Author: admin

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಗಂಗಮ್ಮನಗುಡಿ ಠಾಣೆ ಪೊಲೀಸರು ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕ ಮದನ್ ಕುಮಾರ್ ನನ್ನ ಪೊಲೀಸರು ಬಂಧಿಸಿದ್ದಾರೆ. ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿಯನ್ನು ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೊಟೇಲ್ ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

Read More

ಪಶುಸಂಗೋಪನಾ ಇಲಾಖೆ ತನ್ನ ಹಿಂದಿನ ಆದೇಶವನ್ನು ಪುನರುಚ್ಛರಿಸಿದ್ದು, ಬೆಂಗಳೂರಿನ ಬೀದಿ ನಾಯಿಗಳು ಬೀದಿಯಲ್ಲಿಯೇ ಉಳಿಯುತ್ತವೆ ಎಂದು ಹೇಳಿದೆ. ಬೆಂಗಳೂರಿನಿಂದ ನಾಯಿಗಳನ್ನು ಸ್ಥಳಾಂತರಿಸದಿರಲು ಬಿಬಿಎಂಪಿ, ಪಶುಸಂಗೋಪನಾ ಇಲಾಖೆ ನಿರ್ಧರಿಸಿದೆ. ಬೀದಿ ನಾಯಿಗಳನ್ನು ಬೇರೆಡೆ ಶಿಫ್ಟ್ ಮಾಡಲು ಬೆಂಗಳೂರಿನ ನಿವಾಸಿಗಳು ಸಾಕಷ್ಟು ದೂರು ನೀಡಿದ್ದರು. ಆದ್ರೆ ಅದಕ್ಕೆ ಬಿಬಿಎಂಪಿ ಒಪ್ಪಿಗೆ ನೀಡಿಲ್ಲ. ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದು ತಿಂಗಳಲ್ಲಿ ಸುಮಾರು 2 ಸಾವಿರ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರಲ್ಲಿ ಕೆಲವರಿಗೆ ರೇಬಿಸ್ ಲಕ್ಷಣಗಳು ಕೂಡ ಕಂಡುಬಂದಿವೆ. ಹೀಗಾಗಿ, ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಜನರು ಒತ್ತಾಯಿಸಿದ್ದರು. ಆದರೆ, ಬೀದಿ ನಾಯಿಗಳನ್ನು ಹಿಡಿದು ಬೆಂಗಳೂರಿನ ಆಶ್ರಯ ಮನೆಗಳಿಗೆ ಸ್ಥಳಾಂತರಿಸಲು ಕರ್ನಾಟಕ ಪಶುಸಂಗೋಪನಾ ಇಲಾಖೆ ನಿರಾಕರಿಸಿದೆ. ಇದಕ್ಕೆ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.

Read More

ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ. ಓಪನ್ ಡೋರ್ಸ್ ವರದಿಯ ಪ್ರಕಾರ 268,923 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇವರಲ್ಲಿ 31,954 ಪದವಿ ವಿದ್ಯಾರ್ಥಿಗಳು ಎಂದು ವರದಿಯಾಗಿದೆ. ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ಹೆಚ್ಚಿನ ವಿದ್ಯಾರ್ಥಿಗಳು ಯುಎಸ್ ಅನ್ನು ಉನ್ನತ ತಾಣವಾಗಿ ನೋಡುತ್ತಾರೆ ಎಂದು ವರದಿ ಹೇಳಿದೆ. ಅಮೆರಿಕದ ಕಾಲೇಜುಗಳಲ್ಲಿ ಭಾರತದ ಸುಮಾರು 2.69 ಲಕ್ಷ ವಿದ್ಯಾರ್ಥಿಗಳಿದ್ದಾರೆ. ವರದಿಯ ಪ್ರಕಾರ, ಹೆಚ್ಚಿನವರು ಪದವಿಪೂರ್ವ ಕೋರ್ಸ್‌ಗಳಿಗೆ ಬಂದವರು. ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ.35ರಷ್ಟು ಬೆಳವಣಿಗೆಯಾಗಿದೆ. ಅವರಲ್ಲಿ ಹೆಚ್ಚಿನವರು ವಿಜ್ಞಾನ, ತಂತ್ರಜ್ಞಾನ ಮತ್ತು ವ್ಯವಹಾರವನ್ನು ಅಧ್ಯಯನ ಮಾಡಲು ಬರುತ್ತಾರೆ. ಚೀನಾದ ಮೂರು ಲಕ್ಷ ವಿದ್ಯಾರ್ಥಿಗಳು ಅಮೇರಿಕಾದಲ್ಲಿ ಓದುತ್ತಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಚೀನಾದ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಭಾರತೀಯ ವಿದ್ಯಾರ್ಥಿಗಳು ಶೀಘ್ರದಲ್ಲೇ ಚೀನಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಹಿಂದಿಕ್ಕಬಹುದು. ಚೀನಾ ಮತ್ತು ಭಾರತದ ನಂತರ, ಯುಎಸ್‌ಗೆ ಹೆಚ್ಚು ವಿದ್ಯಾರ್ಥಿಗಳನ್ನು ಕಳುಹಿಸುವ ದೇಶಗಳು ದಕ್ಷಿಣ ಕೊರಿಯಾ, ಕೆನಡಾ, ವಿಯೆಟ್ನಾಂ, ತೈವಾನ್ ಮತ್ತು ನೈಜೀರಿಯಾ. ಕಳೆದ…

Read More

ಬೆಂಗಳೂರು: ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. #YstTax, #SstTax ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಇದೇ ನನ್ನ ಸವಾಲು” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಎಸೆದಿದ್ದಾರೆ.

Read More

ತಮಿಳುನಾಡು ದೀಪಾವಳಿಯಂದು ದಾಖಲೆಯ ಮದ್ಯ ಮಾರಾಟವನ್ನು ದಾಖಲಿಸಿದೆ. ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೊರೇಷನ್ 467.69 ಕೋಟಿ ಮೌಲ್ಯದ ಮದ್ಯ ಮಾರಾಟ ಮಾಡಿದೆ. ಮಧುರೈನಲ್ಲಿ ದಾಖಲೆ ಮಾರಾಟ. ದೀಪಾವಳಿಯ ಮುನ್ನಾ ದಿನದಂದು 52.73 ಕೋಟಿ ಮತ್ತು ದೀಪಾವಳಿಯ ದಿನದಂದು 51.97 ಕೋಟಿ ಮದ್ಯ ಮಾರಾಟವಾಗಿದೆ. ಎರಡನೇ ಸ್ಥಾನ ರಾಜಧಾನಿ ಚೆನ್ನೈ. ನವೆಂಬರ್ 11 ರಂದು 48.12 ಕೋಟಿ ರೂ., 12 ರಂದು 52.98 ಕೋಟಿ ರೂ. ನವೆಂಬರ್ 11 ರಂದು ಸೇಲಂ, ಮಧುರೈ ಮತ್ತು ಕೊಯಮತ್ತೂರಿನಲ್ಲಿ ಕ್ರಮವಾಗಿ 39.78, 52.73 ಕೋಟಿ ಮತ್ತು 40.20 ಕೋಟಿ ರೂ. ದೀಪಾವಳಿಯಲ್ಲಿ ತಿರುಚ್ಚಿಯಲ್ಲಿ 55.60 ಕೋಟಿ ರೂ., ಚೆನ್ನೈನಲ್ಲಿ 52.98 ಕೋಟಿ ರೂ., ಮಧುರೈನಲ್ಲಿ 51.97 ಕೋಟಿ ರೂ., ಸೇಲಂನಲ್ಲಿ 46.62 ಕೋಟಿ ರೂ. ಮತ್ತು ಕೊಯಮತ್ತೂರಿನಲ್ಲಿ 39.61 ಕೋಟಿ ರೂ.ಗಳ ಮದ್ಯ ಮಾರಾಟವಾಗಿದೆ. ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ, 2022-23ನೇ ಸಾಲಿನಲ್ಲಿ 44,098.56 ಕೋಟಿ ರೂಪಾಯಿ ಮೌಲ್ಯದ ಮದ್ಯ ಮಾರಾಟವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು…

Read More

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ವೀಕ್ಷಕರಾಗಿ ನೇಮಕವಾಗಿರುವ ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೈದರಾಬಾದ್ ನಲ್ಲಿರುವ ಟಿಪಿಸಿಸಿ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು. ವನಪರ್ತಿ ವಿಧಾನಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದ ಹಾಗೂ ಅಭ್ಯರ್ಥಿಯ ಮಾಹಿತಿ ಪಡೆದು, ಸ್ಥಳೀಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರಗಳ ಕುರಿತು ವಿವರಿಸಿದರು. ಕಾರ್ಯಕರ್ತರ ಜವಾಬ್ದಾರಿ ದೊಡ್ಡದಿದ್ದು, ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ತಲುಪಿಸಬೇಕು. ಕಾಂಗ್ರೆಸ್ ಇತಿಹಾಸ, ಸಾಧನೆಗಳನ್ನು ಜನರಿಗೆ ವಿವರಿಸಬೇಕು. ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್, ಚುನಾವಣೆಯಲ್ಲಿ ಗೆದ್ದ ತಕ್ಷಣ ಅವುಗಳನ್ನು ಜಾರಿಗೊಳಿಸಿರುವುದನ್ನು ಕ್ಷೇತ್ರದ ಜನರಿಗೆ ತಿಳಿಸಬೇಕು. ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರಿಗೆ ಹಾಗೂ ಜನಸಾಮಾನ್ಯರಿಗೆ ಯಾವ ರೀತಿಯಲ್ಲಿ ಪ್ರಯೋಜನವಾಗಿದೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ಜನರ ಜೀವನದಲ್ಲಿ ಯಾವ ರೀತಿ ಬದಲಾವಣೆ ತರುತ್ತಿವೆ ಎನ್ನುವುದನ್ನು ಜನರಿಗೆ ಮನಮುಟ್ಟುವಂತೆ ವಿವರಿಸಬೇಕು ಎಂದು…

Read More

ಬೆಂಗಳೂರು: ಎಲ್ಲರನ್ನೂ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ. ಪದಗ್ರಹಣ ಕಾರ್ಯಕ್ರಮಕ್ಕೆ ವಿಶೇಷ ಸಿದ್ಧತೆ ಏನೂ ಆಗಿಲ್ಲ. ಜಿಲ್ಲೆಗಳಿಂದ ಕಾರ್ಯಕರ್ತರು ಬರುತ್ತಾರೆ. ನಳೀನ್ ಕುಮಾರ್ ಕಟೀಲು ಅವರು ನನಗೆ ಆಶೀರ್ವಾದ ಮಾಡಿ‌ ಜವಾಬ್ದಾರಿ ಹಸ್ತಾಂತರ ಮಾಡುತ್ತಾರೆ. ಎಲ್ಲಾ ಶಾಸಕರಿಗೆ ಖುದ್ದು ಕರೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇನೆ. ಮಾಜಿ ಶಾಸಕರು, ಜಿಲ್ಲಾಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

Read More

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಕ್ಕೆ ಯಾರಿಗೂ ಅಸಮಾಧಾನವಿಲ್ಲ. ಭಿನ್ನಾಭಿಪ್ರಾಯ ಇದ್ದರೆ ಎಲ್ಲರೂ ಮಾತನಾಡಿ ಸರಿ ಮಾಡುತ್ತೇವೆ. ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ನಾವು ಎಲ್ಲರೂ ಸೇರಿ ಸರಿ ಮಾಡುತ್ತೇವೆ. ಬಿ.ವೈ. ವಿಜಯೇಂದ್ರ ಎಲ್ಲರನ್ನೂ ಭೇಟಿಯಾಗುತ್ತಿದ್ದಾರೆ. ಪಕ್ಷದ ಮೇಲೆ ಜನರಿಗೆ ನೀರಿಕ್ಷೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Read More

ಆಮ್ ಆದ್ಮಿ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ದೂರಿನ ಅನ್ವಯ ನೋಟಿಸ್ ನೀಡಲಾಗಿದೆ. ಬಿಜೆಪಿ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಿಯವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ, ಕೈಗಾರಿಕೋದ್ಯಮಿಗಳಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಎಎಪಿ ಉದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ ‘X’ ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ಬಳಿಕ ಅದಾನಿ ಮತ್ತು ಮೋದಿಯವರ ಚಿತ್ರವನ್ನೂ ಹಾಕಲಾಗಿತ್ತು. ಪ್ರಧಾನಿ ಜನರಿಗಾಗಿ ಕೆಲಸ ಮಾಡುತ್ತಿಲ್ಲ, ಉದ್ಯಮಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಎಪಿ ಟೀಕೆ ಮಾಡಿದೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಅನಿಲ್ ಬಲುನಿ ಮತ್ತು ಪಕ್ಷದ ನಾಯಕ ಓಂ ಪಾಠಕ್ ಅವರನ್ನೊಳಗೊಂಡ ಬಿಜೆಪಿ ನಿಯೋಗವು ಈ ವಿಷಯದ ಬಗ್ಗೆ ಚುನಾವಣಾ ಸಮಿತಿಯನ್ನು ಸಂಪರ್ಕಿಸಿದೆ.

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ತುಮಕೂರು : ಜನರು ತಮ್ಮ ಕಷ್ಟಗಳನ್ನು ಪರಿಹರಿಸಲು ದೇವರ ಮೇಲೆ ನಂಬಿಕೆ ಇಟ್ಟು ದೇವಸ್ಥಾನಗಳಿಗೆ ಹೋಗುವುದು ಸಹಜ ಆದರೆ ಇಲ್ಲೊಬ್ಬ ಉಡಾಳ ಪೂಜಾರಿ ದೇವಸ್ಥಾನಕ್ಕೆ ಬರುವ ಮುಗ್ಧ ಜನರನ್ನ ಯಾಮರಿಸಿ ಅವರಿಂದ ಹಣ ಪಿಕುವ ಕೆಲಸದಲ್ಲಿ ತೊಡಗಿದ್ದಾನೆ. ಕುಟುಂಬಗಳನ್ನ ಹೊಡೆಯುವ ಕೆಲಸ ಮಾಡಿ ದೇವರ ಹೆಸರಿನಲ್ಲಿ ಜನರ ಮೂಢನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಜನರನ್ನು ಯಾಮಾರಿಸುವ ಆರೋಪ ಕೇಳಿ ಬಂದಿದೆ.. ತುಮಕೂರು ತಾಲ್ಲೂಕು ಕೋರ ಹೋಬಳಿಯ ಚಿಕ್ಕತೊಟ್ಲುಕೆರೆಯಲ್ಲಿ ಇರುವ ಆದಿಶಕ್ತಿ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಹೆಸರಿನಲ್ಲಿ ದೇವಸ್ಥಾನ ನಿರ್ಮಾಣ ಮಾಡಿರುವ  ಶಿವಣ್ಣ ಎಂಬ ಹೆಸರಿನ ಪೂಜಾರಿ ಮನೆಯಲ್ಲೇ ದೇವಸ್ಥಾನ ನಿರ್ಮಾಣ ಮಾಡಿಕೊಂಡು ಬೆಂಗಳೂರು ಮೂಲದ ಯುವಕ ರಂಜಿತ್ ರ ಮನ ಪರಿವರ್ತನೆ ಮಾಡಿ ಕುಟುಂಬದಿಂದ ಬೇರ್ಪಡಿಸಿ ಆತನನ್ನ ಅಕ್ರಮವಾಗಿ ದೇವಸ್ಥಾನದಲ್ಲಿ ಇಟ್ಟು ಕೊಂಡಿರುವ ಆರೋಪ ಕೇಳಿ ಬಂದಿತ್ತು.. ಅದರ ಮಾಹಿತಿಯ ಮೇರೆಗೆ  ನೆಲಮಂಗಲ ಮೂಲದ ಕುಮಾರ್ ಕುಟುಂಬ ಹಾಗೂ ಕರ್ನಾಟಕ ರಣಧೀರರ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಶಂಕರ್…

Read More