Subscribe to Updates
Get the latest creative news from FooBar about art, design and business.
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
- ತುಮಕೂರು | ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
Author: admin
‘ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ವೈದ್ಯರು ಬಯಸುತ್ತಿಲ್ಲ. ಕನಿಷ್ಠ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದ್ದೇವೆ’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಟಿ. ಬೇಗೂರು ಗ್ರಾಮದಲ್ಲಿ ಭಾನುವಾರ ನಡೆದ ಡಾ. ಬಿ. ರಮಣ ರಾವ್ ಅವರ ‘ವಿಲೇಜ್ ಕ್ಲಿನಿಕ್’ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಹೃದ್ರೋಗ ತಜ್ಞ ಡಾ. ಬಿ. ರಮಣ ರಾವ್ ಅವರನ್ನು ಸನ್ಮಾನಿಸಿ ಮಾತನಾಡಿದರು. ‘ಹಳ್ಳಿಗಳಲ್ಲಿ ಆರೋಗ್ಯ ಜಾಗೃತಿಯ ಅವಶ್ಯಕತೆಯಿದೆ. ಜಿಲ್ಲೆಗಳಲ್ಲಿ ಇರುವ ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಪ್ರಾರಂಭಿಸಲು ನಮ್ಮ ಸರ್ಕಾರ ಅನುದಾನ ನೀಡಿದೆ’ ಎಂದು ವಿವರಿಸಿದರು. ‘ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ರಮಣ ರಾವ್ ಅವರ ಕಾರ್ಯ ಪದಗಳಿಗೆ ಮೀರಿದ್ದು. ಪ್ರತಿ ವರ್ಷ ವೈದ್ಯಕೀಯ ಪದವಿ ಪಡೆಯುವವರು ರಮಣ ರಾವ್ ಅವರಿಂದ ಸ್ಫೂರ್ತಿ ಪಡೆಯಬೇಕು’ ಎಂದು ಸಲಹೆ ನೀಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದರಾದ…
ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ತೀವ್ರ ಹೃದಯಾಘಾತದಿಂದ ನಿಧನರಾದ ಬೆನ್ನಲ್ಲೇ, ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಫುಲ್ ಆಗಿದೆ. ಇತ್ತೀಚೆಗೆ ಮಧ್ಯ ವಯಸ್ಕರಲ್ಲಿ ಹೃದಯಾಘಾತಗಳು ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿರುವ ಕಾರಣ, ಆಸ್ಪತ್ರೆಗೆ ಬಂದು ಸಾಮಾನ್ಯ ಪರೀಕ್ಷೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಇನ್ನು ಸ್ಪಂದನಾ ವಿಜಯ ರಾಘವೇಂದ್ರ ಅವರ ಸಾವು ಮಧ್ಯ ವಯಸ್ಸಿನ ಹೆಂಗಸರಲ್ಲಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಆತಂಕ ಸೃಷ್ಟಿಸಿದ್ದು, ಮೇಲಿಂದ ಮೇಲೆ ಹೃದಯದ ತಪಾಸಣೆ ಮಾಡಿಸಿಕೊಳ್ಳಲು ಮಹಿಳೆಯರು ಮುಂದಾಗಿದ್ದಾರೆ. ಇನ್ನು ಕೆಲವರು ಆಸ್ಪತ್ರೆಗೂ ದಾಖಲಾಗಿ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
2024 ರ ಲೋಕಸಭಾ ಚುನಾವಣೆಗೆ ಹಾವೇರಿ ಗದಗ ಕ್ಷೇತ್ರದಿಂದ ನನ್ನ ಪುತ್ರ ಕೆ. ಇ. ಕಾಂತೇಶ್ ಕೂಡ ಪ್ರಬಲ ಆಕಾಂಕ್ಷಿ ಎಂದು ಮಾಜಿ ಉಪ-ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಲೋಕಸಭಾ ಚುನಾವಣೆಯ ತಯಾರಿ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ನನ್ನ ಪುತ್ರ ಕೆ. ಇ. ಕಾಂತೇಶ್ ಕೂಡ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿದ್ದಾನೆ. ಹಾಲಿ ಶಿವಮೊಗ್ಗ ಕ್ಷೇತ್ರ ಬಿ. ವೈ. ರಾಘವೇಂದ್ರ ಅವರು ಸಂಸದರಾಗಿದ್ದಾರೆ. ಅವರಿಗೆ ಶಿವಮೊಗ್ಗ ಕ್ಷೇತ್ರದ ಟಿಕೆಟ್ ನೀಡಲಾಗುವುದು. ಆದ್ರೆ, ಹಾವೇರಿ ಗದಗ ಕ್ಷೇತ್ರದ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಅಂತಾ ಹೇಳಿದ್ದಾರೆ. ಹೀಗಾಗಿ, ನನ್ನ ಪುತ್ರ ಆ ಕ್ಷೇತ್ರದ ಟಿಕೆಟ್ ಪಡೆಯಲು ಪ್ರಯತ್ನ ಮಾಡುತ್ತಿದ್ದಾನೆ ಎಂದು ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಶೌಚಾಲಯ ನಿರ್ವಹಣೆಯನ್ನು ಹೊರ ಗುತ್ತಿಗೆಗೆ ನೀಡಲು ಯೋಜನೆ ರೂಪಿಸಿದೆ. ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಿಗಾ ವಹಿಸದಿರುವ ಕುರಿತು ಕೆಲವು ದಿನಗಳ ಹಿಂದೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಸಾರ್ವಜನಿಕ ನೈರ್ಮಲ್ಯ ಮತ್ತು ಮೂಲ ಸೌಕರ್ಯಗಳನ್ನು ಬೆಂಗಳೂರು ನಗರದ ನಿವಾಸಿಗಳಿಗೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಮೂರು ವಾರಗಳ ಒಳಗೆ ಬಿಬಿಎಂಪಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಹೇಳಿತ್ತು. 169 ಇ-ಶೌಚಾಲಯಗಳ ನಿರ್ವಹಣೆಯನ್ನು ಮೂರು ವರ್ಗಗಳವರೆಗೆ, 34 ಶೌಚಾಲಯಗಳ ನಿರ್ವಹಣೆಯನ್ನು ಎರಡು ವರ್ಷಗಳವರೆಗೆ ಹೊರ ಗುತ್ತಿಗೆ ನೀಡಲು ಬಿಬಿಪಿಎಂಪಿ ಯೋಜನೆ ರೂಪಿಸಿದೆ. ಖಾಸಗಿ ಏಜೆನ್ಸಿಗೆ ಬಿಬಿಎಂಪಿಯಿಂದಲೇ ನಿರ್ವಹಣಾ ವೆಚ್ಚವನ್ನು ನೀಡಲು ನಿರ್ಧರಿಸಿದೆ. ಶೌಚಾಲಯಗಳ ಮೇಲೆ ಯಾವುದೇ ಜಾಹೀರಾತು ಪ್ರಕಟಿಸುವ ಹಕ್ಕುಗಳನ್ನು ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೇ 90ರಷ್ಟು ಕೊರತೆ: ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಕನಿಷ್ಠ 20,000 ಮೂತ್ರಾಲಯಗಳು ಮತ್ತು 15,000 ಸಾರ್ವಜನಿಕ ಶೌಚಾಲಯಗಳು ಇರಬೇಕು. ನಗರದಲ್ಲಿ…
ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಹಾಡಹಗಲೇ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. 9 ನೇ ತರಗತಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ದೊಮ್ಮಲೂರಿನಿಂದ ರಿಚಂಡ್ ಸರ್ಕಲ್ ಗೆ ಪ್ರಯಾಣ ಮಾಡುತ್ತಿದಳು. ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಗೆ ಅಂತ ಆಧಾರ್ ಕಾರ್ಡ್ ತೋರಿಸಿದ್ದಾಳೆ. ಆದರೆ ಆಧಾರ್ ಕಾರ್ಡ್ ನಲ್ಲಿ ಹಿಂದಿ ಬರಹ ಇದ್ದಿದ್ದಕ್ಕೆ ದುಡ್ಡು ಕೊಟ್ಟು ಟಿಕೆಟ್ ಖರೀದಿ ಮಾಡುವಂತೆ ಕಂಡೆಕ್ಟರ್ ಹೇಳಿದ್ದಾರೆ. ವಿದ್ಯಾರ್ಥಿನಿ ದುಡ್ಡು ಕೊಟ್ಟು ಟಿಕೆಟ್ ಪಡೆದ್ರೂ, ವಿದ್ಯಾರ್ಥಿನಿಯ ಆಧಾರ್ ತೆಗೊಂಡು ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರ ಮುಂದೆ ನಿಂದಿಸಿದ್ದಾನೆ. ಈ ವೇಳೆ ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡ ಕಂಡೆಕ್ಟರ್ ಗೆ ಸಾಥ್ ನೀಡಿ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ. ಬಳಿಕ ವಿದ್ಯಾರ್ಥಿನಿಯನ್ನು ರಿಚ್ಯಂಡ್ ಸರ್ಕಲ್ ನಲ್ಲಿ ಇಳಿಸದೇ, ಕಾರ್ಪೋರೇಶನ್ ಸರ್ಕಲ್ ಬಳಿ ಇಳಿಸಿ ಹೋಗಿದ್ದಾರೆ. ಬಳಿಕ ಮನೆ ತಲುಪಿದ ವಿದ್ಯಾರ್ಥಿಯು ತನ್ನ ತಾಯಿ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಹಾಗಾಗಿ ತಾಯಿ ಕಂಡೆಕ್ಟರ್,…
ರಾಜ್ಯದ ಜನರು ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಬೇಕಾದರೆ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2022’ ಮತ್ತು ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ’ಯನ್ನು ಹಿಂಪಡೆಯಬಾರದು ಎಂದು ಮಠಾಧೀಶರು ನಿರ್ಣಯ ಕೈಗೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್ ನಗರದಲ್ಲಿ ಭಾನುವಾರ ಹಮ್ಮಿಕೊಂಡ ‘ಸಂತ ಸಮ್ಮೇಳನ’ದಲ್ಲಿ 10ಕ್ಕೂ ಅಧಿಕ ಮಠಾಧೀಶರು ಭಾಗವಹಿಸಿ, ಎರಡು ನಿರ್ಣಯಗಳನ್ನು ಕೈಗೊಂಡರು. ಮೇಲುಕೋಟೆ ಯತಿರಾಜ ಮಠದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಗೋ ಹತ್ಯೆ, ಮಂತಾಂತರ, ಲವ್ ಜಿಹಾದ್, ಹಿಂದೂ ಅವಿಭಕ್ತ ಕುಟುಂಬ ಪದ್ಧತಿ, ಪರಿಸರ, ಸಾಮರಸ್ಯ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಗೋಹತ್ಯೆ ನಿಷೇಧ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆದರೆ ಸಂತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಸರ್ಕಾರ ಈ ಕಾಯ್ದೆಗಳನ್ನು ವಾಪಸ್ ಪಡೆಯಬಾರದು. ಪರಮಾತ್ಮ ಜಿ. ಮಹಾರಾಜ್, ರಾಷ್ಟ್ರೀಯ ಸಂತ ಸಂಘದ ನಿರ್ದೇಶಕ ಗೋಕಾಕದ ಮಹಾಲಿಂಗೇಶ್ವರ ಮಠದ ರವಿಶಂಕರ ಶಿವಾಚಾರ್ಯ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪಾವಗಡ ವ್ಯಾಪ್ತಿಯ ಸಿ.ಕೆ.ಪುರ ವಲಯದ ಸಿ.ಕೆ.ಪುರ ಗ್ರಾಮದ ಮಸೀದಿಯಲ್ಲಿ ಇಂದು ಸ್ವಸಹಾಯ ಸಂಘದ ಸದಸ್ಯರನ್ನು ಒಗ್ಗೂಡಿಸಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭ ಮೇಲ್ವಿಚಾರಕರಾದ ಮನು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವರ್ಷದಲ್ಲಿ ಎರಡು ಬಾರಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತದೆ. ಜಾತಿ ಧರ್ಮ ಭೇದವಿಲ್ಲದೆ ದೇವಸ್ಥಾನ ಮಸೀದಿ, ಚರ್ಚ್, ಬಸದಿ, ಕಲ್ಯಾಣಿ ಮುಂತಾದ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛ ಮಾಡಲಾಗುತ್ತದೆ. 2018ರಲ್ಲಿ ಧಾರ್ಮಿಕ ಸ್ವಚ್ಛತಾ ನಗರಿ ಎಂದು ರಾಷ್ಟ್ರ ಪ್ರಶಸ್ತಿ ಧರ್ಮಸ್ಥಳಕ್ಕೆ ದೊರೆತ ಜ್ಞಾಪಕಾರ್ಥವಾಗಿ ಈ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತದೆ. ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆ. 15ರಂದು ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳು ಮಾಡಲಾಗಿದೆ. ಆಕರ್ಷಕ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ, ಸೇನಾ ಸಿಬ್ಬಂದಿಯಿಂದ ಮೈ ನವಿರೇಳಿಸುವ ಮೋಟಾರ್ ಬೈಕ್ ಸಾಹಸ ಪ್ರದರ್ಶನಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಗಣ್ಯರು, ಸಾರ್ವಜನಿಕರು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಂಭ್ರಮ ಕಣ್ತುಂಬಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಮುಖ್ಯಮಂತ್ರಿ ಅವರು ತೆರೆದ ಜೀಪಿನಲ್ಲಿ ಪರೇಡ್ ತುಕಡಿಗಳ ಪರಿವೀಕ್ಷಣೆ ನಡೆಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ’ ಎಂದು ವಿವರಿಸಿದರು. ‘ಪರೇಡ್ ನಲ್ಲಿ ಬಿಎಸ್‌ಎಫ್, ಮಹಿಳಾ ಸಿಆರ್‌ಪಿಎಫ್, ಗೋವಾ ಪೊಲೀಸ್, ಮಹಿಳಾ ಕೆಎಸ್‌ಆರ್‌ಪಿ, ಕೆಎಸ್‌ಆರ್‌ಪಿ, ಸಿಎಆ, ಕೆಎಸ್‌ಐಎಸ್‌ಎಫ್ ಎನ್‌ಸಿಸಿ ಸಶಸ್ತ್ರ ತುಕಡಿಗಳು ಹಾಗೂ ಪೊಲೀಸ್ ತಂಡಗಳು ಭಾಗವಹಿಸಲಿವೆ. ಹೋಂ ಗಾರ್ಡ್ಸ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ,…
‘ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ’ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ‘ಕರಾಳ ಶನಿವಾರ’ ಎಂಬುದಾಗಿ ಟ್ವಿಟ್ ಮಾಡಿರುವ ಅವರು, ‘ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದು ಕೊಂಡಂತಾಗಿದೆ’ ಎಂದಿದ್ದಾರೆ. ಮೃತರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಚಾರಿಗಳು ಸಹ ಮೃತಪಟ್ಟಿದ್ದಾರೆ. ಬೈಕ್ ಸವಾರ ಹಾಗೂ ಹಿಂಬದಿ ಸವಾರ, ತಮ್ಮ ಸುರಕ್ಷತೆಗಾಗಿ ಹೆಲ್ಮಟ್ ಧರಿಸಿ ಸಂಚರಿಸಬೇಕು. ಕಾರು ಚಾಲಕರು, ರಾತ್ರಿ ಸಮಯದಲ್ಲಿ ಹೆಚ್ಚು ಜಾಗೃತಿ ವಹಿಸಬೇಕು’ ಎಂದೂ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜಕಾರಣಿಗಳ ಹೆಸರು ಹೇಳಿ ಅಮಾಯಕರಿಗೆ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಬಾಬು ಹಾಗೂ ಶಿಲ್ಪಾ ಬಂಧಿತ ಆರೋಪಿಗಳು, ಚೈನ್ ಲಿಂಕ್ ಮೂಲಕ ದಂಪತಿ ಜನರಿಗೆ ವಂಚಿಸುತ್ತಿದ್ದರು. ಬೆಂಗಳೂರಿನಲ್ಲಿ ವಾಸವಾಗಿದ್ದ ಕೇರಳ ಮೂಲದವರೇ ಇವರ ಪ್ರಮುಖ ಟಾರ್ಗೆಟ್ ಆಗಿತ್ತು. ಆರ್. ಎಲ್. ಜೆ. ಪಿ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದ ಶಿಲ್ಪಾ, ತಾನು ಎನ್ ಡಿಎ ರಾಷ್ಟ್ರೀಯ ಕಮಿಟಿ ಸದಸ್ಯೆ ಎಂದು ಜನರನ್ನು ಪರಿಚಯಿಸಿಕೊಳ್ಳುತ್ತಿದ್ದಳು. ರಾಜಕಾರಣಿಗಳ ಜೊತೆಗೆ ತಾವಿರುವ ಫೋಟೋಗಳನ್ನು ತೋರಿಸಿ ಸರ್ಕಾರದ ಮಟ್ಟದಲ್ಲಿ ಕೆಲಸಗಳನ್ನು ಮಾಡಿಕೊಡುವುದಾಗಿ ನಂಬಿಸುತ್ತಿದ್ದರು. ಆರಂಭದಲ್ಲಿ ಸ್ವಲ್ಪ ಹಣಗಳನ್ನು ಕೊಟ್ಟು ಜನರಲ್ಲಿ ನಂಬಿಕೆ ಹುಟ್ಟಿಸುತ್ತಿದ್ದ ದಂಪತಿ ಬಳಿಕ ಅವರಿಂದಲೇ ಉಪಾಯವಾಗಿ ಹೆಚ್ಚು ಹಣಗಳನ್ನು ಪಡೆದು, ಜ್ಯೋತಿಷ್ಯದ ಕಥೆ ಕಟ್ಟಿ ಒಂದು ಸ್ಥಳ ಬಿಟ್ಟು ಮತ್ತೊಂದು ಸ್ಥಳಕ್ಕೆ ಪರಾರಿಯಾಗುತ್ತಿದ್ದರು. ದಂಪತಿ ವಿರುದ್ಧ ಪಶ್ಚಿಮ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಜಾಮೀನಿನ ಮೂಲಕ ದಂಪತಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಇದೀಗ ವಂಚಕ ದಂಪತಿಯನ್ನು ಹೆಚ್.…