Subscribe to Updates
Get the latest creative news from FooBar about art, design and business.
- ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
- ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
- ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
- ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
- ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
- ತುಮಕೂರು | ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
Author: admin
ಅತ್ಯುತ್ತಮ ತನಿಖೆಗಾಗಿ ನೀಡಲಾಗುವ 2023ರ ಸಾಲಿನ ಗೃಹಮಂತ್ರಿಗಳ ಪದಕವನ್ನು ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದ್ದು, ರಾಜ್ಯದ ಐವರು ಪೊಲೀಸ್ ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ. ಒಟ್ಟಾರೆ ದೇಶದ ಪೊಲೀಸ್, ಸಿಬಿಐ ಮತ್ತು ಎನ್‌ಐಎಯಿಂದ 140 ಅಧಿಕಾರಿಗಳು ಈ ಪ್ರಶಸ್ತಿಗೆ ಭಾಜನರಾಗಲಿದದ್ದಾರೆ. ಕೇಂದ್ರೀಯ ತನಿಖಾ ದಳದ (ಸಿಬಿಐ) 15 ಸಿಬ್ಬಂದಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) 12 ಅಧಿಕಾರಿಗಳಿಗೆ ದೊರೆಯಲಿದೆ. 140 ಅಧಿಕಾರಿಗಳಲ್ಲಿ 22 ಮಹಿಳಾ ಅಧಿಕಾರಿಗಳಿದ್ದಾರೆ. ಡಿವೈಎಸ್ಪಿ ಶಂಕರ್ ಎಂ ರಾಗಿ, ಇನ್ಸ್ಪೆಕ್ಟರ್ ಗಳಾದ ರಾಮಪ್ಪ ಬಿ ಗುತ್ತೇರ್, ಸಿ ಬಿ ಶಿವಸ್ವಾಮಿ, ರುದ್ರೇಗೌಡ ಆರ್ ಪಾಟೀಲ್ ಹಾಗೂ ಪಿ ಸುರೇಶ್ 2023ನೇ ಸಾಲಿನ ಕೇಂದ್ರ ಗೃಹ ಸಚಿವರ ಪದಕ ಗೌರವಕ್ಕೆ ಪಾತ್ರರಾದ ಕರ್ನಾಟಕದ ಐದು ಜನ ಅಧಿಕಾರಿಗಳಾಗಿದ್ದಾರೆ. ಉತ್ತರ ಪ್ರದೇಶದ 10, ಕೇರಳ ಮತ್ತು ರಾಜಸ್ಥಾನದಿಂದ ತಲಾ ಒಂಬತ್ತು, ತಮಿಳುನಾಡಿನ ಎಂಟು, ಮಧ್ಯಪ್ರದೇಶದ ಏಳು ಮತ್ತು ಗುಜರಾತ್‌ನ ಆರು ಮಂದಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಉಳಿದ ಅಧಿಕಾರಿಗಳು ಇತರ…
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಹೇಶ್ವರಿನಗರದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದ ಕೊಲೆ ಪ್ರಕರಣವನ್ನು ಕೆಲ ಗಂಟೆಗಳಲ್ಲೇ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 21 ವರ್ಷದ ಯುವತಿಯ ಕತ್ತು ಹಿಸುಕಿ ಹತ್ಯೆ ಮಾಡಿದ ಆರೋಪದ ಮೇಲೆ ಆಕೆಯ ಪಕ್ಕದ ಮನೆಯಲ್ಲೇ ವಾಸವಿದ್ದ ಕೃಷ್ಣ ಚಂದ್ ಸೇಟಿ ಎಂಬಾತನನ್ನು ಬಂಧಿಸಲಾಗಿದೆ. ಗುರುವಾರ ರಾತ್ರಿ ಯುವತಿ ಕಾಣೆಯಾಗಿದ್ದಾಳೆ ಎಂದು ಆಕೆಯ ಅಕ್ಕ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಶುಕ್ರವಾರ ಬೆಳಗಿನಜಾವ ಐದು ಗಂಟೆ ಸುಮಾರಿಗೆ ಆಕೆ ವಾಸವಿದ್ದ ಮನೆ ಮುಂದೆಯೇ ಯುವತಿಯ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತದೇಹದ ಪಾದದಲ್ಲಿ ಧೂಳು ಇಲ್ಲದಿರುವುದನ್ನನ್ನು ಕಂಡು ಅನುಮಾನಗೊಂಡಿದ್ದರು. ರಾತ್ರಿ ನಾಪತ್ತೆ ಎನ್ನಲಾದ ಯುವತಿಯ ಪಾದಗಳನ್ನು ನೋಡಿದಾಗ ಆಕೆ ಎಲ್ಲಿಯೂ ಹೊರಗಡೆ ಹೋಗಿಲ್ಲ ಎನ್ನುವುದು ಖಚಿತವಾಗಿತ್ತು. ಆದ್ದರಿಂದ ಆಕೆಯ ಮನೆಯ ಅಕ್ಕಪಕ್ಕದಲ್ಲಿಯೇ ಹಂತಕ ಇರಬಹುದು ಎಂಬ ಶಂಕೆ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಅಕ್ಕಪಕ್ಕದ ಮನೆಯವರಿಂದಲೂ ಮಾಹಿತಿ ಕಲೆ ಹಾಕಿದಾಗ, ಯುವತಿಯು…
ಇಡ್ಲಿ ತಯಾರಿಕೆಗೆ ಬಳಸುವ ಬಿಸಿ ನೀರಿನ ಬಾಯ್ಲರ್ ಸ್ಫೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲಿನಲ್ಲಿ ನಡೆದಿದೆ. ಕಿಚನ್ ನಲ್ಲಿ ಕೆಲಸ ಮಾಡುವ ಐಶ್ವರ್ಯ (19) ಬಸಿಕುಮಾರ್ (20) ಕ್ಯಾಶಿಯರ್ ಸಹೋದರ ಕಾರ್ತಿಕ್ (18) ಎಂಬುವರು ಗಾಯಗೊಂಡಿದ್ದಾರೆ. ಏಕಾಏಕಿ ಬಾಯ್ಸರ್ ಸ್ಪೋಟಗೊಂಡ ಪರಿಣಾಮ ಮೂವರೂ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಅಡುಗೆ ಮನೆಯಲ್ಲಿನ ಸಾಮಗ್ರಿಗಳು ಸಂಪೂರ್ಣ ಜಖಂ ಆಗಿವೆ. ಸ್ಥಳಕ್ಕೆ ಜ್ಞಾನಭಾರತಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಆಟೋ ಚಾಲಕನೋರ್ವ ಆಟೋ ರಿಕ್ಷಾದ ಹಿಂಬದಿ ಮಾರಕಾಸ್ತ್ರವನ್ನು ಅಳವಡಿಸಿ ಪುಂಡಾಟ ಮೆರೆದ ಘಟನೆ ನಡೆದಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. ಆಟೋರಿಕ್ಷಾವೊಂದರ ಹಿಂಬದಿಯಲ್ಲಿ ಮಾರಕಾಸ್ತ್ರ ನೋಡಿ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಇದರ ಫೋಟೋವನ್ನು ಥರ್ಡ್ ಐ ಎಂಬ ಟ್ವಿಟರ್ ಖಾತೆಯಲ್ಲಿ ಶುಕ್ರವಾರ ಹಂಚಿಕೊಳ್ಳಲಾಗಿದೆ. ಫೋಟೋದೊಂದಿಗೆ ಇದು ನಕಲಿಯೇ ಅಥವಾ ಅಸಲಿಯೇ ಎಂದು ಬರೆಯಲಾಗಿದೆ. ಸದ್ಯ ಈ ಫೋಟೋ ಸಾವಿರಾರು ಮಂದಿ ನೆಟ್ಟಿಗರ ಕಣ್ಣಿಗೆ ಬಿದ್ದಿದೆ. ಹೊಸಬಸವನಪುರದ ಭಟ್ಟರಹಳ್ಳಿಯಲ್ಲಿ ಈ ಫೋಟೋವನ್ನು ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ಫೋಟೋ ನೋಡಿದ ನೆಟಿಜನ್ ಗರು ಚಾಲಕನ ಉದ್ದೇಶವಾದರೂ ಏನು ಎಂಬುದನ್ನು ಪ್ರಶ್ನಿಸಿದ್ದಾರೆ. ಇಂತಹ ವಸ್ತುಗಳನ್ನು ಹಾಕುವುದರ ಅರ್ಥವೇನು? ಎಂದು ಟಾರ್ಕ್ ನೈಟ್ ಖಾತೆದಾರ ಪ್ರಶ್ನಿಸಿದ್ದಾನೆ.
ರಾಜ್ಯ ಬಿಜೆಪಿಯಲ್ಲಿ ಸದ್ಯ ಸಂಘಟನಾತ್ಮಕವಾಗಿ ಕೆಲ ಹುದ್ದೆಗಳು ಭರ್ತಿಯಾಗಬೇಕಿದೆ. ಅತ್ತ ಕಾಂಗ್ರೆಸ್‌ನಲ್ಲಿ ಒಬ್ಬ ರಾಜ್ಯಾಧ್ಯಕ್ಷ, ಅವರ ಕೈ ಕೆಳಗೆ 5 ಕಾರ್ಯಾಧ್ಯಕ್ಷ ಹುದ್ದೆಯನ್ನು ನೇಮಕ ಮಾಡಲಾಗಿದೆ. ಆ ಮೂಲಕ ಹತ್ತಾರು ಮಂದಿಗೆ ಹುದ್ದೆ ಸೃಷ್ಟಿಸಿ ಅವಕಾಶ ನೀಡುತ್ತಾ, ಅವರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಮ್ಮಲ್ಲೂ ಕೂಡ ಅದೇ ರೀತಿ ಕಾರ್ಯಾಧ್ಯಕ್ಷ ಸ್ಥಾನ ನೇಮಕವಾಗಲಿ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ವಿ. ಸೋಮಣ್ಣ, ರಾಜ್ಯ ಬಿಜೆಪಿ ಘಟಕದಲ್ಲಿ ಸಂಘಟನಾತ್ಮಕವಾಗಿ ಎರಡು ಕಾರ್ಯಾಧ್ಯಕ್ಷ ಸ್ಥಾನ ರಚನೆಯಾದ್ರೆ, ಒಳ್ಳೆಯದು ಎಂದು ಹೇಳುವ ಮೂಲಕ ಸಂಘಟನೆಗೆ ಬಲ ತುಂಬುವ ಮಾತುಗಳನ್ನು ಆಡಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ನನ್ನನ್ನು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎಂದರೆ ಅದನ್ನು ಮುಂದಕ್ಕೆ ನೋಡೋಣ. ಇನ್ನು ಸಾಕಷ್ಟು ಸಮಯವಿದೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ವಿ. ಸೋಮಣ್ಣ, ಲೋಕಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದೆ. ಈಗಲೇ…
ಕೇಂದ್ರ ಸರ್ಕಾರವು ಸರ್ವಾಧಿಕಾರ ನಡೆಸುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಹಿಡಿತಕ್ಕೆ ತೆಗೆದುಕೊಂಡು ತನ್ನ ವಿರೋಧಿ ಪಕ್ಷದ ಸರ್ಕಾರಗಳನ್ನು ಕಟ್ಟಿಹಾಕುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ದೆಹಲಿ ಸುಗ್ರಿವಾಜ್ಞೆಯನ್ನು ತಂದಿದೆ. ದೆಹಲಿಯನ್ನು ಸಂಪೂರ್ಣವಾಗಿ ಗವರ್ನರ್ ಕೈಗಿಡುವ ಮೂಲಕ ರಾಜ್ಯ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸುತ್ತಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಮಂತ್ರಿಗಳನ್ನೇ ರಾಜ್ಯಪಾಲರು ವಜಾ ಮಾಡಿದ್ದಾರೆ. ರಾಜ್ಯಪಾಲರಿಗೆ ಮಂತ್ರಿಗಳನ್ನು ವಜಾಗೊಳಿಸುವ ಹಕ್ಕು ಇಲ್ಲ. ರಾಜಕೀಯ ಇತಿಹಾಸದಲ್ಲೇ ಇಂತಹ ಘಟನೆ ನಡೆದಿರಲಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. 2024ರ ಲೋಕಸಭೆ ಚುನಾವಣೆಗೂ ಮುನ್ನ ಹಾಲಿ ಮುಖ್ಯ ಚುನಾವಣಾ ಆಯುಕ್ತರು ನಿವೃತ್ತರಾಗುತ್ತಿದ್ದಾರೆ. ಅದಕ್ಕೂ ಮೊದಲೇ ತನಗೆ ಬೇಕಾದ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವಂತಹ ಸಂದರ್ಭವನ್ನು ಸೃಷ್ಟಿ ಮಾಡಿಕೊಳ್ಳುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಗಂಭೀರ ಆರೋಪ ಮಾಡಿದ್ದಾರೆ. ಮೊದಲು ಆಯ್ಕೆ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿ, ಪ್ರಧಾನಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರು…
ತಮಿಳುನಾಡಿನ ಶಿಕ್ಷಣ ಸಚಿವ ಅನ್ಸಿಲ್ ಮಹೇಶ್ ಪೊಯ್ಯಮೊಳಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕರ್ನಾಟಕದ ಗಡಿ ಜಿಲ್ಲೆ ಕೃಷ್ಣಗಿರಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದಕ್ಕೆ ಅವರು ಸೇಲಂನಿಂದ ತೆರಳುತ್ತಿದ್ದಾಗ ಸಚಿವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಬೆಂಗಳೂರಿನ ಬೊಮ್ಮಸಂದ್ರದ ಬಳಿ ಇರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸಂಚಾರ ದಟ್ಟಣೆ ಸಮಸ್ಯೆಯೂ ಎದುರಾಗಿತ್ತು. ಕೊನೆಗೂ ಅವರನ್ನು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅನ್ಸಿಲ್ ಮಹೇಶ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚು ಸ್ಥಾನ ಗೆಲ್ಲಲು ವೇದಿಕೆ ಸಿದ್ಧವಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಇದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಜಂಟಿ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಎಲ್ಲಾ ಸಂಸದರುಗಳು ಆಲ್ಲಿಯೇ ಇರುವ ಕಾರಣ, ಬಿ ಎಲ್. ಸಂತೋಷ್ ಎಲ್ಲಾ ಸಂಸದರ ಬಳಿ ಇನ್ ಟು ಒನ್ ಸಭೆ ನಡೆಸುತ್ತಿದ್ದಾರೆ. ಇತ್ತ ಸಂಸದರುಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಇಟ್ಟುಕೊಂಡಿರುವ ವರ್ಚಸ್ಸು, ಕಳೆದ ನಾಲ್ಕುವರೆ ವರ್ಷಗಳಲ್ಲಿ ಮಾಡಿರುವ ಕೆಲಸ ಕಾರ್ಯಗಳು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಡಿರುವ ಸಾಧನೆ. ಹೀಗೆ ಸಾಲು ಸಾಲು ಅಂಶಗಳನ್ನು ಮುಂದಿಟ್ಟುಕೊಂಡು, ಮುಂದಿನ ಲೋಕಸಭಾ ಚುನಾವಣೆಗೆ ಅವರಿಗೆ ಟಿಕೆಟ್ ನೀಡಬಹುದೇ? ಬೇಡವೇ? ಎಂದು ಅಳೆದುತೂಗಿ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ವೈಷಮ್ಯ ಬೆಳೆದು ತಲ್ವಾರ್‌ನಿಂದ ಸ್ನೇಹಿತ ಹಾಗೂ ಆತನ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಶರಣಪ್ಪ ಹಾಗೂ ವಿಜಯ್ ವಿದ್ಯಾಗಿರಿಯ ಎಂಬಿಎ ಕಾಲೇಜ್ ಬಳಿ ನಿಂತಿದ್ದಾಗ ಬೈಕ್ ಮೇಲೆ ಬಂದ ಕೆಲವು ದುಷ್ಕರ್ಮಿಗಳು ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇಬ್ಬರ ತಲೆ ಹಾಗೂ ಕೈಗಳಿಗೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿತ್ತು. ಸ್ಥಳಿಯರು ಇವರಿಬ್ಬರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ವಿಜಯ್ ಎರಡೂ ಕೈಗಳಿಂದ ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನವನಗರ ಪೊಲೀಸರು ತನಿಖೆ ಆರಂಭಿಸಿದಾಗ ಸ್ನೇಹಿತರಿಂದಲೇ ಈ ಹಲ್ಲೆ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ವಿಜಯ್ ಬೇವೂರ್ ಸ್ನೇಹಿತರಾದ ವಿಠ್ಠಲ ಬಂಟನೂರು, ವಿಲಾಸ ಜಾಧವ್, ಬಳಿಗೇರ ಹಾಗೂ ಸಮೀರ್ ಮುಲ್ಲಾ ಎಂಬುವರು ಕ್ರಿಕೆಟ್ ವಿಚಾರಕ್ಕೆ ನಡೆದ ಜಗಳಕ್ಕೆ ಸಿಟ್ಟಾಗಿ ಹಲ್ಲೆ ನಡೆಸಿರುವ ವಿಚಾರ ಗೊತ್ತಾಗಿದೆ. ಶರಣಪ್ಪ…
ಮೈಸೂರು: ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಾಜಿ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವೇಗವಾದ ಸೈಕಲ್ ಚಾಲನೆಯಿಂದ ಮಕ್ಕಳು (Children) ಸೈಕಲ್ ನಿಯಂತ್ರಣವನ್ನು ಕಳೆದುಕೊಂಡಿದ್ದು, ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಾಜಿ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಬಾಲಕ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.