Subscribe to Updates
Get the latest creative news from FooBar about art, design and business.
- ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
- ತುಮಕೂರು | ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
Author: admin
ಬಿಬಿಎಂಪಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ನೌಕರರು ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಬೆಂಕಿ ಅವಘಡದಲ್ಲಿ ಬಿಬಿಎಂಪಿ ನೌಕರರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಸಂಬಂಧ ಗಾಯಾಳುಗಳ ಆರೋಗ್ಯ ವಿಚಾರಿಸಲು ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಬಂದಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಸಿಎಂ ಮಾಹಿತಿ ಪಡೆದರು. ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಬೆಂಕಿ ಬಿದ್ದಿದೆ: ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಈ ಅವಘಡ ಕುರಿತಂತೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದಿದೆ ಎಂದು ಹೇಳುತ್ತಿದ್ದಾರೆ. ಆಕಸ್ಮಿಕ ಬೆಂಕಿಯಿಂದ ಕೆಲವರಿಗೆ ಗಾಯವಾಗಿದೆ. ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಬೆಂಕಿ ಬಿದ್ದಿದೆ. ನಾವು ಅಲ್ಲಿಗೆ ಹೋಗಿ ನೋಡಿದ ಮೇಲೆ ಎಲ್ಲಾ ತಿಳಿಯುತ್ತದೆ ಎಂದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149…
ಬೆಂಗಳೂರು: ವಸಂತ ನಗರದಲ್ಲಿರುವ ಶಾಂಗ್ರಿಲಾ ಪಂಚತಾರಾ ಹೋಟೆಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಹೈಗೌಂಡ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಹೋಟೆಲ್ ನ ಇ- ಮೇಲ್ ಗೆ ಆಗಸ್ಟ್ 8ರಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕವೇ ಹೋಟೆಲ್ ನ ಪ್ರತಿನಿಧಿ ಶುಕ್ರವಾರ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಹೋಟೆಲ್ ನಲ್ಲಿ ತಪಾಸಣೆ ಸಹ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಬೆಂಗಳೂರು ಮಾತ್ರವಲ್ಲದೇ ದೇಶದ ಹಲವೆಡೆ ಇರುವ ಶಾಂಗ್ರಿಲಾ ಹೋಟೆಲ್ ಗಳ ಇ-ಮೇಲ್ ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ದೂರುದಾರ ತಿಳಿಸಿದ್ದಾರೆ. ಸಾಮೂಹಿಕವಾಗಿ ಸಂದೇಶ ಕಳುಹಿಸಿ ಹೋಟೆಲ್ ನವರಿಗೆ ಬೆದರಿಕೆಯೊಡ್ಡಿರುವುದು ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಆನೆ ದಂತಗಳನ್ನು ಮಾರಲು ಯತ್ನಿಸುತ್ತಿದ್ದ ಆರೋಪದಡಿ ಶ್ರೀಶೈಲ ಎಂಬಾತನನ್ನು ಆರ್. ಎಂ. ಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಜೆ. ಸಿ. ನಗರ ನಿವಾಸಿ ಶ್ರೀಶೈಲ, ಉದ್ಯಮಿಯೊಬ್ಬರ ಮನೆಯಲ್ಲಿ ಉದ್ಯಾನ ನಿರ್ವಹಣೆ ಕೆಲಸ ಮಾಡುತ್ತಿದ್ದ. ಸ್ನೇಹಿತ ಸಮೀವುದ್ದೀನ್ ನೀಡಿದ್ದ ದಂತವನ್ನು ವರ್ಷದಿಂದ ಮನೆಯಲ್ಲಿಟ್ಟುಕೊಂಡಿದ್ದ’ ಎಂದು ಪೊಲೀಸರು ಹೇಳಿದರು. ‘ಆರೋಪಿ ಯಶವಂತಪುರ ಕೈಗಾರಿಕೆ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ಆ. 10ರಂದು ನಿಂತಿದ್ದು, ಚೀಲದಲ್ಲಿ ಆನೆ ದಂತಗಳಿದ್ದವು. ಸ್ಥಳೀಯರೊಬ್ಬರು ಠಾಣೆಗೆ ಮಾಹಿತಿ ನೀಡಿದ್ದರು. ಈತನಿಂದ 7. 42 ಕೆ. ಜಿ ತೂಕದ 5 ದಂತಗಳನ್ನು ಜಪ್ತಿ ಮಾಡಲಾಗಿದೆ’ ಎಂದರು. ‘ಆನೆ ದಂತಗಳನ್ನು ನೀಡಿದ್ದ ಪ್ರಮುಖ ಆರೋಪಿ ಸಮೀವುದ್ದೀನ್ ವಾಪಸು ಒಯ್ದಿರಲಿಲ್ಲ. ದಂತಗಳನ್ನು ಎಲ್ಲಿಂದ ತರಲಾಗಿತ್ತು ಎಂಬುದು ಸಮೀವುದ್ದೀನ್ ಬಂಧನದ ಬಳಿಕವೇ ತಿಳಿಯಲಿದೆ’ ಎಂದು ಪೊಲೀಸರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe…
ಕಾಮಗಾರಿಗಳ ಕುರಿತು 4 ತಂಡ ರಚಿಸಿ ತನಿಖೆ ಮಾಡಿಸುತ್ತಿದ್ದೇವೆ ಎಂದು ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಗುಣಮಟ್ಟದ ಕಾಮಗಾರಿ ಆಗಿದೆಯಾ ಇಲ್ವಾ ಗೊತ್ತಾಬೇಕು. ಬೆಂಗಳೂರಿನಲ್ಲಿ 4 ತಂಡ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದೇವೆ. ವರದಿ ಕೊಟ್ಟ ಬಳಿಕ ತಪ್ಪು ಮಾಡಿಲ್ಲ ಅಂದ್ರೆ ಬಿಲ್ ಕೊಡುತ್ತೇವೆ. ಈ ರಾಜ್ಯವನ್ನು ಬಿಜೆಪಿಯವರು ಹಾಳು ಮಾಡಿದ್ದಾರೆ ಎಂದರು. ನಾವು 135 ಸ್ಥಾನ ಗೆದ್ದಿದ್ದಕ್ಕೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಎಷ್ಟೇ ದುಡ್ಡು ಖರ್ಚು ಮಾಡಿದರೂ ಬಿಜೆಪಿಯವರು ಗೆಲ್ಲಲಿಲ್ಲ. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುವ ಗುರಿ ಇದೆ ಎಂದು ಬೆಳಗಾವಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ರಾತ್ರಿ ಕಾಣೆಯಾಗಿದ್ದಾಳೆಂದು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬೆಳಗೆದ್ದು ನೋಡುವಾಗ ಮನೆ ಮುಂದೆಯೇ ಯುವತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿಯನ್ನು ಮಹಾನಂದ (21) ಎಂದು ಗುರುತಿಸಲಾಗಿದೆ. ಕಲಬುರಗಿ ಮೂಲದವಳಾದ ಈಕೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು. ಈ ಘಟನೆ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್ ನಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೀನ್ ಆಫ್ ಕ್ರೈಮ್ ಪರಿಶೀಲಿಸುತ್ತಿರುವ ಪೊಲೀಸ್ ಅಧಿಕಾರಿಗಳು ಪರಿಶೀಲಿಸಿದ್ದು, ವಿಷವುಣಿಸಿ ಕೊಲೆ ಮಾಡಿ ತಂದು ದುಷ್ಕರ್ಮಿಗಳು ಮನೆ ಮುಂದೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮರ್ಡರ್ ಆಗಿರೋದು ಕನ್ಫರ್ಮ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಯಚೂರು: ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಬಸನಗೌಡ (34) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಇವರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಸ್ಕಿ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಸನಗೌಡ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಲಗಿದಲ್ಲಿಯೇ ಸಾವನ್ನಪ್ಪಿದ್ದಾರೆ. ಬಿಪಿ, ಶುಗರ್, ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದ ಬಸನಗೌಡ ಏಕಾಏಕಿ ಸಾವನ್ನಪ್ಪಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾದ ಬಸನಗೌಡ ಅವರ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೂ ಆಹ್ವಾನ ನೀಡಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಒಂದೊಂದು ವಿಭಾಗದಲ್ಲಿ ಒಂದೊಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರ್ಗಿಯಲ್ಲಿ ಗೃಹ ಜ್ಯೋತಿ, ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ, ಈಗ ಬೆಳಗಾವಿಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಯುವನಿಧಿ ಯೋಜನೆಯನ್ನು ಡಿಸೆಂಬರ್ ಇಲ್ಲವೇ ಜನವರಿಯಲ್ಲಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಲು ಅರ್ಹರಿರುವ 1 ಕೋಟಿ 33 ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 1 ಕೋಟಿ 6 ಲಕ್ಷ ನೊಂದಣಿಯಾಗಿದೆ.…
ಡಿ.ಕೆ.ಶಿವಕುಮಾರ್ ವಿರುದ್ಧ 15% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ನಾಯಕರು ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಹೋಗಿ ಧ್ವನಿ ಎತ್ತಬೇಕೋ ಅಲ್ಲಿ ಇವರು ಮಾತಾಡುತ್ತಿಲ್ಲ. ಮೊದಲು ಬಿಜೆಪಿಯವರು ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಿ. ಗುತ್ತಿಗೆದಾರರು ಕಮಿಷನ್ ಕೇಳಿದ್ದಾರೆ ಅಂತಾ ಹೇಳಿಲ್ಲ. ಬಾಕಿ ಬಿಲ್ ಪಾವತಿ ವಿಳಂಬ ಆಗ್ತಿದೆ ಅಂತಾ ಮಾತ್ರ ಹೇಳಿದ್ದಾರೆ. ಕೆಲಸ ಆಗಿದ್ರೆ ಹಣ ಬಿಡುಗಡೆ ಮಾಡೋದಾಗಿ ಸಿಎಂ ಹೇಳಿದ್ದಾರೆ. ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗೆ SCP, TSP ಹಣ ಬಳಕೆ ಆರೋಪ ವಿಚಾರಕ್ಕೆ ಸಂಬಂಧಿಸಿ SCP, TSP ಬಗ್ಗೆ ಬಿಜೆಪಿಯವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಬಿಜೆಪಿ ಅವಧಿಯಲ್ಲಿ SCP-TSP $10 ಸಾವಿರ ಕೋಟಿ ಬಳಕೆ ಆಗಿತ್ತು. ನಾವು ಗ್ಯಾರಂಟಿ ಯೋಜನೆಗೆ ಅದನ್ನೇ ಬಳಸಿಕೊಳ್ತಿದ್ದೇವೆ. ಕಾನೂನು ಬಿಟ್ಟು…
ಆನ್‌ಲೈನ್ ಮೂಲಕ ಮತ್ತೊಂದು ರೀತಿಯ ವಂಚನೆ ಇದೀಗ ಬೆಳಕಿಗೆ ಬಂದಿದ್ದು ವ್ಯಕ್ತಿಗೆ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಕಳುಹಿಸಿ 5.48 ಲಕ್ಷ ರೂ. ವಂಚನೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಣ್ಣನ್ (52) ಹಣ ಕಳೆದುಕೊಂಡವರು. ಮೈಸೂರು ಯಾದವಗಿರಿ ಬಡಾವಣೆಯ ನಿವಾಸಿಯಾಗಿರುವ ಕಣ್ಣನ್ ಅವರಿಗೆ ವಿದ್ಯುತ್ ಬಿಲ್ ಬಾಕಿ ಇದೆ ಪಾವತಿಸುವಂತೆ ದೂರವಾಣಿ ಕರೆ ಬಂದಿದೆ. ವಂಚಕರು ನಂತರ ಲಿಂಕ್ ಕಳುಹಿಸಿ ಹಣ ಪಾವತಿಸುವಂತೆ ಸೂಚನೆ ನೀಡಿದ್ದಾರೆ. ಲಿಂಕ್ ಮೂಲಕ ಸಂಪೂರ್ಣ ಮಾಹಿತಿ ಪಡೆದು ಕಣ್ಣನ್ ಅವರ ಖಾತೆಯಲ್ಲಿದ್ದ 5,48,149 ರೂಪಾಯಿಯನ್ನ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಕುರಿತು ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ವಿಭಿನ್ನ ವೇಷಭೂಷಣ ಧರಿಸಿ ಸ್ಟಂಟ್ ಮಾಡಿ ಒನ್ ವೇನಲ್ಲಿ ನುಗ್ಗಿ ಸಂಚಾರ ನಿಯಮ ಉಲ್ಲಂಘಿಸಿದ್ದ ಬೈಕ್ ರೈಡರ್ ನನ್ನು ಪತ್ತೆ ಹಚ್ಚಿರುವ ಯಲಹಂಕ ಪೊಲೀಸರು ದಂಡ ವಿಧಿಸಿದ್ದಾರೆ. ಅಲ್ಲದೆ, ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದಾರೆ. ಮೊಹಮ್ಮದ್ ಜಾವೀದ್ ಬೈಕ್ ನಲ್ಲಿ ಸ್ಟಂಟ್ ಮಾಡಿ ಸಿಕ್ಕಿಬಿದ್ದಿರುವ ಬೈಕ್ ರೈಡರ್. ಮೊಹಮ್ಮದ್ ಜಾವೀದ್ ವೃತ್ತಿಯಲ್ಲಿ ಯೂಟ್ಯೂಬರ್ ಆಗಿದ್ದು, ಈತನಿಗೆ ಆರು ಲಕ್ಷ ಫಾಲೋವರ್ಸ್‌ಗಳಿದ್ದಾರೆ. ನಿರ್ಗತಿಕರಿಗೆ ಹಣ್ಣು-ಹಂಪಲು ನೀಡುತ್ತಿದ್ದ. ಅದನ್ನ ತನ್ನ ಯೂಟ್ಯೂಬ್ ಪೇಜ್ ನಲ್ಲಿ ಅಪ್ ಲೋಡ್ ಮಾಡುತ್ತಿದ್ದ. ರೀಲ್ಸ್ ಚಟಕ್ಕೆ ಬಿದ್ದಿದ್ದ ಈತ ಬೊಂಬೆಯ ಮುಖವಾಡ ಧರಿಸಿ ಕ್ರೇಜಿಯಾಗಿ ವಾಹನ ಚಾಲನೆ ಮಾಡುತ್ತಿದ್ದ. ಇತ್ತೀಚೆಗೆ ಕೆಂಪೇಗೌಡ ಏರ್‌ಪೋರ್ಟ್ ರಸ್ತೆಯಲ್ಲಿ ಸಿಗ್ನಲ್ ಜಂಪ್ ಮಾಡಿ ಬೈಕ್ ಗೆ ಕಾರು ಡಿಕ್ಕಿ ಹೊಡೆದಿತ್ತು. ಬಳಿಕ ಕಾರನ್ನ ಹಿಂಬಾಲಿಸಿದ ಜಾವೀದ್, ಕಾರಿನ ಕನ್ನಡಿ ಒಡೆದು ಹಾಕಿ ಓನ್ ವೇನಲ್ಲಿ ಬೈಕ್ ತಿರುಗಿಸಿ ಎಸ್ಕೆಪ್ ಆಗಿದ್ದ. ಈತನ ಪ್ರತಿಯೊಂದು ಸ್ಟಂಟ್ ಗಳನ್ನ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್…