Subscribe to Updates
Get the latest creative news from FooBar about art, design and business.
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
Author: admin
ಬಂಡೀಪುರ ಅಭಯಾರಣ್ಯಕ್ಕೆ ರಾಜ್ಯದಲ್ಲೇ ನಂಬರ್ 1 ಸ್ಥಾನ ಸಿಕ್ಕಿದೆ. ಹುಲಿ ಸಂಖ್ಯೆಯಲ್ಲಿ ಅಗ್ರಜ ಸ್ಥಾನ ಪಡೆದಿದ್ದ ಬಂಡೀಪುರಕ್ಕೆ ಮತ್ತೊಂದು ಹೆಮ್ಮೆಯ ಮುಕುಟ ಸಿಕ್ಕಿದೆ. ಹುಲಿ ಆಯ್ತು. ಈಗ ಆನೆಗಳ ಸಂಖ್ಯೆಯಲ್ಲಿಯೂ ಬಂಡೀಪುರಕ್ಕೆ ನಂಬರ್ 1 ಸ್ಥಾನ ಸಿಕ್ಕಿದೆ. ರಾಜ್ಯದಲ್ಲೇ ಅತಿ ಹೆಚ್ಚು ಆನೆಗಳು ಹೊಂದಿರುವ ಪ್ರದೇಶ ಎಂಬ ಖ್ಯಾತಿ ಪಡೆದಿದೆ. ರಾಜ್ಯದಲ್ಲಿ ಒಟ್ಟು ಆನೆಗಳ ಸಂಖ್ಯೆ ಬರೋಬ್ಬರಿ 6,395. ಬಂಡೀಪುರ ಒಂದರಲ್ಲೇ 1116 ಆನೆಗಳು ಪತ್ತೆಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಗುತ್ತಿಗೆದಾರರು 3-4 ಸಚಿವರ ಮೇಲೆ ಕಮಿಷನ್ ಆರೋಪ ಮಾಡ್ತಿದ್ದಾರೆ. ಗ್ಯಾರಂಟಿ ಹೆಸರೇಳಿ ಜನರ ಕಿವಿಗೆ ಹೂವಿಟ್ಟು ಅಧಿಕಾರಕ್ಕೆ ಬಂದರು ಎಂದು ಬೆಂಗಳೂರಿನಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ರಾಜ್ಯ ಜನರಿಗೆ ಮೋಸ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನತೆ ಈ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಯಾರೇ ಲಂಚ ಕೇಳಿದ್ರೂ ನನ್ನ ಗಮನಕ್ಕೆ ತನ್ನಿ ಅಂತಾ ಡಿಕೆ ಹೇಳಿದ್ರು. ಡಿಕೆ ಗಮನಕ್ಕೆ ತಂದ್ರೆ ಯಾವ ಪರಿಸ್ಥಿತಿ ಬರುತ್ತೆ ಅಂತಾ ಅರ್ಥವಾಗಿದೆ. ತಮ್ಮ ಜೇಬು ತುಂಬಿಸಿ, ಕಾಂಗ್ರೆಸ್ ನವರ ಜೇಬನ್ನೂ ತುಂಬುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಪ್ರತ್ಯೇಕ ಸೈಬರ್ ನೀತಿ ರೂಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ, ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ಉಷಾ ಕದರಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಎಸ್. ಟಿ ನಾಗಮಣಿ ಲೋಕಾಯುಕ್ತ ಟ್ರ್ಯಾಪ್ ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿ ನಿರ್ಣಯ ಮಾಡಲು ನಿರ್ಧಾರ ಮಾಡಲಾಗಿದೆ. ಪೋಕ್ಸೋ ಕೇಸಿನಲ್ಲಿ ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಹೂವಿನ ಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎನ್ ಹಳ್ಳಿಗುಡಿ ಅವರನ್ನು ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್…
ಅಪಾರ್ಟ್‌ಮೆಂಟ್ ಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಘಟಕ (ಎಸ್‌ಟಿಪಿ) ನಿರ್ಮಾಣವನ್ನು ಕಡ್ಡಾಯಗೊಳಿಸಬೇಕು. ಕೊಳಚೆ ನೀರನ್ನು ಶುದ್ದೀಕರಿಸಿ ಕೆರೆಗಳಿಗೆ ಹರಿಸಬೇಕು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಇಂಗು ಗುಂಡಿಗಳನ್ನು ನಿರ್ಮಿಸಬೇಕು. ಬ್ಯಾಂಡ್ ಬೆಂಗಳೂರು ಯೋಜನೆಯಡಿ ‘ಜಲಸುರಕ್ಷಾ ಬೆಂಗಳೂರು’ ವಿಷಯಕ್ಕೆ ಸಂಬಂಧಿಸಿದಂತೆ ದಯಾನಂದ ಸಾಗರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ವಿಚಾರ ಸಂಕಿರಣದಲ್ಲಿ ತಜ್ಞರು ನೀಡಿದ ಸಲಹೆಗಳಿವು. ಅಂತರ್ಜಲದ ಯಥೇಚ್ಛ ಬಳಕೆಯನ್ನು ನಿಯಂತ್ರಿಸಬೇಕು ಹಾಗೂ ನೀರಿನ ಮಿತ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ನೀರು ಪೂರೈಕೆಯ ಮೂಲವಾಗಿ ನಗರದ ಕೆರೆಗಳನ್ನು ಬಳಸಬೇಕು. ಅನಧಿಕೃತವಾಗಿ ಕೊಳವೆಬಾವಿ ಕೊರೆಯುವುದನ್ನು ತಡೆಯುವ ಜತೆಗೆ ಅಂತಹವರ ಮೇಲೆ ದುಪ್ಪಟ್ಟು ದಂಡ ವಿಧಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಿಟ್ ಕಾಯಿನ್ (ಬಿಟಿಸಿ) ಅಕ್ರಮ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಹ್ಯಾಕರ್ ಶ್ರೀಕೃಷ್ಣ ಹಾಗೂ ಇತರರ ವಿರುದ್ಧ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಇದೀಗ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳಿಂದ ಜಪ್ತಿ ಮಾಡಲಾಗಿದ್ದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್, ಹಾರ್ಡ್‌ಡಿಸ್ಕ್, ಪೆನ್ ಡ್ರೈವ್ ಗಳಲ್ಲಿರುವ ಮಾಹಿತಿಯನ್ನು ತಿರುಚಿರುವ ಸಿಸಿಬಿ ಅಧಿಕಾರಿಗಳು ಹಾಗೂ ಇತರರು, ಸಾಕ್ಷ್ಯ ನಾಶಪಡಿಸಿ ಅಪರಾಧ ಎಸಗಿದ್ದಾರೆ ಎಂದು ಆರೋಪಿಸಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಡಿವೈಎಸ್ಪಿ ಕೆ. ರವಿಶಂಕರ್ ಅವರು ಕಾಟನ್ ಪೇಟೆ ಠಾಣೆಗೆ ಆಗಸ್ಟ್ 9ರಂದು ದೂರು ನೀಡಿದ್ದಾರೆ. ‘ಕೆಂಪೇಗೌಡ ನಗರ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ, ತಂಡದಲ್ಲಿದ್ದ ಸಿಸಿಬಿ ಅಧಿಕಾರಿಗಳು ಹಾಗೂ ಇತರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆಯು ಎಸ್ ಐಟಿ ಅಧಿಕಾರಿಗಳಿಗೆ ವರ್ಗಾವಣೆ ಆಗಲಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ದೇಹಕ್ಕೆ ಹೊಂದಿಕೆಯಾಗದ ಮೂತ್ರ ಪಿಂಡದ ಕಸಿ ಮಾಡಿಸಿಕೊಂಡು ನಂತರ ಮೂತ್ರನಾಳದ ಸೋಂಕಿಗೆ ಒಳಗಾಗಿದ್ದ 51 ವರ್ಷದ ಒಮಾನ್ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರು ರೋಬೋಟ್ ಸಹಾಯದಿಂದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮೂತ್ರಶಾಸ್ತ್ರ ತಜ್ಞ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಡಾ. ಮೋಹನ್ ಕೇಶವಮೂರ್ತಿ ಅವರ ತಂಡ ಶಸ್ತ್ರಚಿಕಿತ್ಸೆ ನೆರವೇರಿಸಿತು. ಈ ಕುರಿತು ಮಾತನಾಡಿರುವ ಡಾ. ಮೋಹನ್ ಕೇಶವಮೂರ್ತಿ, 51 ವರ್ಷದ ರೇಷ್ಮಾ ಒಂದು ವರ್ಷದ ಹಿಂದೆ ಕೆಲ ಕಾರಣದಿಂದ ಮೂತ್ರಪಿಂಡ ಕಳೆದುಕೊಂಡು, ಪಾಕಿಸ್ತಾನದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಆದರೆ, ಇದು ಇವರ ದೇಹ ಹಾಗೂ ರಕ್ತಕ್ಕೆ ಹೊಂದಿಕೆಯಾಗಿರಲಿಲ್ಲ. ಮೂತ್ರನಾಳ ಕಸಿ ಮಾಡುವಾಗ ಮೂತ್ರನಾಳದ ಸೈಂಟಿಂಗ್ ಅನ್ನು (ಡಬಲ್ ಜೆ ಸ್ಟೆಂಟ್) ಅಳವಡಿಸಲಾಗಿತ್ತು. ಮೂತ್ರವಿಸರ್ಜನೆಗೆಂದು ಪ್ಲಾಸ್ಟಿಕ್ ಟ್ಯೂಬ್ ಅಳವಡಿಸಲಾಗಿತ್ತು. ಇದು ತೀರ ತೆಳುವಾದ್ದರಿಂದ ಕೇವಲ ಒಂದು ವರ್ಷದಲ್ಲಿಯೇ ಆ ಡಬಲ್ ಜೆ ಸ್ಟಂಟ್ ಮುರಿದಿತ್ತು. ಮೊದಲೇ ಹೊಂದಿಕೆಯಾಗದ ಮೂತ್ರಪಿಂಡವಾದ್ದರಿಂದ ಸ್ಟಂಟ್ ಮುರಿದು, ರೇಷ್ಮಾ ಅವರಿಗೆ ಮೂತ್ರಕೋಶದ ಸೋಂಕು ಹರಡಲು…
ಬೆಂಗಳೂರು: ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ನಗರದ ನಿವಾಸಿ ಶ್ರೀದೇವಿ ತೀವ್ರ ಹಲ್ಲೆಗೊಳಗಾಗಿದ್ದು, ಈಕೆ ನೀಡಿದ ದೂರಿನ ಮೇರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಜೀರ್, ಈತನ ಪುತ್ರ ಸದ್ದಾಂ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಜಾಮೀನು ಪಡೆದು ಆರೋಪಿಗಳು ಹೊರಬಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದಲ್ಲಿ ಬರೋಬ್ಬರಿ 1,300 ಅನಧಿಕೃತ ಶಾಲೆಗಳಿದ್ದರೂ ಅಗತ್ಯ ಕ್ರಮ ಕೈಗೊಳ್ಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಕೇಳಿದ ಬೆನ್ನಲ್ಲೇ ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳನ್ನು ಗುರುತಿಸಿ ಆಗಸ್ಟ್ 14ರ ಒಳಗಾಗಿ ನಿಯಮಾನುಸಾರ ಮುಚ್ಚಿಸಬೇಕು. ಜತೆಗೆ ಆ.16 ಒಳಗಾಗಿ ದೃಢೀಕೃತ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಜ್ಞಾಪನಾ ಪತ್ರ ಹೊರಡಿಸಿರುವ ಅವರು, ನೋಂದಣಿ, ಅನುಮತಿ ಪಡೆಯದೆ ನಡೆಸುತ್ತಿರುವ ಶಾಲೆಗಳನ್ನು ನಿಯಮಾನುಸಾರ ಮುಚ್ಚಬೇಕು. ಆ.14ರ ಒಳಗಾಗಿ ಮುಚ್ಚಿ ಪತ್ರಿಕಾ ಪ್ರಕಟಣೆ ನೀಡಬೇಕು. ಜತೆಗೆ ನೋಂದಣಿ ಇಲ್ಲದೆ ಅನಧಿಕೃತವಾಗಿ ಉನ್ನತೀಕರಿಸಿದ ತರಗತಿಗಳನ್ನು ಆಗಸ್ಟ್ 14ರೊಳಗೆ ರದ್ದು ಪಡಿಸಬೇಕು. ಜತೆಗೆ ರಾಜ್ಯ ಪಠ್ಯಕ್ರಮದಲ್ಲಿ ಬೋಧಿಸಲು ಅನುಮತಿ ಪಡೆದು ಅನಧಿಕೃತವಾಗಿ ಕೇಂದ್ರ ಪಠ್ಯದಲ್ಲಿ ಬೋಧಿಸುತ್ತಿರುವವರು, ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆ ಹೊಂದಿದ ಬಳಿಕವೂ ರಾಜ್ಯ ಪಠ್ಯಕ್ರಮ ಮುಂದುವರೆಸುತ್ತಿರುವವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಕೋಣನಕುಂಟೆಯಲ್ಲಿ ನಡೆದ ಒವೈಎಲ್ ಬಾತ್ ಸೋಪ್ (ಪ್ಲಾಂಟ್ ಸೈನ್ಸ್) ಮಿಸೆಸ್ ಇಂಡಿಯಾ ಕರ್ನಾಟಕ 2023 ಗ್ರಾಂಡ್ 7ನೇ ಆವೃತ್ತಿಯ ರಾಜ್ಯ ಫೈನಲ್ ನಲ್ಲಿ ಸ್ನೇಹಾ ಶ್ರೀಧರ್ ಕಿರೀಟ ಮುಡಿಗೇರಿಸಿಕೊಂಡರು. ಗೋಡಂಬಿ ಶ್ರೀಧರ್ ಅವರ ಮಗಳಾದ ಸ್ನೇಹಾ ಶ್ರೀಧರ್ ಬಿ. ಕಾಂ ಉತ್ತೀರ್ಣರಾದ ಮೇಲೆ ತಂದೆಯ ಕೇಟರಿಂಗ್ ಸರ್ವೀಸ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಹೋಮಿಯೋಪಥಿ ವೈದ್ಯ ರೋಹಿತ್ ಶ್ರೀವತ್ಸನ್ ಜತೆಗೆ ಮದುವೆಯಾದ ಮೇಲೆ ಬದುಕಿನ ಚಿತ್ರಣ ಇನ್ನೊಂದು ರೀತಿ ಬದಲಾಯಿಸಿಕೊಂಡರು. ವಿಕ್ಟರಿ ಹೋಮಿಯೊಪಥಿ ಸ್ಪೆಷಾಲಿಟಿ ಕ್ಲಿನಿಕ್ ನ ಆಡಳಿತ ವ್ಯವಹಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿ ವಹಿಸಿಕೊಂಡರು. ಜೊತೆಗೆ ವೈದ್ಯಕೀಯ ಅಭ್ಯಾಸ ನಡೆಸಿದರು. ಎರಡು ಮಕ್ಕಳ ತಾಯಿ ಆಗಿರುವ ಸ್ನೇಹಾ ಈಗ ಮಿಸೆಸ್ ಇಂಡಿಯಾ ಕರ್ನಾಟಕ 2023 ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ 760 ಲಕ್ಷ ವೆಚ್ಚದಲ್ಲಿ 1,324 ಚದರ ಅಡಿ ವಿಸ್ತೀರ್ಣದಲ್ಲಿ ನೂತನವಾಗಿ ನಿರ್ಮಿಸಿರುವ ಟಿವಿ ಸ್ಟುಡಿಯೊವನ್ನು ಲೋಕಾರ್ಪಣೆ ಮಾಡಲಾಯಿತು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಸ್ಟುಡಿಯೋ ಉದ್ಘಾಟಿಸಿದರು. ‘ಮಾಧ್ಯಮ ಸಂಸ್ಥೆಗಳಿಗೆ ಅಗತ್ಯವಿರುವ ತಾಂತ್ರಿಕತೆ ಪರಿಣತಿಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಅದಕ್ಕೆ ಬೇಕಾದ ಎಲ್ಲ ಸೌಕರ್ಯಗಳು ಈ ನೂತನ ಸ್ಟುಡಿಯೊದಲ್ಲಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು. ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಎಂ. ಸಿ. ಸುಧಾಕರ್ ಲ್ಯಾಪ್‌ಟಾಪ್ ವಿತರಣೆ ಮಾಡಿದರು. ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್. ಎಂ., ಕುಲ ಸಚಿವರಾದ ಶೇಕ್ ಲತೀಫ್, ಮೌಲ್ಯಮಾಪನ ವಿಭಾಗದ ಕುಲಸಚಿವ ಸಿ. ಶ್ರೀನಿವಾಸ್, ಹಣಕಾಸು ಅಧಿಕಾರಿ ಅಜಿತ್ ಕುಮಾರ್ ಹೆಗ್ಡೆ, ವಿದ್ಯುನ್ಮಾನ ವಿಭಾಗದ ಸಂಯೋಜಕಿ ರಾಜೇಶ್ವರಿ, ಸಹ ಪ್ರಾಧ್ಯಾಪಕರಾದ ವಾಹಿನಿ, ಟಿ. ಶ್ರೀಪತಿ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…