Subscribe to Updates
Get the latest creative news from FooBar about art, design and business.
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
- ತುಮಕೂರು | ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
Author: admin
ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಹೇಳಿದ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂಬ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಜಾತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಸಮಾಜ ಕಲ್ಯಾಣ ಇಲಾಖೆಯಿಂದ ನಟ ಉಪೇಂದ್ರನ ವಿರುದ್ಧ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ನಟ ಉಪೇಂದ್ರ ಅವರ ಹೇಳಿಕೆಯ ಕುರಿತು ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಪದ ಬಳಸಿದ್ದರು. ಇದಾದ ನಂತರ, ಅವರೇ ಅಪ್ಲೋಡ್ ಮಾಡಿದ್ದ ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು. ಆದರೂ, ಅವರ ವಿರುದ್ಧ ಸಾಮಾಜಿಕ ಜಾಲತಾಣ ಸೇರಿ ಭೌತಿಕವಾಗಿ ರಾಮನಗರ ಸೇರಿ ವಿವಿಧೆಡೆ…
2024 ರ ಲೋಕಸಭಾ ಚುನಾವಣಾ ಹೊಸ್ತಿಲಿನಲ್ಲಿ ಮತ್ತೆ ಮುನ್ನೆಲೆಗೆ ಬಂತು ರವಿ.ಡಿ ಚೆನ್ನಣ್ಣನವರ್ ಹೆಸರು. ಅಷ್ಟಕ್ಕೂ ಲೋಕಸಭಾ ಚುನಾವಣೆಗೂ ರವಿ. ಡಿ. ಚೆನ್ನಣ್ಣನವರ್ ಹೆಸರಿಗೂ ಏನು ಸಂಬಂಧ? ಅಂತಾ ಯೋಚಿಸುತ್ತಿದ್ದೀರಾ? ಅದರ ಕಂಪ್ಲಿಟ್ ಡೀಟೈಲ್ಸ್ ಇಲ್ಲಿದೆ ನೋಡಿ. ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನೇರವಾಗಿ ರಾಜಕಾರಣಕ್ಕೆ ಬಂದು ಸಾಕಷ್ಟು ಹೆಸರು ಮಾಡಿರುವ ಇತ್ತೀಚೆಗೆ ತಮಿಳುನಾಡು ರಾಜ್ಯದಲ್ಲಿ ಸಂಚಲನ ಉಂಟು ಮಾಡುತ್ತಿರುವ ಕೆ. ಅಣ್ಣಾಮಲೈ ಹಾದಿಯಲ್ಲಿಯೇ ರವಿ. ಡಿ. ಚೆನ್ನಣ್ಣನವರ್ ಕೂಡ ಸಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. 2024 ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ (ಮೀಸಲು) ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ರವಿ. ಡಿ. ಚೆನ್ನಣ್ಣನವರ್ ಸ್ಪರ್ಧೆ ಮಾಡಲಿದ್ದು, ಇದಕ್ಕೆ ಬೇಕಾದ ತಾಲೀಮು ತೆರೆಮರೆಯಲ್ಲಿ ನಡೆಯುತ್ತಿದೆ ಎನ್ನಲಾಗಿದೆ. ಇನ್ನು ಈ ಹಿಂದೆಯೇ ರವಿ. ಡಿ. ಚೆನ್ನಣ್ಣನವರ್ ರಾಜಕೀಯ ಪ್ರವೇಶ ಆಗಬೇಕಾಗಿತ್ತು. 9 ಆದ್ರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ. ಹೀಗಾಗಿ, 2024 ರಲ್ಲಿ ಎದುರಾಗಲಿರುವ ಲೋಕಸಭಾ ಚುನಾವಣೆಯಲ್ಲಿ ರವಿ. ಡಿ.…
ಕಾರು ಪಲ್ಟಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ 2:30ರ ಸುಮಾರಿಗೆ ನಗರದ ಹುಣಸಮಾರನಹಳ್ಳಿ ಬಳಿ ನಡೆದಿದೆ. ಕಾರ್ತಿಕ್ ಜೈನ್ ಹಾಗೂ ಆದರ್ಶ್ ಕುಮಾರ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ನಂದಿ ಬೆಟ್ಟಕ್ಕೆ ಟ್ರಿಪ್ ಹೊರಟಿದ್ದ ಒಟ್ಟು ಐವರು ವಿದ್ಯಾರ್ಥಿಗಳು ಹೋಗುವುದು ಬೇಡ ಎಂದು ವಾಪಸ್ ಬರುವಾಗ ನಿದ್ದೆ ಮಂಪರಿನಲ್ಲಿ ಈ ದುರಂತ ಸಂಭವಿಸಿದೆ. ಉಳಿದ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
‘ವೈದ್ಯಕೀಯ ಕ್ಷೇತ್ರದಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು, ಗ್ರಾಮೀಣ ಭಾಗಕ್ಕೂ ವೈದ್ಯಕೀಯ ಮೂಲ ಸೌಲಭ್ಯ ಒದಗಿಸಬೇಕು’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ನಗರದಲ್ಲಿ ಶನಿವಾರ ಹಮ್ಮಿಕೊಂಡ ವಜ್ರ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಆರ್ಥಿಕವಾಗಿ ಹಿಂದುಳಿದವರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಲಭ್ಯವಾಗಬೇಕು. ವೈದ್ಯಕೀಯ ಕ್ಷೇತ್ರದಲ್ಲಿನ ಸಂಶೋಧನೆಯ ಲಾಭ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ನಿಟ್ಟಿನಲ್ಲಿ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಉತ್ತಮವಾದ ಕಾರ್ಯ ಮಾಡುತ್ತಿದ್ದು, ವೈದ್ಯಕೀಯ ಕ್ಷೇತ್ರಕ್ಕೆ ಕೌಶಲಯುಕ್ತ ವೈದ್ಯರನ್ನು ನೀಡುತ್ತಿದೆ’ ಎಂದು ಅಭಿಪ್ರಾಯಪಟ್ಟರು. ಇಂಧನ ಸಚಿವ ಕೆ. ಜೆ. ಜಾರ್ಜ್, ‘ಕೋವಿಡ್ ಕಾಣಿಸಿಕೊಂಡ ಸಂದರ್ಭದಲ್ಲಿ ರೋಗ ನಿರ್ವಹಣೆಗೆ ಖಾಸಗಿ ವೈದ್ಯಕೀಯ ಸಂಸ್ಥೆಗಳೂ ಕೊಡುಗೆ ನೀಡುವೆ. ಅವುಗಳಲ್ಲಿ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ರೋಗಿಗಳ ಚಿಕಿತ್ಸೆಗೆ ತೆಗೆದುಕೊಂಡ ಕ್ರಮ ಶ್ಲಾಘನೀಯ’ ಎಂದರು. ಭಾರತೀಯ ಕ್ಯಾಥೋಲಿಕ್ ಬಿಷಪ್ ಗಳ ಮಹಾಸಂಸ್ಥೆಯ (ಸಿಬಿಸಿಐ) ಅಧ್ಯಕ್ಷ ಆಂಡ್ರಸ್ ಥಾಜತ್ ಇತರರಿದ್ದರು. ಅಂಚೆ ಇಲಾಖೆಯ ಕರ್ನಾಟಕ ಶಾಖೆಯ ಮುಖ್ಯ ಪೋಸ್ಟ್ ಮಾಸ್ಟರ್…
ತುಮಕೂರಿನ ಸಿದ್ದಗಂಗಾ ಮಠದ ಹಿಂಭಾಗದಲ್ಲಿರುವ ಗೋಕಟ್ಟೆಗೆ ತನ್ನ ತಾಯಿಯೊಂದಿಗೆ ಹೋದ ಸಂದರ್ಭದಲ್ಲಿ ಮಗ ಈಜಲು ಹೋಗಿ ನೀರು ಕುಡಿದು ಮೃತಪಟ್ಟಿರುವ ಘಟನೆ ಸಂಭವಿಸಿದ್ದು ಇನ್ನುಳಿದಂತೆ ಆತನನ್ನು ರಕ್ಷಿಸಲು ಹೋದ ಮೂವರು ಅಸುನೀಗಿದ್ದಾರೆ. ಮಗನನ್ನು ರಕ್ಷಿಸಲು ಹೋದ ತಾಯಿ ಹಾಗೂ ಬಾಲಕನ ಸಹೋದರ, ಮತ್ತೊಬ್ಬ ಕೂಡ ನೀರು ಪಾಲಾಗಿದ್ದಾರೆ. ಮೊದಲಿಗೆ ಮುಳುಗುತ್ತಿದ್ದ ರಂಜಿತ್ ನನ್ನು ಬದುಕಿಸಲು ಮುಂದಾದ ಶ್ರೀಮಠದ ವಿದ್ಯಾರ್ಥಿಗಳಾದ ಶಂಕರ್( 11), ಹರ್ಷಿತ್(11) ಮೃತ ವಿದ್ಯಾರ್ಥಿ ಗಳಾಗಿದ್ದರೆ. ಇವರನ್ನು ರಕ್ಷಣೆ ಮಾಡಲು ನೀರಿಗಿಳಿದ ರಂಜಿತ್ ತಾಯಿ ಬೆಂಗಳೂರು ಬಾಗಲಗುಂಟೆಯ ಲಕ್ಷ್ಮೀ (33) ಹಾಗೂ ಯಾದಗಿರಿ ಜಿಲ್ಲೆಯ ಅಫ ಜಲಪುರದ ಮಹದೇವಪ್ಪ (44) ಕೂಡ ಮೃತರಾಗಿದ್ದಾರೆ. ಶ್ರೀಮಠದಲ್ಲಿ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಧ್ಯಾಹ್ನ ಗೋಕಟ್ಟೆಗೆ ಇಳಿದಿದ್ದರು ಎನ್ನಲಾಗಿದ್ದು ಘಟನೆಯಲ್ಲಿ ರಂಜಿತ್ ಎಂಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಾಮನಗರ ಮೂಲದ ಹರ್ಷಿತ್, ಹಾಗೂ ಚಿಕ್ಕಮಗಳೂರು ಮೂಲದ ಶಂಕರ್ ಮೃತ ವಿದ್ಯಾರ್ಥಿಗಳು. ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗನನ್ನು ನೋಡಲು ತಾಯಿ ಬಂದಿದ್ದರು. ಈ…
ಹಲಸೂರು ಠಾಣೆ ವ್ಯಾಪ್ತಿಯ ದೊಮ್ಮಲೂರು ರಸ್ತೆ ಬಳಿಯ ಪ್ರದೇಶದಲ್ಲಿ ಕಿರಣ್ ಎಂಬವರನ್ನು ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ. ‘ಸ್ಥಳೀಯ ನಿವಾಸಿ ಕಿರಣ್, ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದರು. ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಕಿರಣ್ ಅವರನ್ನು ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು. ‘ಶುಕ್ರವಾರ ಬೆಳಿಗ್ಗೆ ಬಂದಿದ್ದ ಮಾಹಿತಿ ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಕಿರಣ್ ಆಸ್ಪತ್ರೆಯಲ್ಲಿ ಮೃತಪಟ್ಟ ನಂತರ, ಕೊಲೆ ಪ್ರಕರಣ ದಾಖಲಿಸಲಾಗಿದೆ’ ಎಂದರು. ಹಿಂಬಾಲಿಸಿ ಬಂದು ಕೊಲೆ: ‘ಕಿರಣ್ ಗುರುವಾರ ತಡರಾತ್ರಿ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಬಾರ್‌ಗೆ ಹೋಗಿದ್ದರು. ಅಲ್ಲಿ ಕೆಲ ಯುವಕರ ನಡುವೆ ಜಗಳವಾಗಿತ್ತು. ಸಿಬ್ಬಂದಿ ಜಗಳ ಬಿಡಿಸಿ ಎಲ್ಲರನ್ನೂ ಹೊರಗೆ ಕಳುಹಿಸಿದ್ದರು’ ಎಂದು ಪೊಲೀಸರು ತಿಳಿಸಿದರು. ಬಳಿಕ ದೊಮ್ಮಲೂರು ರಸ್ತೆಯಲ್ಲಿ ಕಿರಣ್ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿಗಳು ಕೃತ್ಯ ಎಸಗಿದ್ದಾರೆ. ಕಿರಣ್ ಅವರನ್ನು ಸ್ಥಳೀಯರು ಮೊದಲು ಬೌರಿಂಗ್…
ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ಸ್ವಯಂಕೃತ ಅಪರಾಧದಿಂದ, ಚುನಾವಣೆಯಲ್ಲಿ ಸೋತು ಗೋವಿಂದರಾಜನಗರ ಜನರಿಗೆ ಅಪಚಾರ ಮಾಡಿದ್ದೇನೆ. ಈ ಮೂಲಕ ನನ್ನ ಕಾಲಿನ ಮೇಲೆ ನಾನೇ ಕಲ್ಲು ಹಾಕಿಕೊಂಡಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ನನಗೆ ವಿಧಾನಸಭಾ ಚುನಾವಣೆಯಲ್ಲಿ ನಮ್ಮವರೇ ಮೋಸ ಮಾಡಿದರು. ಅದು ಎಲ್ಲರಿಗೂ ಗೊತ್ತು. ನಮ್ಮ ನಾಯಕರ ಒತ್ತಾಯಕ್ಕೆ ಮಣಿದು ನಾನು ಎರಡು ಕಡೆ ಸ್ಪರ್ಧೆ ಮಾಡಿದ್ದೆ. ಹೈಕಮಾಂಡ್ ಕೊಟ್ಟ ಟಾಸ್ಕನ್ನು ನಾನೊಬ್ಬನೇ ಸೀರಿಯಸ್ ಆಗಿ ತೆಗೆದುಕೊಂಡು ಕೆಲಸ ಮಾಡಿದೆ. ಇಷ್ಟಾದರೂ ನಾನು ಚುನಾವಣೆಯಲ್ಲಿ ಸೋತೆ ಎಂದು ಪರೋಕ್ಷವಾಗಿ ಸ್ವಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಕಡೆ ಮೂರು ಸಾವಿರ ವೋಟ್‌ನಲ್ಲಿ ಸೋತೆ, ಇನ್ನೊಂದು ಕಡೆ 70 ಸಾವಿರ ವೋಟ್ ತೆಗೆದುಕೊಂಡೆ. ನಾನು ಹೇಗೆ ಸೋತೆ ಎಂಬುದು ಎಲ್ಲರಿಗೂ ಗೊತ್ತು. ಅದನ್ನು ನನ್ನ ಬಾಯಿಂದ ಬಿಡಿಸಬೇಡಿ ಎಂದರು. ಇನ್ನು ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ.…
ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬಿಟುಮಿನ್ ಏಕಾಗ್ರತೆ ಹಾಗೂ ಶಕ್ತಿಯ ಮಟ್ಟವನ್ನ ಪರೀಕ್ಷಿಸುವಾಗ ಬೆಂಜಿನ್ ಬಳಕೆ ಮಾಡುತ್ತಾರೆ. ಆ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು ಅವಘಡಕ್ಕೆ ಕಾರಣವಾಗಿರಬಹುದು ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್ಎಲ್) ತಂಡ ಸಹ ಪರಿಶೀಲನೆ ನಡೆಸಿದೆ. ವರದಿ ಬಂದ ನಂತರ ನಿಖರವಾದ ಕಾರಣ ತಿಳಿದು ಬರಲಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿದ್ದ ಮೂವರು ಆರೋಪಿಗಳನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವೆಂಕಟೇಶ್, ಧರಣೇಶ್ ಹಾಗೂ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ, ಅದರ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಕಳೆದ ಫೆಬ್ರವರಿಯಲ್ಲಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಅಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರಿಗೂ ದೂರು ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದರು. ದೂರಿನನ್ವಯ ಐಟಿ ಆ್ಯಕ್ಟ್ ಹಾಗೂ ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರ್ ಕೈಂ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಅವರಲ್ಲಿ ಮೂವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದ್ದು, ಠಾಣಾ ಜಾಮೀನಿನ ಆಧಾರದಲ್ಲಿ ನೋಟಿಸ್ ನೀಡಿ…
ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ 36 ವರ್ಷದ ಮಹಿಳೆಯೊಬ್ಬರು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ದೂರು ದಾಖಲಿಸಿದ್ದರು. ದೂರುದಾರ ಮಹಿಳೆಯು 2021ರ ನವೆಂಬರ್‌ನಲ್ಲಿ ಕೆಲಸವೊಂದರ ನಿಮಿತ್ತ ವೀರೇಂದ್ರ ಬಾಬುನನ್ನು ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಕಾಫಿಯಲ್ಲಿ ಮತ್ತೇರಿಸುವ ಔಷಧ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಿದ್ದು, ವೀರೇಂದ್ರ ಬಾಬು ಕೃತ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ. ಬಳಿಕ ಆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ 15 ಲಕ್ಷ ರೂ. ಹಣ ಪೀಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಒಡವೆ ಮಾರಾಟ ಮಾಡಿ ಹಣ ನೀಡಿದ್ದ ದೂರುದಾರ ಮಹಿಳೆ ತನ್ನ ಘನತೆಗೆ…