Author: admin

ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ. ಸಚಿವರ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕರು ಮುಖ್ಯಮಂತ್ರಿಗಳಿಗೆ ಬರೆದಿದ್ದರು ಎನ್ನಲಾದ ಪತ್ರ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಸಿ ಸಮಸ್ಯೆ ಸರಿಪಡಿಸುವ ಪ್ರಯತ್ನ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತತ ಮೂರನೇ ದಿನ (ಬುಧವಾರ) ಜಿಲ್ಲಾವಾರು ಸ್ವಪಕ್ಷೀಯ ಶಾಸಕರ ಸರಣಿ ಸಭೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠ’ ಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ಇದೇ 16ಕ್ಕೆ ಮುಂದೂಡಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆಗೆ ನಿಗದಿಪಡಿಸಿತ್ತು. ಆದರೆ, ಮಧ್ಯಾಹ್ನದ ಕಲಾಪದ ಅವಧಿಯನ್ನು 3. 45ಕ್ಕೇ ಮುಕ್ತಾಯಗೊಳಿಸಲಾದ ಕಾರಣ ಇದೇ 16ರ ಬೆಳಗ್ಗೆ 10 ಗಂಟೆಗೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು ನಗರದಲ್ಲಿ ಸಿನಿಮೀಯ ರೀತಿಯಲ್ಲಿ ಜ್ಯೋತಿಷಿಯ ಪುತ್ರನನ್ನು ಅಪಹರಿಸಿ,  5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಯನ್ನು ಎಚ್‌ ಎಸ್‌ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಮಣಿವಾಸಕನ್ ಅವರ 18 ವರ್ಷದ ಪುತ್ರನನ್ನು ತುಮಕೂರಿನ ಅರ್ಜುನ್ ಅಪಹರಣ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಎಂದು ಪೊಲೀಸರು ಹೇಳಿದರು. ಡ್ರಾಪ್ ಕೇಳುವ ನೆಪದಲ್ಲಿ ಕಾರನ್ನು ಅಡ್ಡಗಟ್ಟಿದ್ದ ಆರೋಪಿ ಯುವಕ ಪುತ್ರನ ಹಣೆಗೆ ಗನ್‌ ಯಿಟ್ಟು ಅಪಹರಣ ಮಾಡಿದ್ದ. ಬಳಿಕ ಜ್ಯೋತಿಷಿಗೆ ವಾಟ್ಸ್ ಆ್ಯಪ್ ಕರೆ ಮಾಡಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನೇರಪಾವತಿ ಪೌರಕಾರ್ಮಿಕರಿಗೆ ಆರು ವರ್ಷಗಳಿಂದ ಪಿಂಚಣಿ ನೀಡಿಲ್ಲವೆಂದು ಆರೋಪಿಸಿ ಕರ್ನಾಟಕ ರಾಜ್ಯ ಮಹಾನಗರಪಾಲಿಕೆ, ನಗರಸಭೆ ಮತ್ತು ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಸದಸ್ಯರು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. 2018ರ ಜನವರಿ 1ರಂದು ನೇರವೇತನ ಪೌರಕಾರ್ಮಿಕರಿಗೆ ನಿವೃತ್ತಿ ವೇತನ ನೀಡಬೇಕೆಂಬ ಆದೇಶವಾಗಿದೆ. ಆದರೆ, ಇದುವರೆಗೂ ಒಂದು ಸಾವಿರಕ್ಕಿಂತ ಹೆಚ್ಚು ಪೌರಕಾರ್ಮಿಕರ ಖಾತೆಗೆ ಹಣ ಜಮೆಯೇ ಆಗಿಲ್ಲ. ಈಗಾಗಲೇ 500ಕ್ಕೂ ಜನ ಮರಣ ಹೊಂದಿದ್ದಾರೆ. ಕುಟುಂಬ ನಿರ್ವಹಣೆ ಮಾಡುವುದೇ ಕಷ್ಟಕರವಾಗಿದೆ’ ಎಂದು ನಗರ ಘಟಕದ ಅಧ್ಯಕ್ಷ ಮುನಿರಾಜು ಹೇಳಿದರು. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಚಿನ್ನೋಡು, ಎಸ್. ಎನ್. ವೇಣುಗೋಪಾಲ, ಎನ್. ನಾಗರಾಜು ಇದ್ದರು. ಸಂಘದಿಂದ ಬಿಬಿಎಂಪಿಯ ಆಡಳಿತ ವಿಭಾಗದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ ಮಾಡಲಾಯಿತು. ಈ ಬಗ್ಗೆ ಮುಖ್ಯ ಆಯುಕ್ತರೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್…

Read More

ಬೆಂಗಳೂರು ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ಫೋನ್ ಪೇ ಮೂಲಕ ಹಣ ನೀಡುವುದಾಗಿ ಹೇಳಿ ಆಟೊ ಚಾಲಕನಿಗೆ ವಂಚಿಸಿ ಪರಾರಿಯಾಗಿದ್ದಾಳೆ. ನಾಗರಬಾವಿ ಮಹದೇಶ್ವರ ಲೇಔಟ್‌ ನ ನಿವಾಸಿ ಶಿವಕುಮಾರ್ ವಂಚನೆಗೆ ಒಳಗಾದವರು. ಶಿವಕುಮಾರ್ ಅವರು ಆಟೋ ಚಾಲನೆ ಮಾಡಿಕೊಂಡು ತೆರಳುತ್ತಿದ್ದಾಗ ಚಂದ್ರಾಲೇಔಟ್ ಸಮೀಪ ಯುವತಿಯೊಬ್ಬಳು ಆಟೊ ಹತ್ತಿದ್ದಳು. ‘ನಾನು ಕಾಲೇಜಿಗೆ ಶುಲ್ಕ ಪಾವತಿಸಬೇಕು. ನಿಮ್ಮ ಬಳಿಯಿರುವ 723 ಸಾವಿರ ಹಣವನ್ನು ನನಗೆ ನೀಡಿದರೆ, ಅಷ್ಟು ಹಣವನ್ನು ಫೋನ್ ಪೇ ಮಾಡುತ್ತೇನೆಂದು’ ನಂಬಿಸಿದ್ದಳು. ಯುವತಿ ಮಾತು ನಂಬಿ ಆಟೊ ಚಾಲಕ, ಆ ಹಣವನ್ನು ಆಕೆಗೆ ನೀಡಿದ್ದರು. ಆಟೊ ಇಳಿದ ಮೇಲೆ ಆಕೆ ಫೋನ್ ಪೇ ಮಾಡಿದ್ದೇನೆ. ಮೆಸೇಜ್ ಬಂದಿದೆ ನೋಡಿ ಎಂದು ಕ್ಷಣಾರ್ಧದಲ್ಲಿ ತೆರಳಿದ್ದಾಳೆ. ಚಾಲಕ ಫೋನ್ ಪೇ ಪರಿಶೀಲಿಸಿದಾಗ ಹಣ ಬಾರದಿರುವುದು ಗೊತ್ತಾಗಿದೆ. ಈ ಸಂಬಂಧ ದೂರು ನೀಡಿದ್ದು ತನಿಖೆ ನಡೆಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸಿಎಂಐ ಕ್ರಿಶ್ಚಿಯನ್ ಹಾಸ್ಟೆಲ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಫೆಲಿಶಾ(17) ಮೃತ ಬಾಲಕಿ. ಸಿಎಂಐ ಹಾಸ್ಟೆಲ್ ನಲ್ಲಿದ್ದುಕೊಂಡು ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆಲಿಶಾ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ನಡುವೆ ಚರ್ಚ್ ನಲ್ಲಿ ಪ್ರಾರ್ಥನೆ ಸಮಯದಲ್ಲಿ ಫೆಲಿಶಾ ಕುಸಿದು ಬಿದ್ದಿದ್ದು ತಕ್ಷಣ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ವಿದ್ಯಾರ್ಥಿನಿ ಫೆಲಿಶಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಶವ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವಂತಹ ಕಾಲಜ್ಞಾನ ಭವಿಷ್ಯವೊಂದು ಹೊರಬಿದ್ದಿದೆ. ಮುಂದಿನ ಪ್ರಧಾನಿಯಾಗುವ ಯೋಗ ಒಬ್ಬ ಮಹಿಳೆಗೆ ಇದೆ ಎಂದು ಕಾಲಜ್ಞಾನಿ ಡಾ. ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ನೊಣವಿನಕೆರೆಯಲ್ಲಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತೆ ಅಂತ ಗುರೂಜಿ ಈ ಹಿಂದೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ನಿಜ ಆಯ್ತು. ಇದೀಗ ರಾಷ್ಟ್ರ ರಾಜಕಾರಣದ ಭವಿಷ್ಯ ನುಡಿದಿದ್ದಾರೆ. ಇಂದಿರಾಗಾಂಧಿ ನಂತರ ರಾಷ್ಟ್ರ ರಾಜಕಾರಣದ ಚುಕ್ಕಾಣಿಯನ್ನ ಮಹಿಳೆಯೇ ಹಿಡಿಯಲಿದ್ದಾರೆ. ಮಹಾಶಿವರಾತ್ರಿ ಹಬ್ಬದ ನಂತರ ಒಂದು ಶಕ್ತಿ ಅಂದರೆ, ಒಂದು ಸ್ತ್ರೀ ದೇಶವನ್ನ ಆಳ್ತಾರೆ. ಹಾಗಂತ ಕಾಲಜ್ಞಾನದ ಭವಿಷ್ಯವಾಣಿ ಭವಿಷ್ಯವನ್ನ ಹೇಳ್ತಿದೆ ಎಂದು ತಿಳಿಸಿದ್ದಾರೆ. 35 ವರ್ಷಗಳ ಹಿಂದಿನ ದಿನಮಾನಗಳಲ್ಲಿ ಒಂದು ಸ್ತ್ರೀ ದೇಶವನ್ನ ಆಳಿದ್ದಾರೆ. ಈಗ ಮಹಾಶಿವರಾತ್ರಿ ನಂತರ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಈ ದೇಶವನ್ನ ಒಂದು ಶಕ್ತಿ ಅಂದರೆ, ಒಂದು ಸ್ತ್ರೀ, ಮಹಾಶಿವರಾತ್ರಿ ನಂತರ ದೇಶ ಆಳ್ತಾರೆ ಎಂದು ಹೇಳಿದ್ದಾರೆ.…

Read More

ಮಧುಗಿರಿ: ವಿದ್ಯಾರ್ಥಿಗಳು ಗುರಿಗಳೊಂದಿಗೆ ತಮ್ಮ ಕನಸುಗಳನ್ನು ನನಸಾಗಿಸಿಕೊಂಡಾಗ ಮಾತ್ರ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ವಾಗುತ್ತದೆ ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆ.ಎನ್ ಆರ್ ಸಭಾಂಗಣಾದಲ್ಲಿ ಆಯೋಜಿಸಿದ್ದ ಎನ್ ಎಸ್ ಎಸ್ , ಕ್ರೀಡೆ , ಸ್ಕೌಟ್ ಅಂಡ್ ಗೈಡ್ , ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭ. ಹಾಗೂ 2023 – 24 ನೇ ಸಾಲಿನ ಪ್ರಥಮ ವರ್ಷದ ಸ್ನಾತಕ. ಸ್ನಾತಕೊತ್ತರ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಬ್ದುಲ್ ಕಲಾಂ ಅವರು ಹೇಳಿದಂತೆ ಕನಸುಗಳನ್ನು ಕಂಡಾಗ ನಿಮ್ಮ ಗುರಿಗಳನ್ನು ಸಾಧಿಸಲು ಸಾಧ್ಯ . ಸಮಾಜಮುಖಿ ಚಿಂತನೆ ಗಳಿಂದ ಅಭಿವೃದ್ಧಿಯ ಜೊತೆಯಲ್ಲಿ ನೀವುಗಳು ಮತ್ತಷ್ಟು ಬೆಳೆಯಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿದ್ದಾಗ ಅದರ ಮಹತ್ವವನ್ನು ವಿದ್ಯಾರ್ಥಿಗಳು ಅರಿತು ಕೊಳ್ಳಬೇಕು ಎಂದರು. ಸಂಘ ಸಂಸ್ಥೆಗಳಿಂದ ಇಂದು ವಿದ್ಯಾಭ್ಯಾಸ ಮಾಡಲು ಸಹಕಾರ ದೊರೆಯತ್ತದೆ.…

Read More

ತಿಪಟೂರು: ಕೊಬ್ಬರಿ ಬೆಲೆ ನಿರಂತರವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ  ಇಂದು ತಿಪಟೂರು ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೊತೆಗೆ ವಿವಿಧ ರೈತ ಪರ ಸಂಘಟನೆಗಳು ಕರೆ ನೀಡಿವೆ. ಕ್ವಿಂಟಾಲ್ ಗೆ 20 ಸಾವಿರ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಇಂದು ತಿಪಟೂರು ಬಂದ್ ನಡೆಸಲಾಗಿದ್ದು, ತೆಂಗುಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಆದ್ರೆ ಯಾರು ಸ್ಪಂದಿಸುತ್ತಿಲ್ಲ ಎಂದು ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ‌ಗೆ ಕರೆ ನೀಡಲಾಗಿದೆ. ತಿಪಟೂರು ನಗರದಲ್ಲಿ ರೈತರದ ಮೆರವಣಿಗೆ ಜಾಥಾ ನಡೆಸಲಾಗಿದೆ. ಬಳಿಕ  ಉಪವಿಭಾಗಾಧಿಕಾರಿಗೆ ರೈತ ಸಂಘಟನೆಗಳು ಮನವಿ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನಮ್ಮತುಮಕೂರು:  ಕುಣಿಗಲ್ ನಲ್ಲಿ ಹಾಡಹಗಲೇ ಮಚ್ಚಿನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಕೆ.ಡಿ.ಆಕಾಶ್, ಸಾಗರ್, ರಾಜಣ್ಣ, ಎಮ್ ಎಸ್ ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ. ಇವ್ರು.. ಆ.3 ರಂದು ಜಗದೀಶ್ ಎನ್ನುವರ ಮೇಲೆ ಲಾಂಗು ಮಚ್ವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸುತ್ತಿರುವ‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಹಲ್ಲೆಗೊಳಗಾದ ಗಾಯಾಳು ಜಗದೀಶ್ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More