Author: admin

ಮಿಡಿಗೇಶಿ: ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಕೆಪಿಟಿಸಿಎಲ್ ಕಚೇರಿ ಹಿಂಬದಿಯ ಜಮೀನಿನಲ್ಲಿ ಇದ್ದ ಹುಲ್ಲಿನ ಬಣವೆಗೆ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮವಾಗಿ ಹುಲ್ಲಿನ ಬಣವೆ ಸಂಪೂರ್ಣ ಭಸ್ಮವಾಗಿದೆ. ಮಾರುತಿನಗರದ ಸಂಜಕ್ಕ ಎಂಬುವರು ತನ್ನ ಸಂಸಾರ ನಿರ್ವಹಣೆ ಸಲುವಾಗಿ ಎರಡು ಸೀಮೆ ಹಸುಗಳನ್ನು ಸಾಲ ಮಾಡಿ ಸಾಕಿಕೊಂಡಿದ್ದರು. ಈ ಹಸುಗಳಿಗಾಗಿ ಹುಲ್ಲಿನ ಬಣವೆ ದಾಸ್ತಾನು ಮಾಡಿದ್ದರು. ಆದರೆ ಆಕಸ್ಮಿಕ ಬೆಂಕಿ ಬಿದ್ದು ಬವಣೆ ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ಧರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುರುವೇಕೆರೆ: ಪಟ್ಟಣದ ಬಸವೇಶ್ವರ ನಗರದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಯವರ ಮಂಡಲ ಪೂಜೆ ಮತ್ತು ಜ್ಯೋತಿ ಮಹೋತ್ಸವದ ಪ್ರಯುಕ್ತ ಶ್ರೀ ಅಯ್ಯಪ್ಪಸ್ವಾಮಿ ಭಕ್ತವೃಂದದವರಿಂದ ಶ್ರೀ ಅಯ್ಯಪ್ಪಸ್ವಾಮಿಯ ಉತ್ಸವದ ಅಂಗವಾಗಿ ಜ್ಯೋತಿ ಮೆರವಣಿಗೆಯನ್ನು ಶನಿವಾರ ಸಂಜೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪುಟಾಣಿ ಮಕ್ಕಳು ಜ್ಯೋತಿ ಹಿಡಿದು ಭಕ್ತಿಭಾವದಿಂದ ಹೆಜ್ಜೆ ಹಾಕಿದರೆ, ಸಮಿತಿಯ ಪದಾಧಿಕಾರಿಗಳು ಹಾಗೂ ಮಾಲಾಧಾರಿಗಳು ಶ್ರೀ ಅಯ್ಯಪ್ಪ ಸ್ವಾಮಿಯ ನಾಮಸ್ಮರಣೆಯೊಂದಿಗೆ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಜ.7ರಂದು ಬುಧವಾರ ಮಧ್ಯಾಹ್ನ ಸಾರ್ವಜನಿಕರಿಂದ ಸಾರ್ವಜನಿಕರಿಗೆ ಅನ್ನದಾನ ಏರ್ಪಡಿಸಲಾಗಿದೆ. ಅಂದು ಸಂಜೆ 7 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪದ ಅಭಿಷೇಕ, ಜ.8 ರಂದು ರಾತ್ರಿ 8:30ಕ್ಕೆ ಮಾಲಾಧಾರಿಗಳ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಲಿದೆ. ಜ.9ರಂದು ಬೆಳಿಗ್ಗೆ 9-30ಕ್ಕೆ ಮಾಲಾಧಾರಿಗಳಿಗೆ ಗುರುಸ್ವಾಮಿಗಳಿಂದ ಇರುಮುಡಿ ಸೇವೆ ಇದೆ. ಜ.10ರಂದು ಬೆಳಿಗ್ಗೆ 9:30ಕ್ಕೆ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಿಂದ ಮಾಲಾಧಾರಿಗಳ ಶುಭಯಾತ್ರೆ ಪ್ರಾರಂಭವಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ಸಂಬಂಧಿತ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಕೃಷಿಕ ಸಮಾಜದ ಸಹಯೋಗದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ಜನವರಿ 7 ಮತ್ತು 8ರಂದು ನಗರದ ಗಾಜಿನ ಮನೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ, ವಾಣಿಜ್ಯ ಮೇಳ ಹಾಗೂ ಬೆಳೆ ಉತ್ಪಾದನೆಯಾಚೆಗಿನ ಕೃಷಿ–ರೈತರ ಸಬಲೀಕರಣ ಎಂಬ ನೂತನ ಪರಿಕಲ್ಪನೆಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜನವರಿ 7ರಂದು ಬೆಳಗ್ಗೆ 10.30 ಗಂಟೆಗೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಘಾಟಿಸುವರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಸ್ತುಪ್ರದರ್ಶನ ಉದ್ಘಾಟಿಸುವರು. ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಸಿರಿಧಾನ್ಯಗಳ ರಾಶಿ ಪೂಜೆ ನೆರವೇರಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಗುಬ್ಬಿ ಶಾಸಕ…

Read More

ಸರಗೂರು:  ಹಿಂದೂ ಸಂಘಟನೆಗಳ ಜಾಗೃತಿಗಾಗಿ ಪಟ್ಟಣದ ಶ್ರೀ ಹನುಮಜಯಂತಿ ಆಚರಣಾ ಸಮಿತಿ ಭಾನುವಾರ ಆಯೋಜಿಸಿದ್ದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು. ದಾರಿಯುದ್ದಕ್ಕೂ ಭಗವಾನ್ ಹನುಮನ ಘೋಷಣೆ ಮೊಳಗಿದವು.  ಶೋಭಾಯಾತ್ರೆ ಅಂಗವಾಗಿ ಪಲ್ಲಕ್ಕಿಯಲ್ಲಿ ಕೂರಿಸಿದ್ದ ಹನುಮಂತನ ಭಾವಚಿತ್ರಕ್ಕೆ ದಡದಹಳ್ಳಿ ಮಠದ ಷಡಕ್ಷರಿಸ್ವಾಮೀಜಿ, ಪಡುವಲು ವಿರಕ್ತಮಠದ ಮಹಾದೇವಸ್ವಾಮೀಜಿ, ಭರತೇಶ್ ಗುರೂಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸರಗೂರು ತಾಲೂಕು ಅಧ್ಯಕ್ಷ ಕೆ.ಎಂ.ವೀರಭದ್ರಪ್ಪ, ಬಸವ ಬಳಗದ ಅಧ್ಯಕ್ಷ ಹಂಚೀಪುರ ಗಣಪತಿ, ಮುಖಂಡರಾದ ಜಯಪ್ರಕಾಶ್, ಆಚರಣಾ ಸಮಿತಿ ಅಧ್ಯಕ್ಷ ನವೀನ್‌ಕುಮಾರ್ ಸೇರಿದಂತೆ ಮುಖಂಡರು ಹನುಮನ ಭಾವಚಿತ್ರವುಳ್ಳ ಶೋಭಯಾತ್ರೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪಟ್ಟಣದ ಕೆಇಬಿ ಕಚೇರಿಯಿಂದ ಹೊರಟ ಶೋಭಾಯಾತ್ರೆ ಮೆರವಣಿಗೆಯು ಹುಣಸೂರು–ಎಸ್.ಬೇಗೂರು ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣ, ಮಹಾವೀರ ವೃತ್ತ, ಚಿಕ್ಕದೇವಮ್ಮನ ವೃತ್ತ, ಮೂಲಕ ೨ನೇ ಮುಖ್ಯ ರಸ್ತೆಯಲ್ಲಿ ಸಾಗಿ ಸಂತೆಮಾಳದ ಮಾಸ್ತಮ್ಮನ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. ಪಟ್ಟಣದ ಪ್ರಮುಖ ಬೀದಿಗಳು ಕೆಸರಿಮಯವಾಗಿದ್ದು, ಹನುಮನ ಭಕ್ತರ ಕೈಯಲ್ಲಿ ಕೆಸರಿ…

Read More

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಬೇಕೆಂದು ತುಮಕೂರು ನಗರ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ರವರು ತುಮಕೂರು ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ದೇಶದ ಸುಸಜ್ಜಿತವಾದ ಮಹಾನಗರಪಾಲಿಕೆಗಳಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗಿ ಸಾವು–ನೋವು ಉಂಟಾಗುತ್ತಿರುವುದು ನಮಗೆಲ್ಲಾ ಎಚ್ಚರಿಕೆಯ ಗಂಟೆಯಾಗಿದೆ. ಈ ಕಾರಣದಿಂದ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಮನೆ ಮನೆಗೂ ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಈ ಕರ್ತವ್ಯದಲ್ಲಿ ಯಾವುದೇ ಲೋಪದೋಷಗಳನ್ನು ನಾವು ಸಹಿಸುವುದಿಲ್ಲ. ಈ ಕಾರಣದಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಪ್ರತಿನಿತ್ಯ ಕಾಲೋನಿಗಳಲ್ಲಿ, ಹಾಸ್ಟೆಲ್‌ಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ, ಹೋಟೆಲ್‌ಗಳಲ್ಲಿ, ಬಸ್ ನಿಲ್ದಾಣದಲ್ಲಿ ಹಾಗೂ ನಗರದ ಬಡಾವಣೆಗಳಲ್ಲಿ ಮಹಾನಗರಪಾಲಿಕೆಯಿಂದ ಪೂರೈಕೆಯಾಗುವ ನೀರನ್ನು ಪ್ರತಿನಿತ್ಯ ತುಮಕೂರು ಮಹಾನಗರಪಾಲಿಕೆಯ ಪಿ.ಎನ್.ಆರ್. ಪಾರ್ಲ್‌ನಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಕುಡಿಯುವ ನೀರನ್ನು ಒದಗಿಸಬೇಕೆಂದು ಶಾಸಕರು ಸೂಚಿಸಿದರು. ಯು.ಜಿ.ಡಿ ನೀರು ಯಾವುದೇ ಕಾರಣಕ್ಕೂ ಕುಡಿಯುವ ನೀರು ಸರಬರಾಜು ಪೈಪ್‌ಲೈನ್‌ಗಳಿಗೆ ಮಿಶ್ರಣವಾಗದಂತೆ…

Read More

ಪಾವಗಡ:  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪಾವಗಡ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಾವಗಡ, ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಪಾವಗಡ.  ಇವರ ಸಹಯೋಗದೊಂದಿಗೆ  ನಡೆದ ತಾಲ್ಲೂಕು ಮಟ್ಟದ ಹತ್ತನೇ ತರಗತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಚಂದು ಆರ್.ಎಸ್., ಬಿಂದು ಶ್ರೀ ಎನ್., ಗಗನ ಆರ್,  ಪ್ರಮೋದ್ ಕುಮಾರ್ ಸಿ., ಸುಪ್ರೀತ್ ರೆಡ್ಡಿ ಆರ್., ಸಂತೋಷ್ ರೆಡ್ಡಿ ಆರ್. ಎಂಬ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದಿರುತ್ತದೆ. ವಿಜೇತ ತಂಡವನ್ನು 5,000 ನಗದು ಬಹುಮಾನ  ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರದೊಂದಿಗೆ ಅಭಿನಂದಿಸಲಾಯಿತು. ಚಿತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟಾ ನರಸಿಂಹಮೂರ್ತಿ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಯತಿಕುಮಾರ್, ಸಹನಾ ಶಾಲೆಯ ಆಡಳಿತಾಧಿಕಾರಿಗಳಾದ ಎನ್. ಶ್ರೀನಿವಾಸ್ ಕ್ವಿಜ್ ಮಾಸ್ಟರ್ ಗಳಾದ ಇ. ಜಯರಾಮ್, ವೆಂಕಟೇಶ್ ಹಾಗೂ ಮಮತಾ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಮಧುಗಿರಿ: ದ್ವಿಚಕ್ರವಾಹನದಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಲೂಕಿನ ಕೊಡಿಗೆನಹಳ್ಳಿ ಹೋಬಳಿಯ ಹಿಂದೂಪುರ ರಸ್ತೆಯಲ್ಲಿರುವ ಜಿ.ಹೊಸಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು,  ಪೋಲೇನಹಳ್ಳಿ ಗ್ರಾಮದ ಲಕ್ಷ್ಮೀ ನಾರಾಯಣಪ್ಪ ಬಿನ್ ಚಿಕ್ಕ ನರಸಯ್ಯ (53) ಎಂಬವರು ಮೃತಪಟ್ಟಿದ್ದಾರೆ. ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಕಾಣಿಕೆ ನೀಡಿ ಹಿಂತಿರುಗುವಾಗ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಸ್ಥ ಳಕ್ಕೆ ಸಿಪಿಐ ಹನುಮಂತರಾಯಪ್ಪ ಹಾಗೂ ಪಿಎಸ್‌ ಐ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಮಹಿಳೆಯರು ಶಿಕ್ಷಣದ ಜೊತೆಗೆ, ಆರ್ಥಿಕ ಸ್ವಾವಲಂಬನೆ ಬೆಳೆಸಿಕೊಳ್ಳಬೇಕು. ಪದವಿ, ಸ್ನಾತಕೋತ್ತರ ಪದವಿ ನಂತರ ಮನೆಯಲ್ಲಿಯೇ ಕುಳಿತುಕೊಳ್ಳದೆ ತನ್ನ ಅರ್ಹತೆಗೆ ತಕ್ಕಂತೆ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನಿಸಾ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಪರಿವರ್ತನಾ ವಾದ ತುಮಕೂರು ಜಿಲ್ಲಾ ಸಮಿತಿಯಿಂದ ಆಯೋಜಿಸಿದ್ದ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಭಾರತದ ಮಹಿಳಾ ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆಗಳು ಎಂಬ ವಿಚಾರ ಸಂಕಿರಣವನ್ನು ಅಂಬೇಡ್ಕರ್ ಮತ್ತು ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಶೈಕ್ಷಣಿಕ ಅರ್ಹತೆಗೆ ತಕ್ಕ ಉದ್ಯೋಗ ಪಡೆದರೆ, ಇನ್ನೊಬ್ಬರ ಮೇಲೆ ಅವಲಂಬನೆಯಾಗುವುದು ತಪ್ಪುತ್ತದೆ. ಸ್ವಾವಲಂಬಿ ಬದುಕು ಸಾಧ್ಯ ಎಂದರು. ಭಾರತದ ಮಹಿಳಾ ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆಗಳು ಎಂಬ ವಿಚಾರ ಕುರಿತು ಮಾತನಾಡಿದ ತುಮಕೂರು…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ವಿಷಪೂರಿತ ಮೇವು ಸೇವಿಸಿ 50ಕ್ಕೂ ಹೆಚ್ಚು ಕುರಿಗಳು ಅಸುನೀಗಿರುವ ಘಟನೆ ಪೆನ್ನೋಬನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಘಟನೆಯ ವಿವರ: ಪೆನ್ನೋಬನಹಳ್ಳಿ ಗ್ರಾಮದ ನಿವಾಸಿ ರಾಮಣ್ಣ ಅವರ ಪತ್ನಿ ಜಂಪಕ್ಕ ಅವರು ಕುರಿ ಸಾಕಾಣಿಕೆಯಿಂದಲೇ ತಮ್ಮ ಜೀವನೋಪಾಯ ನಡೆಸುತ್ತಿದ್ದರು. ಎಂದಿನಂತೆ ಶನಿವಾರ ಬೆಳಗ್ಗೆ ತಮ್ಮ 300 ಕುರಿಗಳ ಹಿಂಡನ್ನು ಮೇವಿಗಾಗಿ ಗ್ರಾಮದ ಹೊರವಲಯಕ್ಕೆ ಕರೆದೊಯ್ದಿದ್ದರು. ಈ ವೇಳೆ ಹೊಲದಲ್ಲಿದ್ದ ಸುಮಾರು ಎರಡು ತಿಂಗಳ ಪ್ರಾಯದ ಮೆಕ್ಕೆಜೋಳದ ಎಳೆಯ ಪೈರನ್ನು ಕುರಿಗಳು ತಿಂದಿವೆ. ಪೈರು ತಿಂದ ಕೆಲವೇ ಕ್ಷಣಗಳಲ್ಲಿ ಕುರಿಗಳಲ್ಲಿ ಹೊಟ್ಟೆ ಉಬ್ಬರ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ 45 ರಿಂದ 50 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಮೃತ ಕುರಿಗಳ ಒಟ್ಟು ಮೌಲ್ಯ ಸುಮಾರು 4 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಏಕಾಏಕಿ ಸಂಭವಿಸಿದ ಈ ದುರಂತದಿಂದ ಬಡ ಮಹಿಳೆ ಜಂಪಕ್ಕ ಆಘಾತಕ್ಕೊಳಗಾಗಿದ್ದು, ಕಣ್ಣೀರು ಹಾಕುತ್ತಾ ಸರ್ಕಾರದ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ. ಪರಿಹಾರದ ಭರವಸೆ: ವಿಷಯ ತಿಳಿಯುತ್ತಿದ್ದಂತೆಯೇ ತಾಲ್ಲೂಕು ಪಶುಪಾಲನಾ ಇಲಾಖೆಯ ಸಹಾಯಕ…

Read More

ಪಾವಗಡ: ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ ಮತ್ತು ಡಾ. ಪ್ರಭಾಕರ್ ರೆಡ್ಡಿ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಇದೇ ಜನವರಿ 7ರಂದು ಬೆಳಗ್ಗೆ 11 ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅಂಬ್ಯುಲೆನ್ಸ್ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಪಾವಗಡದ ಸ್ವಾಮಿ ವಿವೇಕಾನಂದ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತಾಲೂಕಿನಾದ್ಯಂತ ಪ್ರತಿ ವಾರ ಹಳ್ಳಿಗಳಲ್ಲಿ ನಡೆಸಲಾಗುವ ಮಧುಮೇಹ (Diabetes), ರಕ್ತದೊತ್ತಡ (BP) ಮತ್ತು ಅತಿಯಾದ ದೇಹದ ತೂಕದ ಉಚಿತ ತಪಾಸಣಾ ಶಿಬಿರಗಳಿಗೆ ಚಾಲನೆ ನೀಡಲಾಗುವುದು. ದಿವ್ಯ ಸಾನಿಧ್ಯ: ಶ್ರೀ ರಾಮಕೃಷ್ಣ ಸೇವಾಶ್ರಮ ಮತ್ತು ಆರೋಗ್ಯ ಸಂಸ್ಥೆಗಳ ಅಧ್ಯಕ್ಷರಾದ ಸ್ವಾಮಿ ಜಪಾನಂದಜೀ ಮಹಾರಾಜ್ ಅವರು ವಹಿಸಲಿದ್ದಾರೆ. ಯೋಜನೆಗಳ ಉದ್ಘಾಟನೆ: ಮಧುಗಿರಿ ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ ಅವರು ಆರೋಗ್ಯ ಶಿಬಿರದ ಯೋಜನೆಗಳನ್ನು ಉದ್ಘಾಟಿಸುವರು. ಅಂಬ್ಯುಲೆನ್ಸ್ ಲೋಕಾರ್ಪಣೆ:…

Read More