಿನ ಬಾರಿಗಿಂತ ಹೆಚ್ಚು ಮತಗಳಿಂದ ಗೆಲ್ಲಿಸಿದ್ದೀರಿ. ಇದು ಇನ್ನಷ್ಟು ಕೆಲಸ ಮಾಡಲು ನನಗೆ ಹುಮ್ಮಸ್ಸು ನೀಡಿದೆ. ಅಭಿವೃದ್ಧಿ ಕೆಲಸಗಳ ಮೂಲಕವೇ ನಿಮ್ಮ ಋಣ ತೀರಿಸುತ್ತೇನೆ ಎಂದು ಸಚಿವರು ತಿಳಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಶಿವಾಜಿರಾವ್ ಅತವಾಡ್ಕರ್, ಯುವ…

Read More

ಬೆಂಗಳೂರು: ಆನ್‌ ಲೈನ್ ಹೂಡಿಕೆ ಹೆಸರಿನಲ್ಲಿ ನಗರದ ಇಬ್ಬರು ಸಾಫ್ಟ್‌ ವೇ‌ರ್ ಎಂಜಿನಿಯರ್‌ ಗಳಿಂದ ₹ 94.95 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಸೈಬ‌ರ್ ಕ್ರೈಂ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮಹದೇವಪುರದ ಸಾಫ್ಟ್‌ ವೇರ್ ಎಂಜಿನಿಯರ್ ರಾಮ್ ತೇಜ್ (33) ಹಾಗೂ ವೈಟ್‌ ಫೀಲ್ಡ್‌ ನ ಸಾಫ್ಟ್‌ವೇರ್ ಎಂಜಿನಿಯರ್ ಸೌರಭ್ ಕುಮಾರ ಶರ್ಮಾ(40) ಅವರು ಹಣ ಕಳೆದುಕೊಂಡಿದ್ದಾರೆ. ತಮಗಾದ ವಂಚನೆ ಬಗ್ಗೆ ಪ್ರತ್ಯೇಕವಾಗಿ ಠಾಣೆಗಳಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಪೊಲೀಸ್ ಅಧಿಕಾರಿಗಳು ದೂರನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾರ್ವಜನಿಕರು ಆನ್ಲೈನ್ ಬರುವ ಜಾಹಿರಾತು ನಂಬಿ ಮೋಸ ಹೋಗ್ಬೇಡಿ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

Read More

ಉತ್ತರ ಪ್ರದೇಶದ ಕಾನ್ಸುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹತ್ತನೇ ತರಗತಿ ಓದುತ್ತಿರುವ ಬಾಲಕನನ್ನು ಶಿಕ್ಷಕಿ ಪ್ರೀತಿಸುತ್ತಿದ್ದಳು ಎಂದು ಬಾಲಕನ ತಂದೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಶಿಕ್ಷಕಿ ತನ್ನ ಮಗನೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಮತಾಂತರ ಮಾಡಲು ಯತ್ನಿಸುತ್ತಿದ್ದಾಳೆ. ಈ ಕುರಿತು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಾಲಕನ ತಂದೆ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಲಯದ ಆದೇಶದಂತೆ ಪೊಲೀಸರು ಶಿಕ್ಷಕಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

Read More

ಸಾತನೂರಿನಲ್ಲಿ ಟೆಂಟ್ ಹಾಕಿ ಬ್ಲೂ ಫಿಲಂ ಪ್ರಸಾರ ಡಿಕೆಶಿ ಮಾಡಿದ್ದರು ಎಂಬ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದಿರಾ ಗಾಂಧಿ ಹೆಸರಲ್ಲಿ ಚಿತ್ರಮಂದಿರ ಇಟ್ಟಿದ್ದೆ. ನಮ್ಮೂರಿಗೆ ಹೋಗಿ, ಜನರ ಸರ್ವೇ ಮಾಡಿ. ಯಾರಾದರೂ ಒಬ್ಬ ಬ್ಲೂ ಫಿಲಂ ತೋರಿಸಿದ್ದಾರೆ ಎಂದು ಹೇಳಿದರೆ, ನಾನು ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ ಎಂದು ಡಿಕೆಶಿ ಸವಾಲ್ ಹಾಕಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ತಮ್ಮ ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯಾದ ಶ್ರೀನಗರ ನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 0.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ವರ್ಷದ ಈ ಸಮಯದಲ್ಲಿ ಸಾಮಾನ್ಯ ತಾಪಮಾನಕ್ಕಿಂತ 1.2 ಡಿಗ್ರಿ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಗರಿಷ್ಠ 12.5 ಡಿಗ್ರಿ ಸೆಲ್ಸಿಯಸ್ ದಾಖಲಾಗುವುದರೊಂದಿಗೆ ಗರಿಷ್ಠ ತಾಪಮಾನವೂ ಇಳಿಕೆಯಾಗಿದೆ. ಉತ್ತರ ಕಾಶ್ಮೀರದ ಬಂಡಿಪೋರಾದಲ್ಲಿ ಕಡಿಮೆ ಮೈನಸ್ 2.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಗುಲ್ಮಾರ್ಗ್‌ನಲ್ಲಿ ಮೈನಸ್ 1.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶ್ರೀನಗರ ನಗರದಲ್ಲಿ ಮುಂಜಾನೆಯಿಂದಲೇ ದಟ್ಟವಾದ ಮಂಜು ಆವರಿಸಿದ್ದು, ಗೋಚರತೆ ಕಡಿಮೆಯಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು. ಮುಂದಿನ 48 ಗಂಟೆಗಳ ಕಾಲ ಕಣಿವೆಯಾದ್ಯಂತ ಶುಷ್ಕ ಹವಾಮಾನವನ್ನು ನಿರೀಕ್ಷಿಸಲಾಗಿದೆ.

Read More

ನಮ್ಮ ಸರ್ಕಾರ ರಚನೆಯಾದ ತಕ್ಷಣ ನಾವು 4% ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಮತ್ತು ಅದನ್ನು ಎಸ್‌ ಸಿ, ಎಸ್‌ ಟಿ ಮತ್ತು ಒಬಿಸಿಗೆ ಹಂಚುತ್ತೇವೆ ಎಂದು ನಾವು ನಿರ್ಧರಿಸಿದ್ದೇವೆ. ಎಂದು ತೆಲಂಗಾಣ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಗ್ತಿಯಾಲ್ ‌ನಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಸಿಆ‌ರ್ ಓವೈಸಿಗೆ ಹೆದರಿ ಹೈದರಾಬಾದ್‌ ವಿಮೋಚನಾ ದಿನ ಆಚರಿಸುವುದಿಲ್ಲ. ಆದರೆ ಹೈದರಾಬಾದ್ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದರು. ಬಿಆರ್ ಎಸ್, ಮಜ್ಲಿಸ್ ಮತ್ತು ಕಾಂಗ್ರೆಸ್ 2G, 3G ಮತ್ತು 4G ಪಕ್ಷಗಳು. 2ಜಿ ಎಂದರೆ ಕೆಸಿಆರ್ ಮತ್ತು ಕೆಟಿಆರ್. 3ಜಿ ಎಂದರೆ ಓವೈಸಿಯ ಅಜ್ಜ, ತಂದೆ ಮತ್ತು ಓವೈಸಿ. 4ಜಿ ಎಂದರೆ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಹುಲ್. ಅದರಲ್ಲಿ ನಿಮ್ಮ ಸ್ಥಾನ ಎಲ್ಲಿದೆ?’’ ಎಂದು ಅಮಿತ್ ಶಾ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

Read More

ಬೆಂಗಳೂರು: ಬೆಂಗಳೂರಿನ ಸಿ.ಸಿ.ಬಿ.ಯ ಸಂಘಟಿತ ಅಪರಾಧ ದಳದ ಪೊಲಿಸರು ರೌಡಿಶೀಟರ್ ಹಾಗೂ ಅವರ ಸಹಚರರನ್ನು ಬಂಧಿಸಿದ್ದಾರೆ. ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಹಣ ಹಾಗೂ  ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ರೌಡಿಶೀಟರ್ ‌ಗಳು ಮತ್ತು ಅವರ 3 ಜನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ನ.16 ರಂದು ಪೀಣ್ಯ ಪೊಲೀಸ್ ಠಾಣಾ ಸರಹದ್ದಿನ ನ್ಯೂ ಮಂಜುಳ ಪಬ್ಲಿಕ್ ಶಾಲೆಯ ಹತ್ತಿರ ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ. ಅವರಿಂದ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿತರ ಮೇಲೆ ದಾಳಿ ಮಾಡಿ 05 ಜನರನ್ನು ವಶಕ್ಕೆ ಪಡೆದು, ಅವರಿಂದ ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಕಾರುಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಸಿ.ಸಿ.ಬಿ.ಯ ಸಂಘಟಿತ ಅಪರಾಧ ದಳದ (ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ. ಆರೋಪಿಗಳ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿರುತ್ತದೆ.

Read More

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸುವ ಪೋಸ್ಟರ್ ‌ಗಳಿಗಾಗಿ ಬೆಂಗಳೂರಿನಲ್ಲಿ ಆಟೋ ಚಾಲಕರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರ್‌ ಪೂಲಿಂಗ್‌ ಗೆ ಸೂರ್ಯ ಅವರ ಬೆಂಬಲವನ್ನು ವಿರೋಧಿಸಿ ಬೆಂಗಳೂರಿನ ಆಟೋ ಚಾಲಕರು ತಮ್ಮ ವಾಹನಗಳ ಮೇಲೆ ಪೋಸ್ಟರ್‌ ಗಳನ್ನು ಪ್ರದರ್ಶಿಸಿದರು. ಪೋಸ್ಟರ್‌ ಗಳು ಕಾರ್‌ ಪೂಲಿಂಗ್‌ ಗೆ ಬಿಜೆಪಿ ಸಂಸದರ ಬೆಂಬಲವನ್ನು ಅವಮಾನಕರ ಎಂದು ಲೇಬಲ್ ಮಾಡಲಾಗಿದೆ. ಪೋಸ್ಟರ್‌ ಗಳನ್ನು ತೆಗೆಯುವಂತೆ ಆಗ್ರಹಿಸಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಸಂಗಾತಿ ವೆಂಕಟೇಶ್ ಬೆಂಬಲಿಗರು ಆಟೋ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ವೆಂಕಟೇಶ್ ಅವರು ತಮ್ಮ ವಾಹನಗಳನ್ನು ಚಲಾಯಿಸದಂತೆ ಪ್ರದೇಶದ ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆ ನೀಡಿದರು ಮತ್ತು ಪೋಸ್ಟರ್‌ ಗಳನ್ನು ತೆಗೆದುಹಾಕದಿದ್ದರೆ ಮಾರಣಾಂತಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು. ವೆಂಕಟೇಶ್ ಮತ್ತು ಆತನ ಬೆಂಬಲಿಗರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ.

Read More