Subscribe to Updates
Get the latest creative news from FooBar about art, design and business.
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
Author: admin
ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ. ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.
ಬೆಂಗಳೂರು:”ಕೊಳಕು ಮಂಡಲ ಎಂಬ ಟೀಕೆಯನ್ನು ಯಾರೋ ಕಾರ್ಯಕರ್ತರು ಅಥವಾ ಸಿಬ್ಬಂದಿ ಮಾಡಿರಬಹುದು. ಇಂತಹ ಟೀಕೆ ಸರಿಯಲ್ಲ. ಹತಾಶೆಯಲ್ಲಿ ಟೀಕೆ ಮಾಡಿರುತ್ತಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜೆಡಿಎಸ್ ಪಕ್ಷದ ಎಕ್ಸ್ ಖಾತೆಯಲ್ಲಿ ನಿಮ್ಮನ್ನು ಕೊಳಕು ಮಂಡಲ ಹಾವು ಎಂಬ ವೈಯಕ್ತಿಕ ಟೀಕೆ ಮಾಡಲಾಗಿದೆ ಎಂದು ಮಾಧ್ಯಮಗಳು ಹೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿದರು. “ಇದನ್ನು ಅವರ ಪಕ್ಷದ ನಾಯಕರೇ ಮಾತನಾಡಿದ್ದಾರೆ ಎಂದು ಹೇಳುವುದಿಲ್ಲ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕರೆಂಟ್ ಅಕ್ರಮವಾಗಿ ಬಳಸಿದ್ದ ಬಗ್ಗೆ ಕುಮಾರಸ್ವಾಮಿ ಅವರು ತಪ್ಪೊಪ್ಪಿಕೊಂಡಿದ್ದಾರೆ. ಅದು ಅವರ ದೊಡ್ಡತನ” ಎಂದರು. ಬೆಸ್ಕಾಂ ಸಿಬ್ಬಂದಿ ದೂರು ದಾಖಲಿಸಿಕೊಂಡಿರುವ ಬಗ್ಗೆ ಪ್ರಶ್ನೆ ಕೇಳಿದಾಗ, “ಈ ಬಗ್ಗೆ ನನಗೆ ಗೊತ್ತಿಲ್ಲ. ಅವರು ದಂಡ ಕಟ್ಟುತ್ತೇನೆ ಎಂದು ಹೇಳಿದ ವಿಚಾರ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ” ಎಂದು ತಿಳಿಸಿದರು.
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರನ್ನು ಹತ್ಯೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಕರ್ನಾಟಕ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್ ಎಂ ಎಂದು ಗುರುತಿಸಲಾಗಿದ್ದು, ಜಯನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಸೋಷಿಯಲ್ ಮೀಡಿಯಾದಲ್ಲಿ “ಡಿಕೆ ಸಹೋದರರನ್ನು ಕೊಲ್ಲಿ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಹಾಕಿದ್ದ ಎನ್ನಲಾಗಿದೆ. ಆರೋಪಿ ರಂಜಿತ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ತಾನು ಸೈಬರ್ ಕ್ರೈಂ ಡಿಟೆಕ್ಟಿವ್ ಅಟ್ ಬೆಂಗಳೂರು ಸಿಟಿ ಪೊಲೀಸ್ ಎಂದು ಡೀಟೇಲ್ಸ್ ಹಾಕಿಕೊಂಡಿದ್ದನು. ಈತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಸಹೋದರರ ಬಗ್ಗೆ, ಕಾಂಗ್ರೇಸ್ ಪಕ್ಷ ಮುಸಲ್ಮಾನರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದನು.
ಬೆಂಗಳೂರು: ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಕಳೆದ ಮೂರು ದಿನಗಳಿಂದ ಪಟಾಕಿ ಸಿಡಿತದಿಂದ 60ಕ್ಕೂ ಹೆಚ್ಚು ಜನರ ಕಣ್ಣುಗಳಿಗೆ ಹಾನಿಯಾಗಿವೆ. ಇದರ ಜೊತೆಗೆ 50 ಮಂದಿಯ ಮೈಕೈಗಳಿಗೆ ಸುಟ್ಟ ಗಾಯಗಳಾಗಿವೆ. ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ನ.12 ರಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು: ತಿಲಕನಗರದ ನಿವಾಸಿ ತಬ್ರೇಜ್ ಪಾಷಾ(37) ಎಂಬಾತನನ್ನು ಕೊಲೆ ಮಾಡಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಶಬೀರ್ ಕೃತ್ಯ ಎಸಗಿದ ಆರೋಪಿ, ತಬ್ರೇಜ್ ಪಾಷಾ ಮತ್ತು ಶಬೀರ್ ಸಂಬಂಧಿಗಳು. ತಬ್ರೇಜ್ ಪಾಷಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶಬೀರ್ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ. ಇಬ್ಬರ ನಡುವೆ ಪ್ರಕರಣವೊಂದರ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಬುಧವಾರ ಮಧ್ಯಾಹ್ನ ಎಸ್. ಆರ್.ಕೆ. ಗಾರ್ಡನ್ ಬಳಿ ತಬ್ರೇಜ್ ಪಾಷಾನನ್ನು ಅಡ್ಡಗಟ್ಟಿದ ಆರೋಪಿ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಅಪಘಾತ. ಬಸ್ ಕಂದರಕ್ಕೆ ಬಿದ್ದು 36 ಮಂದಿ ಸಾವನ್ನಪ್ಪಿದ್ದಾರೆ. ದೋಡಾ ಜಿಲ್ಲೆಯ ಅಜರ್ ಪ್ರದೇಶದ ಟ್ರಾಂಗಲ್ ಬಳಿ ಅಪಘಾತ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಕಿಶ್ತ್ವಾರ್ ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ವಾಹನ 250 ಮೀಟರ್ ಆಳಕ್ಕೆ ಬಿದ್ದಿದೆ. ಗಾಯಾಳುಗಳನ್ನು ದೋಡಾ ಮತ್ತು ಕಿಶ್ತ್ವಾರ್ ನ ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಗತ್ಯ ಬಿದ್ದರೆ ಗಾಯಾಳುಗಳನ್ನು ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಅಪಘಾತವು ನೋವಿನಿಂದ ಕೂಡಿದೆ. ಮೃತ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಟ್ವೀಟ್ ಮಾಡಿದೆ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಕೂಡ ಘೋಷಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಪ್ರಕಟಿಸಿದೆ.
ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು. ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು.
ಹಿರಿಯ ಸಿಪಿಎಂ ನಾಯಕ ಎನ್ ಶಂಕರಯ್ಯ ಅವರ ನಿಧನಕ್ಕೆ ನಟ ಕಮಲ್ ಹಾಸನ್ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಪ್ಲಾಟ್ ಫಾರ್ಮ್‌ನಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ, ಕಮಲ್ ಹಾಸನ್ ಅವರು ಎನ್ ಶಂಕರಯ್ಯ ಅವರು ತಮ್ಮ ಜೀವನದ ಪ್ರತಿ ಕ್ಷಣವನ್ನು ನಿಸ್ವಾರ್ಥವಾಗಿ ಬದುಕಿದ ಒಡನಾಡಿ ಎಂದು ಬರೆದಿದ್ದಾರೆ. ತಮ್ಮ ಇಡೀ ಜೀವನವನ್ನು ಬಡವರ ಅಭ್ಯುದಯಕ್ಕಾಗಿಯೇ ವಿನಿಯೋಗಿಸಿರುವ ಎನ್ ಶಂಕರಯ್ಯನವರು ಎತ್ತಿ ಹಿಡಿದ ವಿಚಾರವನ್ನು ನಾವು ಹೃದಯಕ್ಕೆ ತೆಗೆದುಕೊಳ್ಳಬೇಕು ಎಂದು ಕಮಲ್ ಹಾಸನ್ ಹೇಳಿದರು. ಎನ್ ಶಂಕರಯ್ಯ ಸಿಪಿಐಎಂ ಸಂಸ್ಥಾಪಕ ನಾಯಕರಲ್ಲಿ ಒಬ್ಬರು. ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಬೆಳಗ್ಗೆ ನಿಧನರಾದರು. ಸೋಮವಾರ ಬೆಳಗ್ಗೆ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 1967, 1977 ಮತ್ತು 1980 ರಲ್ಲಿ ತಮಿಳುನಾಡು ವಿಧಾನಸಭೆಯ ಸದಸ್ಯರಾಗಿದ್ದ ಶಂಕರಯ್ಯ ಅವರು 1995 ರಿಂದ 2002 ರವರೆಗೆ ಸಿಪಿಎಂ ತಮಿಳುನಾಡು ರಾಜ್ಯ ಕಾರ್ಯದರ್ಶಿಯಾಗಿದ್ದರು.
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋ ಹರಡಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ವಿಚಾರಣೆಗೊಳಪಡಿಸಲಾಗಿದೆ. ಬಿಹಾರ ಮೂಲದ 19 ವರ್ಷದ ಯುವಕನನ್ನು ದೆಹಲಿ ಪೊಲೀಸರು ಪ್ರಶ್ನಿಸಿದ್ದಾರೆ. ಈ ಯುವಕನೇ ಮೊದಲು ತನ್ನ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ ಸ್ಟಾಗ್ರಾಮ್ ಖಾತೆಯಿಂದ ವೀಡಿಯೊವನ್ನು ಡೌನ್ ಲೋಡ್ ಮಾಡಿದ್ದೇನೆ ಎಂದು 19 ವರ್ಷದ ಯುವಕ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಯುವಕ ಮೊದಲು ತನ್ನ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ನಂತರ ಇದನ್ನು ಇತರ ಪ್ಲ್ಯಾಟ್ ಫಾರ್ಮ್‌ಗಳಿಗೂ ವ್ಯಾಪಕವಾಗಿ ಹಂಚಿಕೊಳ್ಳಲಾಯಿತು. ಪೊಲೀಸರು ಯುವಕನಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಐಎಫ್ ಎಸ್ ಒ ಘಟಕದ ಮುಂದೆ ಹಾಜರಾಗುವಂತೆ ಮತ್ತು ವೀಡಿಯೊವನ್ನು ಅಪ್ ಲೋಡ್ ಮಾಡಲು ಬಳಸಿರುವ ಶಂಕಿತ ಮೊಬೈಲ್ ಫೋನ್ ತರುವಂತೆ ಅವರಿಗೆ ಸೂಚಿಸಲಾಗಿದೆ. ನಟಿಯ ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದ ನಂತರ, ದೆಹಲಿ ಪೊಲೀಸರ ವಿಶೇಷ ಸೆಲ್…
ಕೋತಿ ದಾಳಿಗೆ 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಹೊಟ್ಟೆಯನ್ನು ಸೀಳಿ ಕರುಳನ್ನು ಹೊರ ತೆಗೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಜರಾತ್ ನ ಗಾಂಧಿನಗರದ ಸಾಲ್ಕಿ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ದೀಪಕ್ ಠಾಕೂರ್ (10) ಎಂಬ ಬಾಲಕ ಮೃತಪಟ್ಟಿದ್ದಾನೆ. ದೆಹಗಾಂ ತಾಲೂಕಿನ ದೇವಸ್ಥಾನದ ಬಳಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ದಾಳಿ ನಡೆದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕೋತಿಯು ಹುಡುಗನ ಮೇಲೆ ಧಾವಿಸಿ, ತನ್ನ ಉಗುರುಗಳಿಂದ ಆಳವಾದ ಗಾಯಗಳನ್ನು ಉಂಟುಮಾಡಿತು. ನಂತರ ಹೊಟ್ಟೆಯನ್ನು ಹರಿದು ಕರುಳನ್ನು ಹೊರತೆಗೆಯಿತು. ಮಗುವನ್ನು ರಕ್ಷಿಸಿ ಮನೆಗೆ ಕರೆತಂದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತನ ಪ್ರಾಣ ಉಳಿಸಲಾಗಲಿಲ್ಲ. ಒಂದು ವಾರದಲ್ಲಿ ಗ್ರಾಮದಲ್ಲಿ ಇದು ಮೂರನೇ ಕೋತಿ ದಾಳಿಯಾಗಿದೆ. ಆಕ್ರಮಣಕಾರಿ ಮಂಗಗಳನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ವಿಶಾಲ್ ಚೌಧರಿ ತಿಳಿಸಿದ್ದಾರೆ.