Author: admin

ಬೆಂಗಳೂರು: ಪೈಂಟಿಂಗ್ ಕೆಲಸಕ್ಕೆಂದು ಹೋಗಿ ಮನೆಯಿಂದ ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿ ಉಮೇಶ್‌ ಪ್ರಸಾದ್ ಜಾಧವ (32) ಅವರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಆರೋಪಿ ಕೆಲಸ ಹುಡುಕಿಕೊಂಡು ಬಂದಿದ್ದ. ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳವು ಮಾಡಿ ಊರಿಗೆ ಪರಾರಿಯಾಗಿದ್ದ. ‘ಇತ್ತೀಚೆಗೆ ಪುನಃ ಬೆಂಗಳೂರಿಗೆ ಬಂದಿದ್ದಾಗ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಬಳ ಕಡಿಮೆ ಎಂದು ಕೆಲಸ ಬಿಟ್ಟಿದ್ದು, ಪೈಂಟಿಂಗ್ ಕೆಲಸ ಮಾಡುತ್ತಿದ್ದ. ಪೈಂಟಿಂಗ್ ವೇಳೆ ಮನೆಯಲ್ಲಿ ಆಭರಣವಿಟ್ಟಿರುವ ಜಾಗ ತಿಳಿದುಕೊಳ್ಳುತ್ತಿದ್ದ. ಪೈಂಟಿಂಗ್ ಕೆಲಸ ಅಂತಿಮ ಹಂತದಲ್ಲಿರುವಾಗ, ಚಿನ್ನಾಭರಣ ಕದ್ದುಕೊಂಡು ಪರಾರಿಯಾಗುತ್ತಿದ್ದ. ಸದ್ಯ ಈತನಿಂದ 100 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಂಗಳವಾರ ಸ್ವಾತಂತ್ರೋತ್ಸವ ಪ್ರಯುಕ್ತ ರಜೆ ಇರುವುದರಿಂದ ಸೋಮವಾರವನ್ನು ಅದಕ್ಕೆ ಜೋಡಿಸಿಕೊಂಡು ಸಾಲು ರಜೆ ಹಾಕಿ ಪ್ರವಾಸ, ಊರಿಗೆ ಹೋಗುವವರಿಗೆ ಖಾಸಗಿ ಬಸ್‌ ಗಳ ದರ ದುಬಾರಿ ಆಗಿದೆ. ಶನಿವಾರ, ಭಾನುವಾರ ವಾರದ ರಜೆಗಳಾದರೆ ಮಂಗಳವಾರ ಸ್ವಾತಂತ್ರೋತ್ಸವದ ರಜೆ ಸೋಮವಾರ ಒಂದು ರಜೆ ಹಾಕಿದರೆ ನಾಲ್ಕು ರಜೆಗಳನ್ನು ಒಮ್ಮೆಲೆ ಪಡೆಯಬಹುದು ಎಂದು ಅನೇಕರು ರಜೆ ಹಾಕಿದ್ದಾರೆ. ಆದರೆ, ಶುಕ್ರವಾರವೇ ಬಸ್‌ ಗಳ ದರ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವವರಿಗೆ ಖಾಸಗಿ ಬಸ್‌ ಗಳಲ್ಲಿ 7 700ರಿಂದ 2 1,000ವರೆಗೆ ಇದ್ದ ದರ ಈಗ  1850ರಿಂದ 73, 500ರವರೆಗೆ ಏರಿಕೆಯಾಗಿದೆ. ಮಂಗಳೂರಿಗೆ ತೆ 700ರಿಂದ 1950ರವರೆಗೆ ಇದ್ದಿದ್ದು? 1400-72000ಕ್ಕೇರಿದೆ. ಶಿರಸಿಗೆ 7 700-7900 ಇದ್ದಿದ್ದು  1850-12,150ರವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ದರ ಹೊಳೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.…

Read More

ಬೆಂಗಳೂರು: ಸರ್ಕಾರದ ಮೇಲೆ ಜವಾಬ್ದಾರಿ ಇದೆ. ನಿಮ್ಮ ಪರವಾಗಿ ಇರ್ತೀವಿ ಅಂತ ಗುತ್ತಿಗೆದಾರರಿಗೆ ನಾವು ಹೇಳುವುದಿಲ್ಲ. ಯಾರನ್ನೂ ನಾವು ಎತ್ತಿ ಕಟ್ಟುವ ಕೆಲಸ ಮಾಡುವುದಿಲ್ಲ. ನಮ್ಮ ಸರ್ಕಾರದಲ್ಲಿ ಇಂತ ವ್ಯಕ್ತಿ ಅಂತ ಎಲ್ಲೂ ಹೇಳಿಲ್ಲ. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಹಣಕ್ಕೆ ಡಿಮ್ಯಾಂಡ್ ಇಟ್ಟಿರೋದನ್ನು ಗುತ್ತಿಗೆದಾರರು ನೇರವಾಗಿ ಆಪಾದನೆ ಮಾಡುತ್ತಿದ್ದಾರೆ. ನಮ್ಮ ಮೇಲೆ ಮಾಡಿದ್ದ 40% ಆರೋಪವನ್ನೂ ತನಿಖೆಗೆ ಕೊಡಲಿ. ಇವರ ಕಾಲದಲ್ಲಿ ಆಗುತ್ತಿರುವ ಇರುವ ಆರೋಪಗಳಿಗೂ ತನಿಖೆಗೆ ಮುಂದಾಗಲಿ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಬಿಬಿಎಂಪಿಯ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಒಟ್ಟು 9 ಮಂದಿಗೆ ಗಾಯವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅದರಲ್ಲಿ 2 ಮಹಿಳೆಯರು, 7 ಪುರುಷರಿಗೆ ಗಾಯವಾಗಿದೆ ಎಂಬ ಮಾಹಿತಿ ತಿಳಿದಿದೆ. ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ. ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಯಿತು. ಇನ್ನು ಗಾಯಗೊಂಡವರ ಹೆಸರಿನ ಪಟ್ಟಿ ಕೂಡ ಬಿಡುಗಡೆ ಮಾಡಲಾಗಿದೆ. 1. ಶಿವಕುಮಾರ್, ಮುಖ್ಯ ಅಭಿಯಂತರರು. 2. ಕಿರಣ್, ಕಾರ್ಯಪಾಲಕ ಅಭಿಯಂತರರು. 3. ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು. 4. ವಿಜಯಮಾಲ, ಕಾರ್ಯಪಾಲಕ ಅಭಿಯಂತರರು. 5. ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು. 6. ಸಿರಾಜ್, ಪ್ರಥಮ ದರ್ಜೆ ಸಹಾಯಕರು. 7. ಜ್ಯೋತಿ, ಆಪರೇಟರ್, 8. ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜೆಂಟ್ ಕನ್ಸಲ್ವೆಂಟ್. 9. ಮನೋಜ್, ಗಣಕಯಂತ್ರ ನಿರ್ವಾಹಕರು ಎಂದು ಗುರುತಿಸಲಾಗಿದೆ.

Read More

ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ‘ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ. ‘ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ. ಪಿ. ನಗರ 7ನೇ ಹಂತದಲ್ಲಿ ವಾಸವಿದ್ದ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಸ್ವಾತಂತ್ರ್ಯ ದಿನಾಚರಣೆಯಂದು ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಮ್ಮ ಮೆಟ್ರೋ ಸಂಸ್ಥೆ, ಪೇಪರ್ ಟಿಕೆಟ್ ಪರಿಚಯಿಸಿದೆ. ಅದರಂತೆ, ಲಾಲ್‌ ಬಾಗ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್‌ಸಿಎಲ್, ಲಾಲ್ ಬಾಗ್‌ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ 15ರ ಆಗಸ್ಟ್ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆದಂದು ಲಾಲ್‌ ಬಾಗ್‌ ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ ಗಳನ್ನು ಪರಿಚಯಿಸಲಿದೆ ಎಂದು ತಿಳಿಸಿದೆ. 15 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರುಪಾಯಿಗೆ ನಿಗಧಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಬಿಎಂಆರ್ ಸಿಎಲ್‌ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸುವುದಾಗಿ ಶಾಲಾ ಶಿಕ್ಷಣ ಸಚಿವ ಸಚಿವ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ರಾಜ್ಯಾದ್ಯಂತ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು-495 ಶಾಲೆಗಳಿವೆ. ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿದ ಖದೀಮನೊಬ್ಬ ಸರ ಕಸಿದುಕೊಂಡು ಪರಾರಿಯಾದ ಘಟನೆ ಎನ್‌ಆರ್‌ಐ ಬಡಾವಣೆಯ 5ನೇ ಕ್ರಾಸ್ ನ ಮಾರುತಿ ಪ್ರತೀಕ್ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 9ರ ರಾತ್ರಿ 8.30ರ ವೇಳೆ ಮೊಮ್ಮಗಳ ಜೊತೆ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಫಾಲೋ ಮಾಡಿದ ಸರಗಳ್ಳ, ಹಿಂಬದಿಯಿಂದ ಕೈಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಳೆದಿದ್ದಾನೆ. ಸರ ಎಳೆದ ರಭಸಕ್ಕೆ ವೃದ್ಧ ಕೆಳಗೆ ಬಿದ್ದಿದ್ದಾರೆ. ಖದೀಮ ಸ್ಥಳದಿಂದ ಪರಾರಿಯಾಗಿದ್ದಾನೆ. ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸರಗಳ್ಳನಿಗೆ ಶೋಧ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಪಾವಗಡ: ಬೋಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಪಾವಗಡ ತಾಲ್ಲೂಕಿನ ಕಡಮಲಕುಂಟೆ ಕ್ರಾಸ್ ಬಳಿ ನಡೆದಿದ್ದು, ಇಬ್ಬರು ಬೈಕ್ ಸವಾರರು ಬಲಿಯಾಗಿ, ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಪರಾರಿಯಾದ ವಾಹನವನ್ನು ಪೊಲೀಸರು ನಾಗಲಮಡಿಕೆ ಬಳಿ ಸೆರೆ ಹಿಡಿದಿದ್ದಾರೆ. ಬೈಕ್ ಅಪಘಾತಕ್ಕೆ ಬಲಿಯಾದವರು ಆಂಧ್ರಪ್ರದೇಶದ ಚಿನ್ನಕೋಟಪಲ್ಲಿಗೆ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ  8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

‘ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಕೊಲೆ ಪ್ರಕರಣದ ಹಿಂದಿನ 10 ವರ್ಷಗಳಲ್ಲಿ ನೂರಾರು ಅಸಹಜ ಸಾವಿನ ಪ್ರಕರಣಗಳು ವರದಿಯಾಗಿವೆ. ಈ ಎಲ್ಲ ಪ್ರಕರಣಗಳ ಸಮಗ್ರ ತನಿಖೆಗೆ ಕಾನೂನಾತ್ಮಕ ಹೋರಾಟ ಮಾಡಲಾಗುವುದು’ ಎಂದು ಪ್ರಗತಿಪರ ಸಂಘಟನೆಗಳ ಪ್ರಮುಖರು ತಿಳಿಸಿದರು. ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ದ್ರಾವಿಡ ಸಂಘದ ಅಧ್ಯಕ್ಷ ಅಗ್ನಿ ಶ್ರೀಧರ್, ‘ಸೌಜನ್ಯಾ ಪ್ರಕರಣ ಧರ್ಮಸ್ಥಳದ ಗ್ರಾಮಕ್ಕೆ ಮಾತ್ರ ಸೀಮಿತವಾಗಿಲ್ಲ. ಸೌಜನ್ಯಾ ರಾಜ್ಯದ ಎಲ್ಲ ಮನೆಗಳ ಮಗಳಾಗಿದ್ದಾಳೆ. ಈ ಪ್ರಕರಣದ ತಾರ್ಕಿಕ ಅಂತ್ಯಕ್ಕೆ ಕಾನೂನಾತ್ಮಕ ಹೋರಾಟ ನಮ್ಮ ಮುಂದಿರುವ ಆಯ್ಕೆ, ಈ ಪ್ರಕರಣದ ಬಳಿಕ ಅಲ್ಲಿ ಅಸಹಜ ಮರಣ ವರದಿಯಾಗಿಲ್ಲ. ಆದ್ದರಿಂದ, ಇದೊಂದೇ ಪ್ರಕರಣದ ಮರು ತನಿಖೆಯ ಬದಲು, ಅಲ್ಲಿ ಹಿಂದಿನ 10 ವರ್ಷಗಳ ಕಾಲ ನಡೆದ ಎಲ್ಲ ಅಸಹಜ ಮರಣ ಪ್ರಕರಣಗಳ ತನಿಖೆ ನಡೆಯಬೇಕು. ಆಗ ನಿಜವಾದ ಅಪರಾಧಿ ಯಾರೆಂಬುದು ತಿಳಿಯುತ್ತದೆ. ಹೈಕೋರ್ಟ್‌ನಲ್ಲಿ ಮುಂದಿನ 15 ದಿನಗಳ ಒಳಗೆ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು’ ಎಂದು ಹೇಳಿದರು. ನಮ್ಮತುಮಕೂರು.ಕಾಂನ…

Read More